ಹೆಚ್ಚಿದ ಮಳೆ: ಕಬಿನಿ ಜಲಾಶಯದ ನೀರಿನ ಮಟ್ಟ ಏರಿಕೆ


Team Udayavani, Aug 29, 2017, 12:13 PM IST

mys4.jpg

ಎಚ್‌.ಡಿ.ಕೋಟೆ: ರಾಜ್ಯದ ಜೀವನಾಡಿಗಳಲ್ಲೊಂದಾದ ತಾಲೂಕಿನ ಬೀಚನಹಳ್ಳಿ ಗ್ರಾಮದಲ್ಲಿರುವ ಕಬಿನಿ ಜಲಾಶಯದ ಒಳ ಹರಿವಿನ ಪ್ರಮಾಣ 7200 ಕ್ಯೂಸೆಕ್‌ನಷ್ಟು ಹೆಚ್ಚಿದ್ದು, ಜಲಾಶಯದ ಮಟ್ಟ 2271.227 ಅಡಿಗೆ ಏರಿಕೆ ಕಂಡಿದೆ.

ಕೇರಳದ ವೈನಾಡು ಪ್ರದೇಶ ಸೇರಿದಂತೆ ತಾಲೂಕು ಮತ್ತು ಕಬಿನಿ ಹಿನ್ನಿರು ಪ್ರದೇಶದಲ್ಲಿ ಕಳೆದ 3-4 ದಿನಗಳಿಂದ ಹೆಚ್ಚಿನ ಮಳೆಯಾಗುತ್ತಿದ್ದು, ಜಲಾಶಯಕ್ಕೆ ಹರಿದು ಬರುತ್ತಿರುವ ಒಳ ಹರಿವಿನ ಪ್ರಮಾಣ ಹೆಚ್ಚುತ್ತಿದೆ. ಕಳೆದ ಶುಕ್ರವಾರ 3 ರಿಂದ 4 ಸಾವಿರ ಕ್ಯೂಸೆಕ್‌ ಇದ್ದ ಒಳ ಹರಿವು, ಶನಿವಾರ 3.85 ಕ್ಯೂಸೆಕ್‌ ತನಕ ಏರಿತ್ತು. ದಿನಲೂ ಉತ್ತಮ ಮಳೆಯಾದ ಪರಿಣಾಮ ಭಾನುವಾರ ಅದು 7200 ಕ್ಯೂಸೆಕ್‌ ಏರಿಕೆ ಕಂಡಿದೆ.

ಜಲಾಶಯದ ಗರಿಷ್ಠ ಮಟ್ಟ 2284 ಅಡಿ ಆಗಿದ್ದು, ಜಲಾಶಯದಲ್ಲಿ ಸದ್ಯಕ್ಕೆ 12.0 ಟಿಎಂಸಿ ನೀರು ಸಂಗ್ರಹವಾಗಿದೆ. ಕಳೆದ ವರ್ಷ ಇದೆ ದಿನಕ್ಕೆ ಜಲಾಶಯದಲ್ಲಿ 2276 ಅಡಿಗಳಷ್ಟು ನೀರು ಸಂಗ್ರಹಣವಾಗಿತ್ತು. ಆಗ ಜಲಾಶಯಕ್ಕೆ 3 ಸಾವಿರ ಕ್ಯೂಸೆಕ್‌ ನೀರು ಮಾತ್ರ ಹರಿದು ಬರುತ್ತಿತ್ತು.

ಜಲಾಶಯದಿಂದ ಈಗ ಮುಂಭಾಗದ ನದಿಗೆ ಪಕ್ಕದ ಸುಭಾಷ್‌ ವಿದ್ಯುತ್‌ ಘಟಕದ ಮೂಲಕ 2 ಸಾವಿರ ಕ್ಯೂಸೆಕ್‌ ನೀರು, ಜಲಾಶಯದ ಬಲದಂಡೆ ಮತ್ತು ಎಡದಂಡೆ ನಾಲೆ ಸೇರಿ 1850 ಕ್ಯೂಸೆಕ್‌ ನೀರನ್ನು ಹೊರ ಬಿಡಲಾಗುತ್ತಿದೆ ಜಲಾಶಯದ ಅಧಿಕಾರಿಗಳು “ಉದಯವಾಣಿ’ಗೆ ತಿಳಿಸಿದ್ದಾರೆ.

ಜಲಾಶಯದ ಇತಿಹಾಸದಲ್ಲೇ ಅತ್ಯಂತ ಕನಿಷ್ಟ ಮಟ್ಟಕ್ಕೆ ಇಳಿಮುಖ ಕಂಡಿತ್ತು. ಹೀಗಾಗಿ ಜಲಾಶಯದ ಅಭಿವೃದ್ಧಿಗೆ ನಬಾರ್ಡ್‌ ಬ್ಯಾಂಕ್‌ನಿಂದ ಬಿಡುಗಡೆಯಾಗಿದ್ದ ಸುಮಾರು 12 ಕೋಟಿ ಅನುದಾನದಲ್ಲಿ ನೀರನ್ನುಹೊರ ಬಿಟ್ಟು ಕ್ರಸ್ಟ್‌ ಗೇಟ್‌, ಗೋಡೆಗಳ ಸೋರಿಕೆ, ನೀರಿನ ರಭಸ ತಡೆಯಲು ಮುಂಭಾಗ ಇರುವ ದಿಮ್ಮಿಗಳ ದುರಸ್ತಿ ಕಾರ್ಯ ನಡೆಸಿದ್ದರು. 

ಬತ್ತಿದ ಕೆರೆ ಕಟ್ಟೆ ಬೋರಲ್ಲೂ ನೀರು ಇಲ್ಲ: ಕಳೆದ 3 ವರ್ಷಗಳಲ್ಲಿ ಆವರಿಸಿದ್ದ ಬರದ ಛಾಯೆಯಿಂದ ಮೊದಲೇ ಬೆಳೆ ನಷ್ಟ ಕಂಡಿದ್ದ ರೈತರು ಈ ಬಾರಿಯೂ ಮುಂಗಾರು ಮಳೆ ಕೈಕೊಟ್ಟು, ಹಿಂಗಾರು ಮಳೆ ಪ್ರಾರಂಭ ಆಗದೆ ಸಂಕಷ್ಟಕ್ಕೀಡಾಗಿದ್ದರು. 

ಉತ್ತಮ ಮಳೆ, ಮತ್ತೇ ಚಿಗುರಿದ ಕನಸು: ಜಲಾಶಯಕ್ಕೆ 7 ಸಾವಿರ ಕ್ಯೂಸೆಕ್‌ಗೂ ಹೆಚ್ಚಿನ ನೀರು ಹರಿದು ಬರುತ್ತಿದೆ. ಇನ್ನೂ ಸೋಮವಾರ ಕೂಡ ಮಳೆ ಹೆಚ್ಚಿದ್ದು ಜಲಾಶಯದ ಒಳ ಹರಿವು ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆ. ಹೀಗಾಗಿ ಜಲಾಶಯ ಶೀಘ್ರ ಭರ್ತಿಗೊಳ್ಳುವ ಸಾಧ್ಯತೆ ತಳ್ಳಿ ಹಾಕುವಂತಿಲ್ಲ.

ಈ ಹಿಂದೆ ಜಲಾಶಯದ ನೀರಿನ ಮಟ್ಟ ಕುಸಿದಿತ್ತು 
ನೆರೆ ರಾಜ್ಯ ಕೇರಳದ ವೈನಾಡು ಪ್ರದೇಶದಲ್ಲಿ ಕಳೆದ ತಿಂಗಳು ಹಾಗೂ ಅದಕ್ಕೂ ಮುನ್ನ ಪೂರ್ವ ಮುಂಗಾರು ವೇಳೆ ಕೆಲ ದಿನಗಳು ಮಳೆ ಅಬ್ಬರಿಸಿದ ಪರಿಣಾಮ ಜಲಾಶಯಕ್ಕೆ ಸುಮಾರು 17 ಸಾವಿರ ಕ್ಯೂಸೆಕ್‌ ನಷ್ಟು ನೀರು ಹರಿದು ಬಂದ ಪರಿಣಾಮ ಜಲಾಶಯದಲ್ಲಿ 74 ಅಡಿಗಳಷ್ಟು ನೀರು ಸಂಗ್ರಹಣಗೊಂಡಿತ್ತು.

ಆದರೆ, ಜಲಾಶಯ ಇನ್ನೇನು ತುಂಬಿ ಬಾಗಿನಕ್ಕೆ ಭಾಜನವಾಗಬಹುದು ಎಂದು ತಾಲೂಕಿನ ಜನರು ಕನಸು ಕಂಡಿದ್ದರೂ ಅಷ್ಟರಲ್ಲೇ ಸರ್ಕಾರ ಸಂಕಷ್ಟ ಸೂತ್ರ ನೆಪವೊಡ್ಡಿ ದಿನಲೂ ಕಬಿನಿ ಜಲಾಶಯದಿಂದ 10 ಸಾವಿರಕ್ಕೂ ಹೆಚ್ಚು ನೀರನ್ನು ಹೊರ ಬಿಟ್ಟ ಕಾರಣ ಮತ್ತು ಇತ್ತೀಚಿಗೆ ಕೆರೆ ಕಟ್ಟೆ ತುಂಬಿಸಲು ಹಾಗೂ ಜಾನುವಾರುಗಳಿಗೆ ನೀರುಣಿಸಲು ಎಡ ಮತ್ತು ಬಲದಂಡೆ ನಾಲೆಗಳಿಗೆ ನದಿ ಸೇರಿ ದಿನಾಲೂ 4 ಸಾವಿರ ನೀರು ಹರಿಸಿದ್ದರಿಂದ ತುಂಬುವ ಹಂತದಲ್ಲಿದ್ದ ಜಲಾಶಯ 68 ಅಡಿಗೆ ಕುಸಿದಿತ್ತು.

ಕೇರಳದ ವೈನಾಡು ಹಾಗೂ ಜಲಾಶಯದ ಹಿನ್ನೀರು ವ್ಯಾಪ್ತಿಯಲ್ಲಿ ಉತ್ತಮ ಮಳೆ ಆದ ಪರಿಣಾಮ ಹೆಚ್ಚಿನ ನೀರು ಹರಿದು ಬಂದಿದೆ. ದಿನಾಲೂ ಒಳ ಹರಿವಿನ ಪ್ರಮಾಣ ಹೆಚ್ಚಾಗುತ್ತಿದ್ದು, ಇದೇ ರೀತಿ ಇನ್ನಷ್ಟು ದಿನ ಮಳೆ ಮುಂದುವರಿದರೆ ಜಲಾಶಯ ಭರ್ತಿಯಾಗುವ ಸಾಧ್ಯತೆ ಇದೆ.
-ಕೃಷ್ಣಯ್ಯ, ಎಇಇ

* ಬಿ.ನಿಂಗಣ್ಣಕೋಟೆ

ಟಾಪ್ ನ್ಯೂಸ್

Jagadambika-Pal-(JPC)

Waqf Issue: ನಾಳೆಯಿಂದ ಜೆಪಿಸಿ ಎದುರು ಕರ್ನಾಟಕ ಸೇರಿ 6 ರಾಜ್ಯಗಳ ಪ್ರತಿನಿಧಿಗಳು ಹಾಜರು

ಪತ್ನಿಗಾಗಿ ಕೆಲಸದಿಂದ ನಿವೃತ್ತಿ ಪಡೆದ ಪತಿ; ಬೀಳ್ಕೊಡುಗೆ ಕಾರ್ಯಕ್ರಮದಲ್ಲೇ ಪತ್ನಿ ಮೃತ್ಯು

ಪತ್ನಿಗಾಗಿ ಕೆಲಸದಿಂದ ನಿವೃತ್ತಿ ಪಡೆದ ಪತಿ; ಬೀಳ್ಕೊಡುಗೆ ಕಾರ್ಯಕ್ರಮದಲ್ಲೇ ಪತ್ನಿ ಮೃತ್ಯು

Manipal: ಹಿರಿಯ ವೈದ್ಯೆ ಡಾ. ಆಶಾ ಭಟ್ ನಿಧನ

Manipal: ಹಿರಿಯ ವೈದ್ಯೆ ಡಾ. ಆಶಾ ಭಟ್ ನಿಧನ

ಕಾಲ್ತುಳಿತ ಪ್ರಕರಣ: ಅಲ್ಲು, ʼಪುಷ್ಪ-2ʼ ತಂಡದಿಂದ ರೇವತಿ ಕುಟುಂಬಕ್ಕೆ 2 ಕೋಟಿ ರೂ. ಪರಿಹಾರ

ಕಾಲ್ತುಳಿತ ಪ್ರಕರಣ: ಅಲ್ಲು, ʼಪುಷ್ಪ-2ʼ ತಂಡದಿಂದ ರೇವತಿ ಕುಟುಂಬಕ್ಕೆ 2 ಕೋಟಿ ರೂ. ಪರಿಹಾರ

Munirtahana–Egg

Egg Thrown: ಬಿಜೆಪಿ ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆತ; ಮೂವರ ಬಂಧನ

2

Living together; ವಿಚ್ಛೇದನ ತಡೆಯಲು ಲಿವಿಂಗ್‌ ಟುಗೆದರ್‌ ಸಹಕಾರಿಯೇ?

Uttarakhand: ಕಂದಕಕ್ಕೆ ಬಿದ್ದ ಬಸ್‌ ನಾಲ್ವರು ಮೃ*ತ್ಯು; 20ಕ್ಕೂ ಅಧಿಕ ಮಂದಿಗೆ ಗಾಯ

Uttarakhand: ಕಂದಕಕ್ಕೆ ಬಿದ್ದ ಬಸ್‌ ನಾಲ್ವರು ಮೃ*ತ್ಯು; 20ಕ್ಕೂ ಅಧಿಕ ಮಂದಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-hunsur

Hunsur: ಕೆಲ ಗ್ರಾಮಗಳಲ್ಲಿ ಒಂಟಿ ಸಲಗದ ಉಪಟಳ; ಬೆಳೆ ನಾಶ, ರೈತರು ಕಂಗಾಲು

V.Somanna

Congress Government: ಸಿದ್ದರಾಮಯ್ಯ ಅವಧಿಯಲ್ಲೇ ದ್ವೇಷದ ರಾಜಕಾರಣ ಬೇಸರ ತಂದಿದೆ: ಸೋಮಣ್ಣ

Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಳೆಬಾಳುವ ಎತ್ತು ಬಲಿ

Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಲೆಬಾಳುವ ಎತ್ತು ಬಲಿ

‌Mysore: ಮೊಬೈಲ್‌ ಜೂಜಾಟ; ನಾಲ್ವರ ಬಂಧನ

‌Mysore: ಮೊಬೈಲ್‌ ಜೂಜಾಟ; ನಾಲ್ವರ ಬಂಧನ

22-hunsur

Hunsur: ಒಂದೆಡೆ ಚಿರತೆ ಸೆರೆ, ಮತ್ತೊಂದೆಡೆ ಅಪಘಾತ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Jagadambika-Pal-(JPC)

Waqf Issue: ನಾಳೆಯಿಂದ ಜೆಪಿಸಿ ಎದುರು ಕರ್ನಾಟಕ ಸೇರಿ 6 ರಾಜ್ಯಗಳ ಪ್ರತಿನಿಧಿಗಳು ಹಾಜರು

ಪತ್ನಿಗಾಗಿ ಕೆಲಸದಿಂದ ನಿವೃತ್ತಿ ಪಡೆದ ಪತಿ; ಬೀಳ್ಕೊಡುಗೆ ಕಾರ್ಯಕ್ರಮದಲ್ಲೇ ಪತ್ನಿ ಮೃತ್ಯು

ಪತ್ನಿಗಾಗಿ ಕೆಲಸದಿಂದ ನಿವೃತ್ತಿ ಪಡೆದ ಪತಿ; ಬೀಳ್ಕೊಡುಗೆ ಕಾರ್ಯಕ್ರಮದಲ್ಲೇ ಪತ್ನಿ ಮೃತ್ಯು

Manipal: ಹಿರಿಯ ವೈದ್ಯೆ ಡಾ. ಆಶಾ ಭಟ್ ನಿಧನ

Manipal: ಹಿರಿಯ ವೈದ್ಯೆ ಡಾ. ಆಶಾ ಭಟ್ ನಿಧನ

Banahatti: ತಾಂತ್ರಿಕ ಸೌಲಭ್ಯಗಳನ್ನು ನೀಡುವ ನಿಟ್ಟಿನಲ್ಲಿ ಬದ್ಧಳಾಗಿದ್ದೇನೆ: ಉಮಾಶ್ರೀ

Banahatti: ತಾಂತ್ರಿಕ ಸೌಲಭ್ಯಗಳನ್ನು ನೀಡುವ ನಿಟ್ಟಿನಲ್ಲಿ ಬದ್ಧಳಾಗಿದ್ದೇನೆ: ಉಮಾಶ್ರೀ

lorry-bike

Road Mishap; ದ್ವಿಚಕ್ರ ವಾಹನ-ಲಾರಿ ನಡುವೆ ಅಪಘಾತ: ದಂಪತಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.