ಕೋವಿಡ್-19 ವಾರಿಯರ್ಸ್ ಮೃತರಾದರೆ ಹುತಾತ್ಮರೆಂದು ಕರೆಯಿರಿ: ಡಾ. ಸಿ.ಎನ್.ಮಂಜುನಾಥ
Team Udayavani, Oct 17, 2020, 10:27 AM IST
ಮೈಸೂರು: ಕೋವಿಡ್ ವಾರಿಯರ್ಸ್ ಮೃತರಾದರೆ ಅವರನ್ನು ಹುತಾತ್ಮರೆಂದು ಕರೆಯಬೇಕು ಎಂದು ಜಯದೇವ ಹೃದ್ರೋಗ ಸಂಸ್ಥೆಯ ನಿರ್ದೇಶಕ ಡಾ. ಸಿ.ಎನ್.ಮಂಜುನಾಥ್ ಹೇಳಿದರು.
ನಾಡಹಬ್ಬ ದಸರಾ ಮಹೋತ್ಸವಕ್ಕೆ ಶನಿವಾರ ಚಾಲನೆ ನೀಡಿ ಮಾತನಾಡಿದ ಅವರು, ಹುತಾತ್ಮ ಯೋಧರಿಗೆ ಸಿಗುವ ಗೌರವ ಕೋವಿಡ್ ವಾರಿಯರ್ಸ್ ಮೃತರಾದರೆ ಅವರಿಗೂ ಸಿಗಬೇಕು ಎಂದು ತಿಳಿಸಿದರು.
ಇಂದು ನನಗಾಗಿ ನಾನು ಏನನ್ನೂ ಚಾಮುಂಡಿ ದೇವಿಯ ಬಳಿ ಬೇಡಿಲ್ಲ. ಕೋವಿಡ್ ಲಸಿಕೆ ಬೇಗ ಬರಲಿ, ಕೋವಿಡ್-19 ಸಂಪೂರ್ಣ ನಿವಾರಣೆಯಾಗಲಿ, ಜಲಪ್ರವಾಹ ಕಡಮೆಯಾಗಲಿ ಎಂದು ದೇವರ ಬಳಿ ಬೇಡಿದ್ದೇನೆ ಎಂದರು.
ಇದನ್ನೂ ಓದಿ:ಮೈಸೂರು ದಸರಾ 2020: ಚಾಮುಂಡಿ ಸನ್ನಿಧಿಯಲ್ಲಿ ಮೈಸೂರು ದಸರಾಗೆ ಚಾಲನೆ
ಚೀನಾದಲ್ಲಿ ಸೃಷ್ಟಿಯಾದ ವೈರಸ್ ಇಡೀ ಪ್ರಪಂಚವನ್ನೇ ನಡುಗಿಸಿದೆ. ಮಾಡಬಾರದ್ದು ಮಾಡಿದರೆ, ತಿನ್ನಬಾರದನ್ನು ತಿಂದರೆ ಹೇಗೆ ವೈರಸ್ ಉತ್ಪಾದನೆ ಆಗುತ್ತದೆ ಎಂಬುದಕ್ಕೆ ಈ ವೈರಸ್ ಸಾಕ್ಷಿ ಎಂದು ಚೀನಾ ವಿರುದ್ಧ ಹರಿಹಾಯ್ದರು.
ದಸರಾ ಉದ್ಘಾಟಿಸಿದ್ದು ನನ್ನ ಜೀವಿತಾವಧಿಯ ದೊಡ್ಡ ಗೌರವ. ಕೋವಿಡ್-19 ವಾರಿಯರ್ಸ್ ಅಭಿನಂದನೆಯು ವೈದ್ಯ ಸಮುದಾಯಕ್ಕೆ ಕೊಟ್ಟ ದೊಡ್ಡ ಗೌರವ ಎಂದು ಸ್ಮರಿಸಿದರು.
ಕೋವಿಡ್ ಗೆ ಈ ವರ್ಷ ಲಸಿಕೆ ಬರುವ ಲಕ್ಷಣಗಳಿಲ್ಲ. ಮುಂದಿನ ವರ್ಷದ ಫೆಬ್ರವರಿ, ಮಾರ್ಚ್‌ನಲ್ಲಿ ಲಸಿಕೆ ಬರಬಹುದು. ಕೋವಿಡ್-19 ಪಾಸಿಟಿವ್ ಬಂದರೆ ಅವರನ್ನು ಅಸ್ಪೃಶ್ಯರ ರೀತಿ ನೋಡಬೇಡಿ. ವೈದ್ಯರೇ ರೋಗಿಗಳಾಗುತ್ತಿದ್ದಾರೆ, ವೈದ್ಯರ ಮೇಲೆ ಒತ್ತಡ ಹೆಚ್ಚಾಗುತ್ತಿದೆ. ವೈದ್ಯರ ಮೇಲೆ ಹಲ್ಲೆ ಮಾಡುವುದು, ಆಸ್ಪತ್ರೆಗಳ ಮೇಲೆ ದಾಳಿ ಮಾಡುವುದು ನಿಲ್ಲಿಸಬೇಕು. ವೈದ್ಯರಿಗೆ ಗ್ರಾಮೀಣ ಭಾಗದಲ್ಲಿ ರಕ್ಷಣೆ ಸಿಗುತ್ತಿಲ್ಲ. ಹೀಗಾಗಿ, ವೈದ್ಯರು ಗ್ರಾಮೀಣ ಭಾಗಕ್ಕೆ ಹೋಗುವುದಕ್ಕೆ ಹಿಂದೇಟು ಹಾಕುತ್ತಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದರಲ್ಲದೇ, ಗ್ರಾಮೀಣ ಭಾಗದ ಆಸ್ಪತ್ರೆಗಳನ್ನು ಜಿಲ್ಲಾ ಪಂಚಾಯತ್ ವ್ಯಾಪ್ತಿಯಿಂದ ಹೊರಗಿಟ್ಟು ಜಿಲ್ಲಾ ಕೇಂದ್ರದಿಂದ ನಿರ್ವಹಣೆ ಮಾಡಿಸಬೇಕು ಎಂದು ಆಗ್ರಹಿಸಿದರು.
ಜಯದೇವ ಆಸ್ಪತ್ರೆಯಲ್ಲಿ ಈವರೆಗೆ 50 ಲಕ್ಷ ಜನರಿಗೆ ಚಿಕಿತ್ಸೆ ಕೊಟ್ಟಿದ್ದೇವೆ. 5 ಲಕ್ಷ ಜನರಿಗೆ ಶಸ್ತ್ರಚಿಕಿತ್ಸೆ ಮಾಡಿದ್ದೇವೆ ಎಂದರು. ಸಾಮಾಜಿಕ ಜಾಲತಾಣಗಳು ಸಮಾಜ ಕಟ್ಟಬೇಕಿತ್ತು. ಆದರೆ, ಅವು ಸಮಾಜವನ್ನು ತಪ್ಪು ದಾರಿಗೆ ತಳ್ಳುತ್ತಿದೆ ಎಂದು ವಿಷಾದ ವ್ಯಕ್ತಪಡಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.