ಗ್ರಾಪಂ ವ್ಯಾಪ್ತಿಗಳಲ್ಲಿ ಅಭಿವೃದ್ಧಿ ವೇಗ ಹೆಚ್ಚಿಸಿ


Team Udayavani, May 15, 2017, 12:47 PM IST

mys4.jpg

ಹುಣಸೂರು: ಸಂಸದ್‌ ಆದರ್ಶ ಗ್ರಾಮ ಯೋಜನೆಯಡಿ ಆಯ್ಕೆಯಾಗಿರುವ ಮೈಸೂರು ಜಿಲ್ಲೆಯ ಹುಣಸೂರು ತಾಲೂಕು ಕರೀಮುದ್ದನಹಳ್ಳಿ ಗ್ರಾಪಂ ವ್ಯಾಪ್ತಿಯ ಗದ್ದಿಗೆಯಲ್ಲಿ ಸಂಸದ ಪ್ರತಾಪ ಸಿಂಹ ಪ್ರಗತಿ ಪರಿಶೀಲನೆ ನಡೆಸಿದರು.

ತಾಲೂಕಿನ ಗದ್ದಿಗೆ ಶ್ರೀ ಕೆಂಡಗಣ್ಣೇಶ್ವರಸ್ವಾಮಿ ಕಲ್ಯಾಣಮಂಟಪದಲ್ಲಿ ಆಯೋಜಿಸಿದ್ದ ಗ್ರಾಮೀಣ ರೈತರಿಗೆ ಮತ್ತು ಉದ್ದಿಮೆದಾರರಿಗೆ ಹಣ್ಣು ಮತ್ತು ತರಕಾರಿ ಬೆಳೆಗಳ ಸಂಸ್ಕರಣೆ ಕುರಿತ ಪ್ರಾತ್ಯಕ್ಷತೆ ಉದ್ಘಾಟಿಸಿ, ಸಂಸದ್‌ ಆದರ್ಶ ಗ್ರಾಮ ಯೋಜನೆಗಳ ಅನುಷ್ಠಾನ ಬಗೆಗಿನ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದರು.

ರಾಜ್ಯ ಮತ್ತು ಕೇಂದ್ರ ಸರ್ಕಾರದಿಂದ ಬಿಡುಗಡೆಯಾಗಿರುವ ವಿವಿಧ ಯೋಜನೆಗಳ ಸವಲತ್ತನ್ನು ಕರೀಮುದ್ದನಹಳ್ಳಿ ಗ್ರಾಪಂ ವ್ಯಾಪ್ತಿಯ ಕುಟುಂಬಗಳಿಗೆ ವಿತರಿಸಲು ಸೂಕ್ತ ವ್ಯವಸ್ಥೆ ಕಲ್ಪಿಸಿ, ಅಧಿಕಾರಿಗಳು ಗ್ರಾಪಂ ವ್ಯಾಪ್ತಿಯ ಗ್ರಾಮಗಳ ಅಭಿವೃದ್ಧಿಯ ವೇಗ ಹೆಚ್ಚಿಸಬೇಕಿದೆ. ಸರಕಾರದಲ್ಲಿ ಎಲ್ಲ ಜನಾಂಗಕ್ಕೂ ಸಾಕಷ್ಟು ಸೌಲಭ್ಯಗಳನ್ನು ಕಲ್ಪಿಸಿದ್ದು, ಅರ್ಹರಿಗೆ ತಲುಪಿಸುವ ಕಾರ್ಯವನ್ನು ಅಧಿಕಾರಿಗಳು ಮಾಡಬೇಕಿದ್ದು, ಇನ್ನಾದರೂ ಚುಕುರುಗೊಳಿಸಿ ಎಂದರು.

ಕಳೆದ ಸಾಲಿನಲ್ಲಿ ಕರೀಮುದ್ದನಹಳ್ಳಿ ಗ್ರಾಪಂ ವ್ಯಾಪ್ತಿಯಲ್ಲಿ 600 ಸಸಿಗಳನ್ನು ನೆಡಲಾಗಿತ್ತೆಂದು ಮಾಹಿತಿ ನೀಡಿದ್ದಿರಾ, ಅದರಲ್ಲಿ ಬದುಕಿರುವ ಸಸಿಗಳೆಷ್ಟೆ ಎಂಬ ಸಂಸದರ ಪ್ರಶ್ನೆಗೆ ನಿರುತ್ತರರಾದ ಅಧಿಕಾರಿಗಳ ವರ್ತನೆಗೆ ಬೇಸತ್ತು, ನರೇಗಾ ಯೋಜನೆಯಲ್ಲಿ ತೋರುವ ಉತ್ಸಾಹ ರಸ್ತೆ ಬದಿಯಲ್ಲಿ ಜನರಿಗೆ ನೆರಳು, ಅಂತರ್ಜಲ ವೃದ್ಧಿಸಲು ಸಹಕಾರಿಯಾಗುವ ಹಾಗೂ ಲಾಭದಾಯಕವೂ ಆಗಿರುವ ಸಾಲು ಮರ ಬೆಳೆಸಲು ಆಸಕ್ತಿ ತೋರಿ, ಈ  ಯೋಜನೆ ಬಗ್ಗೆ ನಿರುತ್ಸಾಹ ಗೊಂಡಿರುವ ಅಧಿಕಾರಿಗಳಿಂದ ಏನು ಪ್ರಯೋಜನ ಇದೇ ರೀತಿ ಮುಂದುವರೆದಲ್ಲಿ ಕಷ್ಟಕ್ಕೀಡಾಗುವಿರೆಂದು ಅರಣ್ಯ ಇಲಾಖೆ ಅಧಿಕಾರಿಗಳಿಗೆ ಪರೋಕ್ಷ ಎಚ್ಚರಿಕೆ ನೀಡಿದರು.

ಕೃಷಿ ಇಲಾಖೆ ಸಹಾಯಕ ನಿರ್ದೇಶಕ ವೆಂಕಟೇಶ್‌ ಕರೀಮುದ್ದನಹಳ್ಳಿ ಗ್ರಾಪಂನಲ್ಲಿ 1874 ರೈತರನ್ನು ಗುರುತಿಸಿ, ಭೂಮಿಯ ಮಣ್ಣಿನ ಫ‌ಲವತ್ತತೆ ಬಗ್ಗೆ ಮಣ್ಣು ಪರೀಕ್ಷೆಯ ವರದಿ ಬಂದಿದ್ದು, ಈ ಪೈಕಿ 90 ರೈತರ ಜಮೀನಿನ ಫ‌ಲವತ್ತತೆ ಹೆಚ್ಚಿಸುವ ಸಲುವಾಗಿ ಕೈಗೊಳ್ಳಬೇಕಾದ ಕ್ರಮ ಹಾಗೂ ರಸಗೊಬ್ಬರ ನೀಡಲು ಕ್ರಮವಹಿಸಲಾಗಿದೆ.

ಆದರ್ಶ ಗ್ರಾಮಕ್ಕೆ ಆಯ್ಕೆಗೊಂಡಿರುವ ಈ ಪಂಚಾಯ್ತಿ ವ್ಯಾಪ್ತಿಯ ರೈತರಿಗೆ 120 ಹನಿ ನೀರಾವರಿ ಯೋಜನೆ ರೂಪಿಸಲಾಗಿದೆ. ಆದರೆ ಈವರೆಗೆ 90 ಅರ್ಜಿಗಳು ಬಂದಿವೆ ಅಲ್ಲದೆ 200 ಕೃಷಿ ಹೊಂಡ ನಿರ್ಮಿಸುವ ಗುರಿ ಹೊಂದಿದ್ದು, ಮೊದಲ ಕಂತಿನಲ್ಲಿ 20 ಕೃಷಿ ಹೊಂಡ ನಿರ್ಮಿಸುವ ಯೋಜನೆ ಸಿದ್ಧವಾಗಿದೆ ಎಂದು ಮಾಹಿತಿ ನೀಡಿದರು.

ಬರಪರಿಹಾರದಲ್ಲಿ ಲೋಪ: ಸಭೆಯಲ್ಲಿ ರೈತರು ಬರ ಪರಿಹಾರ ವಿತರಣೆಯಲ್ಲಿ ಲೋಪವಾಗಿದ್ದು, ಸಮರ್ಪಕ ವಿತರಣೆಗೆ ಸಂಸದರು ಕ್ರಮ ವಹಿಸಬೇಕು. ಅಧಿಕಾರಿಗಳು ಸರಿಯಾದ ಮಾಹಿತಿ ನೀಡದೆ ರೈತರು ಹೆರಾಣಾಗಿದ್ದಾರೆ, ಕೊಡುವ ಕಿಲುಬು ಕಾಸಿಗೆ ವರ್ಷವಿಡೀ ಅಲೆಯಬೇಕು, ಆನ್‌ಲೈನ್‌ ನಲ್ಲಿ ಅರ್ಜಿಸಲ್ಲಿಸಿದ್ದರೂ ಈವರೆಗೂ ಪರಿಹಾರದ ಹಣ ಬಂದಿಲ್ಲವೆಂದು ಅಧಿಕಾರಿಗಳ ವಿರುದ್ಧ ಪ್ರತಿಭಟನೆ ನಡೆಸಿದರು.

ಬರ ಪರಿಹಾರಕ್ಕೆ ಸಂಬಂಧಿಸಿದಂತೆ 18.600 ರೈತರು ಅರ್ಜಿ ಸಲ್ಲಿಸಿದ್ದಾರೆ, ಹಿಂಗಾರು-ಮುಂಗಾರು ಬೆಳೆಗಾರರು ಅರ್ಜಿ ಸಲ್ಲಿಸಿದ್ದಾರಲ್ಲದೆ, ಆನ್‌ಲೈನ್‌ನಲ್ಲೇ ಅರ್ಜಿ ಸಲ್ಲಿಸಬೇಕಿರುವುದರಿಂದಾಗಿ ರೈತರು ಸಮಸ್ಯೆ ಎದುರಿಸುವಂತಾಗಿದೆ. ಕೆಲ ರೈತರು ಅರ್ಜಿ ಸಲ್ಲಿಸಿದ್ದರೂ ತಾಂತ್ರಿಕ ಸಮಸ್ಯೆಯಿಂದಾಗಿ ಅಪ್‌ಲೋಡ್‌ ಆಗದೆ ತೊಂದರೆಯಾಗಿದೆ ಎಂದು ಸ್ಥಳದಲ್ಲಿದ್ದ ಕೃಷಿ-ತೋಟಗಾರಿಕೆ ಅಧಿಕಾರಿಗಳಾದ ರಮೇಶ್‌ ಹಾಗೂ ವೆಂಕಟೇಶ್‌ ಮಾಹಿತಿ ನೀಡಿದರು.

ನಕಲಿ ರಸಗೊಬ್ಬರದ ಬಗ್ಗೆ ಎಚ್ಚರ: ತಾಲೂಕಾದ್ಯಂತ ಈಗಾಗಲೇ ಉತ್ತಮ ಮಳೆಯಾಗಿದ್ದು, ರೈತರು ರಸಗೊಬ್ಬರ ಬಳಸುವ ಮುನ್ನವೇ ಖಾಸಗಿ ಅಂಗಡಿಗಳಲ್ಲಿ ಮಾರಾಟ ಮಾಡುವ ರಸಗೊಬ್ಬರವನ್ನು ಮಂಡ್ಯದ ವಿಸಿ ಫಾರಂನಲ್ಲಿ ಪರೀಕ್ಷೆಗೊಳಪಡಿಸಿ, ಕಳೆದ ಸಾಲಿನಲ್ಲಾದಂತೆ ಗೊಂದಲಗಳು ಬೇಡವೆಂದು ಅಧಿಕಾರಿಗಳಿಗೆ ಸೂಚಿಸಿದರು.

ಎಡಿಸಿ ವೆಂಕಟೇಶ್‌, ಜಿಪಂ ಉಪ ಕಾರ್ಯದರ್ಶಿ ಶಿವಕುಮಾರಸ್ವಾಮಿ, ಕರೀಮುದ್ದನಹಳ್ಳಿ ಗ್ರಾಪಂ ಅಧ್ಯಕ್ಷ ರಾಜಶೇಖರ್‌, ಉಪಾಧ್ಯಕ್ಷೆ ಶಾರದಮ್ಮ, ಸದಸ್ಯರಾದ ವಸಂತಕುಮಾರ್‌, ವೆಂಕಟೇಶ್‌, ಮಹದೇವ, ಶಿವಣ್ಣ ಸೇರಿದಂತೆ ತಾಲೂಕು ಮಟ್ಟದ ಅಧಿಕಾರಿಗಳು, ಗ್ರಾಮಸ್ಥರು ಹಾಗೂ ಮುಖಂಡರು ಭಾಗವಹಿಸಿದ್ದರು.

ಟಾಪ್ ನ್ಯೂಸ್

6-shivaraja

Special Interview: ಪ್ರತ್ಯೇಕ ನಾಡಧ್ವಜಕ್ಕಾಗಿ ಕೇಂದ್ರಕ್ಕೆ ಮತ್ತೂಮ್ಮೆ ಪತ್ರ: ತಂಗಡಗಿ

11

Kannada Rajyotsava: ನಿಂತ ನೆಲವೇ ಕರ್ನಾಟಕ!

5-ullala

Kinya: ಬಾಡಿಗೆ ಮನೆಯಲ್ಲಿ ಅಕ್ರಮ ಗಾಂಜಾ ಮಾರಾಟ ಮಾಡುತ್ತಿದ್ದ ಜೋಡಿ ಬಂಧನ

ಎಲ್ಲಿಂದಲೋ ಬಂದು ಇಲ್ಲಿನವರೇ ಆದರು!: ಪುಸ್ತಕ ಸೇವೆಯ ಕನಸು, ಸಪ್ನದ ಮೂಲಕ ನನಸು

ಎಲ್ಲಿಂದಲೋ ಬಂದು ಇಲ್ಲಿನವರೇ ಆದರು!: ಪುಸ್ತಕ ಸೇವೆಯ ಕನಸು, ಸಪ್ನದ ಮೂಲಕ ನನಸು

3-raj-b-shetty

Kannada: ಬೆಳೆ ಕನ್ನಡ : ಸರಣಿ-1 ಕನ್ನಡ ಚಿತ್ರರಂಗ; ಬದಲಾದ ಬದುಕೇ ಸಿನೆಮಾ ಭಾಷೆಗೂ ಕುತ್ತು

9

Kannada Rajyotsava: ಮುಖ್ಯಮಂತ್ರಿಗಳು ಇವ ನಮ್ಮವ ಎಂದಿದ್ದರು!

Kharge–Siddu

Unity lesson: ರಾಜ್ಯ ಸರ್ಕಾರ ಫೇಲಾಗ್ಬಾರ್ದು, ಒಗ್ಗಟ್ಟಾಗಿರಿ: ಎಐಸಿಸಿ ಅಧ್ಯಕ್ಷ ಖರ್ಗೆ ಪಾಠ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4

Hunsur: ಆಟೋ-ಬೈಕ್ ಡಿಕ್ಕಿ; ಸವಾರ ಸಾವು

ED-Raid

MUDA Case: ಜಾರಿ ನಿರ್ದೇಶನಾಲಯದಿಂದ ನೂರಾರು ಪುಟಗಳ ದಾಖಲೆ ವಶ

JDS

By Election: ಜೆಡಿಎಸ್‌ ಸ್ಟಾರ್‌ ಪ್ರಚಾರಕರ ಪಟ್ಟಿ: ಜಿಟಿಡಿ ಹೆಸರು ಔಟ್‌, ಪುತ್ರ ಎಂಟ್ರಿ 

Hunasuru-Women

Hunasur: ವರದಕ್ಷಿಣೆ ಕಿರುಕುಳಕ್ಕೆ ಬಲಿಯಾದ ತಿಪಟೂರಿನ ಮಹಿಳೆ!

Prathap-Simha

Waqf Property: ವಕ್ಫ್ ಆಸ್ತಿ ಅಕ್ಬರ್, ಔರಂಗಜೇಬ್‌ ಬಿಟ್ಟುಹೋದ ಆಸ್ತಿಯಾ?: ಪ್ರತಾಪ್‌ ಸಿಂಹ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

6-shivaraja

Special Interview: ಪ್ರತ್ಯೇಕ ನಾಡಧ್ವಜಕ್ಕಾಗಿ ಕೇಂದ್ರಕ್ಕೆ ಮತ್ತೂಮ್ಮೆ ಪತ್ರ: ತಂಗಡಗಿ

5

Itanagar: ಚೀನ ಜತೆ ದೀರ್ಘ‌ ಕಾಲ ಶಾಂತಿ ಸ್ಥಾಪನೆಗೆ ಪ್ರಯತ್ನ; ರಕ್ಷಣ ಸಚಿವ ರಾಜನಾಥ್‌ಸಿಂಗ್‌

4

New Delhi: ದೀಪಾವಳಿ ಹಬ್ಬದ ವೇಳೆ ಅಮೆರಿಕ ರಾಯಭಾರಿ ಡ್ಯಾನ್ಸ್‌!

11

Kannada Rajyotsava: ನಿಂತ ನೆಲವೇ ಕರ್ನಾಟಕ!

5-ullala

Kinya: ಬಾಡಿಗೆ ಮನೆಯಲ್ಲಿ ಅಕ್ರಮ ಗಾಂಜಾ ಮಾರಾಟ ಮಾಡುತ್ತಿದ್ದ ಜೋಡಿ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.