ಮನೆ ಅಂಗಳದಲ್ಲಿ ಹುಲಿ ಹೆಜ್ಜೆ ಗುರುತು ಪತ್ತೆ… ಜೀವ ಭಯದಲ್ಲಿ ಗ್ರಾಮಸ್ಥರು
Team Udayavani, Dec 13, 2022, 7:48 PM IST
ಹುಣಸೂರು: ರಾತ್ರಿ ಮಲಗಿದ್ದ ಮನೆ ಮಂದಿಗೆ ಬೆಳಗ್ಗೆ ಏಳುವಷ್ಟರಲ್ಲೇ ಹುಲಿ ಹೆಜ್ಜೆ ಗುರುತು ಕಾಣಿಸಿಕೊಂಡಿದ್ದು, ಇಡೀ ಗ್ರಾಮವೇ ಜೀವ ಕೈಯಲ್ಲಿ ಹಿಡಿದುಕೊಂಡು ಆಂತಕದಲ್ಲಿ ಓಡಾಡುವಂತ ಪರಿಸ್ಥಿತಿ ನಿರ್ಮಾಣವಾಗಿರುವ ಘಟನೆ ನಾಗರಹೊಳೆ ಉದ್ಯಾನದಂಚಿನ ತಾಲೂಕಿನ ನೇರಳಕುಪ್ಪೆಯಲ್ಲಿ ನಡೆದಿದೆ.
ನಾಗರಹೊಳೆ ಉದ್ಯಾನವನದಂಚಿನ ಸುತ್ತಮುತ್ತಲ ಗ್ರಾಮಗಳಲ್ಲಿ ಕಳೆದ ಒಂದು ವರ್ಷದಿಂದ ಕಾಡಂಚಿನ ಜಮೀನುಗಳಲ್ಲಿ ಕಾಣಿಸಿಕೊಳ್ಳುತ್ತಿದ್ದ ಹುಲಿಯು ನೇರಳಕುಪ್ಪೆ ಗ್ರಾಮದ ಸುತ್ತೆಲ್ಲಾ ಓಡಾಡಿದ್ದು, ಸೋಮವಾರ ರಾತ್ರಿ ಮುದ್ದೆಗೌಡರ ಮನೆ ಅಂಗಳದಲ್ಲಿ ಹೆಜ್ಜೆ ಗುರುತು ಕಂಡು ಬಂದಿದೆ. ಇದರಿಂದ ಮನೆ ಮಂದಿ ಹಾಗೂ ಅಕ್ಕಪಕ್ಕದ ಮನೆಯವರಲ್ಲಿ ಭಯ ಆವರಿಸಿದ್ದು, ಗ್ರಾಮಸ್ಥರು ನೀಡಿದ ಮಾಹಿತಿ ಮೇರೆಗೆ ಸ್ಥಳಕ್ಕೆ ಅರಣ್ಯ ಇಲಾಖೆ ಸಿಬ್ಬಂದಿಗಳು ಭೇಟಿ ನೀಡಿ ಪರಿಶೀಲಿಸಿದ್ದಾರೆ.
ಹುಲಿ ಸೆರೆ ಹಿಡಿಯಲು ಆಗ್ರಹ:
ಹುಲಿಯು ಹನಗೋಡು ಹಾಗೂ ಸುತ್ತ ಮುತ್ತಲ ಗ್ರಾಮಗಳಲ್ಲಿ ಕಳೆದ ಒಂದು ವರ್ಷದಿಂದ ಕಾಣಿಸಿಕೊಳ್ಳುತ್ತಿದ್ದು, ಹತ್ತಾರು ಆಡು, ಕುರಿ, ಹಸುಗಳನ್ನು ಬಲಿ ಪಡೆದಿದೆ. ಸಮಾರು ಹತ್ತು ಕಿ.ಮೀ. ವ್ಯಾಪ್ತಿಯಲ್ಲಿ ಓಡಾಡುತ್ತಿರುವ ಈ ಹುಲಿಯನ್ನು ಸೆರೆ ಹಿಡಿಯಬೇಕೆಂದು ರೈತರು ಒತ್ತಾಯಿಸಿದ್ದಾರೆ. ಇಲ್ಲದಿದ್ದಲ್ಲಿ ಅರಣ್ಯ ಇಲಾಖೆ ವಿರುದ್ದ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಸಿದ್ದಾರೆ.
ಎಚ್ಚರ ವಹಿಸಲು ಮನವಿ: ಅನಾವಶ್ಯಕವಾಗಿ ಒಬ್ಬರೇ ಓಡಾಡುವುದನ್ನು ಕಡಿಮೆ ಮಾಡುವಂತೆ ಹಾಗೂ ಸಾಕು ಪ್ರಾಣಿ, ರಾಸುಗಳನ್ನು ಮನೆಯ ಹೊರಗಡೆ ಕಟ್ಟದಂತೆ ಅರಣ್ಯಾಧಿಕಾರಿಗಳು ಮನವಿ ಮಾಡಿದ್ದು, ಸಾಕು ಪ್ರಾಣಿಗಳ ಕೂಗಾಡಿದ ವೇಳೆ ಒಮ್ಮೆಲೆ ಮನೆಯಿಂದ ಹೊರಬರದೆ ಕಿಟಕಿ ಮೂಲಕ ವೀಕ್ಷಿಸಿದ ನಂತರವಷ್ಟೆ ಹೊರಬರಲು ಹಾಗೂ ಹೆಜ್ಜೆ ಗುರುತು ಪತ್ತೆಯಾದ ತಕ್ಷಣವೇ ಸಿಬ್ಬಂದಿಗಳಿಗೆ ಮಾಹಿತಿ ನೀಡುವಂತೆ ಮನವಿ ಮಾಡಿದ್ದಾರೆ.
ಇದನ್ನೂ ಓದಿ: 2ನೇ ತರಗತಿ ವಿದ್ಯಾರ್ಥಿಗಳ ಹೊಡೆದಾಟ ಸಾವಿನಲ್ಲಿ ಅಂತ್ಯ: ಪೊಲೀಸರಿಂದ ವಿಚಾರಣೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Namma Metro; ಡಿಸೆಂಬರ್ 31ರಂದು ಮಧ್ಯರಾತ್ರಿ 2 ಗಂಟೆಯವರೆಗೆ ಮೆಟ್ರೋ ಸಂಚಾರ
Robbery: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ “ಮೊಟ್ಟೆ ಗ್ಯಾಂಗ್”
Hubli: ಮನೆ ದರೋಡೆಗೆ ಯತ್ನಿಸಿದ ದರೋಡಕೋರನ ಕಾಲಿಗೆ ಗುಂಡೇಟು
Davangere: ಉತ್ತಮ ಹಿಂಗಾರು: ಬಂಪರ್ ಇಳುವರಿ ನಿರೀಕ್ಷೆಯಲ್ಲಿ ಬೆಳೆಗಾರರು
Honey Trap; ಗುತ್ತಿಗೆದಾರನನ್ನು ಟೀಗೆ ಕರೆದು ಖೆಡ್ಡಾಕ್ಕೆ ಕೆಡವಿದಳು!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.