ಹುಣಸೂರು: ಜೆಡಿಎಸ್ ನ ಇಫ್ತಿಯಾರ್ ಕೂಟದಲ್ಲಿ ಭಾಗಿಯಾದ ಸಂಸದ ಪ್ರಜ್ವಲ್ ರೇವಣ್ಣ


Team Udayavani, Apr 26, 2022, 12:13 PM IST

Untitled-1

ಹುಣಸೂರು: ಬಿಜೆಪಿ ಪಕ್ಷವು ಜಾತಿ ಧರ್ಮವನ್ನು ಒಡೆಯುವ ಮೂಲಕ ಮತಯಾಚಿಸಿ ರಾಜಕಾರಣ ಮಾಡುತ್ತದೆ. ಆದರೆ ಜೆಡಿಎಸ್ ಎಲ್ಲರನ್ನೂ ಒಗ್ಗಡಿಸುವ ಮೂಲಕ ರಾಜಕಾರಣ ಮಾಡುತ್ತದೆ ಎಂದು ಸಂಸದ ಪ್ರಜ್ವಲ್ ರೇವಣ್ಣ ಹೇಳಿದರು.

ಹುಣಸೂರು ತಾಲೂಕು ಜೆಡಿಎಸ್ ಪಕ್ಷವು ಸರ್ವಧರ್ಮಗಳ ಸಮನ್ವಯ ಸಮಿತಿ ಸಹಯೋಗದೊಂದಿಗೆ ವಿ ಐ ಕೆ ಕಲ್ಯಾಣ ಮಂಟಪದಲ್ಲಿ  ಆಯೋಜಿಸಿದ್ದ ಇಫ್ತಿಯಾರ್ ಕೂಟದಲ್ಲಿ ಭಾಗವಹಿಸಿದ್ದ ಸಂಸದ ಪ್ರಜ್ವಲ್ ರೇವಣ್ಣ  ರಂಜಾನ್ ಹಿನ್ನೆಲೆಯಲ್ಲಿ ಸಿಹಿ ವಿತರಿಸಿ, ಸೇವಿಸುವ ಮೂಲಕ ಇಫ್ತಿಯಾರ್ ಕೂಟಕ್ಕೆ ಚಾಲನೆ ನೀಡಿದರು.

ನಂತರ ನಡೆದ ಸರಳ ಸಮಾರಂಭದಲ್ಲಿ ಮಾತನಾಡಿದ ಸಂಸದ ಪ್ರಜ್ವಲ್ ರೇವಣ್ಣ, ಈ ದೇಶದಲ್ಲಿ ಎಲ್ಲ ಧರ್ಮದವರು ಸಮಾನರು. ಎಲ್ಲರಿಗೂ ಬದುಕುವ ಹಕ್ಕಿದೆ. ಈ ಇಫ್ತಿಯಾರ್ ಕೂಟವನ್ನು ಹಿಂದೂ-ಮುಸ್ಲಿಂ-ಕ್ರಿಶ್ಚಿಯನ್ ಎಲ್ಲರೂ ಸೇರಿ ಆಚರಣೆ ಮಾಡುತ್ತಿರುವುದು ಸಂತೋಷದ ವಿಷಯ. ಬಿಜೆಪಿ ಪಕ್ಷವು ಧರ್ಮ-ಧರ್ಮಗಳ ನಡುವೆ ಕಂದಕವನ್ನು ಉಂಟು ಮಾಡುತ್ತಿದೆ. ಇದನ್ನು ನಾವೆಲ್ಲರೂ ಸೇರಿ ಸರಿ ಮಾಡುವ ನಿಟ್ಟಿನಲ್ಲಿ ಕಾರ್ಯಕ್ರಮ ರೂಪಿಸಬೇಕಿದೆ ಎಂದರು.

ಹುಣಸೂರು ತಾಲೂಕಿನಲ್ಲಿ ಜೆಡಿಎಸ್ ಪಕ್ಷವು ಸದೃಢವಾಗಿದೆ. ಜೆಡಿಎಸ್ ಪಕ್ಷದ ಕೆಲ ಪ್ರಮುಖ ಮುಖಂಡರು ತಮ್ಮಲ್ಲಿನ ಭಿನ್ನಾಭಿಪ್ರಾಯ ಮರೆತು ಒಗ್ಗಟ್ಟಾದರೆ ಕಾರ್ಯಕರ್ತರು ಇನ್ನೂ ಹೆಚ್ಚಿನ ಹುಮ್ಮಸ್ಸಿನಿಂದ ಒಗ್ಗಟ್ಟಾಗಿ ಪಕ್ಷಕ್ಕಾಗಿ ದುಡಿಯುತ್ತಾರೆ. ಈ ನಿಟ್ಟಿನಲ್ಲಿ ಪಕ್ಷದ ವರಿಷ್ಠರು ಶೀಘ್ರದಲ್ಲೇ ಮುಖಂಡರ ಸಭೆ ನಡೆಸಲಿದ್ದಾರೆ ಎಂದರು.

ಇನ್ನು ಈ ಭಾಗದ ತಂಬಾಕು ಸಮಸ್ಯೆಯ ಬಗ್ಗೆ ನನಗೆ ಅರಿವಿದೆ.  ನಾನು ಸಹ ಲೋಕಸಭೆಯಲ್ಲಿ ಹಲವಾರು ಬಾರಿ ಧ್ವನಿ ಎತ್ತಿದ್ದೇನೆ. ಇಲ್ಲಿಯವರೆಗಿನ ತಂಬಾಕು ಸಮಸ್ಯೆಯನ್ನು ಬಗೆಹರಿಸಿದವರೆಂದರೆ  ಮಾಜಿ ಪ್ರಧಾನಿ ದೇವೇಗೌಡರು . ಇವರು ತಂಬಾಕು ಬೆಳೆಗಾರರ ಬಗ್ಗೆ ಧ್ವನಿ ಎತ್ತದೇ ಇದ್ದಿದ್ದರೆ ತಂಬಾಕು ಬೆಳೆಗಾರರೇ ಇರುತ್ತಿರಲಿಲ್ಲ.ಈಗಿನ ಕೇಂದ್ರ ಸರ್ಕಾರ ಹೆಚ್ಚಾಗಿ ತಂಬಾಕು ಬೆಳೆದರು ದಂಡ ಹಾಕುತ್ತಿದೆ. ಕಡಿಮೆ ಬೆಳೆದರು ದಂಡ  ಹಾಕುತ್ತಾರೆ, ದೇವೇಗೌಡರು ಹೋರಾಟ ಮಾಡಿದ ನಂತರವೇ ಆಂಧ್ರ ಮಾದರಿಯಲ್ಲಿ ತಂಬಾಕನ್ನು ಖರೀದಿ ಮಾಡುತ್ತಿದ್ದಾರೆ ಎಂದರು.

ಬಿಜೆಪಿ ಸರ್ಕಾರ ಅಭಿವೃದ್ದಿಯ ಹೆಸರಿನಲ್ಲಿ ಮತ ಕೇಳುವುದಿಲ್ಲ. ಧರ್ಮ ವಿಭಜನೆಯ ಆಧಾರದ ಮೇಲೆ ಅವರು ಮತ ಪಡೆಯುವ ಹುನ್ನಾರ ನಡುಸುತ್ತಲೆ ಇದ್ದಾರೆ. ಆದರೆ ಜೆಡಿಎಸ್ ಪಕ್ಷವು ಎಲ್ಲಾ ಜಾತಿ, ಜನಾಂಗ,ಧರ್ಮದವರನ್ನು ಜೊತೆಯಲ್ಲಿ ಕರೆದುಕೊಂಡು ಹೋಗುತ್ತಿದ್ದೇವೆಂದರು.

ಈ ಕಾರ್ಯಕ್ರಮದಲ್ಲಿ ತಾಲೂಕು ಜೆಡಿಎಸ್ ಅಧ್ಯಕ್ಷ ದೇವರಹಳ್ಳಿ ಸೋಮಶೇಖರ್. ಉಪಾಧ್ಯಕ್ಷ ದೇವರಾಜ ಒಡೆಯರ್. ಮುಖಂಡರಾದ ಗೋವಿಂದೇಗೌಡ. ಗಣೇಶ್ ಗೌಡ. ರಾಜುಗೌಡ. ಮುಸ್ಲಿಂ ಮುಖಂಡರಾದ ಮಹಮದ್ ಶಫಿವುಲ್ಲಾ, ಅಪ್ರೋಜ್ ಖಾನ್,ನಸ್ರುಲ್ಲಾ, ತಾಲೂಕು ಜೆಡಿಎಸ್ ಹುಣಸೂರು ನಗರದ ಚರ್ಚ್ ಫಾದರ್ ,ಸ್ಥಳೀಯ ಚುನಾಯಿತ ಜನಪ್ರತಿನಿಧಿಗಳು, ನಗರಸಭಾ ಸದಸ್ಯರುಗಳು,ಕಾರ್ಯಕರ್ತರು ಸೇರಿದಂತೆ ಎರಡು ಸಾವಿರಕ್ಕೂ ಹೆಚ್ಚು ಮಂದಿ ಭಾಗವಹಿಸಿದ್ದರು.

ಟಾಪ್ ನ್ಯೂಸ್

Bengal

Filmmaker Died: ಖ್ಯಾತ ಸಿನಿಮಾ ನಿರ್ದೇಶಕ ಶ್ಯಾಂ ಬೆನಗಲ್‌ ವಿಧಿವಶ

Mangaluru: ವಿಎ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ

Mangaluru: ವಿಎ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ

CTR-Wife-pallavi

ಸುಮ್ನೆ ಬ್ಯಾಂಡೇಜ್‌ ಹಾಕಿಕೊಳ್ಳಲು ಯಾರಿಗೂ ತಲೆ ಕೆಟ್ಟಿಲ್ಲ: ಸಿ.ಟಿ.ರವಿ ಪತ್ನಿ ಪಲ್ಲವಿ

CKM-CTR

ಬಿಜೆಪಿ, ಕಾಂಗ್ರೆಸ್‌ಗೆ ಪ್ರತ್ಯೇಕ ಕಾನೂನಿಲ್ಲ, ನನ್ನ ದೂರಿಗೆ ಕ್ರಮವಿಲ್ಲವೇಕೆ?: ಸಿ.ಟಿ.ರವಿ

Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ

Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ

Road Mishap: ಬೈಕ್‌- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು

Road Mishap: ಬೈಕ್‌- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು

Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು

Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಳೆಬಾಳುವ ಎತ್ತು ಬಲಿ

Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಲೆಬಾಳುವ ಎತ್ತು ಬಲಿ

‌Mysore: ಮೊಬೈಲ್‌ ಜೂಜಾಟ; ನಾಲ್ವರ ಬಂಧನ

‌Mysore: ಮೊಬೈಲ್‌ ಜೂಜಾಟ; ನಾಲ್ವರ ಬಂಧನ

22-hunsur

Hunsur: ಒಂದೆಡೆ ಚಿರತೆ ಸೆರೆ, ಮತ್ತೊಂದೆಡೆ ಅಪಘಾತ

5-hunsur

Hunsur: ಬಸ್ ಡಿಕ್ಕಿಯಾಗಿ ಪಾದಾಚಾರಿ ಸಾವು

MUDA Scam: ಕೇಸ್‌ ವಾಪಸ್‌ಗೆ ಹಣದ ಆಮಿಷ? ಸ್ನೇಹಮಯಿ ಕೃಷ್ಣ ಲೋಕಾಯುಕ್ತಕ್ಕೆ ದೂರು

MUDA Scam: ಕೇಸ್‌ ವಾಪಸ್‌ಗೆ ಹಣದ ಆಮಿಷ? ಸ್ನೇಹಮಯಿ ಕೃಷ್ಣ ಲೋಕಾಯುಕ್ತಕ್ಕೆ ದೂರು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

police crime

Gangolli, Ajekaru; ಮಹಿಳೆಯರಿಗೆ ಜೀವ ಬೆದರಿಕೆ

Bengal

Filmmaker Died: ಖ್ಯಾತ ಸಿನಿಮಾ ನಿರ್ದೇಶಕ ಶ್ಯಾಂ ಬೆನಗಲ್‌ ವಿಧಿವಶ

death

Belthangady : ಸೊಪ್ಪು ತರಲು ಹೋಗಿದ್ದ ವ್ಯಕ್ತಿ ಆಕಸ್ಮಿಕ ಸಾ*ವು

baby

Sullia: ಒಂಟಿಯಾಗಿ ಪತ್ತೆಯಾದ ಮಗು ಪೋಷಕರ ಮಡಿಲಿಗೆ

Mangaluru: ವಿಎ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ

Mangaluru: ವಿಎ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.