ಮಕ್ಕಳ ಪ್ರತಿಭೆ ಗುರುತಿಸಿ: ಪನ್ನಗ
Team Udayavani, Nov 18, 2017, 12:47 PM IST
ಹುಣಸೂರು: ಮಕ್ಕಳಲ್ಲಿರುವ ಪ್ರತಿಭೆ ಗುರುತಿಸಿ ಹೊರಹಾಕುವ ಕೆಲಸವನ್ನು ಪೋಷಕರು ಮತ್ತು ಶಿಕ್ಷಕರು ಮಾಡಿದಾಗ ಮಕ್ಕಳು ನಾಳೆಯ ಪ್ರಜೆಗಳಾಗಿ ಬೆಳೆಯಲು ಸಾಧ್ಯ ಎಂದು ಔಟ್ ರೀಚ್ ಗ್ರಾಮಾಭಿವೃದ್ಧಿ ಸಂಸ್ಥೆ ತಾಲೂಕು ಸಂಯೋಜಕ ಪನ್ನಗ ತಿಳಿಸಿದರು.
ತಾಲೂಕಿನ ಕಣಗಾಲು ಗ್ರಾಮದಲ್ಲಿ ಔಟ್ ರೀಚ್ ಗ್ರಾಮಾಭಿವೃದ್ಧಿ ಸಂಸ್ಥೆ, ಐಟಿಸಿ ಕಂಪನಿ ಹಾಗೂ ಸರ್ಕಾರಿ ಹಿರಿಯ ಪ್ರಾರ್ಥಮಿಕ ಶಾಲೆ ಸಂಯುಕ್ತಾಶ್ರಯದಲ್ಲಿ ಏರ್ಪಡಿಸಿದ್ದ ಮಕ್ಕಳ ದಿನಾಚರಣೆಯಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದರು. ಪ್ರತಿಯೊಂದು ಮಕ್ಕಳಲ್ಲಿ ಒಂದೊಂದು ಪ್ರತಿಭೆ ಇರುತ್ತದೆ. ಆ ಪ್ರತಿಭೆ ಹೊಳೆಯುವಂತೆ ಮಾಡಲು ಪೋಷಕರು-ಶಿಕ್ಷಕರು ಪಣ ತೊಡಬೇಕೆಂದರು.
ಔಟ್ ರೀಚ್ ಗ್ರಾಮಾಭಿವೃದ್ಧಿ ಸಂಸ್ಥೆಯ ಟಿ.ಉಮೇಶ, ಶಾಲಾ ಮಕ್ಕಳಲ್ಲಿ ಬಯಲು ಶೌಚಾಲಯಕ್ಕೆ ಹೋಗುವುದರಿಂದ ಬರುವ ಮಾರಕ ರೋಗಗಳ ಬಗ್ಗೆ ತಿಳಿಸಿದರು. ಇದೇ ಸಂದರ್ಭದಲ್ಲಿ ಮಕ್ಕಳಿಗೆ ಸ್ವತ್ಛ ಭಾರತ್ ಮಿಷನ್ ಬಗ್ಗೆ ಪ್ರಬಂಧ ಸ್ಪರ್ಧೆ, ಚಿತ್ರಕಲಾ ಸ್ಪರ್ಧೆ ಏರ್ಪಡಿಸಿ ಜಯಗಳಿಸಿದ ಮಕ್ಕಳಿಗೆ ಬಹುಮಾನ ವಿತರಿಸಿ ನಂತರ ಶಾಲೆಯ 150 ಮಕ್ಕಳು ಮತ್ತು ಅಂಗನವಾಡಿ 45 ಮಕ್ಕಳಿಗೆ ಕುಡಿಯುವ ನೀರಿನ ಬಾಟಲ್ ವಿತರಣೆ ಮಾಡಲಾಯಿತು.
ಶಾಲೆಯ ಎಸ್‌ಡಿಎಂಸಿ ಅಧ್ಯಕ್ಷರಾದ ಗುಣಶೀಲಾ ನಾಯಕ, ಮುಖ್ಯ ಶಿಕ್ಷಕರಾದ ಡಿ.ಕೆ.ಸ್ವಾಮಿ, ಸಹ ಶಿಕ್ಷಕರಾದ ಕುಬೇರ್, ಮಹೇಶ, ಶಿವಲಿಂಗು, ಸಮೀನ, ಮೋಹನ್, ತ್ಯಾಗರಾಜ್, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಚಂದ್ರಸ್ವಾಮಿ, ಕೃಷಿ ಇಲಾಖೆ ತಾಂತ್ರಿಕ ಉತ್ತೇಜಕ ಕೆ.ಪಿ.ರಾವೇಂದ್ರ, ವೆಂಕಟೇಶ್, ಆರೋಗ್ಯ ಇಲಾಖೆ ಕಾಡಶೆಟ್ಟಿ ಸೇರಿದಂತೆ ಶಾಲೆಯ 150 ಮಕ್ಕಳು ಭಾಗವಹಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.