ಹುಣಸೂರು: ತಾಲೂಕಿನ 271 ಹಳ್ಳಿಗಳಿಗೆ 282 ಕೋಟಿ ವೆಚ್ಚದಡಿ ಕಾವೇರಿ ನೀರು ಪೂರೈಕೆ
ಬಹುಗ್ರಾಮ ಕುಡಿಯುವ ನೀರು ಯೋಜನೆಗೆ ಸಂಪುಟ ಒಪ್ಪಿಗೆ: ಶಾಸಕ ಮಂಜುನಾಥ್ ಸಂತಸ
Team Udayavani, Dec 11, 2022, 12:42 PM IST
ಹುಣಸೂರು: ಹುಣಸೂರು ತಾಲೂಕಿನ ಎಲ್ಲ ಹಳ್ಳಿಗಳಿಗೂ 2024 ಡಿಸೆಂಬರ್‌ನೊಳಗೆ ಕಾವೇರಿ ನೀರು ಪೂರೈಸುವ 282 ಕೋಟಿ ವೆಚ್ಚದ ಬಹುಗ್ರಾಮ(ಜೆಜೆಎಂ) ಕುಡಿಯುವ ನೀರು ಯೋಜನೆಗೆ ಸಂಪುಟದಲ್ಲಿ ಅನುಮೋದನೆ ದೊರೆತಿದೆ ಎಂದು ಶಾಸಕ ಎಚ್.ಪಿ.ಮಂಜುನಾಥ್ ತಿಳಿಸಿದರು.
ಶಾಸಕರ ಕಚೇರಿಯಲ್ಲಿ ಸುದ್ದಿಗೋಷ್ಟಿಯಲ್ಲಿ ಯೋಜನೆ ಕುರಿತು ಮಾಹಿತಿ ನೀಡಿದ ಅವರು, ಹಳೇ ಉಂಡವಾಡಿಯ ಕಾವೇರಿ ಹಿನ್ನೀರಿನ ಬಳಿ ನೀರು ಸಂಗ್ರಹಿಸಿ ಚಿಕ್ಕಾಡಿಗನಹಳ್ಳಿ ಬಳಿಯಲ್ಲಿ 15 ಲಕ್ಷ ಲೀ. ಬೃಹತ್ ನೀರು ಸಂಗ್ರಹಿಸುವ ಟ್ಯಾಂಕ್ ನಿರ್ಮಿಸಿ ಅಲ್ಲಿಂದ ಎಲ್ಲ ಗ್ರಾಮಗಳಿಗೂ ಕಾವೇರಿ ನೀರು ಪೂರೈಸುವ ಯೋಜನೆ ಇದಾಗಿದ್ದು, ಇದಕ್ಕಾಗಿ ವಿವಿಧ ಗ್ರಾಮಗಳಲ್ಲಿ ಹೊಸದಾಗಿ 28 ಟ್ಯಾಂಕ್‌ಗಳನ್ನು ನಿರ್ಮಿಸಲಾಗುತ್ತಿದೆ. ಶೀಘ್ರದಲ್ಲೇ ಟೆಂಡರ್ ಪ್ರಕ್ರಿಯೆ ಆರಂಭಿಸಲಾಗುವುದು ಎಂದರು.
ಇಷ್ಟು ವರ್ಷಗಳ ಅಧಿಕಾರವಧಿಯಲ್ಲಿ ತಾಲೂಕಿನ ಎಲ್ಲ ಗ್ರಾಮಗಳಿಗೂ ಕಾವೇರಿ ನೀರು ತಲುಪಿಸುವ ಕಾರ್ಯ ನನ್ನ ಅವಧಿಯಲ್ಲಿ ಸಾಕಾರಗೊಳ್ಳುತ್ತಿರುವುದು ತೃಪ್ತಿ ತಂದಿದ್ದು, ತಾವು ಈ ಹಿಂದೆ ಜನತೆಗೆ ನೀಡಿದ್ದ ಭರವಸೆ ಈಡೇರಿಸಿದ ಹೆಮ್ಮೆ ಇದೆ ಎಂದರು.
ಜಿಲ್ಲೆಯಲ್ಲೇ ಪ್ರಥಮ:
ಮೈಸೂರು ಜಿಲ್ಲೆಯಲ್ಲೇ ಪ್ರಥಮವಾಗಿ ಬಹುಗ್ರಾಮ ಕುಡಿಯುವ ನೀರು ಯೋಜನೆ ನಮ್ಮ ತಾಲೂಕಿನಲ್ಲಿ ಸಾಕಾರಗೊಳ್ಳುತ್ತಿರುವುದು ಸಂತಸದ ವಿಷಯ. ಈವರೆಗೆ ಕೆಲವು ಹಳ್ಳಿಗಳಿಗೆ 3-4 ದಿನಗಳಿಗೊಮ್ಮೆ ಬೋರ್ವೆಲ್‌ಗಳ ಮೂಲಕ ನೀರು ಪೂರೈಸಲಾಗುತ್ತಿತ್ತು. 2024 ರ ಡಿಸೆಂಬರ್ ಅಂತ್ಯದೊಳಗೆ ಯೋಜನೆ ಪೂರ್ಣಗೊಂಡು ತಾಲೂಕಿನ ಎಲ್ಲ 271 ಗ್ರಾಮಗಳಿಗೂ ಯೋಜನೆಯಡಿ ನೀರು ಪೂರೈಸುವ ಯೋಜನೆ ಇದಾಗಿದ್ದು, ಕೇಂದ್ರ ಮತ್ತು ರಾಜ್ಯ ಸರಕಾರ ಸಮಾನ ಅನುದಾನ ಭರಿಸಲಿದೆ ಎಂದರು.
ಸಿ.ಎಂ.ಗೆ ಅಭಿನಂದನೆ: ಬಹುಗ್ರಾಮ ಕುಡಿಯುವ ನೀರು ಯೋಜನೆಗೆ ಸಂಪುಟದಲ್ಲಿ ಅನುಮೋದನೆಗೆ ನೆರವಾದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ. ಸೋಮಶೇಖರ್, ಎಂಎಲ್‌ಸಿ ವಿಶ್ವನಾಥ್ ಹಾಗೂ ಸಂಸದ ಪ್ರತಾಪಸಿಂಹ ಮತ್ತು ಸಂಬಂಧಿಸಿದ ಇಲಾಖೆಯ ಹಿರಿಯ ಅಧಿಕಾರಿಗಳನ್ನು ಅಭಿನಂದಿಸುವುದಾಗಿ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hunsur: ಬೈಕ್‌ನಿಂದ ಬಿದ್ದು ಹಿಂಬದಿ ಸವಾರ ಸಾವು
Actor Health: ಸ್ವಲ್ಪ ಜರುಗಿದ ದರ್ಶನ್ ಬೆನ್ನುಮೂಳೆ; ತುರ್ತಾಗಿ ಆಪರೇಷನ್ ಇಲ್ಲ: ವೈದ್ಯರು
Name Road: ರಸ್ತೆಗೆ ಸಿದ್ದರಾಮಯ್ಯ ಹೆಸರಿಟ್ಟರೇ ತಪ್ಪೇನು?: ಪ್ರತಾಪ್ ಸಿಂಹ
Hunsur: ಕೆಲ ಗ್ರಾಮಗಳಲ್ಲಿ ಒಂಟಿ ಸಲಗದ ಉಪಟಳ; ಬೆಳೆ ನಾಶ, ರೈತರು ಕಂಗಾಲು
Congress Government: ಸಿದ್ದರಾಮಯ್ಯ ಅವಧಿಯಲ್ಲೇ ದ್ವೇಷದ ರಾಜಕಾರಣ ಬೇಸರ ತಂದಿದೆ: ಸೋಮಣ್ಣ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Manmohan Singh; ಭಾರತದ ಮೊದಲ ಸಿಖ್ ಪ್ರಧಾನಿ ಈ ವಿಚಾರಕ್ಕಾಗಿ ಕ್ಷಮೆಯಾಚಿಸಿದ್ದರು
Video: ಮನಮೋಹನ್ ಸಿಂಗ್ ಹೇಳುವ ಬದಲು ಮೋದಿ ನಿಧನ ಎಂದ ನ್ಯೂಸ್ ಆ್ಯಂಕರ್.!
Stampede case:ವಿಡಿಯೋ ಕಾನ್ಫರೆನ್ಸ್ ಮೂಲಕ ನ್ಯಾಯಾಲಯಕ್ಕೆ ಹಾಜರಾದ ಅಲ್ಲು ಅರ್ಜುನ್
Bandipur: ಆನೆಮರಿಯನ್ನೇ ಬೇಟೆಯಾಡಿ ಕೊಂದ ಹುಲಿ… ಅರಣ್ಯ ಅಧಿಕಾರಿಗಳಿಂದ ಪರಿಶೀಲನೆ
Suzuki; ಆಟೋಮೊಬೈಲ್ ಕ್ಷೇತ್ರದ ದಿಗ್ಗಜ ಒಸಾಮು ಸುಜುಕಿ ವಿಧಿವಶ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.