1.64 ಕೋಟಿ ವೆಚ್ಚದಡಿ ಗುರುಪುರ-ಕಾಳೇನಹಳ್ಳಿ ರಸ್ತೆ ಕಾಮಗಾರಿಗೆ ಚಾಲನೆ

ಗ್ರಾಮೀಣ ಸಂಪರ್ಕ ರಸ್ತೆಗಳು ಅಭಿವೃದ್ದಿಯಾದಲ್ಲಿ ಹಳ್ಳಿಗರ ಬದುಕು ಹಸನಾಗಲಿದೆ- ಶಾಸಕ ಮಂಜುನಾಥ್

Team Udayavani, Nov 19, 2022, 11:03 AM IST

news2

ಹುಣಸೂರು: ಗ್ರಾಮಾಂತರ ಪ್ರದೇಶದ ರಸ್ತೆಗಳು ಅಭಿವೃದ್ಧಿಯಾದರೆ ಗ್ರಾಮಗಳು ಅಭಿವೃದ್ಧಿ ಹೊಂದಲು ಸಾಧ್ಯವೆಂದು ಶಾಸಕ ಎಚ್.ಪಿ. ಮಂಜುನಾಥ್ ತಿಳಿಸಿದರು.

ತಾಲೂಕಿನ ಗುರುಪುರ ಗ್ರಾಮದಲ್ಲಿ ಗುರುಪುರ- ಕಾಳೇನಹಳ್ಳಿ ಸಂಪರ್ಕ ರಸ್ತೆಯನ್ನು ಲೋಕೋಪಯೋಗಿ ಇಲಾಖೆ ವತಿಯಿಂದ 1.64 ಕೋಟಿ ರೂ ವೆಚ್ಚದಲ್ಲಿ ರಸ್ತೆ ಡಾಂಬರೀಕರಣ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿ, ಈ ಭಾಗದ ರಸ್ತೆಗಳ ಅಭಿವೃದ್ಧಿಗೆ ಹೆಚ್ಚಿನ ಒತ್ತನ್ನು ಕೊಟ್ಟು, ದೀರ್ಘಕಾಲ ಬಾಳಿಕೆ ಬರುವಂತೆ ಗುಣಮಟ್ಟದ ಕಾಮಗಾರಿಗೆ ಆದ್ಯತೆ ನೀಡಲಾಗಿದೆ.  ಚುನಾಯಿತ ಜನಪ್ರತಿನಿಧಿಗಳಿಗೆ ಅಧಿಕಾರ ಶಾಶ್ವತವಲ್ಲ, ತಮ್ಮ ಅಧಿಕಾರದ ಅವಧಿಯಲ್ಲಿ ಶಾಶ್ವತವಾಗಿ ಉಳಿಯುವ ಕೆಲಸಗಳನ್ನು ಮಾಡಿದಾಗ ಮಾತ್ರ ನಮ್ಮಗಳ ಸೇವೆ ಸಾರ್ಥಕವಾಗುತ್ತದೆ ಎಂದರು.

ಪ್ರತಿ ಗ್ರಾಮಗಳನ್ನು ಪಕ್ಷಾತೀತವಾಗಿ ಅಭಿವೃದ್ಧಿಪಡಿಸಬೇಕು. ಗ್ರಾಮಗಳ ಅಭಿವೃದ್ದಿಗಾಗಿ ಸರ್ಕಾರ ತಾಲೂಕಿಗೆ ನೀಡಿರುವ ಅಲ್ಪಪ್ರಮಾಣದ ಅನುದಾನದಲ್ಲಿ ಆದ್ಯತೆ ಮೇರೆಗೆ ಗ್ರಾಮಗಳ ಅಭಿವೃದ್ಧಿ ಕೆಲಸಕ್ಕೆ ಚಾಲನೆ ನೀಡಲಾಗುತ್ತಿದ್ದು, ಈ ಭಾಗದ ಹಲವಾರು ದಿನಗಳಿಂದ ಈ ಭಾಗದಲ್ಲಿ ರಸ್ತೆ ಅಭಿವೃದ್ದಿಯಾಗದೆ ನೆನೆಗುದಿಗೆ ಬಿದ್ದಿತ್ತು. ಮಳೆಗಾಲದಲ್ಲಿ ರಸ್ತೆಯಲ್ಲಿ ಓಡಾಡಲು ಗ್ರಾಮಸ್ಥರು ಸಮಸ್ಯೆ ಎದುರಿಸುವಂತಾಗಿತ್ತು. ಕಾಮಗಾರಿಗಳು ಪ್ರಾರಂಭಿಸಿದಾಗ, ಸ್ಥಳೀಯ ಮುಖಂಡರು ರಾಜಕಾರಣ ಬದಿಗೊತ್ತಿ ಪರಸ್ಪರ ಸಹಕಾರ ನೀಡಿದರೆ ಅಭಿವೃದ್ಧಿ ಹೊಂದಲು ಸಾಧ್ಯವೆಂದು ತಿಳಿಸಿ, ಕಾಮಗಾರಿ ನಡೆಯುವಾಗ ಗುಣಮಟ್ಟವನ್ನು ಕಾಪಾಡಿಕೊಳ್ಳಬೇಕೆಂದು ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಕಾರ್ಯಕ್ರಮದಲ್ಲಿ ಗುರುಪುರ ಗ್ರಾಮ ಪಂಚಾಯಿತಿ ಅಧ್ಯಕ್ಷೆ ರಾಧಾನಾಗ ನಾಯಕ್, ಉಪಾಧ್ಯಕ್ಷ ಲೋಕೇಶ್‌, ಮಾಜಿ ಅಧ್ಯಕ್ಷ ಪ್ರಶಾಂತ್, ಮಾಜಿ ಉಪಾಧ್ಯಕ್ಷ ಚಂದ್ರಶೇಖರ್, ಸದಸ್ಯರಾದ ಬೀರೇಗೌಡ, ರಹಮತ್ ಬೇಗ್, ಮುಶೀರ್, ಲೋಕೋಪಯೋಗಿ ಇಲಾಖೆಯ ಎಇಇ ಭೋಜರಾಜ್, ಇಂಜಿನಿಯರ್ ಚಂದ್ರಶೇಖರ್, ಮುಖಂಡರಾದ ಮಹದೇವಣ್ಣ, ಶಿವಣ್ಣ ಕೃಷ್ಣೇಗೌಡ ಎಲ್ಲಯ್ಯ ಸೇರಿದಂತೆ ಗ್ರಾಮಸ್ಥರು ಇದ್ದರು.

ಟಾಪ್ ನ್ಯೂಸ್

DK–BJP-Protest

Mangaluru: ತುಳುನಾಡಿನ ದೈವ-ದೇವರ ಜಾಗ ಉಳಿಸಲು ಹೋರಾಟ: ಸಂಸದ ಚೌಟ

Kharge

Adani ಕುಟುಂಬ ವಶಕ್ಕೆ ಪಡೆದು ತನಿಖೆ ನಡೆಸಲಿ : ಖರ್ಗೆ

Udupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚUdupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚ

Udupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚ

Pro-Kabaddi League: ಯುಪಿ ಯೋಧಾಸ್‌ಗೆ ಶರಣಾದ ತಮಿಳ್‌ ತಲೈವಾಸ್‌

Pro-Kabaddi League: ಯುಪಿ ಯೋಧಾಸ್‌ಗೆ ಶರಣಾದ ತಮಿಳ್‌ ತಲೈವಾಸ್‌

Adelaide Test: ಫಿಲಿಪ್‌ ಹ್ಯೂಸ್‌ ಸ್ಮರಣೆ

Adelaide Test: ಫಿಲಿಪ್‌ ಹ್ಯೂಸ್‌ ಸ್ಮರಣೆ

China Badminton: ಚಿರಾಗ್‌- ಸಾತ್ವಿಕ್‌ ಸೆಮಿಫೈನಲ್‌ಗೆ

China Badminton: ಚಿರಾಗ್‌- ಸಾತ್ವಿಕ್‌ ಸೆಮಿಫೈನಲ್‌ಗೆ

ಬೈಡೆನ್‌ “ಮರೆಗುಳಿ’ತನ ಕುರಿತ ಹೇಳಿಕೆ: ರಾಹುಲ್‌ ಕ್ಷಮೆಗೆ ವೈದ್ಯರ ಪಟ್ಟು

Joe Biden “ಮರೆಗುಳಿ’ತನ ಕುರಿತ ಹೇಳಿಕೆ: ರಾಹುಲ್‌ ಕ್ಷಮೆಗೆ ವೈದ್ಯರ ಪಟ್ಟು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌

H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!

H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!

6-hunsur

Hunsur: ರಾಜ್ಯದ ವಿವಿಧೆಡೆ ಕಳ್ಳತನ ಮಾಡಿದ್ದ ಆರೋಪಿ ಬಂಧನ

Lokayukta police: ಮುಡಾ ಮಾಜಿ ಆಯುಕ್ತ ನಟೇಶ್‌ ವಿಚಾರಣೆ

Lokayukta police: ಮುಡಾ ಮಾಜಿ ಆಯುಕ್ತ ನಟೇಶ್‌ ವಿಚಾರಣೆ

Yathindra Siddaramaiah: ಹಿಂದೂ ರಾಷ್ಟ್ರ ಮಾಡಲು ಬಿಡಬಾರದು

Yathindra Siddaramaiah: ಹಿಂದೂ ರಾಷ್ಟ್ರ ಮಾಡಲು ಬಿಡಬಾರದು

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Suside-Boy

Karkala: ಬೋಳ ಗ್ರಾಮದ ವ್ಯಕ್ತಿ ಆತ್ಮಹತ್ಯೆ

Suside-Boy

Mudubidre: ಅಂತಿಮ ಬಿಬಿಎಂ ವಿದ್ಯಾರ್ಥಿ ಆತ್ಮಹತ್ಯೆ

Suside-Boy

Belthangady: ಕಲ್ಮಂಜ: ರಿಕ್ಷಾ ಚಾಲಕ ಆತ್ಮಹತ್ಯೆ

DK–BJP-Protest

Mangaluru: ತುಳುನಾಡಿನ ದೈವ-ದೇವರ ಜಾಗ ಉಳಿಸಲು ಹೋರಾಟ: ಸಂಸದ ಚೌಟ

Suside-Boy

Punjalakatte: ಕೊಯಿಲದ ವ್ಯಕ್ತಿ ಹಾಸನದಲ್ಲಿ ನಿಗೂಢ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.