ಗ್ರಾಮೀಣ ಜನತೆ ಸಬಲರಾದರೆ ದೇಶ ಸದೃಢ
Team Udayavani, Aug 29, 2017, 12:13 PM IST
ಮೈಸೂರು: ದೇಶದ ಗ್ರಾಮೀಣ ಪ್ರದೇಶದ ಜನರ ಆರ್ಥಿಕ ಪರಿಸ್ಥಿತಿ ಸುಧಾರಿಸದಿದ್ದರೆ ದೇಶ ಆರ್ಥಿಕವಾಗಿ ಸದೃಢಗೊಳ್ಳಲು ಸಾಧ್ಯವಿಲ್ಲ ಎಂದು ದಾವಣಗೆರೆ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ ಎಸ್.ಇಂದುಮತಿ ಅಭಿಪ್ರಾಯಪಟ್ಟರು. ಮೈಸೂರು ವಿಶ್ವವಿದ್ಯಾಲಯದ ಗಾಂಧಿ ಅಧ್ಯಯನ ಕೇಂದ್ರದಿಂದ ಸೋಮವಾರ ಆಯೋಜಿಸಿದ್ದ “ಸುಸ್ಥಿರ ಗ್ರಾಮೀಣಾಭಿವೃದ್ಧಿಗೆ ಸವಾಲುಗಳು ಮತ್ತು ಅವಕಾಶಗಳು’ ಕುರಿತ ವಿಚಾರ ಸಂಕಿರಣದಲ್ಲಿ ಮಾತನಾಡಿದರು.
ಭಾರತ ಶೇ.70 ಗ್ರಾಮೀಣ ಪ್ರದೇಶಗಳನ್ನು ಹೊಂದಿರುವುದರಿಂದ ದೇಶದ ಅರ್ಥ ವ್ಯವಸ್ಥೆ ಗ್ರಾಮೀಣ ಪ್ರದೇಶಗಳನ್ನು ಅವಲಂಬಿಸಿದೆ. ಹೀಗಾಗಿ ಕೇವಲ ಶ್ರೀಮಂತ ಜನರ ಸಮಸ್ಯೆಗಳನ್ನು ಬಗೆಹರಿಸುವುದರಿಂದ ದೇಶದ ಆರ್ಥಿಕ ಸ್ಥಿತಿಯನ್ನು ಸುಧಾರಿಸಲು ಸಾಧ್ಯವಿಲ್ಲ. ಆದರೆ ಪ್ರಸ್ತುತ ಸಂದರ್ಭದಲ್ಲಿ ಗ್ರಾಮೀಣ ಪ್ರದೇಶದ ಆರ್ಥಿಕ ಪರಿಸ್ಥಿತಿ ಹಾನಿಗೊಳಗಾಗಿದೆ ಎಂದು ವಿಷಾದಿಸಿದರು.
ಪ್ರಸ್ತುತ ಸಂದರ್ಭದಲ್ಲಿ ಗ್ರಾಮೀಣ ಪ್ರದೇಶಗಳ ನೀರು, ನೈರ್ಮಲ್ಯ ಸಮಸ್ಯೆಗಳನ್ನು ಮಾತ್ರ ಕೇಂದ್ರೀಕರಿಸಲಾಗುತ್ತಿದೆ. ಇದರ ಹೊರತಾಗಿ ಗ್ರಾಮೀಣ ಪ್ರದೇಶಗಳಲ್ಲಿರುವ ಯಾವುದೇ ಸಮಸ್ಯೆಗಳ ಬಗ್ಗೆ ಹೆಚ್ಚಿನ ನಿಗಾವಹಿಸುತ್ತಿಲ್ಲ. ಈ 1990ರ ದಶಕದಲ್ಲಿ ಅರ್ಥಶಾಸ್ತ್ರಜ್ಞ ಮತ್ತು ಹಣಕಾಸು ಸಚಿವ ಮೆಹಬೂಬ್ ಉಲ್ ಹಕ್ ಅವರು ಗ್ರಾಮೀಣಾಭಿವೃದ್ಧಿ ಬಗ್ಗೆ ಸ್ಪಷ್ಟ ಚಿತ್ರಣ ನೀಡಿದ್ದರು.
ಇದರಿಂದಾಗಿ 1990 ಮತ್ತು 1999ರ ನಡುವೆ ದೇಶದ ಗ್ರಾಮೀಣಾಭಿವೃದ್ಧಿ ಸರಿಯಾಗಿ ನಡೆಯಿತು ಎಂದು ಹೇಳಿದರು. ಇದೇ ವೇಳೆ ಮೈಸೂರು ವಿವಿ ಕುಲಸಚಿವರಾದ ಡಿ.ಭಾರತಿ ನಡಾವಳಿ ಪುಸ್ತಕ ಬಿಡುಗಡೆಗೊಳಿಸಿದರು. ಕೀನ್ಯಾ, ಎಮನ್, ನೇಪಾಳ, ಆಸ್ಟ್ರೇಲಿಯಾ, ಆಪಾ^ನಿಸ್ತಾನ ಸೇರಿದಂತೆ ವಿವಿಧ ರಾಷ್ಟ್ರಗಳಿಂದ ಆಗಮಿಸಿದ್ದ ಪ್ರತಿನಿಧಿಗಳು ಪಾಲ್ಗೊಂಡಿದ್ದರು.
ಮೈಸೂರು ವಿವಿ ಪ್ರಭಾರ ಕುಲಪತಿ ಪೊ›.ದಯಾನಂದ ಮಾನೆ, ಈಜಿಪ್ಟ್ನ ಡೆಸರ್ಟ್ ಸಂಶೋಧನಾ ಕೇಂದ್ರದ ಆಲಾ ಸಾಮಿ ಹಫೀಜ್ ಮೆಗಾಹದ್, ರಾಜ್ಯ ಯೋಜನಾ ಆಯೋಗದ ಸದಸ್ಯ ಡಾ.ಕೆ.ಶಿವಚಿತ್ತಪ್ಪ, ಕಾರ್ಯಾಗಾರದ ಸಂಚಾಲಕ ಡಾ.ರಂಗಸ್ವಾಮಿ, ಮೈಸೂರು ವಿವಿ ಗಾಂಧಿ ಅಧ್ಯಯನ ಕೇಂದ್ರದ ನಿರ್ದೇಶಕ ಡಾ.ಎಸ್.ಶಿವರಾಜಪ್ಪ, ಮಹಿಳಾ ಅಧ್ಯಯನ ಕೇಂದ್ರದ ನಿರ್ದೇಶಕಿ ಡಾ.ಎನ್.ಸರಸ್ವತಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Black Days: ಜಮೀರ್+ ನಾಲ್ವರು ಕೊಚ್ಚೆ, ದೂರ ಇಟ್ಟಿದ್ದೇನೆ: ಎಚ್.ಡಿ.ಕುಮಾರಸ್ವಾಮಿ
Hunsur: ಅಪ್ರಾಪ್ತ ಬಾಲಕಿ ಗರ್ಭಿಣಿ ಪ್ರಕರಣ; ಯುವಕನ ಬಂಧನ
MUDA: ಇ.ಡಿ.ಯಿಂದ ಮಾಜಿ ಅಧ್ಯಕ್ಷ ಮರಿಗೌಡ ಸುದೀರ್ಘ 9 ಗಂಟೆ ವಿಚಾರಣೆ
ನನ್ನ ಮುಟ್ಟಿದರೆ ಜನ ಸುಮ್ಮನಿರಲಾರರು: ವಿಪಕ್ಷಕ್ಕೆ ಸಿಎಂ ಸಿದ್ದರಾಮಯ್ಯ ಎಚ್ಚರಿಕೆ
MUDA CASE: ಸುಳ್ಳು ಆರೋಪಗಳ ಮೇಲೆ ಇ.ಡಿ. ತನಿಖೆ: ಸಿಎಂ ಬೇಸರ
MUST WATCH
ಹೊಸ ಸೇರ್ಪಡೆ
Mudhol: ಎರಡೂ ಬಣಗಳಿಂದ ಪ್ರತಿಭಟನೆ ಬಿಸಿ; ಸ್ಥಳದಲ್ಲೆ ಬೀಡುಬಿಟ್ಟಿರುವ ಎಸ್ಪಿ; ಹೈ ಅಲರ್ಟ್
Belagavi: ಹೊಸಬರು, ಹಳಬರನ್ನೂ ಬಿಜೆಪಿಯವರು ಟಚ್ ಮಾಡ್ತಿದ್ದಾರೆ: ಶಾಸಕ ಬಾಬಾಸಾಹೇಬ ಪಾಟೀಲ್
Kannada Cinema: ‘ನಾ ನಿನ್ನ ಬಿಡಲಾರೆ’ ಟ್ರೇಲರ್ ಬಂತು: ನ.29ಕ್ಕೆ ಸಿನಿಮಾ ತೆರೆಗೆ
Sagara: ಕರವೇ ತಾಲೂಕು ಅಧ್ಯಕ್ಷರ ಮನೆ ಮೇಲೆ ಅರಣ್ಯಾಧಿಕಾರಿಗಳಿಂದ ದಾಳಿ; ಜಿಂಕೆ ಮಾಂಸ ವಶ
BGT Series: ವಿರಾಟ್ ಕೊಹ್ಲಿ ಜತೆ ವೈಯಕ್ತಿಕ ಪೈಪೋಟಿಗೆ ಇಳಿದಿದ್ದೆ: ಮಿಚೆಲ್ ಜಾನ್ಸನ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.