ಮಾಸ್ಕ್ ಧರಿಸದ ಚಾಲಕನಿಂದ ಪೇದೆ ಮೇಲೆ ಹಲ್ಲೆ


Team Udayavani, Apr 25, 2021, 2:54 PM IST

ಮಾಸ್ಕ್ ಧರಿಸದ ಚಾಲಕನಿಂದ ಪೇದೆ ಮೇಲೆ ಹಲ್ಲೆ

ಮೈಸೂರು : ಮಾಸ್ಕ್ ಧರಿಸದ ಟೆಂಪೊ ಚಾಲಕನೊಬ್ಬ ಪೊಲೀಸ್‌ ಪೇದೆಯ ಮೇಲೆ ಹಲ್ಲೆ ನಡೆಸಿ ಪರಾರಿಯಾಗಿದ್ದಾನೆ. ನಗರದ ರಿಂಗ್‌ ರಸ್ತೆಯ ದೇವೇಗೌಡ ವೃತ್ತದ ಬಳಿ ಈ ಘಟನೆ ಜರುಗಿದೆ. ಸಿದ್ದಾರ್ಥನಗರ ಸಂಚಾರ ಠಾಣೆ ಪೇದೆ ಮಾದೇಶ್‌ ಅವರ ಕೈ ತಿರುಚಿ, ಹಲ್ಲೆ ನಡೆಸಿ ಚಾಲಕ ಪರಾರಿಯಾಗಿದ್ದಾನೆ.

ಮಾಸ್ಕ್ ಧರಿಸದೇ ಟೆಂಪೊ ಚಾಲನೆ ಮಾಡಿಕೊಂಡು ಬಂದ ಈತನನ್ನು ಹಿಡಿದ ಎಎಸ್‌ ಐ ಚೆಲುವರಾಜು, ದಂಡ ವಿಧಿಸಲು ಮುಂದಾಗಿದ್ದಾರೆ. ಈ ವೇಳೆ ಆರೋಪಿ ಚಾಲಕ ದಂಡ ಕಟ್ಟುವುದಿಲ್ಲ ಎಂದು ಮಾತಿನಚಕಮಕಿ ನಡೆಸಿದ್ದಾನೆ. ಈ ದೃಶ್ಯಗಳನ್ನು ಪೇದೆ ಮಾದೇಶ್‌ ತನ್ನ ಮೊಬೈಲ್‌ನಲ್ಲಿ ಚಿತ್ರೀಕರಿಸಿಕೊಳ್ಳುತ್ತಿರುವಾಗ ಚಾಲಕಮಾದೇಶ್‌ ಅವರ ಎಡಗೈ ತಿರುಚಿ, ಹಲ್ಲೆನಡೆಸಿ ಪರಾರಿಯಾಗಿದ್ದಾನೆ. ಈ ಬಗ್ಗೆ ಆಲನಹಳ್ಳಿ ಠಾಣೆಯಲ್ಲಿ ಪ್ರಕರಣದಾಖಲಾಗಿದ್ದು, ಆರೋಪಿ ಚಾಲಕನಿಗಾಗಿ ಹುಡುಕಾಟ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ: ಯುವಕನಿಗೆ ಜೈಲು :

ಮೈಸೂರು: ಮೂವರು ಬಾಲಕರ ಮೇಲೆ ಲೈಂಗಿಕದೌರ್ಜನ್ಯ ಎಸಗಿದ 19 ವರ್ಷದ ಯುವಕನಿಗೆ ಮೈಸೂರಿನ ಪೋಕ್ಸೋ ವಿಶೇಷ ನ್ಯಾಯಾಲಯ 10 ವರ್ಷಗಳ ಕಠಿಣ ಶಿಕ್ಷೆ ವಿಧಿಸಿದೆ.

ಈ ಯುವಕ 2019ರಲ್ಲಿ 10, 11 ಹಾಗೂ 14 ವರ್ಷದ ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ನ್ಯಾಯಾಲಯದಲ್ಲಿ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಧೀಶೆ ಬಿ.ಎಸ್‌.ಜಯಶ್ರೀ ಅವರು ಯುವಕನಿಗೆ ಶಿಕ್ಷೆ ವಿಧಿಸಿದ್ದಾರೆ. ಜತೆಗೆ, ಸಂತ್ರಸ್ತರ ಪರಿಹಾರ

ನಿಧಿಯಿಂದ ಸಂತ್ರಸ್ತ ಬಾಲಕರಿಗೆ ತಲಾ 3 ಲಕ್ಷ ರೂ. ಪರಿಹಾರ ನೀಡುವಂತೆ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರಕ್ಕೆ ಆದೇಶಿಸಿದ್ದಾರೆ. ಸರ್ಕಾರದ ಪರವಾಗಿ ವಿಶೇಷ ಸರಕಾರಿ ಅಭಿಯೋಜಕರಾದ ಎಂ.ಎಸ್‌.ಮಂಜುಳಾ ಅವರ ವಾದ ಮಂಡಿಸಿದ್ದರು.

ಟಾಪ್ ನ್ಯೂಸ್

DK–BJP-Protest

Mangaluru: ತುಳುನಾಡಿನ ದೈವ-ದೇವರ ಜಾಗ ಉಳಿಸಲು ಹೋರಾಟ: ಸಂಸದ ಚೌಟ

Kharge

Adani ಕುಟುಂಬ ವಶಕ್ಕೆ ಪಡೆದು ತನಿಖೆ ನಡೆಸಲಿ : ಖರ್ಗೆ

Udupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚUdupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚ

Udupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚ

Pro-Kabaddi League: ಯುಪಿ ಯೋಧಾಸ್‌ಗೆ ಶರಣಾದ ತಮಿಳ್‌ ತಲೈವಾಸ್‌

Pro-Kabaddi League: ಯುಪಿ ಯೋಧಾಸ್‌ಗೆ ಶರಣಾದ ತಮಿಳ್‌ ತಲೈವಾಸ್‌

Adelaide Test: ಫಿಲಿಪ್‌ ಹ್ಯೂಸ್‌ ಸ್ಮರಣೆ

Adelaide Test: ಫಿಲಿಪ್‌ ಹ್ಯೂಸ್‌ ಸ್ಮರಣೆ

China Badminton: ಚಿರಾಗ್‌- ಸಾತ್ವಿಕ್‌ ಸೆಮಿಫೈನಲ್‌ಗೆ

China Badminton: ಚಿರಾಗ್‌- ಸಾತ್ವಿಕ್‌ ಸೆಮಿಫೈನಲ್‌ಗೆ

ಬೈಡೆನ್‌ “ಮರೆಗುಳಿ’ತನ ಕುರಿತ ಹೇಳಿಕೆ: ರಾಹುಲ್‌ ಕ್ಷಮೆಗೆ ವೈದ್ಯರ ಪಟ್ಟು

Joe Biden “ಮರೆಗುಳಿ’ತನ ಕುರಿತ ಹೇಳಿಕೆ: ರಾಹುಲ್‌ ಕ್ಷಮೆಗೆ ವೈದ್ಯರ ಪಟ್ಟು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌

H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!

H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!

6-hunsur

Hunsur: ರಾಜ್ಯದ ವಿವಿಧೆಡೆ ಕಳ್ಳತನ ಮಾಡಿದ್ದ ಆರೋಪಿ ಬಂಧನ

Lokayukta police: ಮುಡಾ ಮಾಜಿ ಆಯುಕ್ತ ನಟೇಶ್‌ ವಿಚಾರಣೆ

Lokayukta police: ಮುಡಾ ಮಾಜಿ ಆಯುಕ್ತ ನಟೇಶ್‌ ವಿಚಾರಣೆ

Yathindra Siddaramaiah: ಹಿಂದೂ ರಾಷ್ಟ್ರ ಮಾಡಲು ಬಿಡಬಾರದು

Yathindra Siddaramaiah: ಹಿಂದೂ ರಾಷ್ಟ್ರ ಮಾಡಲು ಬಿಡಬಾರದು

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Suside-Boy

Karkala: ಬೋಳ ಗ್ರಾಮದ ವ್ಯಕ್ತಿ ಆತ್ಮಹತ್ಯೆ

Suside-Boy

Mudubidre: ಅಂತಿಮ ಬಿಬಿಎಂ ವಿದ್ಯಾರ್ಥಿ ಆತ್ಮಹತ್ಯೆ

Suside-Boy

Belthangady: ಕಲ್ಮಂಜ: ರಿಕ್ಷಾ ಚಾಲಕ ಆತ್ಮಹತ್ಯೆ

DK–BJP-Protest

Mangaluru: ತುಳುನಾಡಿನ ದೈವ-ದೇವರ ಜಾಗ ಉಳಿಸಲು ಹೋರಾಟ: ಸಂಸದ ಚೌಟ

Suside-Boy

Punjalakatte: ಕೊಯಿಲದ ವ್ಯಕ್ತಿ ಹಾಸನದಲ್ಲಿ ನಿಗೂಢ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.