ಕಾಲೇಜಿನಲ್ಲಿ ಪರೀಕ್ಷೆ ವೇಳೆ ಕುಸಿದ ಛಾವಣಿಗಾರೆ
Team Udayavani, Feb 11, 2021, 4:01 PM IST
ಮೈಸೂರು: ನಗರದ ಮಹಾರಾಜ ಕಾಲೇಜಿನ ಕೊಠಡಿಯೊಂದರ ಛಾವಣಿಯ ಗಾರೆ ಕುಸಿದು ಮೂವರು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ. ಬುಧವಾರ ಕಾಲೇಜಿನ ನ್ಯಾಯ ವಿಜ್ಞಾನ ಮತ್ತು ಅಪರಾಧ ಶಾಸ್ತ್ರ ವಿಭಾಗದ ಕೊಠಡಿಯಲ್ಲಿ 24 ಮಂದಿ ವಿದ್ಯಾರ್ಥಿಗಗಳು ಅಂತರಿಕ ಪರೀಕ್ಷೆ ಬರೆಯುತ್ತಿರುವಾಗ ಛಾವಣಿಯೆ ಗಾರೆ ಕುಸಿದು ಬಿದ್ದಿದೆ.
ಈ ಸಂದರ್ಭದಲ್ಲಿ ಎಂಎಸ್‌ಸಿ ಕ್ರಿಮಿನಾಲಜಿ ವಿಭಾಗದ ವಿಶಾಲ್, ಯಶವಂತ್, ಎ.ಸಲೀಂ ಗಾಯಗೊಂಡಿದ್ದಾರೆ. ಛಾವಣಿಯ ಒಂದು ಭಾಗದ ಸುಮಾರು ಮೂರು ಅಡಿಯ ಗಾರೆ ಕುಸಿದು ವಿದ್ಯಾರ್ಥಿಗಳ ಮೇಲೆ ಬಿದ್ದ ಪರಿಣಾಮ ವಿದ್ಯಾರ್ಥಿಗಳ ತಲೆ, ಕೈ ಹಾಗೂ ಭುಜದ ಭಾಗಕ್ಕೆ ಪೆಟ್ಟಾಗಿದೆ. ತಕ್ಷಣವೇ ಗಾಯಗೊಂಡವರಿಗೆ ಪ್ರಥಮ ಚಿಕಿತ್ಸೆ ನೀಡಿ ಕಾಮಾಕ್ಷಿ ಆಸ್ಪತ್ರೆಗೆ ದಾಖಲಿಸಲಾಯಿತು. ವಿದ್ಯಾರ್ಥಿಗಳು ಅಪಾಯದಿಂದ ಪಾರಾಗಿದ್ದು, ಚಿಕಿತ್ಸೆ ನೀಡಿ ಮನೆಗೆ ಕಳುಹಿಸಲಾಯಿತು.
ಕುಲಪತಿ ಪರಿಶೀಲನೆ: ಮಹಾರಾಜ ಕಾಲೇಜಿನಲ್ಲಿ ಛಾವಣಿ ಗಾರೆ ಕುಸಿತ ವಿಷಯ ತಿಳಿದು ಮೈಸೂರು ವಿಶ್ವ ವಿದ್ಯಾಲಯದ ಕುಲಪತಿ ಪ್ರೊ.ಜಿ.ಹೇಮಂತ ಕುಮಾರ್ ಹಾಗೂ ಕುಲಸಚಿವ ಪ್ರೊ.ಆರ್.ಶಿವಪ್ಪ ಸ್ಥಳಕ್ಕೆ ಭೇಟಿ ನೀಡಿ ವಿದ್ಯಾರ್ಥಿಗಳಿಗೆ ಧೈರ್ಯ ತುಂಬಿದರು. ನೂರು ವರ್ಷಕ್ಕೂ ಹೆಚ್ಚು ಹಳೆಯದಾದ ಕಟ್ಟಡ ಇದಾಗಿದ್ದು, ಇದನ್ನು ಪಾರಂಪರಿಕ ಕಟ್ಟಡ ಪಟ್ಟಿಗೆ ಸೇರಿಸಲಾಗಿದೆ. ಹಾಗಾಗಿ ತಜ್ಞರನ್ನು ಸಂಪರ್ಕಿಸಿ ಕಾಮಗಾರಿ ಕೈಗೊಳ್ಳ ಲಾಗುವುದು ಎಂದು ಹೇಳಿದರು.
ಕಟ್ಟಡದ ಹೊರಭಾಗದಲ್ಲಿ ಗಿಡಗಳನ್ನು ತೆರವು ಮಾಡಲಾಗುತ್ತಿದೆ. ಮೈಸೂರು ವಿವಿ ಆವರಣದಲ್ಲಿರುವ ಜಯಲಕ್ಷ್ಮೀವಿಲಾಸ ಅರಮನೆಯಲ್ಲಿ ಕೂಡ ಇದೇ ರೀತಿ ಅಗಿದ್ದು, ತಜ್ಞರ ಸಮಿತಿ ರಚಿಸಿ ವರದಿ ಕೇಳಿದ್ದೇವೆ. ಅದರೊಂದಿಗೆ ಈ ಕಟ್ಟಡದ ಕಾಮಗಾರಿಯನ್ನು ಕೈಗೆತ್ತಿಕೊಳ್ಳಲು ತೀರ್ಮಾನಿಸಲಾಗುವುದು. ಸದ್ಯಕ್ಕೆ\ ಪರೀಕ್ಷೆ ಮುಂದೂಡಿ ತರಗತಿಗಳನ್ನು ಬೇರೆಡೆಗೆ ಸ್ಥಳಾಂತರಿಸಲಾಗುವುದು ಎಂದು ಹೇಳಿದರು. ಛಾವಣಿ ಮೇಲ್ಭಾಗ ಶಿಥಿಲಗೊಂಡಿದ್ದರಿಂದ ದುರಸ್ತಿ ಕಾರ್ಯ ನಡೆಯುತ್ತಿತ್ತು. ದುರಸ್ತಿ ಕಾರ್ಯ ನಡೆಯುತ್ತಿರುವಾಗಲೇ ಕೆಳ ಭಾಗದಲ್ಲಿ ಛಾವಣಿ ಕುಸಿದಿರುವುದು ಆತಂಕಕ್ಕೆ ಕಾರಣವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hunsur: ಬೈಕ್‌ನಿಂದ ಬಿದ್ದು ಹಿಂಬದಿ ಸವಾರ ಸಾವು
Actor Health: ಸ್ವಲ್ಪ ಜರುಗಿದ ದರ್ಶನ್ ಬೆನ್ನುಮೂಳೆ; ತುರ್ತಾಗಿ ಆಪರೇಷನ್ ಇಲ್ಲ: ವೈದ್ಯರು
Name Road: ರಸ್ತೆಗೆ ಸಿದ್ದರಾಮಯ್ಯ ಹೆಸರಿಟ್ಟರೇ ತಪ್ಪೇನು?: ಪ್ರತಾಪ್ ಸಿಂಹ
Hunsur: ಕೆಲ ಗ್ರಾಮಗಳಲ್ಲಿ ಒಂಟಿ ಸಲಗದ ಉಪಟಳ; ಬೆಳೆ ನಾಶ, ರೈತರು ಕಂಗಾಲು
Congress Government: ಸಿದ್ದರಾಮಯ್ಯ ಅವಧಿಯಲ್ಲೇ ದ್ವೇಷದ ರಾಜಕಾರಣ ಬೇಸರ ತಂದಿದೆ: ಸೋಮಣ್ಣ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.