ಸಿದ್ದುಗಿಂತ ಚಾಮುಂಡೇಶ್ವರಿ ಕ್ಷೇತ್ರ ನನಗೆ ಚೆನ್ನಾಗಿ ಗೊತ್ತು
Team Udayavani, Mar 30, 2018, 12:20 PM IST
ಮೈಸೂರು: ಚಾಮುಂಡೇಶ್ವರಿ ಕ್ಷೇತ್ರದ ಜನತೆಯ ನಾಡಿಮಿಡಿತ ಸಿದ್ದರಾಮಯ್ಯ ಅವರಿಗಿಂತ ನನಗೆ ಚೆನ್ನಾಗಿ ಗೊತ್ತಿದೆ ಎಂದು ಜೆಡಿಎಸ್ ರಾಜಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಹೇಳಿದರು.
ನಗರದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 2006ರ ಉಪ ಚುನಾವಣೆಯಲ್ಲಿ ಸಿದ್ದರಾಮಯ್ಯ ಕುತಂತ್ರದಿಂದ ಗೆದ್ದರು. ಅದು ಕಾಂಗ್ರೆಸ್ ಪಕ್ಷ ಎದುರಿಸಿದ ಉಪ ಚುನಾವಣೆ, ಸಿದ್ದರಾಮಯ್ಯ ಎದುರಿಸಿದ್ದಲ್ಲ ಎಂದರು.
1999ರ ಚುನಾವಣೆಯಲ್ಲಿ ಸೋತಾಗಲೇ ಎಚ್.ಡಿ.ದೇವೇಗೌಡರ ಬಳಿ ಬಂದು ನನಗಿನ್ನು ರಾಜಕಾರಣ ಬೇಡ, ವಕೀಲಗಿರಿ ಮಾಡಿಕೊಂಡು ಇರುತ್ತೇನೆ ಎಂದು ಅಳುತ್ತಿದ್ದಿರಿ, ಆ ಸಂದರ್ಭದಲ್ಲಿ ನಿಮಗೆ ಆತ್ಮಸ್ಥೈರ್ಯ ತುಂಬಿ ರಾಜಕಾರಣದಲ್ಲಿ ಮುಂದುವರಿಯುವಂತೆ ಮಾಡಿದ್ದು ದೇವೇಗೌಡರು, ಅದನ್ನೆಲ್ಲಾ ಮರೆತು ಬಿಟ್ಟಿರಾ ಎಂದು ಸಿದ್ದರಾಮಯ್ಯ ವಿರುದ್ಧ ವಾಗ್ಧಾಳಿ ನಡೆಸಿದರು.
ಚುನಾವಣಾ ಪೂರ್ವ ಸಮೀಕ್ಷೆ ವಿಚಾರದಲ್ಲಿ ಕೆಂಪಯ್ಯ ಏನೇನು ಮಾಡಿದ್ದಾರೆ ಎಂಬುದು ಗೊತ್ತಿದೆ. ತಿ.ನರಸೀಪುರದಲ್ಲಿ ಈ ಬಾರಿ ಗೆಲುವು ನಮ್ಮದೆ. ಮತ ಎಣಿಕೆ ದಿನ ಬೆಳಗ್ಗೆ 11ಗಂಟೆಗೇ ತಿ.ನರಸೀಪುರ ಕ್ಷೇತ್ರದ ಫಲಿತಾಂಶ ಮೊದಲಿಗೆ ಪ್ರಕಟವಾಗಲಿದೆ. ಜೆಡಿಎಸ್‌ನ ಮೊದಲ ಗೆಲುವು ಇಲ್ಲಿಂದಲೇ ಆರಂಭವಾಗುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಜೆಡಿಎಸ್ ಅಭ್ಯರ್ಥಿಗಳ ಎರಡನೇ ಪಟ್ಟಿ ಸದ್ಯದಲ್ಲೇ ಬಿಡುಗಡೆಯಾಗಲಿದೆ. ಬೇರೆ ಪಕ್ಷಗಳಲ್ಲಿ ಏನೇ ಬೆಳವಣಿಗೆಗಳಾದರೂ ಈಗ ಘೋಷಿಸಿರುವ ಅಭ್ಯರ್ಥಿಗಳನ್ನು ಬದಲಾವಣೆ ಮಾಡುವುದಿಲ್ಲ ಎಂದು ಸ್ಪಷ್ಟಪಡಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hunsur: ಹೊಸ ವರ್ಷಾಚರಣೆ: ಕೇಕ್ ತಿಂದ 45ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ
Hunsur: ಆಕಸ್ಮಿಕ ವಿದ್ಯುತ್ ತಂತಿ ತಗುಲಿ ಟ್ರ್ಯಾಕ್ಟರ್‌ನಲ್ಲಿದ್ದ ಹುಲ್ಲಿಗೆ ಬೆಂಕಿ
Mysuru: ಯೋಗಾನರಸಿಂಹಸ್ವಾಮಿ ದೇಗುಲದಲ್ಲಿ ಭಕ್ತರಿಗೆ 2 ಲಕ್ಷ ಲಡ್ಡು ವಿತರಣೆ
Mysuru: ಕೆಆರ್‌ಎಸ್ ರಸ್ತೆಗೆ “ಸಿದ್ದರಾಮಯ್ಯ ಆರೋಗ್ಯ ಮಾರ್ಗ’ ನಿಶ್ಚಿತ: ಲಕ್ಷ್ಮಣ್
Sandalwood: ಪ್ರತಿಭೆ ಪ್ರದರ್ಶಿಸಲು ಕಲಾವಿದರಿಗೆ ಸೂಕ್ತ ವೇದಿಕೆ ಅಗತ್ಯ: ನಟ ಡಾಲಿ ಧನಂಜಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.