ಹುಣಸೂರು ಕ್ಷೇತ್ರದಲ್ಲಿ ಮಹಿಳಾ ಮತದಾರರೇ ಹೆಚ್ಚು.. 274 ಮತಗಟ್ಟೆಗೆ 1029 ಸಿಬ್ಬಂದಿ ನಿಯೋಜನೆ

ಸುಗಮ ಚುನಾವಣೆಗಾಗಿ ಆಡಳಿತ ಸಜ್ಜು

Team Udayavani, Mar 25, 2024, 8:00 PM IST

ಹುಣಸೂರು ಕ್ಷೇತ್ರದಲ್ಲಿ ಮಹಿಳಾ ಮತದಾರರೇ ಹೆಚ್ಚು.. 274 ಮತಗಟ್ಟೆಗೆ 1029 ಸಿಬ್ಬಂದಿ ನಿಯೋಜನೆ

ಹುಣಸೂರು: ಮುಂಬರುವ ಲೋಕಸಭಾ ಚುನಾವಣೆಗಾಗಿ ಸುಗಮವಾಗಿ ನಡೆಸಲು ಹುಣಸೂರು ತಾಲೂಕಿನಲ್ಲಿ ಅಗತ್ಯ ಸಿದ್ದತೆ ಕೈಗೊಳ್ಳಲಾಗುತ್ತಿದೆ ಹಾಗೂ ಆಡಳಿತವನ್ನು ಸಜ್ಜುಗೊಳಿಸಲಾಗುತ್ತಿದೆ ಎಂದು ಸಹಾಯಕ ಚುನಾವಣಾಧಿಕಾರಿಯಾದ ಮಹಮ್ಮದ್ ಹ್ಯಾರಿಸ್ ಸುಮೇರ ತಿಳಿಸಿದರು.

ನಗರದ ಉಪವಿಭಾಗಾಧಿಕಾರಿ ಸಭಾಂಗಣದಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ ಮಾಹಿತಿ ನೀಡಿದ ಅವರು ಹುಣಸೂರು ಕ್ಷೇತ್ರದಲ್ಲಿ 273 ಸೈನಿಕರು, 16ಮಂದಿ ತೃತಿಯಲಿಂಗಿಗಳು ಸೇರಿದಂತೆ ಒಟ್ಟು 2,46,832 ಮತದಾರರಿದ್ದು, ಈ ಪೈಕಿ 1,24,245 ಮಹಿಳಾ ಮತದಾರರು ಹಾಗೂ 1,22,571 ಪುರುಷ ಮತದಾರರಿದ್ದು, ಇಲ್ಲಿ 1,674 ಮಹಿಳಾ ಮತದಾರರು ಹೆಚ್ಚಿರುವುದು ವಿಷೇಶವೆಂದರು.

85 ವರ್ಷ ಮೇಲ್ಪಟ್ಟ 3928 ಹಿರಿಯ ನಾಗರಿಕ ಮತದಾರಿದ್ದು, ಇವರಲ್ಲಿ ಪುರುಷರು 1567 ಮತ್ತು 2361 ಮಹಿಳೆಯರು, 3676 ವಿಕಲಚೇತನ ಮತದಾರರು, 18 ರಿಂದ 19 ವಯಸ್ಸಿನ 3166 ಯುವ ಮತದಾರರಿದ್ದಾರೆ. ಗ್ರಾಮಾಂತರದಲ್ಲಿ 233 ಕೇಂದ್ರಗಳಿದೆ. ಚುನಾವಣೆ ಸುಸೂತ್ರವಾಗಿ ನಡೆಸಲು 274 ಮತಗಟ್ಟೆಯಲ್ಲಿ ಕರ್ತವ್ಯ ನಿರ್ವಹಿಸಲು 1029 ಸಿಬ್ಬಂದಿ ನಿಯೋಜಿಸಿಕೊಳ್ಳಲಾಗಿದೆ.

ನಾಲ್ಕು ಕಡೆ ತನಿಖಾ ಕೇಂದ್ರ: ತಾಲೂಕಿನ ಮನುಗನಹಳ್ಳಿ, ಗಾವಡಗೆರೆ, ಮುತ್ತುರಾಯನಹೊಸಹಳ್ಳಿ, ಉಮ್ಮತ್ತೂರುಗಳಲ್ಲಿ ತನಿಖಾ ಕೇಂದ್ರ ಸ್ಥಾಪಿಸಿ ದಿನದ 24 ಗಂಟೆ ಮೂರು ಪಾಳಿಯಲ್ಲಿ ಕರ್ತವ್ಯ ನಿರ್ವಹಿಸಲು 15 ಸಿಬ್ಬಂದಿ ನಿಯೋಜಿಸಲಾಗಿದೆ. ಮುಂದಿನ ದಿನದಲ್ಲಿ ಅಗತ್ಯವಿದ್ದಲ್ಲಿ ಚಿಲ್ಕುಂದ ಗ್ರಾಮದಲ್ಲಿ ತೆರೆಯುವ ಸಾಧ್ಯತೆ ಇದೆ ಎಂದರು.

55 ಸೂಕ್ಷ್ಮ ಮತಗಟ್ಟೆ;
274 ಮತಗಟ್ಟೆಗಳಲ್ಲಿ 3 ಅತಿಸೂಕ್ಷ್ಮ ಮತ್ತು 55 ಸೂಕ್ಷ್ಮ ಮತಗಟ್ಟೆಗಳಿವೆ. ಉಳಿದಂತೆ ಸಾಮಾನ್ಯ ಎಂದು ಗುರುತಿಸಲಾಗಿದೆ. ಈ ಮತಗಟ್ಟೆಗಳಿಗೆ ನಿಯಮಾನುಸಾರ ಭದ್ರತೆ ನೀಡಲಾಗುವುದು. ಮತಯಂತ್ರ ಮತ್ತು ಇತರೆ ಪರಿಕರಗಳನ್ನು ನಗರದ ಸಂತ ಜೋಸೆಫ್ ಶಾಲೆಯಲ್ಲಿ ಬಿಗಿ ಬಂದೋಬಸ್ತಿನಲ್ಲಿ ಇಡಲಾಗಿದೆ ಎಂದರು.

ಮತ ಜಾಗೃತಿ; ಕಳೆದ ಲೋಕಸಭಾ ಚುನಾವಣೆಯಲ್ಲಿ ಕ್ಷೇತ್ರದಲ್ಲಿ ಒಟ್ಟು 2,26,920 ಮತದಾರರಿಂದ ಶೇ 77.24 ರಷ್ಟು ಮತದಾನವಾಗಿತ್ತು. ಈ ಬಾರಿ ಮತಪ್ರಮಾಣ ಹೆಚ್ಚಿಸುವ ದಿಕ್ಕಿನಲ್ಲಿ ಸ್ವೀಪ್ ಸಮಿತಿ ಜಾಗೃತಿ ಆಂದೋಲನ ಹಮ್ಮಿಕೊಂಡಿದೆ. ಯುವ ಮತದಾರರನ್ನು ಜಾಗೃತಿಗೊಳಿಸುವ ದಿಕ್ಕಿನಲ್ಲಿ ಕಾಲೇಜು ಹಂತದಲ್ಲಿ ಜಾಗೃತಿ ಕಾರ್ಯಕ್ರಮ ಮತ್ತು ಮಾರ್ಚ್ 24 ರೊಳಗೆ ನೊಂದಣಿ ಅಭಿಯಾನ ಸಂಬಂಧಿಸಿದ ಅರಿವು ಕಾರ್ಯಕ್ರಮ ನಡೆಯಲಿದೆ ಎಂದು ಸ್ವೀಪ್ ಸಮಿತಿ ಉಸ್ತುವಾರಿ ಅಧಿಕಾರಿಯಾದ ತಾ.ಪಂ.ಇಓ ಶಿವಕುಮಾರ್ ತಿಳಿಸಿದರು.

ಹೆಚ್ಚು-ಕಡಿಮೆ ಮತದಾನ: ಕಳೆದ ಲೋಕಸಭಾ ಚುನಾವಣೆಯಲ್ಲಿ ಮಂಗಳೂರು ಮಾಳ ಮತಗಟ್ಟೆಯಲ್ಲಿ ಅತಿ ಹೆಚ್ಚು ಮತದಾನವಾಗಿದ್ದು, ಅತಿ ಕಡಿಮೆ ಚಿಕ್ಕಪಡುಕೋಡೆ ಮತಗಟ್ಟೆಯಲ್ಲಿ ದಾಖಲಾಗಿದೆ ಎಂದರು.

ಸುದ್ದಿಗೋಷ್ಠಿಯಲ್ಲಿ ತಹಶೀಲ್ದಾರ್ ನಯನ ಎಂ, ನಗರಸಭೆ ಆಯುಕ್ತೆ ಲಕ್ಷ್ಮಿ, ಗ್ರೇಡ್-2 ತಹಶೀಲ್ದಾರ್‌ಗಳಾದ ಯದುಗಿರೀಶ್, ನರಸಿಂಹಯ್ಯ ಇದ್ದರು.

ಇದನ್ನೂ ಓದಿ: Phone-Tapping Row: ಫೋನ್ ಕದ್ದಾಲಿಕೆ ಪ್ರಕರಣ.. ಗುಪ್ತಚರ ದಳದ ಮಾಜಿ ಮುಖ್ಯಸ್ಥ ನಂ.1 ಆರೋಪಿ

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ

Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ

aus-rohit

Australia: ಪರ್ತ್‌ಗೆ ಆಗಮಿಸಿದ ರೋಹಿತ್‌ ಶರ್ಮ

Pro Kabaddi League: ಬೆಂಗಾಲ್‌ ವಾರಿಯರ್ ಮೇಲೆ ಪುಣೇರಿ ಪಲ್ಟಾನ್‌ ಸವಾರಿ

Pro Kabaddi League: ಬೆಂಗಾಲ್‌ ವಾರಿಯರ್ ಮೇಲೆ ಪುಣೇರಿ ಪಲ್ಟಾನ್‌ ಸವಾರಿ

Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿ‌ಮ ಬಂಗಾಲ ಗವರ್ನರ್‌

Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿ‌ಮ ಬಂಗಾಲ ಗವರ್ನರ್‌

Uttar Pradesh: ತಪ್ಪು ದಾರಿ ತೋರಿದ ಜಿಪಿಎಸ್‌: ನದಿಗೆ ಬಿದ್ದು ಮೂವರ ಸಾವು

Uttar Pradesh: ತಪ್ಪು ದಾರಿ ತೋರಿದ ಜಿಪಿಎಸ್‌: ನದಿಗೆ ಬಿದ್ದು ಮೂವರ ಸಾವು

Jharkhand: ಬಿಜೆಪಿ ಗೆದ್ದೇ ಗೆಲ್ಲುತ್ತದೆ ಎಂದಿಲ್ಲ: ಅಸ್ಸಾಂ ಸಿಎಂ ಬಿಸ್ವಾ ವಾದ

Jharkhand: ಬಿಜೆಪಿ ಗೆದ್ದೇ ಗೆಲ್ಲುತ್ತದೆ ಎಂದಿಲ್ಲ: ಅಸ್ಸಾಂ ಸಿಎಂ ಬಿಸ್ವಾ ವಾದ

Darshan (3)

Renukaswamy ಹ*ತ್ಯೆ ಸ್ಥಳದಲ್ಲಿ ದರ್ಶನ್‌ ಇದ್ದ ಚಿತ್ರ ಲಭ್ಯ: ಪರಂ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ewew

ಸಂಗೀತ ವಿವಿಯಲ್ಲಿ ಕೋರ್ಸ್‌ ಆರಂಭ: ಕುಲಪತಿ ನಾಗೇಶ್‌

CT RAVI 2

C T Ravi; ಸನಾತನ ಧರ್ಮ ಉಳಿದರೆ ದೇಶದ ಉಳಿವು

Darshan (3)

Renukaswamy ಹ*ತ್ಯೆ ಸ್ಥಳದಲ್ಲಿ ದರ್ಶನ್‌ ಇದ್ದ ಚಿತ್ರ ಲಭ್ಯ: ಪರಂ

ravi-kumar

BJP ಸೋಲಿಗೆ ರಾಜ್ಯಾಧ್ಯಕ್ಷ ಒಬ್ಬರೇ ಹೊಣೆಯಲ್ಲ: ಎನ್‌. ರವಿಕುಮಾರ್‌

1-nikkki

JDS ಕಳೆದುಕೊಂಡಲ್ಲೇ ಹುಡುಕುತ್ತೇನೆ: ನಿಖಿಲ್‌ ಕುಮಾರಸ್ವಾಮಿ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

police

Gangolli: ಕ್ರಿಮಿನಲ್‌ ಹಿನ್ನೆಲೆ: ಮೂವರ ಮೇಲೆ ಪ್ರಕರಣ ದಾಖಲು

theft-temple

Koteshwara: ಶೋ ರೂಮ್‌ನಲ್ಲಿ ಕಳವಿಗೆ ಯತ್ನ

Accident-logo

Sulya: ನಿಲ್ಲಿಸಿದ್ದ ಕಾರಿಗೆ ಬಸ್‌ ಢಿಕ್ಕಿ; ಜಖಂ

Power-Cable

Bantwala: ಬಿ.ಸಿ.ರೋಡಿನಲ್ಲಿ ರೈಲ್ವೇಯ ವಿದ್ಯುತ್‌ ಕೇಬಲ್‌ ಕಳವು

police

Udupi: ಆದಿ ಉಡುಪಿ: ಜುಗಾರಿ ಅಡ್ಡೆಗೆ ಪೊಲೀಸ್‌ ದಾಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.