ವಿಷ್ಣು ಸ್ಮಾರಕ ನಿರ್ಮಾಣ ಕಾರ್ಯಕ್ಕೆ ಚಾಲನೆ
Team Udayavani, Jul 2, 2019, 3:00 AM IST
ಮೈಸೂರು: ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ನಟ ವಿಷ್ಣುವರ್ಧನ್ ಅವರ ಸ್ಮಾರಕ ನಿರ್ಮಾಣ ಕಾಮಗಾರಿಯನ್ನು ಪೊಲೀಸ್ ಭದ್ರತೆಯಲ್ಲಿ ಕೈಗೊಳ್ಳಲಾಗಿದೆ.
ಮೈಸೂರಿನ ಎಚ್.ಡಿ.ಕೋಟೆ ರಸ್ತೆಯಲ್ಲಿರುವ ಹಾಲಾಳು ಗ್ರಾಮದಲ್ಲಿ ವಿಷ್ಣು ಸ್ಮಾರಕ ನಿರ್ಮಾಣಕ್ಕೆ ಸರ್ಕಾರ 5 ಎಕರೆ ಜಮೀನು ಮಂಜೂರು ಮಾಡಿ, ವಿಷ್ಣು ಸ್ಮಾರಕ ನಿರ್ಮಾಣ ಸಮಿತಿಗೆ ಹಸ್ತಾಂತರಿಸಿತ್ತು. ಆದರೆ, ಆ ಜಮೀನಿನಲ್ಲಿ ವ್ಯವಸಾಯ ಮಾಡುತ್ತಿದ್ದ ರೈತರು ಜಮೀನು ಬಿಟ್ಟು ಕೊಡುವುದಿಲ್ಲ ಎಂದು ನ್ಯಾಯಾಲಯದ ಮೆಟ್ಟಿಲೇರಿದ್ದರು.
ಇದರಿಂದಾಗಿ ಸ್ಮಾರಕ ನಿರ್ಮಾಣ ನೆನೆಗುದಿಗೆ ಬಿದ್ದಿತ್ತು. ಆದರೆ, ಆ ರೈತರ ಹೆಸರಿಗೆ ಜಮೀನಿನ ಖಾತೆ ಆಗದಿರುವ ಹಿನ್ನೆಲೆಯಲ್ಲಿ ಕೋರ್ಟ್ ಇವರ ಮನವಿಗೆ ಮನ್ನಣೆ ನೀಡದೆ ಸ್ಮಾರಕ ನಿರ್ಮಾಣಕ್ಕೆ ಹಸಿರು ನಿಶಾನೆ ತೋರಿತ್ತು. ಈ ಹಿನ್ನೆಲೆಯಲ್ಲಿ ನಟಿ ಭಾರತಿ ವಿಷ್ಣುವರ್ಧನ್ ಹಾಗೂ ಅಳಿಯ ಅನಿರುದ್ಧ ಅವರು ಸೋಮವಾರ ಆಗಮಿಸಿ ಸ್ಮಾರಕ ನಿರ್ಮಾಣ ಜಾಗದಲ್ಲಿ ಪೂಜೆ ನೆರವೇರಿಸಿದರು.
ಜಿಲ್ಲಾಡಳಿತದ ವತಿಯಿಂದ ಜಾಗವನ್ನು ಜೆಸಿಬಿ ಮೂಲಕ ಸ್ವತ್ಛಗೊಳಿಸುತ್ತಿದ್ದು, ಈ ಜಮೀನಿನಲ್ಲಿ ವ್ಯವಸಾಯ ಮಾಡುತ್ತಿದ್ದ ರೈತರು ಹಲವು ಬಾರಿ ಕಾಮಗಾರಿಗೆ ಅಡ್ಡಿಪಡಿಸಿದ್ದ ಹಿನ್ನೆಲೆಯಲ್ಲಿ ಪೊಲೀಸ್ ಭದ್ರತೆಯಲ್ಲಿ ಕಾಮಗಾರಿಯನ್ನು ಕೈಗೊಳ್ಳಲಾಗಿದೆ.
ಭಾರತಿ ವಿಷ್ಣುವರ್ಧನ್ ಮಾತನಾಡಿ, ಸ್ಮಾರಕಕ್ಕೆ ಸರ್ಕಾರದಿಂದ ಈ ಹಣ ಹಂತ ಹಂತವಾಗಿ ಬಿಡುಗಡೆ ಆಗಲಿದೆ. ಮೊದಲು ನಾವು ಈ ಜಾಗದಲ್ಲಿದ್ದವರಿಗೆ ಮಾನವೀಯತೆ ದೃಷ್ಟಿಯಿಂದ ಹಣ ಕೊಡುವುದಾಗಿ ಹೇಳಿದ್ದೆವು. ಆದರೆ, ಅವರು ಅಂದು ಆಗೋದಿಲ್ಲ ಹೋರಾಟ ಮಾಡ್ತೀವಿ ಅಂದು ಹೋದರು. ಆದರೆ ಇದು ಸರ್ಕಾರದ ಜಾಗವಾಗಿರುವುದರಿಂದ ಈಗ ಅವರಿಗೆ ಮಾನವೀಯತೆಯಿಂದ ಹಣ ಕೊಡುವ ಅವಶ್ಯಕತೆ ಇಲ್ಲ ಎಂದರು.
ವಿಷ್ಣುವರ್ಧನ್ ಅಳಿಯ ಅನಿರುದ್ಧ ಮಾತನಾಡಿ, ಮೈಸೂರಿನಲ್ಲಿ ಸ್ಮಾರಕ ಆಗುತ್ತಿರುವುದು ತುಂಬಾ ಖುಷಿಯಾಗಿದೆ. ದಶಕಗಳ ಹೋರಾಟಕ್ಕೆ ಇಂದು ಫಲ ಸಿಕ್ಕಿದೆ ಎಂದರು. ಮೈಸೂರು ತಾಲೂಕು ತಹಶೀಲ್ದಾರ್ ಟಿ.ರಮೇಶ್‌ಬಾಬು, ಮತ್ತಿತರೆ ಅಧಿಕಾರಿಗಳು ಹಾಜರಿದ್ದರು.
ಕಾಮಗಾರಿ ಸಂತಸ ತಂದಿದೆ: ಇದು 9 ತಿಂಗಳ ಪ್ರಸವ ಇದ್ದಂತೆ. ಮಗು ಹುಟ್ಟಿದ ನಂತರದ ಸಂತಸ ವರ್ಣಿಸಲಾಗದು, ಅದೇ ರೀತಿ ಈ ಕಾರ್ಯ ಕೂಡ. ಸ್ಮಾರಕ ವಿಷ್ಣು ಅಭಿಮಾನಿಗಳು ಹಾಗೂ ಸಾರ್ವಜನಿಕರ ಸ್ವತ್ತು. ಎಲ್ಲ ಅಡೆತಡೆ ಬಳಿಕ ವಿಷ್ಣು ಸ್ಮಾರಕ ಕಾಮಗಾರಿ ಶುರುವಾಗಿರುವುದು ಸಂತಸ ತಂದಿದೆ. ವಿಷ್ಣು ಸ್ಮಾರಕಕ್ಕೆ ಬೇಕಾದ ಯೋಜನೆಗಳೂ ನಮ್ಮಲ್ಲಿದ್ದು, 11 ಕೋಟಿ ವೆಚ್ಚ ತಗುಲಬಹುದು. ಈ ಸ್ಮಾರಕದಲ್ಲಿ ಮ್ಯೂಸಿಯಂ, ಚಲನಚಿತ್ರ ತರಬೇತಿ ಸಂಸ್ಥೆ ಎಲ್ಲವೂ ಇರಲಿದೆ ಎಂದು ಭಾರತಿ ವಿಷ್ಣುವರ್ಧನ್ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ
Bengaluru: ಅನುಮತಿ ಇಲ್ಲದೇ ಅಲೋಪತಿ ಚಿಕಿತ್ಸೆ; 3 ಕ್ಲಿನಿಕ್‌ಗಳ ವಿರುದ್ಧ ಕೇಸ್
ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ
Bengaluru: ಮಹಿಳೆಯರಿಗೆ ನೌಕರಿ ಆಮಿಷ ತೋರಿಸಿ ವೇಶ್ಯಾವಾಟಿಕೆಗೆ ಬಳಕೆ
Driver: ಹೆಚ್ಚು ಪ್ರಯಾಣದ ದರ ನೀಡಲು ಒತ್ತಡ, ಹಲ್ಲೆಗೆ ಯತ್ನ: ಕ್ಯಾಬ್ ಚಾಲಕನ ವಿರುದ್ಧ ದೂರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.