ಮೈಸೂರು: ತನ್ನ ಪರಿಚಾರಕನನ್ನೇ ತುಳಿದು ಸಾಯಿಸಿದ ಮೃಗಾಲಯದ ಆನೆ
Team Udayavani, Aug 8, 2020, 6:14 AM IST
ಮೃಗಾಲಯದಲ್ಲಿ ತಾನು ಆರೈಕೆ ಮಾಡುತ್ತಿದ್ದ ಆನೆಯೊಂದಿಗೆ ಹರೀಶ್ (ಫೈಲ್ ಚಿತ್ರ)
ಮೈಸೂರು: ವಿಶ್ವವಿಖ್ಯಾತ ಮೈಸೂರು ಮೃಗಾಲಯದ ಆನೆಯೊಂದು ತನ್ನ ಪರಿಚಾರಕನನ್ನೇ ತುಳಿದು ಸಾಯಿಸಿರುವ ಘಟನೆ ಶುಕ್ರವಾರ ರಾತ್ರಿ ನಡೆದಿದೆ.
ಮೈಸೂರಿನ ಲಲಿತಾದ್ರಿಪುರದಲ್ಲಿ ವಾಸವಾಗಿದ್ದ 38 ವರ್ಷ ಪ್ರಾಯದ ಹರೀಶ್ ಎಂಬವರೇ ತಾವು ಸಲಹುತ್ತಿದ್ದ ಆನೆಯಿಂದ ಸಾಯಿಸಲ್ಪಟ್ಟವರಾಗಿದ್ದಾರೆ.
ಕಳೆದ ಐದು ದಿನಗಳಿಂದ ರಜೆ ಮೇಲೆ ತೆರಳಿದ್ದ ಹರೀಶ್ ಶುಕ್ರವಾರದಂದು ಕೆಲಸಕ್ಕೆ ಹಾಜರಾಗಿದ್ದರು.
ಈ ಹಿಂದಿನಂತೆಯೇ ಆನೆಯ ಮೈದಡವಿ ಹುಲ್ಲು ಹಾಕುವ ಸಂದರ್ಭದಲ್ಲಿ ಆನೆ ಹರೀಶ್ ಅವರನ್ನು ಸೊಂಡಿಲಿನಿಂದ ಎತ್ತಿ ನೆಲಕ್ಕೆ ಕೆಡವಿ ಹೊಸಕಿದೆ.
ಇದರಿಂದ ತಬ್ಬಿಬ್ಬಾದ ಸ್ಥಳದಲ್ಲಿದ್ದ ಇತರೇ ಸಿಬ್ಬಂದಿ ಕೂಡಲೇ ಹರೀಶನನ್ನು ಆನೆಯಿಂದ ಬಿಡಿಸಿ ತಕ್ಷಣವೇ ಗೋಪಾಲಗೌಡ ಆಸ್ಪತ್ರೆಗೆ ಕರೆದುಕೊಂಡು ಹೋಗಿ ದಾಖಲು ಮಾಡಿದ್ದಾರೆ.
ಆದರೆ ಆನೆ ತುಳಿತದಿಂದ ಗಂಭೀರವಾಗಿ ಗಾಯಗೊಂಡಿದ್ದ ಹರೀಶ್ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲೇ ಸಾವನ್ನಪ್ಪಿದರು ಎಂದು ಮೃಗಾಲಯದ ಮೂಲಗಳು ತಿಳಿಸಿವೆ.
ಈ ಘಟನೆಗೆ ಸಂಬಂಧಿಸಿದಂತೆ ನಗರದ ನಜರ್ ಬಾದ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hunsur: ಬೈಕ್‌ನಿಂದ ಬಿದ್ದು ಹಿಂಬದಿ ಸವಾರ ಸಾವು
Actor Health: ಸ್ವಲ್ಪ ಜರುಗಿದ ದರ್ಶನ್ ಬೆನ್ನುಮೂಳೆ; ತುರ್ತಾಗಿ ಆಪರೇಷನ್ ಇಲ್ಲ: ವೈದ್ಯರು
Name Road: ರಸ್ತೆಗೆ ಸಿದ್ದರಾಮಯ್ಯ ಹೆಸರಿಟ್ಟರೇ ತಪ್ಪೇನು?: ಪ್ರತಾಪ್ ಸಿಂಹ
Hunsur: ಕೆಲ ಗ್ರಾಮಗಳಲ್ಲಿ ಒಂಟಿ ಸಲಗದ ಉಪಟಳ; ಬೆಳೆ ನಾಶ, ರೈತರು ಕಂಗಾಲು
Congress Government: ಸಿದ್ದರಾಮಯ್ಯ ಅವಧಿಯಲ್ಲೇ ದ್ವೇಷದ ರಾಜಕಾರಣ ಬೇಸರ ತಂದಿದೆ: ಸೋಮಣ್ಣ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kasaragod: ಯೂತ್ ಕಾಂಗ್ರೆಸ್ ಕಾರ್ಯಕರ್ತರಿಬ್ಬರ ಕೊ*ಲೆ; ಇಂದು ತೀರ್ಪು; ಭಾರೀ ಬಂದೋಬಸ್ತು
Surathkal: ಸಿಲಿಂಡರ್ ಸ್ಫೋ*ಟ ಪ್ರಕರಣ; ಮತ್ತೋರ್ವ ಮಹಿಳೆಯ ಸಾವು
Daily Horoscope: ದೀರ್ಘಕಾಲದ ಸಮಸ್ಯೆಗಳಿಂದ ಬಿಡುಗಡೆ, ಅಪರಿಚಿತರೊಡನೆ ವಾದ ಬೇಡ
Vijay Hazare Trophy: ಅರುಣಾಚಲ ಎದುರಾಳಿ; ರಾಜ್ಯಕ್ಕೆ 4ನೇ ಜಯದ ನಿರೀಕ್ಷೆ
Afzalpur: ಹುಂಡಿ ನೋಟಿನಲ್ಲಿ “ನಮ್ಮ ಅತ್ತೆ ಬೇಗ ಸಾಯಬೇಕು’ ಬರಹ ಪತ್ತೆ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.