ಚಂಡಮಾರುತ: ಕಾವೇರಿ ಕಣಿವೆಯಲ್ಲಿ ಭಾರೀ ಮಳೆ ಸಾಧ್ಯತೆ


Team Udayavani, May 23, 2018, 2:03 PM IST

m5-chandamaru.jpg

ಮೈಸೂರು: ಅರಬ್ಬಿ ಸಮುದ್ರದಲ್ಲಿ ಸಾಗರ್‌ ಚಂಡಮಾರುತ ಕಾಣಿಸಿಕೊಂಡಿರುವುದರಿಂದ ಕಾವೇರಿ ಕಣಿವೆಯ ಜಿಲ್ಲೆಗಳಲ್ಲಿ ಮುಂದಿನ ಐದು ದಿನಗಳ ಕಾಲ ಸಾಧಾರಣದಿಂದ ಕೂಡಿದ ಭಾರೀ ಮಳೆ ಬರುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಮೇ 23ರಿಂದ 27ರವರೆಗೆ ಮೈಸೂರು ಜಿಲ್ಲೆಯಲ್ಲಿ 10ರಿಂದ 20 ಮಿ.ಮೀವರೆಗೆ ಮಳೆಯಾಗಲಿದೆ. ಚಾಮರಾಜನಗರ ಜಿಲ್ಲೆಯಲ್ಲಿ 10 ರಿಂದ 15 ಮಿ.ಮೀ, ಮಂಡ್ಯ ಜಿಲ್ಲೆಯಲ್ಲಿ 20ರಿಂದ 60 ಮಿ.ಮೀ, ಕೊಡಗು ಜಿಲ್ಲೆಯಲ್ಲಿ 20ರಿಂದ 40 ಮಿ.ಮೀ ವರೆಗೆ ಭಾರೀ ಮಳೆಯಾಗುವ ಸಾಧ್ಯತೆ ಇದೆ.

ಜೂನ್‌ 5ರಂದು ಕರ್ನಾಟಕಕ್ಕೆ ನೈರುತ್ಯ ಮುಂಗಾರು ಆಗಮನವಾಗಲಿದೆ. ಈ ವರ್ಷ ರಾಜ್ಯದಲ್ಲಿ ನೈರುತ್ಯ ಮುಂಗಾರು ಸಹಜವಾಗಿದ್ದು, ಜೂನ್‌ ತಿಂಗಳಿನಿಂದ ಸೆಪ್ಟೆಂಬರ್‌ವರೆಗೆ ಶೇ.97 ಮಳೆ ಬೀಳಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ ಎಂದು ನಾಗನಹಳ್ಳಿ ಗ್ರಾಮೀಣ ಕೃಷಿ ಹವಾಮಾನ ಸೇವಾ ವಿಭಾಗದ ಹಿರಿಯ ಕ್ಷೇತ್ರ ಅಧೀಕ್ಷಕ ಪಿ.ಪ್ರಕಾಶ್‌ ತಿಳಿಸಿದ್ದಾರೆ.

ಗರಿಷ್ಠ ಉಷ್ಣಾಂಶ 31-33 ಡಿಗ್ರಿ ಸೆಲ್ಸಿಯಸ್‌ ಮತ್ತು ಕನಿಷ್ಠ ಉಷ್ಣಾಂಶ 20-23 ಡಿಗ್ರಿ ಸೆಲ್ಸಿಯಸ್‌ವರೆಗೆ ದಾಖಲಾಗುವ ಸಾಧ್ಯತೆಯಿದೆ. ಬೆಳಗಿನ ಗಾಳಿಯ ತೇವಾಂಶ ಶೇ. 83-89ವರೆಗೆ ಮತ್ತು ಮಧ್ಯಾಹ್ನದ ತೇವಾಂಶ ಶೇ.57ರಿಂದ 68 ಇರಲಿದ್ದು, ಗಾಳಿಯು ಗಂಟೆಗೆ ಸರಾಸರಿ 8 ರಿಂದ 10 ಕಿ.ಮೀ ವೇಗದಲ್ಲಿ ಬೀಸುವ ಸಾಧ್ಯತೆಯಿದೆ ಎಂದು ತಿಳಿಸಿದ್ದಾರೆ.

ರೈತರಿಗೆ ಸಲಹೆ: ಮಳೆ ಬಂದಿರುವ ಕಡೆ ರೈತರು ಇಳಿಜಾರಿಗೆ ಅಡ್ಡಲಾಗಿ ಮಾಗಿ ಉಳುಮೆ ಮಾಡಬೇಕು ಇದರಿಂದ ನೀರು ಇಂಗುವಿಕೆ ಹೆಚ್ಚಾಗುತ್ತದೆ ಮತ್ತು ಮಣ್ಣಿನ ಸವಕಳಿ ಕಡಿಮೆಯಾಗುತ್ತದೆ. ರೈತರು ಹಸಿರೆಲೆ ಗೊಬ್ಬರಗಳಾದ ಸೆಣಬು ಅಥವಾ ಡಯಾಂಚ ಮತ್ತು ದ್ವಿದಳ ಧಾನ್ಯಗಳಾದ ಅಲಸಂದೆ, ಹೆಸರು, ಅವರೆ, ಹುರುಳಿ, ಉದ್ದು ಇತ್ಯಾದಿ ಬೆಳೆಗಳನ್ನು ಸೂಕ್ತ ಪ್ರದೇಶಗಳಲ್ಲಿ ಬಿತ್ತನೆ ಮಾಡುವುದು.

ದ್ವಿದಳ ಧಾನ್ಯಗಳನ್ನು ಬಿತ್ತನೆ ಮಾಡುವಾಗ ರೈತರು ಬೀಜಗಳನ್ನು ಪ್ರತಿ ಕೆಜಿಗೆ 20 ಗ್ರಾಂ ರೈಜೋಬಿಯಂ ಸೂಕ್ಷ್ಮಾಣು ಜೀವಿಗಳಿಂದ ಉಪಚರಿಸಬೇಕು. ಬಿತ್ತನೆ ಮಾಡುವಾಗ ಏಕದಳ ಧಾನ್ಯದ ಬೀಜಗಳಿಗೆ ಅಝೊàಸ್ಪಿ$ರಿಲಮ್‌  ಪಿಎಸ್‌ಬಿ ಹಾಗೂ ದ್ವಿದಳ ಧಾನ್ಯದ ಬೀಜಗಳಿಗೆ ರೈಝೊಬಿಯಮ್‌ ಪಿಎಸ್‌ಬಿಯಿಂದ ಉಪಚಾರ ಮಾಡಿ ಬಿತ್ತಬೇಕು.

ಮುಂಗಾರು ಮಳೆ ಪ್ರಾರಂಭವಾಗುವುದಕ್ಕೆ ಮೊದಲು, ಎಲ್ಲ ಜಾನುವಾರುಗಳಿಗೆ ಜಂತು ನಾಶಕ ಔಷಧಿ ಹಾಗೂ ಕಾಲು -ಬಾಯಿ ಬೇನೆ, ಚೆಪ್ಪೆ ಬೇನೆಗೆ ಮುನ್ನೆಚ್ಚರಿಕೆ ಕ್ರಮವಾಗಿ ಸೂಕ್ತ ಚುಚ್ಚುಮದ್ದನ್ನು ಹಾಕಿಸಬೇಕು. ಆಡು ಮತ್ತು ಕುರಿಗಳಿಗೆ ಎಂಟರೊಟಾಕ್ಸೀಮಿಯಾ ರೋಗ ನಿರೋಧಕ ಹಾಕಿಸಬೇಕು ಎಂದು ತಿಳಿಸಿದ್ದಾರೆ.

ಟಾಪ್ ನ್ಯೂಸ್

Bandipur:  ಸಫಾರಿಯಲ್ಲಿ ಪ್ರವಾಸಿಗರ ಮುಂದೆಯೇ ಜಿಂಕೆ ಬೇಟೆಯಾಡಿದ ಚಿರತೆ

Bandipur: ಸಫಾರಿಯಲ್ಲಿ ಪ್ರವಾಸಿಗರ ಮುಂದೆಯೇ ಜಿಂಕೆ ಬೇಟೆಯಾಡಿದ ಚಿರತೆ

Contracters-Assoi

Report: ರಾಜ್ಯ ಗುತ್ತಿಗೆದಾರರ ಸಂಘದಿಂದ ಲೋಕಾಯುಕ್ತಕ್ಕೆ ದೂರು ಕೊಟ್ಟಿಲ್ಲ: ಜಗನ್ನಾಥ ಶೇಗಜಿ

IFFI: ಪಾಪ್‌ ಸಂಗೀತಗಾರ ರಾಬಿ ವಿಲಿಯಮ್ಸ್‌ ಬೆಟರ್‌ ಮ್ಯಾನ್‌ ಚಿತ್ರೋತ್ಸವದ ಉದ್ಘಾಟನಾ ಸಿನಿಮಾ

IFFI: ಪಾಪ್‌ ಸಂಗೀತಗಾರ ರಾಬಿ ವಿಲಿಯಮ್ಸ್‌ ಬೆಟರ್‌ ಮ್ಯಾನ್‌ ಚಿತ್ರೋತ್ಸವದ ಉದ್ಘಾಟನಾ ಸಿನಿಮಾ

Naxal: ನಕ್ಸಲರ ನೆತ್ತರ ಹೆಜ್ಜೆ..: ರಾಜ್ಯದಲ್ಲಿ ನಕ್ಸಲ್‌ ಅಟ್ಟಹಾಸದ ಕರಾಳ ಇತಿಹಾಸ ಇಲ್ಲಿದೆ

Naxal: ನಕ್ಸಲರ ನೆತ್ತರ ಹೆಜ್ಜೆ..: ರಾಜ್ಯದಲ್ಲಿ ನಕ್ಸಲ್‌ ಅಟ್ಟಹಾಸದ ಕರಾಳ ಇತಿಹಾಸ ಇಲ್ಲಿದೆ

vikr

Naxal: ಸರ್ಕಾರಿ ಬಸ್‌ ಅಡ್ಡ ಹಾಕಿ ಬೆಂಕಿ ಹಚ್ಚಿ ಕರಪತ್ರ ಹಂಚಿದ್ದ ವಿಕ್ರಂಗೌಡ ಮತ್ತು ತಂಡ!

Bar-Associatin

Wine Merchants: ನಾಳೆಯ ಮದ್ಯ ಮಾರಾಟ ಬಂದ್‌ ನಿರ್ಧಾರ ವಾಪಸ್‌ ಪಡೆದ ಅಸೋಸಿಯೇಷನ್‌

vital

Vitla: ಮನೆಗೆ ನುಗ್ಗಿ ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕಳವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-hunsur

Hunsur: ಚಿನ್ನದ ಸರ ಅಪಹರಿಸಿದ್ದ ಇಬ್ಬರು ಆರೋಪಿಗಳ ಬಂಧನ

Parameahwar

Congress: ಜಮೀರ್ “ಕರಿಯ’ ಹೇಳಿಕೆ ಕುರಿತು ಶಿಸ್ತು ಸಮಿತಿಗೆ ವರದಿ ಕೊಟ್ಟರೆ ಕ್ರಮ: ಪರಂ

CN-Manjunath

Mysuru: ಕೋವಿಡ್‌ ವೇಳೆ ಔಷಧ ಖರೀದಿಯಲ್ಲಿ ನನ್ನ ಪಾತ್ರವಿಲ್ಲ: ಡಾ.ಸಿ.ಎನ್‌.ಮಂಜುನಾಥ್‌

Ullala-Swim-1

Ullala Resort: ಮೃತ ಯುವತಿಯ ಕುಟುಂಬಸ್ಥರ ಆಕ್ರಂದನ

HD-Kumaraswmy

Black Days: ಜಮೀರ್‌+ ನಾಲ್ವರು ಕೊಚ್ಚೆ, ದೂರ ಇಟ್ಟಿದ್ದೇನೆ: ಎಚ್‌.ಡಿ.ಕುಮಾರಸ್ವಾಮಿ

MUST WATCH

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

udayavani youtube

ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್‌ ನಕ್ಸಲ್ ಸಾವು

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

ಹೊಸ ಸೇರ್ಪಡೆ

crimebb

Kasaragod ಅಪರಾಧ ವಾರ್ತೆ; ಆನೆಯ ತುಳಿತಕ್ಕೆ ಮಾವುತ ಸಹಿತ ಇಬ್ಬರ ಸಾವು

Bandipur:  ಸಫಾರಿಯಲ್ಲಿ ಪ್ರವಾಸಿಗರ ಮುಂದೆಯೇ ಜಿಂಕೆ ಬೇಟೆಯಾಡಿದ ಚಿರತೆ

Bandipur: ಸಫಾರಿಯಲ್ಲಿ ಪ್ರವಾಸಿಗರ ಮುಂದೆಯೇ ಜಿಂಕೆ ಬೇಟೆಯಾಡಿದ ಚಿರತೆ

Arrest

Kasaragod: ವಂದೇ ಭಾರತ್‌ಗೆ ಕಲ್ಲೆಸೆತ, ಹಳಿಯಲ್ಲಿ ಕಲ್ಲಿರಿಸಿದ ಇಬ್ಬರ ಬಂಧನ

ಭಾರತ, ಚೀನಾ ನಡುವೆ ನೇರ ವಿಮಾನಯಾನ ಸೌಲಭ್ಯ ಪುನಾರಂಭ?

Flight: ಭಾರತ, ಚೀನಾ ನಡುವೆ ನೇರ ವಿಮಾನಯಾನ ಸೌಲಭ್ಯ ಪುನಾರಂಭ?

Contracters-Assoi

Report: ರಾಜ್ಯ ಗುತ್ತಿಗೆದಾರರ ಸಂಘದಿಂದ ಲೋಕಾಯುಕ್ತಕ್ಕೆ ದೂರು ಕೊಟ್ಟಿಲ್ಲ: ಜಗನ್ನಾಥ ಶೇಗಜಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.