ಮೊದಲ ಹಂತದಲ್ಲಿ ಮೈತ್ರಿಗೆ 10 ಸ್ಥಾನ: ಸಿದ್ದು
Team Udayavani, Apr 19, 2019, 5:08 PM IST
ಮೈಸೂರು: ರಾಜ್ಯದಲ್ಲಿ ಮೊದಲ ಹಂತದಲ್ಲಿ ಮತದಾನ ನಡೆಯುತ್ತಿರುವ 14 ಕ್ಷೇತ್ರಗಳಲ್ಲೂ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಕೂಟಕ್ಕೆ ಉತ್ತಮ ವಾತಾವರಣ ವಿದ್ದು, 14 ಕ್ಷೇತ್ರಗಳ ಪೈಕಿ ಕನಿಷ್ಠ 10 ಕ್ಷೇತ್ರಗಳಲ್ಲಿ ಮೈತ್ರಿ ಪಕ್ಷದ ಅಭ್ಯರ್ಥಿಗಳು ಗೆಲುವು ಸಾಧಿಸಲಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದರು.
ಗುರುವಾರ ಲೋಕಸಭಾ ಚುನಾವಣೆಯಲ್ಲಿ ಮತ ಚಲಾಯಿಸುವ ಸಲುವಾಗಿ ಬೆಂಗಳೂರಿನಿಂದ ಆಗಮಿಸಿದ್ದ ಅವರು, ಪುತ್ರ ಡಾ.ಯತೀಂದ್ರ ಅವರೊಂದಿಗೆ ತಮ್ಮ ಹುಟ್ಟೂರು ಮೈಸೂರು ತಾಲೂಕಿನ ಸಿದ್ದರಾಮನ ಹುಂಡಿಗೆ ತೆರಳಿ, ತಮ್ಮ ಮನೆ ದೇವರು ಸಿದ್ದರಾಮೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ, ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮತಗಟ್ಟೆಯಲ್ಲಿ ಮತ ಚಲಾಯಿಸಿದರು.
ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲೋಕಸಭಾ ಚುನಾವಣೆಗೆ ರಾಜ್ಯದ 14 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ನಡೆಯುತ್ತಿದ್ದು, ಬೇಸಿಗೆ ಹಿನ್ನೆಲೆಯಲ್ಲಿ ಬಿಸಿಲು ಜಾಸ್ತಿ ಇದೆ. ಹೀಗಾಗಿ ಜನ ನಿಧಾನವಾಗಿ ಮತಗಟ್ಟೆಗೆ ಬಂದು ಮತದಾನ ಮಾಡುತ್ತಾರೆ. ನಮ್ಮೂರಲ್ಲಿ ಮತದಾನ ಯಾವಾಗಲೂ ಸ್ವಲ್ಪ ನಿಧಾನ. ಇಲ್ಲಿ ಶೇ.80 ರಿಂದ 90ರಷ್ಟು ಮತದಾನ ಆಗುತ್ತೆ. ಬಿಸಿಲು ಜಾಸ್ತಿ ಇದೆ, ಮಳೆ ಬರಲಿ ಅಂತ ಬೇಡಿಕೊಳ್ಳುತ್ತೇನೆ ಎಂದು ತಿಳಿಸಿದರು.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.