ವಿಜಯ್‌ಕುಮಾರ್‌ಗೆ ಟಿಕೆಟ್ ನೀಡದಿದ್ರೆ ಮೈತ್ರಿಗೆ ಬೆಂಬಲವಿಲ್ಲ
Team Udayavani, Mar 10, 2019, 7:48 AM IST
ಕೆ.ಆರ್.ನಗರ: ಮೈಸೂರು ಲೋಕಸಭಾ ಕ್ಷೇತ್ರದಿಂದ ಸ್ಫರ್ಧಿಸಲು ಕಾಂಗ್ರೆಸ್ ಜಿಲ್ಲಾಧ್ಯಕ್ಷ ಡಾ.ಬಿ.ಜೆ.ವಿಜಯಕುಮಾರ್‌ಗೆ ಕಾಂಗ್ರೆಸ್ ಅವಕಾಶ ಕಲ್ಪಿಸದಿದ್ದರೆ ಕೆ.ಆರ್.ನಗರ ವಿಧಾನಸಭಾ ಕ್ಷೇತ್ರದಲ್ಲಿ ಮೈತ್ರಿ ಕೂಟದ ಅಭ್ಯರ್ಥಿಗೆ ಬೆಂಬಲ ನೀಡದಿರಲು ತಾಲೂಕು ಕಾಂಗ್ರೆಸ್ ಪದಾಧಿಕಾರಿಗಳು ಮತ್ತು ಮುಖಂಡರು ತೀರ್ಮಾನ ಕೈಗೊಂಡರು.
ಪಟ್ಟಣದ ಬಸವೇಶ್ವರ ಬಡಾವಣೆಯಲ್ಲಿ ನಡೆದ ಕಾಂಗ್ರೆಸ್ ಪದಾಧಿಕಾರಿಗಳ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಯಿತಲ್ಲದೇ ಕಳೆದ 20 ವರ್ಷಗಳಿಂದ ಪಕ್ಷದ ಕಾರ್ಯಕರ್ತರಾಗಿ ಕೆಲಸ ಮಾಡುತ್ತಿರುವ ಡಾ.ಬಿ.ಜೆ.ಜಯಕುಮಾರ್‌ಗೆ ಬಿ.ಫಾರಂ ನೀಡಬೇಕು ಎಂದು ಆಗ್ರಹಿಸಲಾಯಿತು. ತಾಲೂಕು ಕಾಂಗ್ರೆಸ್ ವಕ್ತಾರ ಸೈಯದ್ ಜಾಬೀರ್ ಮಾತನಾಡಿ, ಕ್ಷೇತ್ರದಲ್ಲಿ ವಿಜಯಕುಮಾರ್‌ಗೆ ಅವಕಾಶ ನೀಡಬೇಕು ಎಂಬುದು ತಾಲೂಕು ಕಾಂಗ್ರೆಸ್ ಹಕ್ಕೊತ್ತಾಯವಾಗಿದೆ ಎಂದರು.
ಪುರಸಭೆ ಮಾಜಿ ಅಧ್ಯಕ್ಷ ಡಿ.ಕಾಂತರಾಜು ಮಾತನಾಡಿ, ತಮ್ಮ ಈ ತೀರ್ಮಾನವನ್ನು ನಾವೆಲ್ಲಾ ಪಕ್ಷದ ವರಿಷ್ಠರನ್ನು ಭೇಟಿಯಾಗಿ ಅಹವಾಲು ಸಲ್ಲಿಸುತ್ತೇವೆ ಎಂದು ತಿಳಿಸಿದರು. ಪಟ್ಟಣ ಯುವ ಕಾಂಗ್ರೆಸ್ ಅಧ್ಯಕ್ಷರೂ ಆದ ಪುರಸಭೆ ಸದಸ್ಯ ಕೆ.ಜಿ.ಸುಬ್ರಹ್ಮಣ್ಯ ಮಾತನಾಡಿ, ವಿಜಯಕುಮಾರ್‌ಗೆ ಸ್ಪರ್ಧಿಸಲು ಅವಕಾಶ ನೀಡದಿದ್ದರೆ ನಾವು ಇಲ್ಲಿ ಜೆಡಿಎಸ್ ಬೆಂಬಲಿಸುವ ಪ್ರಶ್ನೆಯೇ ಇಲ್ಲ ಎಂದರು.
ಸಭೆಯಲ್ಲಿ ತಾಲೂಕು ಯುವ ಕಾಂಗ್ರೆಸ್ ಅಧ್ಯಕ್ಷ ಭೋಜರಾಜು, ಮಾಜಿ ಅಧ್ಯಕ್ಷ ನಟರಾಜು, ಕೆ.ಆರ್.ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ.ಎಸ್.ಮಹದೇವ್, ಜಿಲ್ಲಾ ಗ್ರಾಮಾಂತರ ಯುವ ಕಾಂಗ್ರೆಸ್ ಕಾರ್ಯದರ್ಶಿ ಎಲ್.ಬಿ.ಮಂಜುನಾಥ್, ಪುರಸಭೆ ಸದಸ್ಯ ಕೆ.ಎಲ್.ಕುಮಾರ್, ಮಾಜಿ ಸದಸ್ಯ ಕೆ.ವಿನಯ್, ಮುಖಂಡರಾದ ಕೆ.ಎನ್.ಪ್ರಸನ್ನಕುಮಾರ್, ನವೀದ್‌ಪಾಷ, ಶಂಕರ್, ಸಂತೋಷ್, ಚೇತನ್, ಸಿದ್ದಿಕ್, ಅನಿಲ್, ಪಟೇಲ್‌ರ, ದರ್ಶನ್‌ಗೌಡ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hunsur: ಹೊಸ ವರ್ಷಾಚರಣೆ: ಕೇಕ್ ತಿಂದ 45ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ
Hunsur: ಆಕಸ್ಮಿಕ ವಿದ್ಯುತ್ ತಂತಿ ತಗುಲಿ ಟ್ರ್ಯಾಕ್ಟರ್‌ನಲ್ಲಿದ್ದ ಹುಲ್ಲಿಗೆ ಬೆಂಕಿ
Mysuru: ಯೋಗಾನರಸಿಂಹಸ್ವಾಮಿ ದೇಗುಲದಲ್ಲಿ ಭಕ್ತರಿಗೆ 2 ಲಕ್ಷ ಲಡ್ಡು ವಿತರಣೆ
Mysuru: ಕೆಆರ್‌ಎಸ್ ರಸ್ತೆಗೆ “ಸಿದ್ದರಾಮಯ್ಯ ಆರೋಗ್ಯ ಮಾರ್ಗ’ ನಿಶ್ಚಿತ: ಲಕ್ಷ್ಮಣ್
Sandalwood: ಪ್ರತಿಭೆ ಪ್ರದರ್ಶಿಸಲು ಕಲಾವಿದರಿಗೆ ಸೂಕ್ತ ವೇದಿಕೆ ಅಗತ್ಯ: ನಟ ಡಾಲಿ ಧನಂಜಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.