ಸ್ವಾತಂತ್ರ್ಯಕ್ಕಾಗಿ ಮಹನೀಯರ ತ್ಯಾಗ, ಬಲಿದಾನ
Team Udayavani, Aug 16, 2020, 1:07 PM IST
ಮೈಸೂರು: ಹಲವು ಮಹನೀಯರ ತ್ಯಾಗ, ಬಲಿದಾನದಿಂದ ನಮಗೆ ಸ್ವಾತಂತ್ರ್ಯ ಸಿಕ್ಕಿದೆ. ಅದನ್ನು ವ್ಯರ್ಥ ಮಾಡಬಾರದು ಎಂದು ಮೈವಿವಿ ಕುಲಪತಿ ಪ್ರೊ.ಜಿ. ಹೇಮಂತ್ ಕುಮಾರ್ ತಿಳಿಸಿದರು.
ಮೈವಿವಿಯ ಕ್ರಾಫರ್ಡ್ ಹಾಲ್ ಮುಂಭಾಗ ಧ್ವಜಾರೋಹಣ ನೆರವೇರಿಸಿ ಮಾತನಾಡಿ, ಭಾರತ ಸಂಪನ್ಮೂಲಭರಿತ ರಾಷ್ಟ್ರ. ಹೀಗಾಗಿ ಬ್ರಿಟಿಷರು, ಡಚ್ಚರು, ಫ್ರೆಂಚರು ನಮ್ಮನ್ನುಆಳಿದ್ದಾರೆ. ಆದರೆ, ಹಲವಾರು ಸ್ವಾತಂತ್ರ್ಯ ಹೋರಾಟಗಾರರ ಹೋರಾಟದ ಫಲವಾಗಿ ಇಂದು ನಮಗೆ ಸ್ವಾತಂತ್ರ್ಯ ಸಿಕ್ಕಿದೆ. ರಾಷ್ಟ್ರದ ಪ್ರಗತಿಗೆ ಹಲ ವಾರು ಮಹನೀಯರು ಕೊಡುಗೆ ನೀಡಿದ್ದಾರೆ. ಅವರೆನ್ನೆಲ್ಲಾ ಇಂದು ನೆನಪು ಮಾಡಿಕೊಳ್ಳಬೇಕಿದೆ. ಶತಮಾನ ಪೂರೈಸಿ ರುವ ಮೈಸೂರು ವಿವಿ ಉನ್ನತ ಶಿಕ್ಷಣಕ್ಕೆ ಅಪಾರ ಕೊಡುಗೆ ನೀಡಿದೆ ಎಂದರು.
ಕೌಶಲ್ಯ ರೂಢಿಸಿಕೊಳ್ಳಿ: ಕೌಶಲ್ಯಗಳನ್ನು ಯುವಶಕ್ತಿ ರೂಢಿಸಿಕೊಳ್ಳಬೇಕು. ಉದ್ಯೋಗವನ್ನು ಬೇಡುವ ಬದಲು ಅದನ್ನು ನೀಡಲು ಸಿದ್ಧರಿರಬೇಕು. ಕೋವಿಡ್ ಕಾಲಘಟ್ಟದಲ್ಲೂ ನಾವೆಲ್ಲ ಒಂದಾಗಿ ಮುಂದಡಿ ಇಡುತ್ತಿದ್ದೇವೆ. ಆತ್ಮನಿರ್ಭರ ಪ್ರಧಾನಿಯವರ ಕನಸಿನ ಕೂಸು. ಅದರಂತೆ ಭಾರತ ಸ್ವಾವಲಂಬನೆ ಕಡೆ ಹೆಜ್ಜೆ ಹಾಕಬೇಕಿದೆ. ನಮಗೆ ಸಿಕ್ಕಿರುವ ಸ್ವಾತಂತ್ರ್ಯ ಸುಲಭವಾಗಿ ಸಿಕ್ಕಿಲ್ಲ. ಇದಕ್ಕೆ ಹಲವಾರು ಜನ ತ್ಯಾಗ, ಬಲಿದಾನ ನೀಡಿದ್ದಾರೆ. ಹಾಗಾಗಿ ಅದನ್ನು ವ್ಯರ್ಥ ಮಾಡಿಕೊಳ್ಳದೆ ಮುಂದೆ ಸಾಗೋಣ ಎಂದು ಸಲಹೆ ನೀಡಿದರು. ಮೈಸೂರು ವಿವಿ ಪರೀಕ್ಷಾಂಗ ಕುಲಸಚಿವ ಪ್ರೊ.ಮಹದೇವ, ಮಹಾರಾಜ ಕಾಲೇಜಿನ ಪ್ರಾಂಶುಪಾಲರಾದ ಡಾ.ಅನಿಟ ವಿಮಲಾ ಬ್ರಾಗ್ಸ್ ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mysuru: ಯೋಗಾನರಸಿಂಹಸ್ವಾಮಿ ದೇಗುಲದಲ್ಲಿ ಭಕ್ತರಿಗೆ 2 ಲಕ್ಷ ಲಡ್ಡು ವಿತರಣೆ
Mysuru: ಕೆಆರ್‌ಎಸ್ ರಸ್ತೆಗೆ “ಸಿದ್ದರಾಮಯ್ಯ ಆರೋಗ್ಯ ಮಾರ್ಗ’ ನಿಶ್ಚಿತ: ಲಕ್ಷ್ಮಣ್
Sandalwood: ಪ್ರತಿಭೆ ಪ್ರದರ್ಶಿಸಲು ಕಲಾವಿದರಿಗೆ ಸೂಕ್ತ ವೇದಿಕೆ ಅಗತ್ಯ: ನಟ ಡಾಲಿ ಧನಂಜಯ
Hunsur: ಹುತಾತ್ಮ ಧಿವಿನ್ ಅಂತಿಮ ದರ್ಶನ ಪಡೆದ ಗ್ರಾಮಸ್ಥರು
Mysuru: ಇನ್ಫೋಸಿಸ್ ಆವರಣದಲ್ಲಿ ಚಿರತೆ: ಸಿಬಂದಿಗೆ ವರ್ಕ್ ಫ್ರಂ ಹೋಂ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.