ನಾಗರಹೊಳೆ; ಸ್ಟೀಲ್ ವೈಯರ್ ರೋಪ್ ಬ್ಯಾರಿಕೇಡ್ ಅಳವಡಿಕೆ: ಸಚಿವರಿಂದ ಪರಿಶೀಲನೆ
ಕಾಡಿನಿಂದ ನಾಡಿಗೆ ಲಗ್ಗೆ ಇಡುವ ಕಾಡಾನೆಗಳ ನಿಯಂತ್ರಣಕ್ಕೆ ಕ್ರಮ
Team Udayavani, Jun 22, 2022, 4:15 PM IST
ಹುಣಸೂರು : ಕಾಡಿನಿಂದ ನಾಡಿಗೆ ಲಗ್ಗೆ ಇಡುವ ಕಾಡಾನೆಗಳ ನಿಯಂತ್ರಣಕ್ಕೆ, ರಾಜ್ಯದಲ್ಲೇ ಮೊದಲ ಬಾರಿಗೆ ನಾಗರಹೊಳೆ ರಾಷ್ಟ್ರೀಯ ಉದ್ಯಾನವನದಲ್ಲಿ ಅಳವಡಿಸಿರುವ ಸ್ಟೀಲ್ ವೈಯರ್ ರೋಪ್ ಬ್ಯಾರಿಕೇಡ್ ಅನ್ನು ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಅವರು ವೀಕ್ಷಿಸಿದರು.
ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ವೀರನಹೊಸಹಳ್ಳಿ ವಲಯ ವ್ಯಾಪ್ತಿಯಲ್ಲಿ ಸ್ಟೀಲ್ ವೈಯರ್ ರೋಪ್ ಬ್ಯಾರಿಕೇಡ್ ಅನ್ನು ಅಳವಡಿಕೆ ಮಾಡಲಾಗಿದೆ. ರೈಲ್ವೆ ಹಳಿ ಬ್ಯಾರಕೇಡ್ ಗಳನ್ನೇ ಆನೆಗಳು ದಾಟಿ ಬರುವುದರಿಂದ ಸ್ಟೀಲ್ ವೈಯರ್ ರೋಪ್ ಬ್ಯಾರಿಕೇಡ್ ಅಳವಡಿಕೆ, ಆನೆಗಳ ತಡೆಗೆ ಹೇಗೆ ಸಹಕಾರಿಯಾಗಲಿದೆ ಎಂಬುದನ್ನು ಸಚಿವರಿಗೆ ಅರಣ್ಯ ಅಧಿಕಾರಿಗಳು ಪ್ರಾತ್ಯಕ್ಷಿಕೆ ಮೂಲಕ ವಿವರಿಸಿದರು.
ರೈಲ್ವೆ ಬ್ಯಾರಿಕೇಡ್ ಗೆ ಹಳಿಗಳ ಕೊರತೆ ಹಾಗೂ ದುಬಾರಿ ವೆಚ್ಚ ತಗುಲುವುದರಿಂದ ರಾಜ್ಯದಲ್ಲಿ ಇದೇ ಪ್ರಥಮಬಾರಿಗೆ ರೋಪ್ ಬ್ಯಾರಿಯರ್ ಅಳವಡಿಸಲಾಗಿದೆ. 13 ಅಡಿ ಉದ್ದದ 1.5 ಟನ್ ತೂಕದ ಅತ್ಯಾಧುನಿಕ ತಂತ್ರಜ್ಞಾನದ ಮೂಲಕ ಸಿಮೆಂಟ್ ಕಂಬಗಳನ್ನು ನಿರ್ಮಿಸಿ ಅದನ್ನು ಭೂಮಿಯಿಂದ 5 ಅಡಿ ಆಳದಲ್ಲಿ ನೆಡಲಾಗುತ್ತದೆ. ನಾಗರಹೊಳೆಯಲ್ಲಿ ಪ್ರಥಮ ಪ್ರಯೋಗ ಮಾಡಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು.
ಇತ್ತೀಚಿನ ದಿನಗಳಲ್ಲಿ ಮಾನವ-ವನ್ಯಜೀವಿ ಸಂಘರ್ಷ ಹೆಚ್ಚಾಗುತ್ತಿದೆ. ಕಾಡಿನಿಂದ ನಾಡಿಗೆ ಆನೆಗಳ ದಾಳಿ ತಡೆಗೆ ರೈಲ್ವೆ ಹಳಿಗಳ ಬ್ಯಾರಿಕೇಡ್, ಸೋಲಾರ್ ತಂತಿ ಬೇಲಿ ಸೇರಿದಂತೆ ಹಲವು ಕ್ರಮಗಳನ್ನು ಅರಣ್ಯ ಇಲಾಖೆ ಕೈಗೊಂಡಿದೆ. ಈಗ ಸ್ಟೀಲ್ ವೈಯರ್ ರೋಪ್ ಬ್ಯಾರಿಕೇಡ್ ಅಳವಡಿಕೆ ಮಾಡಿದ್ದು ಇದರಿಂದ ಆನೆಗಳು ನಾಡಿಗೆ ಆಗಮಿಸುವುದನ್ನು ತಡೆಯಲು ಸಹಕಾರಿಯಾಗುತ್ತದೆ ಎಂದರು.
22-6-12 ನಾಗರಹೊಳೆಯ ವೀರನಹೊಸಹಳ್ಳಿ ವ್ಯಾಪ್ತಿಯಲ್ಲಿ ರಾಜ್ಯದಲ್ಲಿ ಪ್ರಥಮ ಬಾರಿಗೆ ಆನೆಗಳು ಕಾಡಿನಿಂದ ಹೊರ ಹೋಗದಂತೆ ತಪ್ಪಿಸಲು ಅಳವಡಿಸುತ್ತಿರುವ ಸ್ಟಿಲ್ ವೈರ್ ರೋಪ್ ಬ್ಯಾರಿಕೇಡ್ ಕಾಮಗಾರಿಯನ್ನು ಪರಿಶೀಲಿಸಲಾಯಿತು ಅಭಿಮನ್ಯು & ಭೀಮನ ಸಹಾಯದಿಂದ ಪಿಲ್ಲರ್ & ಸ್ಟೀಲ್ ರೋಪ್ ನ ಗುಣಮಟ್ಟವನ್ನು ಪರಿಶೀಲಿಸಲಾಯಿತು@mahesh_ifs @nagaraholetr pic.twitter.com/e6guDBZh5O
— S T Somashekar Gowda (@STSomashekarMLA) June 22, 2022
ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ವೀರನಹೊಸಹಳ್ಳಿ ವಲಯ ವ್ಯಾಪ್ತಿಯಲ್ಲಿ ಸ್ಟೀಲ್ ವೈಯರ್ ರೋಪ್ ಬ್ಯಾರಿಕೇಡ್ ಅಳವಡಿಕೆ ಮಾಡಲಾಗಿದೆ. ಇದೊಂದು ಹೊಸತನದ ಪ್ರಯೋಗವಾಗಿದೆ ಎಂದು ಸಚಿವ ಎಸ್.ಟಿ.ಸೋಮಶೇಖರ್ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
By Election: ನಾಗೇಂದ್ರ, ಜಮೀರ್, ಡಿಕೆಶಿ ಮೇಲೆ ಚುನಾವಣಾ ಆಯೋಗ ಕಣ್ಣಿಡಲಿ: ಡಿವಿಎಸ್
Waqf: ಮುಸ್ಲಿಮರ ಗುರಿ ಮಾಡುವುದು ಬಿಟ್ಟರೆ ಬಿಜೆಪಿಗೆ ಬೇರೇನೂ ಇಲ್ಲ: ಸಚಿವ ದಿನೇಶ್
Gadaga: ಎಸ್ಪಿ ನೇಮಗೌಡ ಹೆಸರಲ್ಲಿ ನಕಲಿ ಫೇಸ್‌ಬುಕ್ ಖಾತೆ; ವ್ಯಕ್ತಿಗೆ 25 ಸಾವಿರ ರೂ. ವಂಚನೆ
Waqf Property: ಆಡು ಮುಟ್ಟದ ಸೊಪ್ಪಿಲ್ಲ, ವಕ್ಫ್ ಮುಟ್ಟದ ಸ್ವತ್ತಿಲ್ಲ: ತೇಜಸ್ವಿ ಸೂರ್ಯ
Waqf issue: ಬಿಜೆಪಿ ಅಧಿಕಾರದಲ್ಲಿದ್ದಾಗ ಕತ್ತೆ ಕಾಯಿತಿದ್ದರಾ?: ಪ್ರಿಯಾಂಕ್ ಖರ್ಗೆ
MUST WATCH
ಹೊಸ ಸೇರ್ಪಡೆ
Pollution: ವಾಯುಮಾಲಿನ್ಯ ನಿಯಂತ್ರಣ ಸರಕಾರ ಇಚ್ಛಾಶಕ್ತಿ ಪ್ರದರ್ಶಿಸಲಿ
By Election: ಯೋಗೇಶ್ವರ್ ನಿಂದಿಸಿದ್ದ ಡಿ.ಕೆ.ಸುರೇಶ್ ಆಡಿಯೋ ಎಚ್‌ಡಿಕೆ ಬಿಡುಗಡೆ
By Election: ನಾಗೇಂದ್ರ, ಜಮೀರ್, ಡಿಕೆಶಿ ಮೇಲೆ ಚುನಾವಣಾ ಆಯೋಗ ಕಣ್ಣಿಡಲಿ: ಡಿವಿಎಸ್
Waqf: ಮುಸ್ಲಿಮರ ಗುರಿ ಮಾಡುವುದು ಬಿಟ್ಟರೆ ಬಿಜೆಪಿಗೆ ಬೇರೇನೂ ಇಲ್ಲ: ಸಚಿವ ದಿನೇಶ್
Maharashtra: ಸ್ತ್ರೀಯರಿಗೆ ಮಾಸಿಕ 3000, ರೈತರ ಸಾಲ ಮನ್ನಾ: ಎಂವಿಎ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.