Congress: ಜಮೀರ್ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್
Team Udayavani, Nov 21, 2024, 11:58 PM IST
ಮೈಸೂರು: ಸಚಿವ ಸಂಪುಟ ಪುನಾರಚನೆ ಬಗ್ಗೆ ನನಗೇನು ಗೊತ್ತಿಲ್ಲ. ಅದು ನಮ್ಮನ್ನು ಕೇಳಿ ಮಾಡುವ ಕೆಲಸವಲ್ಲ; ಮುಖ್ಯಮಂತ್ರಿಗಳ ವಿವೇಚನೆಗೆ ಬಿಟ್ಟದ್ದು. ಹೀಗಾಗಿ ಸಚಿವ ಜಮೀರ್ ಅಹಮದ್ ಖಾನ್ ಬದಲಾವಣೆ ವಿಚಾರವೂ ನನಗೆ ಗೊತ್ತಿಲ್ಲ ಎಂದು ಗೃಹ ಸಚಿವ ಡಾ| ಜಿ. ಪರಮೇಶ್ವರ್ ತಿಳಿಸಿದರು.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಕ್ಫ್ ಮಂಡಳಿ ನೀಡಿರುವ ನೋಟಿಸ್ ವಾಪಸ್ ಪಡೆಯಬೇಕೆಂದು ಸಿಎಂ ಸೂಚನೆ ನೀಡಿದ್ದಾ ರೆ. ಆದರೂ ವಿಪಕ್ಷ ನಾಯಕರು ರಾಜಕೀಯಕ್ಕಾಗಿ ಪ್ರತಿಭಟನೆ ಮಾಡುತ್ತಿದ್ದಾರೆ ಎಂದರು. ಮತದಾನೋತ್ತರ ಸಮೀಕ್ಷೆಗಳು ಎಲ್ಲ ಸಂದರ್ಭದಲ್ಲೂ ನಿಜವಾಗುವುದಿಲ್ಲ. ನಾನು ಮಹಾರಾಷ್ಟ್ರ ಉಸ್ತುವಾರಿ ವಹಿಸಿದ್ದು, ಅಲ್ಲಿ ಬೇರೆಯೇ ವಾತಾವರಣವಿದೆ ಎಂದರು.
ರಾಜ್ಯದಲ್ಲಿ ಬಿಪಿಎಲ್ ಕಾರ್ಡ್ಗಳ ಬದಲಾವಣೆ ವಿಚಾರದಲ್ಲಿ ಬಿಜೆಪಿ ನಾಯಕರು ಮೊದಲು ನಮ್ಮನ್ನು ಕೇಳುವ ಬದಲು ಕೇಂದ್ರ ಸರಕಾರವನ್ನು ಕೇಳಲಿ. ಕೇಂದ್ರದವರು 5.8 ಕೋಟಿ ಬಿಪಿಎಲ್ ಕಾರ್ಡ್ಗಳನ್ನು ರದ್ದು ಮಾಡಿದ್ದಾರೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.