ಪ್ರೀಮಿಯರ್ ಸ್ಟುಡಿಯೋ ನೆಲಸಮ
Team Udayavani, Sep 23, 2018, 6:30 AM IST
ಮೈಸೂರು: ಕನ್ನಡ ಚಿತ್ರರಂಗ ಸೇರಿ ಭಾರತೀಯ ಚಿತ್ರರಂಗದ ಪಾಲಿಗೆ ಮೈಲುಗಲ್ಲಾಗಿದ್ದ ಮೈಸೂರಿನ ಪ್ರೀಮಿಯರ್ ಸ್ಟುಡಿಯೋ ಇದೀಗ ಇತಿಹಾಸದ ಪುಟ ಸೇರಿದೆ.
ಒಂದು ಕಾಲದಲ್ಲಿ ಚಿತ್ರರಂಗದ ಚಿತ್ರೀಕರಣಕ್ಕೆ ನೆಚ್ಚಿನ ತಾಣವಾಗಿದ್ದ ಪ್ರೀಮಿಯರ್ ಸ್ಟುಡಿಯೋ ಕಟ್ಟಡವನ್ನು
ನೆಲಸಮಗೊಳಿಸಿ ಅಪಾರ್ಟ್‌ಮೆಂಟ್ ನಿರ್ಮಿಸಲು ಸ್ಟುಡಿಯೋ ಮಾಲೀಕರು ಮುಂದಾಗಿದ್ದಾರೆ. ಮೈಸೂರಿನ ಜಯಲಕ್ಷ್ಮಿಪುರಂನ ಮೈಸೂರು-ಹುಣಸೂರು ಮುಖ್ಯರಸ್ತೆಯ ಅಂದಾಜು 20 ಸಾವಿರ ಚದರಡಿ ವಿಸ್ತೀರ್ಣದಲ್ಲಿ ನಿರ್ಮಿಸಲಾಗಿದ್ದ ಸ್ಟುಡಿಯೋವನ್ನು ನೆಲಸಮಗೊಳಿಸಲಾಗಿದೆ. ಹಲವು ವರ್ಷಗಳಷ್ಟು ಹಳೆಯದಾದ ಕಟ್ಟಡ ಶಿಥಿಲಾವಸ್ಥೆ ತಲುಪಿದ್ದು, ಇದರ ಜತೆಗೆ ಆಧುನಿಕ ತಂತ್ರಜ್ಞಾನದ ಕೊರತೆ, ವರ್ಷದಿಂದ ವರ್ಷಕ್ಕೆ ಚಲನಚಿತ್ರಗಳ ಶೂಟಿಂಗ್ ಪ್ರಕ್ರಿಯೆ ಕಡಿಮೆಯಾಗಿದೆ. ಈ ಎಲ್ಲ ಕಾರಣದಿಂದ ಸದರಿ ಜಾಗದಲ್ಲಿದ್ದ ಪ್ರೀಮಿಯರ್ ಸ್ಟುಡಿಯೋ ಕಟ್ಟಡವನ್ನು ನೆಲಸಮಗೊಳಿಸಿ, ಅಪಾರ್ಟ್‌ಮೆಂಟ್ ನಿರ್ಮಿಸಲು ಕಟ್ಟಡದ ಮಾಲೀಕರು ತೀರ್ಮಾನಿಸಿದ್ದಾರೆ.
ಪ್ರೀಮಿಯರ್ ಸ್ಟುಡಿಯೋ ಎಂಬುದು ಬಸವರಾಜಯ್ಯ ಅವರ ಕನಸಾಗಿದ್ದು, 1954ರಲ್ಲಿ ಸ್ಟುಡಿಯೋ ಆರಂಭಿಸಿದರು. ಸುಮಾರು 10 ಎಕರೆಯಷ್ಟು ವಿಶಾಲವಾದ ಪ್ರದೇಶದಲ್ಲಿ 7 ಅಂತಸ್ತುಗಳ ಬೃಹತ್ ಸ್ಟುಡಿಯೋ ನಿರ್ಮಾಣಗೊಂಡಿತು. ಏಕಕಾಲದಲ್ಲಿ 7 ಚಿತ್ರಗಳನ್ನು ಚಿತ್ರೀಕರಿಸುವಷ್ಟು ಸೌಲಭ್ಯಗಳಿದ್ದ ಸ್ಟುಡಿಯೋ ಚಿತ್ರ ನಿರ್ಮಾಣಕ್ಕೆ ಬೇಕಾದ ಹಲವು ಸೌಲಭ್ಯಗಳನ್ನುಇಲ್ಲಿತ್ತು.
ಕನ್ನಡ ಚಿತ್ರರಂಗದ ಮೇರುನಟ ಡಾ. ರಾಜ್‌ಕುಮಾರ್, ವಿಷ್ಣುವರ್ಧನ್, ಅಂಬರೀಶ್, ಅನಂತನಾಗ್, ಶಂಕರ್
ನಾಗ್ ಹೀಗೆ ಹಲವು ಖ್ಯಾತ ನಟರ ಚಿತ್ರಗಳ ಚಿತ್ರೀಕರಣಕ್ಕೆ ಪ್ರೀಮಿಯರ್ ಸ್ಟುಡಿಯೋ ಸಾಕ್ಷಿಯಾಗಿತ್ತು. ಕೇವಲ ಕನ್ನಡ
ಮಾತ್ರವಲ್ಲದೆ ತುಮಿಳು, ತೆಲುಗು, ಹಿಂದಿ ಚಿತ್ರಗಳು ಇಲ್ಲೇ ಚಿತ್ರೀಕರಣಗೊಂಡಿವೆ. ಅಲ್ಲದೆ ಇಂಗ್ಲಿಷ್ ಸಿನಿಮಾ “ದಿ
ಎಲಿಫೆಂಟ್’ ಚಿತ್ರದ ಶೂಟಿಂಗ್ ಸಹ ಇದೇ ಸ್ಟುಡಿಯೋದಲ್ಲಿ ನಡೆದಿದ್ದು ವಿಶೇಷ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮಹಾರಾಷ್ಟ್ರ ಸೋಲಿನ ಬೆನ್ನಲ್ಲೇ ಇವಿಎಂ ಬಗ್ಗೆ ಅನುಮಾನ ವ್ಯಕ್ತಪಡಿಸಿದ ಸತೀಶ್ ಜಾರಕಿಹೊಳಿ
Belagavi: ಗ್ಯಾರಂಟಿ ವಿರೋಧಿಸಿದ ವಿಪಕ್ಷಗಳಿಗೆ ಸ್ಪಷ್ಟ ಉತ್ತರ ನೀಡಿದ ಮತದಾರ: ಹೆಬ್ಬಾಳ್ಕರ್
Channaptna Result: ಕೊನೆ ಕ್ಷಣದಲ್ಲಿ ಪಕ್ಷ ಬದಲಿಸಿದರೂ ಗೆದ್ದ ಸೈನಿಕ: ನೆರವಾದ ಡಿಕೆ ತಂತ್ರ
Sandur Result: ಭದ್ರಕೋಟೆಯಲ್ಲಿ ಮತ್ತೆ ಗೆದ್ದ ಕಾಂಗ್ರೆಸ್: ಇಲ್ಲಿದೆ ಮತಎಣಿಕೆಯ ಪೂರ್ಣವಿವರ
Karnataka By Poll Results: ಜೆಡಿಎಸ್ ಅಂತಿಮ ದಿನ ಎಣಿಸತೊಡಗಿದೆ: ಸಿ.ಪಿ.ಯೋಗೇಶ್ವರ್
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
ಮಹಾರಾಷ್ಟ್ರ ಸೋಲಿನ ಬೆನ್ನಲ್ಲೇ ಇವಿಎಂ ಬಗ್ಗೆ ಅನುಮಾನ ವ್ಯಕ್ತಪಡಿಸಿದ ಸತೀಶ್ ಜಾರಕಿಹೊಳಿ
55th IFFI Goa: ಪ್ರಸಾರ ಭಾರತಿಯಿಂದಲೂ ಒಟಿಟಿ ವೇವ್ಸ್ – ಮನರಂಜನೆಗೆ ಹೊಸ ಆಯಾಮ
ಮುಂಡಗೋಡ: ಮಂಗನಬಾವು ಉಲ್ಬಣ-ಮೂರು ದಿನ ಶಾಲೆಗೆ ರಜೆ
Maharashtra Polls: ಯಾರಾಗಲಿದ್ದಾರೆ ಮಹಾ ಮುಖ್ಯಮಂತ್ರಿ? ಸುಳಿವು ನೀಡಿದ ಫಡ್ನವೀಸ್
ಕೊಪ್ಪಳ: ಫ್ಲೈಟ್‌ನಲ್ಲಿ ಲಿಂಗದಹಳ್ಳಿ ಸರ್ಕಾರಿ ಶಾಲಾ ಮಕ್ಕಳ ಪ್ರವಾಸ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.