ಆನ್‌ಲೈನ್‌ ಕಂದಾಯ ಪಾವತಿ ಅನುಷ್ಠಾನಗೊಳಿಸಿ


Team Udayavani, Jun 8, 2019, 3:00 AM IST

online

ಮೈಸೂರು: ನಗರಪಾಲಿಕೆ ವ್ಯಾಪ್ತಿಯಲ್ಲಿ ಸೋಮವಾರದಿಂದಲೇ ಕುಡಿಯುವ ನೀರಿಗೆ ಆನ್‌ಲೈನ್‌ ಮೂಲಕ ಬಿಲ್‌ ಪಾವತಿ ಮಾಡುವ ವ್ಯವಸ್ಥೆ ಜಾರಿಯಾಗಲಿದ್ದು, ಕಂದಾಯವನ್ನೂ ಆನ್‌ಲೈನ್‌ನಲ್ಲಿ ಕಟ್ಟಿಸಿಕೊಳ್ಳುವ ಪ್ರಕ್ರಿಯೆಯೂ ಶೀಘ್ರ ಅನುಷ್ಠಾನಗೊಳಿಸುವುದರ ಬಗ್ಗೆ ಕೌನ್ಸಿಲ್‌ನಲ್ಲಿ ತೀರ್ಮಾನಿಸಲಾಯಿತು.

ಶುಕ್ರವಾರ ನಗರಪಾಲಿಕೆಯ ನಾಲ್ವಡಿ ಸಭಾಂಗಣದಲ್ಲಿ ನಡೆದ ಕೌನ್ಸಿಲ್‌ ಸಾಮಾನ್ಯ ಸಭೆಯಲ್ಲಿ ಈ ಬಗ್ಗೆ ವಿಸ್ತತ ಚರ್ಚೆ ನಡೆಯಿತು. ಕುಡಿಯುವ ನೀರಿನ ಬಿಲ್ಲನ್ನು ಆನ್‌ಲೈನ್‌ನಲ್ಲಿ ಕಟ್ಟಿಸಿಕೊಳ್ಳುವ ಮಾದರಿಯಲ್ಲೇ ಕಂದಾಯ ಕಟ್ಟಿಸಿಕೊಳ್ಳುವ ವ್ಯವಸ್ಥೆ ಜಾರಿಗೊಳಿಸಬೇಕು ಎಂದು ಪಾಲಿಕೆ ಸರ್ವ ಸದಸ್ಯರು ಒತ್ತಾಯಿಸಿದರು. ಈಗಾಗಲೇ ಬೆಂಗಳೂರು, ಮಂಗಳೂರು, ಶಿವಮೊಗ್ಗ ಹುಬ್ಬಳ್ಳಿ-ಧಾರವಾಡ ಸೇರಿ ಮೊದಲಾದ ಕಡೆ ಆನ್‌ಲೈನ್‌ನಲ್ಲಿ ಕಂದಾಯ ಪಾವತಿ ಮಾಡಿಸಿಕೊಳ್ಳಲಾಗುತ್ತಿದೆ. ಹೀಗಾಗಿ ನಗರಪಾಲಿಕೆಯಲ್ಲೂ ಜಾರಿಗೊಳಿಸಲು ಕ್ರಮವಹಿಸುವಂತೆ ಒತ್ತಾಯಿಸಿದರು.

ಅಗತ್ಯ ಕ್ರಮ: ಮೇಯರ್‌ ಪುಷ್ಪಲತಾ ಜಗನ್ನಾಥ್‌ ಮಾತನಾಡಿ, ಸೋಮವಾರ ಆನ್‌ಲೈನ್‌ನಲ್ಲಿ ನೀರಿನ ಬಿಲ್‌ ಪಾವತಿಗೆ ಚಾಲನೆ ನೀಡಲಾಗುವುದು. ಕಂದಾಯ ಪಾವತಿ ಆನ್‌ಲೈನ್‌ ಮಾಡುವ ನಿಟ್ಟಿನಲ್ಲಿ ಮುಂದಿನ ದಿನಗಳಲ್ಲಿ ಕ್ರಮ ವಹಿಸಲಾಗುವುದು ಎಂದರು. ಆಯುಕ್ತೆ ಶಿಲ್ಪನಾಗ್‌ ಮಾತನಾಡಿ, ಇದಕ್ಕೆ ಒಂದೂವರೆ ವರ್ಷ ಸಮಯಾವಕಾಶ ಹಿಡಿಯಲಿದ್ದು, ಅದಾದ ಬಳಿಕ ಮಾಡುವ ನಿಟ್ಟಿನಲ್ಲಿ ಕ್ರಮವಹಿಸಲಾಗುವುದು ಎಂದು ಹೇಳಿದರು.

ಬೈಲಾದಂತೆ ಜಾಹೀರಾತು: ಸರ್ಕಾರಕ್ಕೆ ಕಳುಹಿಸಿರುವ ಬೈಲಾ ನಿಯಮದಂತೆಯೇ ನಗರಪಾಲಿಕೆ ಜಾಹೀರಾತು ಪಡೆದುಕೊಳ್ಳಲು ಅನುಮತಿ ನೀಡುವ ಮೂಲಕ ಪಾಲಿಕೆಗೆ ಬರುವ 25 ಕೋಟಿ ರೂ. ಆದಾಯದ ಕುರಿತು ನಿರ್ಧಾರ ಕೈಗೊಳ್ಳಬೇಕು ಎಂದು ಸಭೆಯಲ್ಲಿ ಅಭಿಪ್ರಾಯ ವ್ಯಕ್ತವಾಯಿತು.

ಸದಸ್ಯರಿಂದ ಸಲಹೆ: ಒಂದೂವರೆ ವರ್ಷದ ಹಿಂದೆ ಜಾಹೀರಾತು ಸ್ವೀಕರಿಸಲು ಹೊಸ ಬೈಲಾ ಒಂದನ್ನು ಸಿದ್ಧಪಡಿಸಿ ಸರ್ಕಾರದ ಅನುಮತಿಗೆ ಕಳುಹಿಸಿಕೊಡಲಾಗಿದೆ. ಆದರೆ, ಇದುವರೆಗೂ ಅನುಮತಿ ಸಿಗದ ಹಿನ್ನೆಲೆಯಲ್ಲಿ ಜಾಹೀರಾತನ್ನೇ ಸ್ವೀಕರಿಸಲು ಆಗುತ್ತಿಲ್ಲ. ಈ ಹಿನ್ನೆಲೆಯಲ್ಲಿ ಬೈಲಾ ಅನುಗುಣವಾಗಿ ಜಾಹೀರಾತು ಸ್ವೀಕರಿಸಿದರೆ ವಾರ್ಷಿಕ ನಗರಪಾಲಿಕೆ ಸಾಕಷ್ಟು ಕೋಟಿ ಹಣ ಸಂದಾಯವಾಗಲಿದೆ ಸದಸ್ಯರು ಸಲಹೆ ನೀಡಿದರು.

ಪಕ್ಕಾ ಮನೆ ನಿರ್ಮಿಸಿ: ಕಂದಾಯ ಬಡಾವಣೆಗಳಲ್ಲಿ ಬಡವರಿಗೆ ಪಕ್ಕಾ ಮನೆಯನ್ನು ಪಾಲಿಕೆ ವತಿಯಿಂದ ನಿರ್ಮಿಸಿಕೊಡಬೇಕು. ಈ ಬಗ್ಗೆ ಸಭೆಯಲ್ಲಿ ನಿರ್ಣಯ ಕೈಗೊಳ್ಳುವಂತೆ ಸದಸ್ಯರೊಬ್ಬರು ಆಗ್ರಹಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಮೇಯರ್‌ ಪುಷ್ಪಲತಾ, ಕಂದಾಯ ಭೂಮಿಗಳಲ್ಲಿ ಪಕ್ಕಾ ಮನೆಗಳನ್ನು ಹೇಗೆ, ಯಾವ ರೀತಿ ಕಟ್ಟಬಹುದು ಹಾಗೂ ಸರ್ಕಾರದ ನಿರ್ದೇಶನ ಏನಿದೆ ಎಂಬುದನ್ನು ನೋಡಿ, ಒಂದು ಸಮಿತಿ ರಚಿಸಲಾಗುವುದು ಎಂದು ತಿಳಿಸಿದರು.

ಪಾಲಿಕೆ ಆಯುಕ್ತೆ ಶಿಲ್ಪಾನಾಗ್‌ ಪ್ರತಿಕ್ರಿಯಿಸಿ, ಸರ್ಕಾರದ ನಿರ್ದೇಶನ ಪ್ರಕಾರವೇ ಪಕ್ಕಾ ಮನೆ ನಿರ್ಮಾಣ ಯೋಜನೆಯನ್ನು ಅನುಷ್ಠಾನ ಮಾಡಲಾಗುವುದು ಎಂದು ತಿಳಿಸಿದರು. ನಗರಪಾಲಿಕೆ ವತಿಯಿಂದ ಬಿಪಿಎಲ್‌ ಕಾರ್ಡುದಾರರಿಗೆ ನೀಡುವ ವೈದ್ಯಕೀಯ ಪ್ರೋತ್ಸಾಹ ಧನಕ್ಕೆ ಜಾತಿ ದೃಢೀಕರಣವನ್ನು ಅಧಿಕಾರಿಗಳು ಕೇಳುತ್ತಿದ್ದಾರೆ. ಈ ಬಗ್ಗೆ ಅಧಿಕಾರಿಗಳಿಗೆ ಜಾತಿ ದೃಢೀಕರಣ ಕೇಳದಂತೆ ಸಭೆಯಲ್ಲಿ ನಿರ್ಣಯ ಮಾಡುವಂತೆ ಮನವಿ ಮಾಡಿದರು.

ತುಂಡು ಭೂಮಿ ಮಾರಾಟ ಮಾಡಿ: ಪಾಲಿಕೆ ವ್ಯಾಪ್ತಿಯಲ್ಲಿ ಸಾಕಷ್ಟು ತುಂಡು ಭೂಮಿಗಳಿವೆ. ಆ ತುಂಡು ಭೂಮಿಯನ್ನು ಅಕ್ಕಪಕ್ಕದ ಮನೆಯವರಿಗೆ, ಈಗಿರುವ ದರದಲ್ಲಿ ಮಾರಾಟ ಮಾಡಿದರೆ ಪಾಲಿಕೆ ಆದಾಯ ವೃದ್ಧಿಸಲಿದೆ ಎಂದು ಸದಸ್ಯರೊಬ್ಬರು ಸಲಹೆ ನೀಡಿದರು. ಸಭೆಯಲ್ಲಿ ಉಪಮೇಯರ್‌ ಶಫಿ ಆಹಮದ್‌ ಸೇರಿದಂತೆ ಸದಸ್ಯರು ಇದ್ದರು.

ಎಲ್‌ಇಡಿ ನಗರ ಕುರಿತು ಚರ್ಚೆ: ಮೈಸೂರನ್ನು ಎಲ್‌ಇಡಿ ನಗರವನ್ನಾಗಿಸಲು ಸರ್ಕಾರ ಸರ್ವೆ ನಡೆಸಿ ಅಂದಾಜು 24960 ಬಲ್ಬ್ಗಳ ಬದಲಾವಣೆಗೆ ಹಣ ಬಿಡುಗಡೆಗೊಳಿಸಿದ್ದು, ಈ ಸಂಬಂಧ ಸಭೆ ಅನುಮತಿ ಮೇರೆಗೆ ಟೆಂಡರ್‌ ಕರೆಯಲಾಗುವುದು ಎಂದು ಆಯುಕ್ತೆ ಶಿಲ್ಪಾನಾಗ್‌ ಹೇಳಿದರು.

ಪಾಲಿಕೆ ಸದಸ್ಯ ಆರೀಫ್ ಹುಸೇನ್‌ ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿ ನಗರದಲ್ಲಿ ಅಂದಾಜಿಸಿರುವ ಬಲ್ಬ್ಗಳ ಪಟ್ಟಿಯಲ್ಲಿ ವ್ಯತ್ಯಾಸವಿವೆ. ಈ ಸಂಬಂಧ ಮರು ಪರಿಶೀಲನೆಗೆ ಮನವಿ ಸಲ್ಲಿಸುವಂತೆ ಆಗ್ರಹಿಸಿದರು. ಇದಕ್ಕೆ ದನಿಗೂಡಿಸಿದ ರಾಮಪ್ರಸಾದ್‌, ಶಿವಕುಮಾರ್‌, ಸರ್ಕಾರ ಸಂಪೂರ್ಣವಾಗಿ ಎಲ್‌ಇಡಿ ಬಲ್ಬ್ ಅಳವಡಿಸುವುದು ಯಾವಾಗ ಎಂದು ಪ್ರಶ್ನಿಸಿದರು.

ಅಲ್ಲದೆ ಬಲ್ಬ್ ನೆಪದಲ್ಲಿ ದಸರಾ ವೇಳೆಗೆ ನಗರವನ್ನು ಕತ್ತಲು ಗೊಳಿಸುವ ಬದಲಿಗೆ ದಸರೆಗೂ ಮುನ್ನವೇ ಕಾರ್ಯಗತಗೊಳಿಸುವಂತೆ ಸಭೆ ಮೂಲಕ ಆಗ್ರಹಿಸಿದರು. ಸಭೆ ಮೂಲಕ ಮತ್ತೂಮ್ಮೆ ಸರ್ವೆ ನಡೆಸಿ ಮತ್ತಷ್ಟು ಬಲ್ಬ್ಗಳನ್ನು ಅಳವಡಿಸುವಂತೆ ಮನವಿ ಸಲ್ಲಿಸಲಾಗುವುದು. ಪ್ರಸಕ್ತ ಸಾಲಿನಲ್ಲಿ ಬದಲಾವಣೆಗೆ ಟೆಂಡರ್‌ ಪ್ರಕ್ರಿಯೆಯನ್ನು ದಸರೆ ಒಳಗೆ ಮುಗಿಸಲು ಕ್ರಮ ವಹಿಸುವ ಭರವಸೆಯನ್ನು ಆಯುಕ್ತರು ನೀಡಿದರು.

ಟಾಪ್ ನ್ಯೂಸ್

Malai

Mangaluru: ಮಳಲಿ ಮಸೀದಿ ವಿವಾದ: ವಿಶ್ವ ಹಿಂದೂ ಪರಿಷತ್‌ ಅರ್ಜಿ ತಿರಸ್ಕೃತ

Kota-Meet

Udupi: ಜಿಲ್ಲೆಗೆ ಆಗಮಿಸುವ ಪ್ರವಾಸಿಗರಿಗೆ ಪೂರಕ ವಾತಾವರಣ ಕಲ್ಪಿಸಿ: ಸಂಸದ ಕೋಟ

Uttar Pradesh: ಆಸ್ಪತ್ರೆಯಲ್ಲಿ ಬೆಂಕಿ 10 ನವಜಾತ‌ ಶಿಶುಗಳ ಸಾವು; 40 ಮಕ್ಕಳ ರಕ್ಷಣೆ

Uttar Pradesh: ಆಸ್ಪತ್ರೆಯಲ್ಲಿ ಬೆಂಕಿ 10 ನವಜಾತ‌ ಶಿಶುಗಳ ಸಾವು; 40 ಮಕ್ಕಳ ರಕ್ಷಣೆ

Udupi: ಗೀತಾರ್ಥ ಚಿಂತನೆ 95: ಹೃಷೀಕೇಶನಲ್ಲಿ ಗುಡಾಕೇಶನ ಪ್ರಾರ್ಥನೆ

Udupi: ಗೀತಾರ್ಥ ಚಿಂತನೆ 95: ಹೃಷೀಕೇಶನಲ್ಲಿ ಗುಡಾಕೇಶನ ಪ್ರಾರ್ಥನೆ

Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳುDelhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳುDelhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು

Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು

Suspended

Criminal case; ಏಕಕಾಲಕ್ಕೆ ಪಾಲಿಕೆ, ಮುಡಾದಲ್ಲಿ ಕೆಲಸ: ನೌಕರ ವಜಾ

Gujarat: 700 ಕೆ.ಜಿ. ಡ್ರಗ್ಸ್‌ ವಶ: 8 ಮಂದಿ ಬಂಧನ; ಕಳೆದ 1 ತಿಂಗಳಲ್ಲಿ ಭರ್ಜರಿ 3ನೇ ಬೇಟೆ

Gujarat: 700 ಕೆ.ಜಿ. ಡ್ರಗ್ಸ್‌ ವಶ: 8 ಮಂದಿ ಬಂಧನ; ಕಳೆದ 1 ತಿಂಗಳಲ್ಲಿ ಭರ್ಜರಿ 3ನೇ ಬೇಟೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-hunsur

Hunsur: ಅಪ್ರಾಪ್ತ ಬಾಲಕಿ ಗರ್ಭಿಣಿ ಪ್ರಕರಣ; ಯುವಕನ ಬಂಧನ

1-amudaa

MUDA: ಇ.ಡಿ.ಯಿಂದ ಮಾಜಿ ಅಧ್ಯಕ್ಷ ಮರಿಗೌಡ ಸುದೀರ್ಘ‌ 9 ಗಂಟೆ ವಿಚಾರಣೆ

ನನ್ನ ಮುಟ್ಟಿದರೆ ಜನ ಸುಮ್ಮನಿರಲಾರರು: ವಿಪಕ್ಷ‌ಕ್ಕೆ ಸಿಎಂ ಸಿದ್ದರಾಮಯ್ಯ ಎಚ್ಚರಿಕೆ

ನನ್ನ ಮುಟ್ಟಿದರೆ ಜನ ಸುಮ್ಮನಿರಲಾರರು: ವಿಪಕ್ಷ‌ಕ್ಕೆ ಸಿಎಂ ಸಿದ್ದರಾಮಯ್ಯ ಎಚ್ಚರಿಕೆ

MUDA CASE: ಸುಳ್ಳು ಆರೋಪಗಳ ಮೇಲೆ ಇ.ಡಿ. ತನಿಖೆ: ಸಿಎಂ ಬೇಸರMUDA CASE: ಸುಳ್ಳು ಆರೋಪಗಳ ಮೇಲೆ ಇ.ಡಿ. ತನಿಖೆ: ಸಿಎಂ ಬೇಸರ

MUDA CASE: ಸುಳ್ಳು ಆರೋಪಗಳ ಮೇಲೆ ಇ.ಡಿ. ತನಿಖೆ: ಸಿಎಂ ಬೇಸರ

FIR: ಸ್ನೇಹಮಯಿ ಕೃಷ್ಣ ವಿರುದ್ಧ ಮೈಸೂರಿನಲ್ಲಿ ಎಫ್ಐಆರ್‌

FIR: ಸ್ನೇಹಮಯಿ ಕೃಷ್ಣ ವಿರುದ್ಧ ಮೈಸೂರಿನಲ್ಲಿ ಎಫ್ಐಆರ್‌

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

Malai

Mangaluru: ಮಳಲಿ ಮಸೀದಿ ವಿವಾದ: ವಿಶ್ವ ಹಿಂದೂ ಪರಿಷತ್‌ ಅರ್ಜಿ ತಿರಸ್ಕೃತ

Kota-Meet

Udupi: ಜಿಲ್ಲೆಗೆ ಆಗಮಿಸುವ ಪ್ರವಾಸಿಗರಿಗೆ ಪೂರಕ ವಾತಾವರಣ ಕಲ್ಪಿಸಿ: ಸಂಸದ ಕೋಟ

Suside-Boy

Putturu: ನೇಣು ಬಿಗಿದು ಆತ್ಮಹತ್ಯೆ

Suside-Boy

Brahamavara: ಹಾರಾಡಿ: ಬಾವಿಗೆ ಹಾರಿ ಆತ್ಮಹ*ತ್ಯೆ

Arrest

Madikeri: ಕುಶಾಲನಗರ ಕಳವು ಪ್ರಕರಣ: ಇಬ್ಬರ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.