ಮೃತ ಸಹೋದರನ ಹೆಸರಲ್ಲಿ 24 ವರ್ಷ ಸರ್ಕಾರಿ ಶಿಕ್ಷಕನಾಗಿ ಕೆಲಸ ಮಾಡಿದ್ದ ನಕಲಿ ಶಿಕ್ಷಕನ ಬಂಧನ

Team Udayavani, Mar 24, 2022, 3:31 PM IST

ಮೃತ ಅಣ್ಣನ ಹೆಸರಿನಲ್ಲಿ 24 ವರ್ಷ ಶಿಕ್ಷಕನಾಗಿ ಕೆಲಸ ಮಾಡುತ್ತಿದ್ದ ಸಹೋದರ ಈಗ ಕಂಬಿ ಹಿಂದೆ

ಹುಣಸೂರು : ಮೃತ ಸಹೋದರನ ಹೆಸರಿನಲ್ಲಿ ಶಿಕ್ಷನಾಗಿ 24 ವರ್ಷ ಕಾಲ ಸುಧೀರ್ಘ ಸರ್ಕಾರಿ ಶಿಕ್ಷಕನಾಗಿ ಸೇವೆಸಲ್ಲಿಸುತ್ತಿರುವ ಘಟನೆ ಮಾಹಿತಿ ಹಕ್ಕಿನಲ್ಲಿ ಬಹಿರಂಗಗೊಂಡಿದ್ದು ಇದೀಗ ಹುಣಸೂರು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿ ಆರೋಪಿ ನಕಲಿ ಶಿಕ್ಷಕನನ್ನು ನ್ಯಾಯಾಂಗ ಬಂಧನಕೊಪ್ಪಿಸಲಾಗಿದೆ.

ಹುಣಸೂರು ತಾಲೂಕಿನ ಕಟ್ಟೆಮಾಳಲವವಾಡಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 29 ವರ್ಷಗಳ ಹಿಂದೆ ಸಹಶಿಕ್ಷಕನಾಗಿ ನೇಮಕಗೊಂಡಿದ್ದ ಲೋಕೇಶ್ ಗೌಡ ಹೆಸರಿನಲ್ಲಿ ಆತನ ಕಿರಿಯ ಸಹೋದರ ಲಕ್ಷ್ಮಣೇ ಗೌಡ ಕೆಲಸ ಮಾಡುತ್ತಿದ್ದ. ಈ ಬಗ್ಗೆ ಅನುಮಾನಗೊಂಡ ಸಾಮಾಜಿಕ ಕಾರ್ಯಕರ್ತ ಹುಣಸೂರಿನ ಇಂಟೆಕ್ ರಾಜು ಅನುಮಾನ ವ್ಯಕ್ತಪಡಿಸಿ ಮಾಹಿತಿ ಹಕ್ಕಿನಡಿ ಅರ್ಜಿ ಸಲ್ಲಿಸಿ ದಾಖಲಾತಿ ಪಡೆದ ನಂತರ ನಖಲಿ ಶಿಕ್ಷಕನ ವಿರುದ್ಧ ಕರ್ನಾಟಕ ಲೋಕಾಯುಕ್ತಕ್ಕೆ 2019 ರಲ್ಲಿ ದೂರು ಸಲ್ಲಿಸಿದ್ದರು.

ಮೂಲತಃ ಕೆ.ಆರ್. ನಗರ ತಾಲೂಕಿನ ಹೆಬ್ಬಾಳು ಗ್ರಾಮದಲ್ಲಿ ಲಕ್ಷ್ಮಣೇ ಗೌಡನ ಕುಟುಂಬ ವಾಸವಿದ್ದು ಈತನ ಹಿರಿಯ ಸಹೋದರ ಲೋಕೇಶ್ ಗೌಡ 1994-95 ರಲ್ಲಿ ಸರ್ಕಾರಿ ಶಿಕ್ಷಕ ಹುದ್ದೆದಗೆ ಆಯ್ಕೆಯಾಗಿದ್ದರು ಕರ್ತವ್ಯಕ್ಕೆ ವರದಿ ಮಾಡಿಕೊಳ್ಳುವ ಮುನ್ನವೇ ಮೃತಪಟ್ಟರು. ಅಣ್ಣನಿಗೆ ಬಂದಿದ್ದ ನೇಮಕಾತಿ ಆದೇಶ ಪತ್ರದೊಂದಿಗೆ ಕೆಲಸಕ್ಕೆ ಹಾಜರಾದ ಲಕ್ಷ್ಮಣೇ ಗೌಡ ತಾನೇ ಲೋಕೇಶ್ ಗೌಡ ಎಂದು ಹೇಳಿಕೊಂಡು ಪಿರಿಯಾಪಟ್ಟಣ ತಾಲೂಕಿನ ಮದ್ದನಹಳ್ಳಿ ಗ್ರಾಮದ ಶಾಲೆಯಲ್ಲಿ ಕರ್ತವ್ಯ ಆರಂಬಿಸಿದ್ದ. ನಂತರದ ವರ್ಷಗಳಲ್ಲಿ ಮೈಸೂರು ಜಿಲ್ಲೆಯ ಹಲವಾರು ಶಾಲೆಗಳಲ್ಲಿ ಕೆಲಸ ನಿರ್ವಹಿಸಿ ಸರಕಾರದ ಕಣ್ಣಿಗೆ ಮಣ್ಣೇರಚಿ ನಂಜನಗೂಡು ತಾಲೂಕು, ಹುಣಸೂರು ತಾಲೂಕಿನ ಕಟ್ಟಮಾಳಲವಾಡಿ ನಂತರ ಹಿರಿಕ್ಯತನಹಳ್ಳಿ ಶಾಲೆಯಲ್ಲಿ ಕರ್ತವ್ಯ ನಿರ್ವಹಿದ್ದ.

ಈ ವೇಳೆ ಸಂಬಳ ಹಾಗೂ ಸರಕಾರದ ಎಲ್ಲಾ ಸವಲತ್ತುಗಳನ್ನು ಪಡೆದಿದ್ದ.2019 ರಲ್ಲಿ ಇಂಟೆಕ್ ರಾಜು ನೀಡಿದ್ದ ದೂರಿನ ಅನ್ವಯ ಶಿಕ್ಷಣ ಇಲಾಖೆ ಆಯುಕ್ತರು, ಉಪ ನಿರ್ಧೇಶಕರು ಮತ್ತೊಂದೆಡೆ ಲೋಕಾಯುಕ್ತರಿಗೂ ದೂರು ಸಲ್ಲಿಸಿದ್ದರಿಂದ ತನಿಖೆ ನಡೆಸಲು ಕೆ,ಆರ್ ನಗರ ತಹಸೀಲ್ದಾರಿಗೆ ಡಿ.ಡಿ.ಪಿ.ಐ ಕೋರಿದ್ದರು. ಲಕ್ಷ್ಮಣೇ ಗೌಡರ ಕುಟುಂಬ ಮಾಹಿತಿ ನೀಡಲು ನಿರಾಕರಿಸುತ್ತಿರುವ ಬಗ್ಗೆ ವರದಿ ನೀಡಿದ್ದರು. ಈ ಬಗ್ಗೆ ಜಿಲ್ಲಾಧಿಕಾರಿಗಳು ಕೆ,ಆರ್ ನಗರ ಠಾಣೆಯಲ್ಲಿ ಪ್ರಕರಣ ದಾಖಲಿಸಿ ಸೂಕ್ತ ತನಿಖೆ ನಡೆಸಲು ಜಿಲ್ಲಾದಿಕಾರಿಗಳು ಆದೇಶಿಸಿದ್ದರು. ಆದರೆ 2020 ರಲ್ಲಿ ಜಿಲ್ಲಾದಿಕಾರಿಗಳ ಆದೇಶವನ್ನೇ ಗಾಳಿಗೆ ತೂರಿದ ಶಿಕ್ಷಣ ಇಲಾಖೆ ಹಿರಿಯ ಅಧಿಕಾರಿಗಳು ಮೌನಕ್ಕೆ ಶರಣಾಗಿದ್ದರು.

ಇದನ್ನೂ ಓದಿ : ತಮಿಳು ನಟ ಸಿಂಬು ಕಾರು ಹರಿದು ವೃದ್ಧ ಸಾವು ; ಚಾಲಕನ ಬಂಧನ

ಮತ್ತೆ ಲೋಕಾಯಕ್ತ ಅಧಿಕಾರಿಗಳು ಆರೋಪಿತ ಶಿಕ್ಷಕ ಲಕ್ಷ್ಮಣೇ ಗೌಡ ಮತ್ತು ದೂರುದಾರ ಇಂಟೆಕ್ ರಾಜು ಇವರನ್ನು ಕರೆಸಿ ವಿಚಾರಣೆ ನಡೆಸಿದ್ದರು. ಇತ್ತ ಶಿಕ್ಷಣ ಇಲಾಖೆ ನೇಮಕಾತಿ ಪ್ರಾಧಿಕಾರದಲ್ಲೂ ವಿಚಾರಣೆ ನಡೆಸಲಾಯಿತು. ಈ ವೇಳೆ ಆರೋಪಿ ಲೋಕೇಶ್ ಗೌಡ ನೀಡಿದ್ದ ವಂಶ ವೃಕ್ಷದಲ್ಲಿ ಲಕ್ಷ್ಮಣೇ ಗೌಡ ಹೆಸರು ಕೈಬಿಟ್ಟಿರುವುದು ಪತ್ತೆಯಾಗಿತ್ತು. ಈ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆ ಅಧಿಕಾರಿಗಳು ಕಾರಣ ಕೇಳಿ ನೋಟೀಸಿ ಜಾರಿ ಮಾಡಿದ್ದರು. ಸಮರ್ಪಕ ಉತ್ತರ ನೀಡುವ ಬದಲು ಲೋಕೇಶ್ ಗೌಡ ಇಲಾಖೆ ಅಧಿಕಾರಿಗಳ ವಿರುದ್ಧವೇ ಕ್ರಿಮಿನಲ್ ಹಾಗೂ ಮಾನನಷ್ಟ ಮೊಕದಮ್ಮೆ ದಾಖಲಿಸುವುದಾಗಿ ಬೆದರಿಕೆ ಹಾಕಿದ್ದರು.

ಇಲಾಖೆ ಪ್ರಕರಣದ ದೂರಿನ ಅಂಶಗಳಲ್ಲಿ ಲೋಕೇಶ್ ಗೌಡ ಎಂಬ ವ್ಯಕ್ತಿಯ ಮೇಲೆ ನಖಲಿ ವ್ಯಕ್ತಿಎಂಬ ಆರೋಪವಿದ್ದು, ಲೋಕೇಶ್ ರವರ ಹೆಸರಿನ ಕೆಲವು ದಾಖಲೆಗಳನ್ನು ನೀಡಿರುವುದು ಪ್ರಕರಣಕ್ಕೆ ಪ್ರಮುಖದಾಖಲೆಯಾಗಿರುವುದಿಲ್ಲ. ಹೀಗಾಗಿ ಲಕ್ಷಣೇಗೌಡ ಎಂಬ ಸಹೋದರನ ಬಗ್ಗೆ ಈವರೆವಿಗೂ ಸಹ ಯಾವುದೇ ಪ್ರಸ್ತಾಪವಿರುವುದಿಲ್ಲ. ಇದರಿಂದಾಗಿ ಇಲಾಖೆಗೆ ದೂರಿನ ಅಂಶಗಳು ನೈಜವೆಂದು ಮೇಲ್ನೋಟಕ್ಕೆ ಕಾಣುತಿದ್ದು, ಲೋಕೇಶ್ ಮೇಲಿನ ಆರೋಪಗಳ ಬಗ್ಗೆ ಸಂಬಂಧಿಸಿದಂತೆ ಹೆಚ್ಚಿನ ತನಿಖೆ ಮತ್ತು ಕ್ರಮದ ಅವಶ್ಯಕತೆ ಇರುವುದರಿಂದ ಪ್ರಕರಣವನ್ನು ಪೊಲೀಸರಿಗೆ ಒಪ್ಪಿಸಲಿ ಬಿ.ಇ.ಓ.ರಿಗೆ ಡಿಡಿಪಿಐರವರು ಆದೇಶಿಸಿದ್ದರ ಹಿನ್ನೆಲೆಯಲ್ಲಿ ಕರ್ತವ್ಯಕ್ಕೆ ವರದಿ ಮಾಡಿಕೊಂಡ ಮುದ್ದನಹಳ್ಳಿ ಪಿರಿಯಾಪಟ್ಟಣ ವ್ಯಾಪ್ತಿಗೊಳಪಡುವುದರಿಂದಾಗಿ ಪಿರಿಯಾಪಟ್ಟಣ ಠಾಣೆಯಲ್ಲಿ ಬಿಇಓ ನಾಗರಾಜ್ ದೂರು ದಾಖಲಿಸಿದ ಹಿನ್ನೆಲೆಯಲ್ಲಿ ಲೋಕೇಶ್‌ನನ್ನು ವಶಕ್ಕೆ ಪಡೆದ ಪೊಲೀಸರು ನ್ಯಾಯಾಧೀಶರ ಮುಂದೆ ಹಾಜರು ಪಡಿಸಿದ ಮೇರೆಗೆ ನ್ಯಾಯಾಂಗ ಬಂಧನಕ್ಕೊಪ್ಪಿಸಿದ್ದಾರೆ.

ಟಾಪ್ ನ್ಯೂಸ್

Tollywood: ಒಂದೇ ದಿನ ವಿವಾಹವಾಗಲಿದ್ದಾರಾ ಅಕ್ಕಿನೇನಿ ಸಹೋದರರು? ನಾಗಾರ್ಜುನ್‌ ಹೇಳಿದ್ದೇನು?

Tollywood: ಒಂದೇ ದಿನ ವಿವಾಹವಾಗಲಿದ್ದಾರಾ ಅಕ್ಕಿನೇನಿ ಸಹೋದರರು? ನಾಗಾರ್ಜುನ್‌ ಹೇಳಿದ್ದೇನು?

Video: ಜೈಲಿನಿಂದ ಬಿಡುಗಡೆಯಾದ ಖುಷಿ… ಜೈಲು ಅಧಿಕಾರಿಗಳ ಎದುರೇ ಯುವಕನ ಬ್ರೇಕ್ ಡ್ಯಾನ್ಸ್

Video: ಜೈಲಿನಿಂದ ಬಿಡುಗಡೆಯಾದ ಖುಷಿ… ಜೈಲು ಅಧಿಕಾರಿಗಳ ಎದುರೇ ಯುವಕನ ಬ್ರೇಕ್ ಡ್ಯಾನ್ಸ್

Stock Market: ಷೇರುಪೇಟೆ ಸಂವೇದಿ ಸೂಚ್ಯಂಕ 1,000 ಅಂಕ ಕುಸಿತ; ಲಾಭಗಳಿಸಿದ ಷೇರು ಯಾವುದು?

Stock Market: ಷೇರುಪೇಟೆ ಸಂವೇದಿ ಸೂಚ್ಯಂಕ 1,000 ಅಂಕ ಕುಸಿತ; ಲಾಭಗಳಿಸಿದ ಷೇರು ಯಾವುದು?

Lok Sabha:ರೈಲಿನಲ್ಲಿ ಪ್ರಯಾಣಿಕರಿಗೆ ನೀಡುವ ಹೊದಿಕೆ ಎಷ್ಟು ದಿನಗಳಿಗೊಮ್ಮೆ ತೊಳೆಯಲಾಗುತ್ತದೆ

Lok Sabha:ರೈಲಿನಲ್ಲಿ ಪ್ರಯಾಣಿಕರಿಗೆ ನೀಡುವ ಹೊದಿಕೆ ಎಷ್ಟು ದಿನಗಳಿಗೊಮ್ಮೆ ತೊಳೆಯಲಾಗುತ್ತದೆ

8

VIDEO: ಡಿವೋರ್ಸ್ ಸುದ್ದಿ ನಡುವೆ ʼಬಚ್ಚನ್‌ʼ ಸರ್‌ನೇಮ್ ಇಲ್ಲದೆ ಕಾಣಿಸಿಕೊಂಡ ಐಶ್ವರ್ಯಾ

Newborn baby’s body found in toilet pit!

Ramanagara: ಆಸ್ಪತ್ರೆಯ ಶೌಚಾಲಯದ ಗುಂಡಿಯಲ್ಲಿ ನವಜಾತ ಶಿಶುವಿನ ಶವ ಪತ್ತೆ!

Oath: ಕೇರಳ ಸೀರೆ ತೊಟ್ಟು, ಕೈಯಲ್ಲಿ ಸಂವಿಧಾನ ಹಿಡಿದು ಪ್ರಮಾಣ ವಚನ ಸ್ವೀಕರಿಸಿದ ಪ್ರಿಯಾಂಕಾ

Oath: ಕೇರಳ ಸೀರೆ ತೊಟ್ಟು, ಕೈಯಲ್ಲಿ ಸಂವಿಧಾನ ಹಿಡಿದು ಪ್ರಮಾಣ ವಚನ ಸ್ವೀಕರಿಸಿದ ಪ್ರಿಯಾಂಕಾ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Pandavapura: A cow gave birth to three calves

Pandavapura: ಮೂರು ಕರುಗಳಿಗೆ ಜನ್ಮ ನೀಡಿದ ಸೀಮೆ ಹಸು

BBMP ಸೇರಿ 11 ಮಸೂದೆ ಮಂಡನೆ? ಡಿ. 9ರ ಬೆಳಗಾವಿ ಅಧಿವೇಶನದಲ್ಲಿ ಮಂಡನೆಗೆ ನಿರ್ಣಯ

BBMP ಸೇರಿ 11 ಮಸೂದೆ ಮಂಡನೆ? ಡಿ. 9ರ ಬೆಳಗಾವಿ ಅಧಿವೇಶನದಲ್ಲಿ ಮಂಡನೆಗೆ ನಿರ್ಣಯ

Karnataka Govt,.: ಸಂಪುಟ ಹುತ್ತಕ್ಕೆ ಈಗಲೇ ಕೈಹಾಕಲು ಸಿಎಂ ನಿರಾಸಕ್ತಿ?

Karnataka Govt,.: ಸಂಪುಟ ಹುತ್ತಕ್ಕೆ ಈಗಲೇ ಕೈಹಾಕಲು ಸಿಎಂ ನಿರಾಸಕ್ತಿ?

Karnataka Govt.,: ದಿಲ್ಲಿಯಲ್ಲಿ ಸಂಪುಟ ರಹಸ್ಯ; ಹೈಕಮಾಂಡ್‌ ಭೇಟಿ ಸಾಧ್ಯತೆ

Karnataka Govt.,: ದಿಲ್ಲಿಯಲ್ಲಿ ಸಂಪುಟ ರಹಸ್ಯ; ಹೈಕಮಾಂಡ್‌ ಭೇಟಿ ಸಾಧ್ಯತೆ

DA Hike: ಸರಕಾರಿ ನೌಕರರಿಗೆ ಶೇ. 2 ತುಟ್ಟಿ ಭತ್ಯೆ ಹೆಚ್ಚಳ… ಸಿಎಂಗೆ ಅಭಿನಂದನೆ

DA Hike: ಸರಕಾರಿ ನೌಕರರಿಗೆ ಶೇ. 2 ತುಟ್ಟಿ ಭತ್ಯೆ ಹೆಚ್ಚಳ… ಸಿಎಂಗೆ ಅಭಿನಂದನೆ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

Tollywood: ಒಂದೇ ದಿನ ವಿವಾಹವಾಗಲಿದ್ದಾರಾ ಅಕ್ಕಿನೇನಿ ಸಹೋದರರು? ನಾಗಾರ್ಜುನ್‌ ಹೇಳಿದ್ದೇನು?

Tollywood: ಒಂದೇ ದಿನ ವಿವಾಹವಾಗಲಿದ್ದಾರಾ ಅಕ್ಕಿನೇನಿ ಸಹೋದರರು? ನಾಗಾರ್ಜುನ್‌ ಹೇಳಿದ್ದೇನು?

Video: ಜೈಲಿನಿಂದ ಬಿಡುಗಡೆಯಾದ ಖುಷಿ… ಜೈಲು ಅಧಿಕಾರಿಗಳ ಎದುರೇ ಯುವಕನ ಬ್ರೇಕ್ ಡ್ಯಾನ್ಸ್

Video: ಜೈಲಿನಿಂದ ಬಿಡುಗಡೆಯಾದ ಖುಷಿ… ಜೈಲು ಅಧಿಕಾರಿಗಳ ಎದುರೇ ಯುವಕನ ಬ್ರೇಕ್ ಡ್ಯಾನ್ಸ್

5(1

Mangaluru: 7 ಕೆರೆ, ಪಾರ್ಕ್‌ ಅಭಿವೃದ್ಧಿಗೆ ಅಮೃತ 2.0

Stock Market: ಷೇರುಪೇಟೆ ಸಂವೇದಿ ಸೂಚ್ಯಂಕ 1,000 ಅಂಕ ಕುಸಿತ; ಲಾಭಗಳಿಸಿದ ಷೇರು ಯಾವುದು?

Stock Market: ಷೇರುಪೇಟೆ ಸಂವೇದಿ ಸೂಚ್ಯಂಕ 1,000 ಅಂಕ ಕುಸಿತ; ಲಾಭಗಳಿಸಿದ ಷೇರು ಯಾವುದು?

Pandavapura: A cow gave birth to three calves

Pandavapura: ಮೂರು ಕರುಗಳಿಗೆ ಜನ್ಮ ನೀಡಿದ ಸೀಮೆ ಹಸು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.