ಛಲ, ಪರಿಶ್ರಮವಿದ್ದರೆ ಐಎಎಸ್, ಐಪಿಎಸ್ ಹುದ್ದೆ
Team Udayavani, Jul 20, 2019, 3:00 AM IST
ಮೈಸೂರು: ವಿದ್ಯಾರ್ಥಿಗಳು ಕನಸು ಕಾಣುವ ಜೊತೆಗೆ ಕನಸನ್ನು ಸಾಕರ ಮಾಡಿಕೊಳ್ಳುವ ಇಚ್ಛಾಶಕ್ತಿಯನ್ನು ಹೊಂದಿರಬೇಕು ಎಂದು ಕರ್ನಾಟ ರಾಜ್ಯ ಮುಕ್ತ ವಿಶ್ವವಿದ್ಯಾಲಯ ಕುಲಪತಿ ಪ್ರೊ. ವಿದ್ಯಾಶಂಕರ್ ಹೇಳಿದರು.
ಜ್ಞಾನಬುತ್ತಿ ಸಂಸ್ಥೆ ವತಿಯಿಂದ ನಗರದ ಲಕ್ಷ್ಮೀಪುರಂ ಸರ್ಕಾರಿ ಪ್ರೌಢಶಾಲೆ ಮತ್ತು ಪಿಯು ಕಾಲೇಜು ಆವರಣದಲ್ಲಿ ಆಯೋಜಿಸಿದ್ದ 2019ರ ಐಎಎಸ್/ಕೆಎಎಸ್ ಮತ್ತು ಇತರ ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಕಾರ್ಯಾಗಾರದ ಶುಭಹಾರೈಕೆ ಸಮಾರಂಭದಲ್ಲಿ ಮಾತನಾಡಿದರು.
ಐಎಎಸ್, ಐಪಿಎಸ್‌ನಂತಹ ಪರೀಕ್ಷೆಗಳನ್ನು ಎದುರಿಸಲು ತರಬೇತಿಗಾಗಿ ದೆಹಲಿಗೆ ತೆರಳಬೇಕು ಎಂದೇನಿಲ್ಲ. ನಮ್ಮಲ್ಲಿ ಓದುವ ಛಲ ಮತ್ತು ಪರಿಶ್ರಮ ಇದ್ದರೆ, ಎಲ್ಲಿಯಾದರೂ ಕುಳಿತು ಓದಬಹುದು. ಸಾಕಷ್ಟು ಮಂದಿ ಮನೆಯಲ್ಲಿ, ಪಟ್ಟಣ ಮತ್ತು ನಗರ ಪ್ರದೇಶಗಳಲ್ಲಿರುವ ಕೋಚಿಂಗ್ ಸೆಂಟರ್‌ಗಳಲ್ಲಿ ಓದಿ ಯಶಸ್ಸುಗಳಿಸಿದ್ದಾರೆ ಎಂದು ಹೇಳಿದರು.
ನಗರದ ಪ್ರದೇಶದ ಬಹಳಷ್ಟು ವಿದ್ಯಾರ್ಥಿಗಳಿಗೆ ಎಲ್ಲವೂ ಸುಲಭವಾಗಿ ಸಿಗಬೇಕು ಎಂಬ ಮನೋಭಾವವಿದೆ. ಆದರೆ, ಇದು ಸರಿಯಾದುದ್ದಲ್ಲ. ಗ್ರಾಮೀಣ ವಿದ್ಯಾರ್ಥಿಗಳಿಗೆ ಹೆಚ್ಚು ಹೆಚ್ಚು ಕಲಿಯಬೇಕು, ಹುನ್ನತ ಹುದ್ದೆ ಪಡೆಯಬೇಕು ಎಂಬ ಆಸೆ, ಕನಸು ಹಾಗೂ ಧಾವಂತ ಇರುತ್ತದೆ. ಈ ಮನೋಭಾವವನ್ನು ಎಲ್ಲರೂ ಬೆಳೆಸಿಕೊಳ್ಳಬೇಕು ಎಂದರು.
ವಿದ್ಯಾರ್ಥಿ ಹಂತದಲ್ಲಿರುವಾಗಲೆ ಸಿಗುವ ಪ್ರೇರಣೆ ಬಹಳ ಮುಖ್ಯವಾಗಿರುತ್ತದೆ. ಪ್ರೇರಣೆ ಇಲ್ಲದಿದ್ದರೆ ಏನನ್ನೂ ಸಾಧಿಸಲು ಸಾಧ್ಯವಾಗುವುದಿಲ್ಲ. ನಮ್ಮ ಎದುರಿಗೆ ಸಾಕಷ್ಟು ನಕರಾತ್ಮಕ ಅಂಶಗಳು ಇದ್ದರೂ, ಅವುಗಳನ್ನು ಗಣನೆಗೆ ತೆಗೆದುಕೊಳ್ಳದೇ, ನಮ್ಮ ಗುರಿಯತ್ತ ಹೆಚ್ಚು ಗಮನಹರಿಸಬೇಕು ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.
ಸಾಧನೆಗೆ ಯಾವುದೇ ಅಡ್ಡ ಮಾರ್ಗಗಳು ಇರುವುದಿಲ್ಲ. ಬದಲಿಗೆ ಕಠಿಣ ಪರಿಶ್ರಮ, ಶ್ರದ್ಧೆ, ಆತ್ಮವಿಶ್ವಾಸ ಇರಬೇಕು. ನಾನು ಸಾಧನೆ ಮಾಡುತ್ತೇನೆ, ಸಾಧಿಸುತ್ತೇನೆ ಎಂಬ ದೃಢ ನಿಲುವು, ಆತ್ಮವಿಶ್ವಾಸ ಬೆಳೆಸಿಕೊಳ್ಳಬೇಕು. ಇತ್ತೀಚೆಗೆ ಹೆಣ್ಣುಮಕ್ಕಳಲ್ಲಿ ಜಾಗೃತಿ ಉಂಟಾಗಿದ್ದು, ಎಲ್ಲಾ ಕ್ಷೇತ್ರಗಳ್ಲಲಿಯೂ ತಮ್ಮದೇ ಛಾಪು ಮೂಡಿಸುತ್ತಿದ್ದಾರೆ. ಇರುವ ಅವಕಾಶಗಳನ್ನು ಸಮರ್ಪಕವಾಗಿ ಸದ್ಬಳಕೆ ಮಾಡಿಕೊಳ್ಳಬೇಕು ಎಂದರು.
ಖ್ಯಾತ ವಾಗ್ಮಿ ಪ್ರೊ.ಎಂ. ಕೃಷ್ಣೇಗೌಡ ಮಾತನಾಡಿ, ಸ್ವಾತಂತ್ರ್ಯ ಬಂದು ಇಲ್ಲಿಯವರೆಗೆ ಶಿಕ್ಷಣ ತಲುಪಬೇಕಾದ ಎತ್ತರವನ್ನು ತಲುಪಿಲ್ಲ. ಹಣ ಮತ್ತು ಅಧಿಕಾರಕ್ಕಿಂತ ಜ್ಞಾನ ಮಿಗಿಲಾದುದು ಎಂಬ ಮನೋಭಾವ ಜನರಲ್ಲಿ ಬರುವಂತಾಗಬೇಕು. ಆಗ ಮಾತ್ರ ಶಿಕ್ಷಣ ಕ್ರಾಂತಿಯಾದಂತಾಗುತ್ತದೆ ಎಂದರು.
ದೇಶದಲ್ಲಿ ನಿರುದ್ಯೋಗ ಎನ್ನುವುದೇ ತಮಾಷೆ ವಿಚಾರ. ಸಾಕಷ್ಟು ಕ್ಷೇತ್ರಗಳಲ್ಲಿ ಕೆಲಸ ಮಾಡುವವರೆ ಇಲ್ಲ ಎಂಬ ದೂರುಗಳಿವೆ. ಜೊತೆಗೆ ನಿರುದ್ಯೋಗವೂ ಇದೆ ಎಂಬ ಮಾತುಗಳೂ ಇವೆ. ಇದು ದೇಶದ ವಿಚಿತ್ರ. ನಾವು ನಿಗಧಿಪಡಿಸಿಕೊಂಡ ಗುರಿಗೆ ಹೆಚ್ಚು ಗಮನ ನೀಡಬೇಕು. ಜ್ಞಾನ ಮತ್ತು ಕೌಶಲವನ್ನು ಬೆಳೆಸಿಕೊಳ್ಳದಿದ್ದರೆ ನಾವು ಎಲ್ಲಿಯೂ ಸಲ್ಲುವುದಿಲ್ಲ ಎಂದರು.
ಕಾರ್ಯಕ್ರಮದಲ್ಲಿ ಕೆಎಸ್‌ಒಯುನ ಸಹಾಯಕ ಕುಲಸಚಿವ ರಾ. ರಾಮಕೃಷ್ಣ, ಪ್ರೊ. ದೇವರಾಜ್, ಜ್ಞಾನಬುತ್ತಿ ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಜೈನಹಳ್ಳಿ ಸತ್ಯನಾರಾಯಣ ಗೌಡ, ಎಚ್. ಬಾಲಕೃಷ್ಣ ಸೇರಿದಂತೆ ಮತ್ತಿತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hunsur: ಬೈಕ್‌ನಿಂದ ಬಿದ್ದು ಹಿಂಬದಿ ಸವಾರ ಸಾವು
Actor Health: ಸ್ವಲ್ಪ ಜರುಗಿದ ದರ್ಶನ್ ಬೆನ್ನುಮೂಳೆ; ತುರ್ತಾಗಿ ಆಪರೇಷನ್ ಇಲ್ಲ: ವೈದ್ಯರು
Name Road: ರಸ್ತೆಗೆ ಸಿದ್ದರಾಮಯ್ಯ ಹೆಸರಿಟ್ಟರೇ ತಪ್ಪೇನು?: ಪ್ರತಾಪ್ ಸಿಂಹ
Hunsur: ಕೆಲ ಗ್ರಾಮಗಳಲ್ಲಿ ಒಂಟಿ ಸಲಗದ ಉಪಟಳ; ಬೆಳೆ ನಾಶ, ರೈತರು ಕಂಗಾಲು
Congress Government: ಸಿದ್ದರಾಮಯ್ಯ ಅವಧಿಯಲ್ಲೇ ದ್ವೇಷದ ರಾಜಕಾರಣ ಬೇಸರ ತಂದಿದೆ: ಸೋಮಣ್ಣ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ
KMF: ಸಂಕ್ರಾಂತಿ ಬಳಿಕ ಹಾಲಿನ ದರ ಪರಿಷ್ಕರಣೆ ಸರಕಾರದಿಂದ ನಿರ್ಧಾರ: ಭೀಮಾ ನಾಯ್ಕ
Accidental Prime Minister: ದ ಮೇಕಿಂಗ್ ಆ್ಯಂಡ್ ಅನ್‌ಮೇಕಿಂಗ್ ಆಫ್ ಡಾ.ಸಿಂಗ್
Mangaluru: ವಿಚ್ಛೇದಿತ ಮಹಿಳೆಯನ್ನು ಹಿಂಬಾಲಿಸಿದ ಇಬ್ಬರು ವಶಕ್ಕೆ; ಪ್ರಕರಣ ದಾಖಲು
New York:ಆಸ್ತಿ ಹಂಚಿದ ಶ್ರೀಮಂತ ಹೂಡಿಕೆದಾರ ಬಫೆಟ್; ಕುಟುಂಬದ 4 ಫೌಂಡೇಶನ್ ಆಸ್ತಿ ಹಂಚಿಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.