Hunsur ಅಕ್ರಮ ಸಂಬಂಧ: ಪ್ರೇಮಿಗಳಿಬ್ಬರು ಆತ್ಮಹತ್ಯೆ
ವಾಟ್ಸ್ ಆ್ಯಪ್ ಸ್ಟೇಟಸ್‌ಗೆ ಫೋಟೋ ಹಾಕಿದ್ದ ಯುವಕ
Team Udayavani, Dec 20, 2023, 5:29 PM IST
ಹುಣಸೂರು: ಪ್ರೇಮಿ ಮಾಡಿದ ಎಡವಟ್ಟಿನಿಂದ ಅಕ್ರಮ ಸಂಬಂಧ ಬಯಲಾಗುತ್ತಿದ್ದಂತೆ ಎರಡು ಕುಟುಂಬ, ಸಮುದಾಯಗಳ ನಡುವೆ ನಡೆದ ಘರ್ಷಣೆ, ಮರ್ಯಾದೆಗೆ ಅಂಜಿದ ಮಹಿಳೆ ಮತ್ತು ಪ್ರೇಮಿ ಪ್ರತ್ಯೇಕವಾಗಿ ಸಿನಿಮೀಯ ಮಾದರಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದ ಕಲ್ಕುಣಿಕೆಯಲ್ಲಿ ನಡೆದಿದೆ.
ಕಲ್ಕುಣಿಕೆಯ ಹತ್ತಿಮರದ ಬೀದಿಯ ನಿವಾಸಿ ರಘು ಪತ್ನಿ ಶ್ರುತಿ(28) ಹಾಗೂ ಇದೇ ಬಡಾವಣೆಯ ಪಕ್ಕದ ಬೀದಿಯ ಮುರಳಿ(20) ನೇಣಿಗೆ ಶರಣಾದವರು.
ಕಳೆದ 7 ವರ್ಷಗಳ ಹಿಂದೆ ರಘು ವಿನೊಂದಿಗೆ ಪಿರಿಯಾಪಟ್ಟಣ ತಾಲೂಕಿನ ಸೂಳೆಕೋಟೆಯ ಶ್ರುತಿಗೆ ವಿವಾಹವಾಗಿದ್ದು, ಆರು ಮತ್ತು ಮೂರು ವರ್ಷದ ಇಬ್ಬರು ಮಕ್ಕಳಿದ್ದಾರೆ.
ಘಟನೆ ವಿವರ: ಮುರಳಿ ಎಲೆಕ್ಟಿಶಿಯನ್ ಕೆಲಸ ನಿರ್ವ ಹಿಸುತ್ತಿದ್ದ, ಪಕ್ಕದ ಬೀದಿಯ ಶ್ರುತಿ ಯೊಂದಿಗೆ ಸಲುಗೆ ಬೆಳೆದು ಅಕ್ರಮ ಸಂಬಂಧ ಬೆಳೆಸಿದ್ದ, ಮುರಳಿ ಶ್ರುತಿ ಯೊಂದಿಗಿರುವ ಫೋಟೋವನ್ನು ತನ್ನ ಸ್ಟೇಟಸ್‌ನಲ್ಲಿ ಅಪ್‌ಲೋಡ್ ಮಾಡಿದ್ದು, ಇದು ವಾರದ ಹಿಂದೆ ವೈರಲ್ ಆಗುತ್ತಿದ್ದಂತೆ ಶ್ರುತಿ ಮನೆಯಲ್ಲಿ ಹಾಗೂ ಎರಡು ಸಮುದಾಯಗಳ ನಡುವೆ ಘರ್ಷಣೆ ನಡೆದಿದೆ.
ಆತಂಕಗೊಂಡ ಶ್ರುತಿ ಮನೆಯಲ್ಲೇ ನೇಣಿಗೆ ಶರಣಾಗಿದ್ದಾಳೆ. ಶ್ರುತಿ ಆತ್ಮಹತ್ಯೆ ಘಟನೆಯಿಂದ ಎರಡು ಸಮುದಾಯಗಳ ನಡುವೆ ಘರ್ಷಣೆ ನಡೆದಿದೆ. ಶ್ರುತಿ ಆತ್ಮಹತ್ಯೆಗೆ ಮುರಳಿಯೇ ಕಾರಣವೆಂದು ಆಕೆಯ ಪತಿ ರಘು ದೂರು ನೀಡಿದ್ದರೆ, ಇತ್ತ ಮುರಳಿ ಕಡೆಯವರು ಸಹ ತಮಗೆ ರಘು ಕಡೆಯವರು ರಸ್ತೆಯಲ್ಲಿ ಅವಾಚ್ಯ ಶಬ್ದಗಳಿಂದ ನಿಂದಿಸುತ್ತಾರೆಂದು ಶ್ರುತಿ ಕುಟುಂಬದವರ ವಿರುದ್ಧ ಅಟ್ರಾಸಿಟಿ ಪ್ರಕರಣ ದಾಖಲಿಸಿದ್ದಾರೆ.
ಒಂದೆಡೆ ಪ್ರೇಮಿಯ ಸಾವು, ಮತ್ತೊಂದೆಡೆ ಎರಡು ಕಡೆಯವರ ಘರ್ಷಣೆಯಿಂದ ಹೆದರಿದ ಎಲೆಕ್ಟ್ರಿಶಿ ಯನ್ ಮುರಳಿ ಸಹ ಕೆ.ಆರ್.ನಗರದ ರೈಲ್ವೆ ನಿಲ್ದಾಣದ ಬಳಿಯ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ
ಶರಣಾಗಿದ್ದಾನೆ.
ಈ ನಡುವೆ ಶ್ರುತಿಯ ಪತಿ ಕುಟುಂಬದ ಚೆಲುವಾಚಾರಿ, ರವಿ, ಮಹೇಂದ್ರರ ವಿರುದ್ಧ ನಗರ ಠಾಣೆಯಲ್ಲಿ ಅಟ್ರಾಸಿಟಿ ಪ್ರಕರಣ ದಾಖಲಾಗಿದ್ದರೆ.
ಮುರಳಿ ಸಾವಿನ ಸಂಬಂಧ ಕೆ.ಆರ್. ನಗರ ಠಾಣೆಯಲ್ಲಿ ಯುಡಿಆರ್ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ
Mysuru: ಜೆಡಿಎಸ್ ವರಿಷ್ಠರಿಗೆ ನಾನು ಬೇಡ, ನನ್ನ ಮಗ ಬೇಕಾಗಿದ್ದಾನೆ: ಜಿ.ಟಿ.ದೇವೇಗೌಡ
Congress: ಜಮೀರ್ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್
H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!
Hunsur: ರಾಜ್ಯದ ವಿವಿಧೆಡೆ ಕಳ್ಳತನ ಮಾಡಿದ್ದ ಆರೋಪಿ ಬಂಧನ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Police Raid: ಮಾದಕವಸ್ತು, ಅಕ್ರಮ ಮದ್ಯಮಾರಾಟದ ವಿರುದ್ಧ ವಿಶೇಷ ಕಾರ್ಯಾಚರಣೆ: ಪ್ರಕರಣ ದಾಖಲು
IPL Mega Auction: ಮೊದಲ ದಿನದ ಹರಾಜಿನ ಬಳಿಕ ಎಲ್ಲಾ 10 ತಂಡಗಳು ಹೀಗಿವೆ ನೋಡಿ
Rashmika Mandanna: ಸಾವಿರಾರು ಜನರ ಮುಂದೆ ಮದುವೆ ಆಗುವ ಹುಡುಗನ ಬಗ್ಗೆ ಮಾತನಾಡಿದ ರಶ್ಮಿಕಾ
Stock Market: ಷೇರುಪೇಟೆ ಸೂಚ್ಯಂಕ 1,300 ಅಂಕ ಜಿಗಿತ; ಅದಾನಿ ಗ್ರೂಪ್ ಷೇರು ಮೌಲ್ಯ ಏರಿಕೆ
Bidar: ವಕ್ಫ್ ಹೋರಾಟ ಆರಂಭಿಸಿದ ಯತ್ನಾಳ್- ಜಾರಕಿಹೊಳಿ ತಂಡ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.