ಸಿಎಂಗೆ ಕಾಳಜಿಯಿದ್ದರೆ ಗೋವಾ ಕಾಂಗ್ರೆಸ್ಸಿಗರಿಗೆ ತಿಳಿಹೇಳಲಿ


Team Udayavani, Jan 23, 2018, 12:25 PM IST

m4-pratap.jpg

ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ರಾಜ್ಯದ ಜನತೆ ಬಗ್ಗೆ ಕಾಳಜಿ ಮತ್ತು ಮಹದಾಯಿ ಬಗ್ಗೆ ನಿಷ್ಠೆ ಇದ್ದರೆ ಗೋವಾದ ಕಾಂಗ್ರೆಸ್‌ ನಾಯಕರು ಹೇಳಿಕೆ ನೀಡುವುದನ್ನು ನಿಲ್ಲಿಸುವಂತೆ ಹೇಳಲಿ ಎಂದು ಸಂಸದ ಪ್ರತಾಪ್‌ಸಿಂಹ ವಾಗ್ಧಾಳಿ ನಡೆಸಿದರು.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದ ಜನರಿಗೆ ಯಾರು ಏನು? ಮತ್ತು ಏನೆಲ್ಲಾ ಎಂಬುದು ಈಗಾಗಲೇ ತಿಳಿದಿದೆ. ಮಹದಾಯಿ ವಿಷಯದಲ್ಲಿ 2016ರ ಆಗಸ್ಟ್‌ 5ರಂದು ನಡೆದ ಸರ್ವಪಕ್ಷ ಸಭೆಯಲ್ಲಿ ಬಿಜೆಪಿ ನಾಯಕರು ಭಾಗವಹಿಸಿದ್ದ ವೇಳೆ ಗೋವಾ ಮುಖ್ಯಮಂತ್ರಿ ಮನವೊಲಿಸುವಂತೆ ಮುಖ್ಯಮಂತ್ರಿಗಳು ಕೇಳಿದ್ದರು.

ಅದರಂತೆ ಗೋವಾಕ್ಕೆ ತೆರಳಿದ ಬಿ.ಎಸ್‌.ಯಡಿಯೂರಪ್ಪ ಅವರು ಕುಡಿಯುವ ನೀರಿನ 7.56 ನೀರು ನೀಡಲು ಸಿದ್ಧವಿರುವುದಾಗಿ ಅಲ್ಲಿನ ಸಿಎಂ ಅವರಿಂದ ಪತ್ರವನ್ನೂ ತಂದಿದ್ದರು. ಆದರೆ, ಇದೇ ಸಭೆಯಲ್ಲಿ ಗೋವಾದ ಕಾಂಗ್ರೆಸ್ಸಿಗರ ಮನವೊಲಿಸುವಂತೆ ಕೇಳಿದಾಗ ತಾವು ಮಾತನಾಡುವುದಾಗಿ ಸಿದ್ದರಾಮಯ್ಯ ತಿಳಿಸಿದ್ದು,

ಈ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಅವರಿಗೆ ರಾಜ್ಯದ ಜನರ ಬಗ್ಗೆ ಕಾಳಜಿ ಹಾಗೂ ಮಹದಾಯಿ ವಿಷಯದಲ್ಲಿ ನಿಷ್ಠೆ ಇದ್ದರೆ ಗೋವಾ ಕಾಂಗ್ರೆಸ್‌ ಮುಖ್ಯಸ್ಥ ಶಾಂತಾರಾಮ್‌ ನಾಯಕ್‌ ಅವರು ತರಲೆ ಹೇಳಿಕೆ ನೀಡುವುದನ್ನು ನಿಲ್ಲಿಸುವಂತೆ ತಿಳಿಸಲಿ. ಆಗ ಸಿದ್ದರಾಮಯ್ಯ ಅವರಿಗೆ ರಾಜ್ಯದ ಬಗ್ಗೆ ಇರುವ ಕಾಳಜಿ ಏನೆಂಬುದು ಗೊತ್ತಾಗಲಿದೆ ಎಂದು ಹೇಳಿದರು.

ಅನಗತ್ಯ ಗೊಂದಲ ಸೃಷ್ಟಿ: ಜಿಲ್ಲೆಯ ಹಲವು ಸ್ಥಳೀಯ ಸಂಸ್ಥೆಗಳಲ್ಲಿ ಬಿಜೆಪಿ ಮತ್ತು ಜೆಡಿಎಸ್‌ ಹೊಂದಾಣಿಕೆ ಆಡಳಿತ ನಡೆಸುತ್ತಿದ್ದು, ಹೀಗಾಗಿ ಹುಣಸೂರಿನಲ್ಲಿ ಜೆಡಿಎಸ್‌ನಿಂದ ಸ್ಪರ್ಧಿಸಿದ್ದ ಅಭ್ಯರ್ಥಿಗೆ ಮತ ಹಾಕಿದ್ದೇನೆ. ಹೀಗಾಗಿ ಇದರಲ್ಲಿ ಅನಗತ್ಯ ಗೊಂದಲಗಳಿಲ್ಲ, ಆದರೂ ಕೆಲವರು ಸಾಮಾಜಿಕ ಮಾಧ್ಯಮಗಳಲ್ಲಿ ಅನಗತ್ಯ ಗೊಂದಲ ಸೃಷ್ಟಿಸುವ ಕೆಲಸ ಮಾಡಿದ್ದು, ಇದಕ್ಕೆ ಸಾಮಾಜಿಕ ಜಾಲತಾಣದ ಮೂಲಕವೇ ಉತ್ತರಿಸಿದ್ದೇನೆ.

ಮೈತ್ರಿ ವಿಷಯದಲ್ಲಿ ತಮಗೆ ಜಿಲ್ಲೆಯ ಜೆಡಿಎಸ್‌ ಮುಖಂಡರೊಂದಿಗೆ ಮಾತ್ರ ಸಂಪರ್ಕವಿದ್ದು, ತಾವು ಬಿಜೆಪಿ ಚೌಕಟ್ಟಿನಲ್ಲಿ ಮಾತ್ರ ಕೆಲಸ ಮಾಡುತ್ತೇನೆ ಎಂದು ನಾನು ದೂರವಾಣಿ ಕರೆ ಮಾಡಿದ್ದಕ್ಕಾಗಿ ಮತ ಹಾಕಿದ್ದಾರೆ ಎಂಬ ಜೆಡಿಎಸ್‌ ಪ್ರಧಾನ ಕಾರ್ಯದರ್ಶಿ ಪ್ರಜ್ವಲ್‌ ರೇವಣ್ಣ ಹೇಳಿಕೆಗೆ ತಿರುಗೇಟು ನೀಡಿದರು.

ಕಳೆದ 23 ವರ್ಷಗಳಿಂದ ಹುಣಸೂರಿನಲ್ಲಿ ಹನುಮ ಜಯಂತಿ ಶಾಂತಿಯುತವಾಗಿಯೇ ನಡೆದಿದ್ದು, ಕಳೆದ ಬಾರಿಯ ಈದ್‌ ಮಿಲಾದ್‌ ವೇಳೆ ದೇವಸ್ಥಾನದ ಮೇಲೆ ಹಸಿರು ಬಾವುಟ ಹಾರಿಸಿದ ಕಾರಣ ಸಮಸ್ಯೆ ಆರಂಭವಾಯಿತು. ಇಂತಹ ಕೃತ್ಯಗಳನ್ನು ಮಾಡುವ ಕಿಡಿಗೇಡಿಗಳ ವಿರುದ್ಧ ಕ್ರಮವಹಿಸುವ ಬದಲು ಜಯಂತಿ ಆಚರಣೆ ಮಾಡುವುದನ್ನೇ ತಡೆಯುವುದು ನಿಷ್ಕ್ರಿಯತೆ ತೋರಲಿದೆ ಹೊರತು ಕಾರ್ಯದಕ್ಷತೆ ತೋರುವುದಿಲ್ಲ. ಇದನ್ನು ಜಿಲ್ಲಾಡಳಿತ ಇದೀಗ ಅರಿತುಕೊಂಡಿದೆ.
-ಪ್ರತಾಪ್‌ಸಿಂಹ, ಸಂಸದ

ಟಾಪ್ ನ್ಯೂಸ್

Maharashtra; Ekmath hey to safe hey says Shivsena

Maharashtra: ಏಕ್‌ನಾಥ್‌ ಹೇ ತೋ ಸೇಫ್ ಹೇ: ಶಿಂಧೆ ಶಿವಸೇನೆ ಹೊಸ ಮಂತ್ರ

Ullal: ಎಂಡಿಎಂಎ ಸಾಗಾಟ: ಮೂವರ ಬಂಧನ

Ullal: ಎಂಡಿಎಂಎ ಸಾಗಾಟ: ಮೂವರ ಬಂಧನ

ವಿಷಸೇವಿಸಿ ಆತ್ಯಹ*ತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ,ಚಿಕಿತ್ಸೆಗೆ ಸ್ಪಂದಿಸದೆ ಸಾವು

ವಿಷಸೇವಿಸಿ ಆತ್ಯಹ*ತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ,ಚಿಕಿತ್ಸೆಗೆ ಸ್ಪಂದಿಸದೆ ಸಾವು

Draupadi Murmu addresses the joint House at the Old Parliament House

Old Parliament House: ಭಾರತದ ಸಂವಿಧಾನವು ಜೀವಂತಿಕೆಯ, ಪ್ರಗತಿಪರ ದಾಖಲೆ: ರಾಷ್ಟ್ರಪತಿ

Congress: ದ.ಕ ಗ್ರಾಮ ಪಂಚಾಯತ್‌; 24ರಲ್ಲಿ 19 ಸ್ಥಾನ ಕಾಂಗ್ರೆಸ್‌ ಬೆಂಬಲಿತರಿಗೆ ಗೆಲುವು

Congress: ದ.ಕ ಗ್ರಾಮ ಪಂಚಾಯತ್‌; 24ರಲ್ಲಿ 19 ಸ್ಥಾನ ಕಾಂಗ್ರೆಸ್‌ ಬೆಂಬಲಿತರಿಗೆ ಗೆಲುವು

16-moodbidri

Moodabidri: ನಿವೃತ್ತ ದೈಹಿಕ ಶಿಕ್ಷಣ ನಿರ್ದೇಶಕ ಪಿ.ನೇಮಿರಾಜ ಹೆಗ್ಡೆ ನಿಧನ

Pakistan: 6 security personnel hit, shoot-at-sight order

Pakistan: 6 ಮಂದಿ ಭದ್ರತಾ ಸಿಬ್ಬಂದಿ ಸಾವು, ಕಂಡಲ್ಲಿ ಗುಂಡು ಆದೇಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಪರಿಸ್ಥಿತಿ ಆಧರಿಸಿ ರಾಜಕೀಯ ನಡೆ: ಸಿ.ಎಂ. ಇಬ್ರಾಹಿಂ

ಪರಿಸ್ಥಿತಿ ಆಧರಿಸಿ ರಾಜಕೀಯ ನಡೆ: ಸಿ.ಎಂ. ಇಬ್ರಾಹಿಂ

MUDA CASE: ತನಿಖೆಗೂ ಮುನ್ನವೇ ದಾಖಲೆ ನಾಪತ್ತೆ?

MUDA CASE: ತನಿಖೆಗೂ ಮುನ್ನವೇ ದಾಖಲೆ ನಾಪತ್ತೆ?

Kamsale-kumaraswami

Mysuru: ‘ಕೋಲು ಮಂಡೆ ಜಂಗಮ’ ಹಾಡು ನೃತ್ಯ ಸಂಯೋಜಕ ಕಂಸಾಳೆ ಕಲಾವಿದ ಕುಮಾರಸ್ವಾಮಿ ನಿಧನ

GTD

JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ

GTD

Mysuru: ಜೆಡಿಎಸ್‌ ವರಿಷ್ಠರಿಗೆ ನಾನು ಬೇಡ, ನನ್ನ ಮಗ ಬೇಕಾಗಿದ್ದಾನೆ: ಜಿ.ಟಿ.ದೇವೇಗೌಡ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

Maharashtra; Ekmath hey to safe hey says Shivsena

Maharashtra: ಏಕ್‌ನಾಥ್‌ ಹೇ ತೋ ಸೇಫ್ ಹೇ: ಶಿಂಧೆ ಶಿವಸೇನೆ ಹೊಸ ಮಂತ್ರ

2

Malpe: ಬೋಟಿನಲ್ಲಿದ್ದ ಮೀನುಗಾರ ನಾಪತ್ತೆ; ಪ್ರಕರಣ ದಾಖಲು

crime

Padubidri: ಸ್ಕೂಟಿಯಿಂದ ಬಿದ್ದು ಮಹಿಳೆಗೆ ತೀವ್ರ ಗಾಯ

Ullal: ಎಂಡಿಎಂಎ ಸಾಗಾಟ: ಮೂವರ ಬಂಧನ

Ullal: ಎಂಡಿಎಂಎ ಸಾಗಾಟ: ಮೂವರ ಬಂಧನ

ವಿಷಸೇವಿಸಿ ಆತ್ಯಹ*ತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ,ಚಿಕಿತ್ಸೆಗೆ ಸ್ಪಂದಿಸದೆ ಸಾವು

ವಿಷಸೇವಿಸಿ ಆತ್ಯಹ*ತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ,ಚಿಕಿತ್ಸೆಗೆ ಸ್ಪಂದಿಸದೆ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.