ಸಮೂಹ ಚಿತ್ರಕಲಾ ಪ್ರದರ್ಶನಕ್ಕೆ ಚಾಲನೆ
Team Udayavani, Nov 23, 2018, 11:57 AM IST
ಮೈಸೂರು: ಇತ್ತೀಚಿನ ದಿನಗಳಲ್ಲಿ ವಿದ್ಯಾರ್ಥಿಗಳು ಹೆಚ್ಚು ಸಮಯ ಮೊಬೈಲ್‌ನಲ್ಲಿ ತಲ್ಲೀನರಾಗುತ್ತಿದ್ದು, ಬಣ್ಣದ ಪ್ರಪಂಚವನ್ನು ಅರಿಯುವ ಆಸಕ್ತಿ ತೋರುತ್ತಿಲ್ಲ ಎಂದು ಕಾಲೇಜು ಶಿಕ್ಷಣ ಇಲಾಖೆ ಜಂಟಿ ನಿರ್ದೇಶಕ ಆರ್.ಮೂಗೇಶಪ್ಪ ಬೇಸರ ವ್ಯಕ್ತಪಡಿಸಿದರು.
ವಿಜಯನಗರದ 2ನೇ ಹಂತದ ಕಲಾನಿಕೇತನ ಆರ್ಟ್ ಗ್ಯಾಲರಿಯಲ್ಲಿ ಆಯೋಜಿಸಿರುವ ಏಳು ದಿನಗಳ ಸಮೂಹ ಚಿತ್ರಕಲಾ ಪ್ರದರ್ಶನಕ್ಕೆ ಗುರುವಾರ ಚಾಲನೆ ನೀಡಿ ಮಾತನಾಡಿದ ಅವರು, ಬಣ್ಣದ ಮೇಲೆ ಬದುಕು ನಿಂತಿದ್ದು, ಬಣ್ಣವಿಲ್ಲದಿದ್ದರೆ ಬದುಕು ನಶ್ವರ. ಚಿತ್ರಕಲೆ ಮನುಷ್ಯನ ಜೀವನದಲ್ಲಿ ಮುಖ್ಯ ಪಾತ್ರವಹಿಸುತ್ತದೆ.
ಕಲಾವಿದರು ತಮ್ಮಲ್ಲಿ ಸುಪ್ತವಾಗಿರುವ ಪ್ರತಿಬಿಂಬ ಹೊರಹಾಕಲು ಚಿತ್ರರಚಿಸಿ ಪ್ರದರ್ಶನ ಮಾಡುತ್ತಿದ್ದು, ಆರ್ಟ್ ಆಫ್ ಯೂನಿಟಿ ಸಂಘ ರಚಿಸಿ, ಚಿತ್ರಕಲೆ ಪ್ರದರ್ಶಿಸುವುದು ಸುಲಭದ ಕೆಲಸವಲ್ಲ. ಆದರೆ, ಇತ್ತೀಚಿನ ದಿನಗಳಲ್ಲಿ ವಿದ್ಯಾರ್ಥಿಗಳು ಮೊಬೈಲ್‌ನಲ್ಲಿ ತಲ್ಲೀನರಾಗುತ್ತಿದ್ದು, ಬಣ್ಣದ ಪ್ರಪಂಚವನ್ನು ಅರಿಯುವುದಕ್ಕೆ ಹೋಗುತ್ತಿಲ್ಲ. ಇದರಿಂದಾಗಿ ಒಂದೊಮ್ಮೆ ಕಲೆ ತನ್ನತನವನ್ನು ಕಳೆದುಕೊಂಡರೆ ಕಲಾವಿದರಿಗೆ ನೋವಾಗಲಿದ್ದು, ಇದನ್ನು ಪುನರ್ ನಿರ್ಮಿಸುವುದು ಕಷ್ಟಕರ ಎಂದರು.
ಪ್ರದರ್ಶನದಲ್ಲಿ ವಿವಿಧ ಕಲಾವಿದರು ರಚಿಸಿರುವ ವೈವಿಧ್ಯತೆ ಸಾರುವ ಚಿತ್ರಗಳು ನೋಡುಗರನ್ನು ಸೆಳೆಯುವಂತಿವೆ. ವಿಜಯಪುರದಿಂದ ಪಿ.ಎಸ್.ಕಡೆಮನಿ, ತುಮಕೂರಿನಿಂದ ಕಿಶೋರ್ ಕುಮಾರ್, ಹಾಸನದಿಂದ ಬಿ.ಎಸ್.ದೇಸಾಯಿ, ಧಾರವಾಡದಿಂದ ಗಾಯತ್ರಿ ದೇಸಾಯಿ, ಮಧು ದೇಸಾಯಿ, ಬೆಂಗಳೂರಿನಿಂದ ವೇಣುಗೋಪಾಲ್ ಮತ್ತು ಮೈಸೂರಿನಿಂದ ಡಾ.ವಿಠ್ಠ ಲರೆಡ್ಡಿ ಚುಳಕಿ ಅವರು ತಾವು ಬಿಡಿಸಿದ ಚಿತ್ರಗಳನ್ನು ಪ್ರದರ್ಶನಕ್ಕೆ ಇರಿಸಿದ್ದು, ಒಂದೊಂದು ರೀತಿಯ ವಿಶೇಷತೆಯಿಂದ ಕೂಡಿರುವ ಈ ಚಿತ್ರಗಳು ರಾಜ್ಯದ ವೈವಿಧ್ಯತೆಯನ್ನು ಸಾರುತ್ತಿವೆ.
ಕಾರ್ಯಕ್ರಮದಲ್ಲಿ ಜಿಲ್ಲಾ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಕೆ.ಜೆ.ಲೋಕೇಶ್ ಬಾಬು, ಕಲಾನಿಕೇತನ ಸ್ಕೂಲ್ ಆಫ್ ಆರ್ಟ್ ಪ್ರಾಚಾರ್ಯ ಕೆ.ಸಿ.ಮಹದೇವಶೆಟ್ಟಿ ಇತರರು ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hunsur: ಬೈಕ್‌ನಿಂದ ಬಿದ್ದು ಹಿಂಬದಿ ಸವಾರ ಸಾವು
Actor Health: ಸ್ವಲ್ಪ ಜರುಗಿದ ದರ್ಶನ್ ಬೆನ್ನುಮೂಳೆ; ತುರ್ತಾಗಿ ಆಪರೇಷನ್ ಇಲ್ಲ: ವೈದ್ಯರು
Name Road: ರಸ್ತೆಗೆ ಸಿದ್ದರಾಮಯ್ಯ ಹೆಸರಿಟ್ಟರೇ ತಪ್ಪೇನು?: ಪ್ರತಾಪ್ ಸಿಂಹ
Hunsur: ಕೆಲ ಗ್ರಾಮಗಳಲ್ಲಿ ಒಂಟಿ ಸಲಗದ ಉಪಟಳ; ಬೆಳೆ ನಾಶ, ರೈತರು ಕಂಗಾಲು
Congress Government: ಸಿದ್ದರಾಮಯ್ಯ ಅವಧಿಯಲ್ಲೇ ದ್ವೇಷದ ರಾಜಕಾರಣ ಬೇಸರ ತಂದಿದೆ: ಸೋಮಣ್ಣ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Havyaka Sammelana; ಅಡಿಕೆ ಬೆಳೆಗಾರರ ಹಿತ ರಕ್ಷಣೆಗೆ ಕೇಂದ್ರ ಬದ್ಧ: ಸಚಿವ ಜೋಶಿ
Udupi; ಗೀತಾರ್ಥ ಚಿಂತನೆ 138 : ಅಭಿಮಾನತ್ಯಾಗವೇ ಮೋಕ್ಷದ ಮೊದಲ ಮೆಟ್ಟಿಲು
Manmohan Singh ಅಂತ್ಯಕ್ರಿಯೆ ಸ್ಮಾರಕ ನಿರ್ಮಿಸಬಹುದಾದ ಸ್ಥಳದಲ್ಲಿ ನಡೆಸಲು ಖರ್ಗೆ ಮನವಿ
Kasaragod Crime News: ಅವಳಿ ಪಾಸ್‌ಪೋರ್ಟ್; ಕೇಸು ದಾಖಲು
Traffic; ಉಡುಪಿ ನಗರದಲ್ಲಿ 5 ದಿನ ರಸ್ತೆ ಮಾರ್ಗಗಳಲ್ಲಿ ಮಾರ್ಪಾಡು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.