ಕನಕ ಜಯಂತಿಗೆ ಅಸಡ್ಡೆ: ಮುಖಂಡರ ಆಕ್ರೋಶ


Team Udayavani, Nov 14, 2019, 3:00 AM IST

kanaka-jayantige

ಕೆ.ಆರ್‌.ನಗರ: ಕನಕದಾಸರ ಜಯಂತಿಯನ್ನು ತಾಲೂಕು ಆಡಳಿತದ ಅಸಡ್ಡೆಯಿಂದ ಬಲವಂತದಿಂದ ಆಚರಿಸುವಂತಾಗಿದೆ ಎಂದು ಜಿಪಂ ಸದಸ್ಯ ಅಮಿತ್‌ ವಿ.ದೇವರಹಟ್ಟಿ ಹೇಳಿದರು. ಪಟ್ಟಣದ ಮಿನಿ ವಿಧಾನಸೌಧ ಸಭಾಂಗಣದಲ್ಲಿ ನಡೆದ ಕನಕದಾಸರ ಜಯಂತಿ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಜನಪ್ರತಿನಿಧಿಗಳ ನಿರ್ಲಕ್ಷ್ಯದಿಂದ ಪ್ರತಿ ವರ್ಷ ಒತ್ತಡ ಹೇರಿ ಜಯಂತಿ ಆಚರಿಸುತ್ತಿರುವುದು ಕನಕದಾಸರಿಗೆ ಮಾಡುತ್ತಿರುವ ಅಪಮಾನ ಎಂದರು.

ನ.15ರಂದು ಜಯಂತಿ ನಡೆಸಬೇಕಿದ್ದು, ಕೇವಲ 2 ದಿನಗಳ ಮುನ್ನ ಸಭೆ ಕರೆದಿರುವುದಕ್ಕೆ ತಹಶೀಲ್ದಾರ್‌ ಎಂ.ಮಂಜುಳಾ ಅವರನ್ನು ತರಾಟೆಗೆ ತೆಗೆದುಕೊಂಡ ಅಮಿತ್‌, ಮುಂದಿನ ವರ್ಷದಿಂದ ಕನಿಷ್ಠ 10 ದಿನ ಮುಂಚಿತವಾಗಿ ಪೂರ್ವ ಸಿದ್ಧತಾ ಸಭೆ ನಡೆಸುವಂತೆ ತಾಕೀತು ಮಾಡಿದರಲ್ಲದೇ ಇದೇ ಪುನರಾವರ್ತನೆಯಾದರೆ ತಾಲೂಕು ಆಡಳಿತದ ವಿರುದ್ಧ ಪ್ರತಿಭಟಿಸುವುದಾಗಿ ಎಚ್ಚರಿಸಿದರು.

ಕುರುಬರ ಸಂಘದ ಅಧ್ಯಕ್ಷ ಜೆ.ಶಿವಣ್ಣ, ನಿವೃತ್ತ ಜಿಲ್ಲಾ ಆರೋಗ್ಯಾಧಿಕಾರಿ ಡಾ.ಎಸ್‌.ಎಂ.ಮಾಲೇಗೌಡ, ಪುರಸಭೆ ಸದಸ್ಯ ಕೋಳಿಪ್ರಕಾಶ್‌, ಎಐಸಿಸಿ ವಕ್ತಾರೆ ಐಶ್ವರ್ಯ, ಜಿಪಂ ಮಾಜಿ ಸದಸ್ಯ ಜಿ.ಆರ್‌.ರಾಮೇಗೌಡ ಮತ್ತಿತರರು ಮಾತನಾಡಿ, ಪೂರ್ವ ಸಿದ್ಧಾತಾ ಸಭೆ ಮತ್ತು ಜಯಂತಿ ಆಚರಣೆಗೆ ಪಕ್ಷಾತೀತ ಮತ್ತು ಜಾತ್ಯತೀತವಾಗಿ ಎಲ್ಲಾ ಸಮಾಜದವರನ್ನು ಆಹ್ವಾನಿಸಬೇಕು ಎಂದು ಕೋರಿದರು.

ಕೇವಲ 2 ದಿನಗಳಿರುವಾಗ ಅದ್ಧೂರಿಯಾಗಿ ಆಚರಿಸಲು ಕಷ್ಟವಾಗುವುದರಿಂದ ಶುಕ್ರವಾರ ಬೆಳಗ್ಗೆ 11ಕ್ಕೆ ತಾಲೂಕು ಕಚೇರಿಯ ಸಭಾಂಗಣದಲ್ಲಿ ಶಾಸಕ ಸಾ.ರಾ.ಮಹೇಶ್‌ ಅಧ್ಯಕ್ಷತೆಯಲ್ಲಿ ಜಯಂತಿ ಆಚರಿಸುವಂತೆ ಸೂಚಿಸಿದ ಮುಖಂಡರು, 5 ಮಂದಿಗೆ ಕನಕಶ್ರೀ ಪ್ರಶಸ್ತಿ ನೀಡಬೇಕು ಮತ್ತು ತಾಲೂಕು ಮಟ್ಟದ ಎಲ್ಲಾ ಅಧಿಕಾರಿಗಳು ಹಾಜರಿರುವಂತೆ ತಹಶೀಲ್ದಾರ್‌ ಆದೇಶ ಮಾಡಬೇಕು ಎಂದು ತಿಳಿಸಿದರು.

ಸಭೆಯಲ್ಲಿ ತಾಪಂ ಮಾಜಿ ಸದಸ್ಯ ನಾಗಣ್ಣ, ಎಪಿಎಂಸಿ ನಿರ್ದೇಶಕ ಬಿ.ಎಂ.ನಾಗರಾಜು, ಮಾಜಿ ನಿರ್ದೇಶಕ ರಾಜಶೇಖರ್‌, ಪುರಸಭೆ ಸದಸ್ಯ ನಟರಾಜು, ಕುರುಬರ ಸಂಘದ ನಿರ್ದೇಶಕರಾದ ಕೆ.ಎಂ.ಶ್ರೀನಿವಾಸ್‌, ಸಾಕರಾಜು, ರಾಮಕೃಷ್ಣೇಗೌಡ, ಎಂ.ಪಿ.ಶ್ರೀನಿವಾಸ್‌, ಬಿ.ಎಂ.ಗಿರೀಶ್‌, ಅಪ್ಪಾಜಿಗೌಡ, ಕೃಷ್ಣೇಗೌಡ, ಮುಖಂಡರಾದ ಆನಂದ್‌, ಕಾಂತರಾಜು, ಮಹದೇವ್‌ ಇತರರಿದ್ದರು.

ಟಾಪ್ ನ್ಯೂಸ್

Parliament winter session: ಇಂದಿನಿಂದ ಸಂಸತ್‌ ಅಧಿವೇಶನ.. ವಕ್ಫ್ ಸೇರಿ 16 ಮಸೂದೆ ಮಂಡನೆ?

Parliament Winter Session: ಇಂದಿನಿಂದ ಸಂಸತ್‌ ಅಧಿವೇಶನ.. ವಕ್ಫ್ ಸೇರಿ 16 ಮಸೂದೆ ಮಂಡನೆ?

Nalatawad: ವಿದ್ಯುತ್ ಶಾಕ್‌ನಿಂದ ಮೃತಪಟ್ಟ ಕೋತಿಗೆ ಸ್ಥಳೀಯ ನಿವಾಸಿಗಳಿಂದ ಅಂತ್ಯಸಂಸ್ಕಾರ

Nalatawad: ವಿದ್ಯುತ್ ಶಾಕ್‌ನಿಂದ ಮೃತಪಟ್ಟ ಕೋತಿಗೆ ಸ್ಥಳೀಯ ನಿವಾಸಿಗಳಿಂದ ಅಂತ್ಯಸಂಸ್ಕಾರ

Puttur: ಮೃ*ತದೇಹವನ್ನು ರಸ್ತೆ ಬದಿ ಇರಿಸಿ ಹೋದ ಪ್ರಕರಣ; ಪ್ರಮುಖ ಆರೋಪಿ ಸಹಿತ ಮೂವರ ಬಂಧನ

Puttur: ಮೃ*ತದೇಹವನ್ನು ರಸ್ತೆ ಬದಿ ಇರಿಸಿ ಹೋದ ಪ್ರಕರಣ; ಪ್ರಮುಖ ಆರೋಪಿ ಸಹಿತ ಮೂವರ ಬಂಧನ

ಗೂಗಲ್ ಮ್ಯಾಪ್ ನಂಬಿ ನಿರ್ಮಾಣ ಹಂತದ ಸೇತುವೆಯಲ್ಲಿ ಚಲಿಸಿ ನದಿಗೆ ಬಿದ್ದ ಕಾರು, ಮೂವರು ಮೃತ್ಯು

ಗೂಗಲ್ ಮ್ಯಾಪ್ ನಂಬಿ ಸೇತುವೆಯಿಂದ ನದಿಗೆ ಬಿದ್ದ ಕಾರು, ಮದುವೆಗೆ ಹೊರಟಿದ್ದ ಮೂವರು ಮೃತ್ಯು

GTD

JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ

moon

Cape Canaveral: ತಾತ್ಕಾಲಿಕ ಉಪಗ್ರಹವಾಗಿದ್ದ “ಮಿನಿ ಮೂನ್‌’ಗೆ ಗುಡ್‌ ಬೈ

G.parameshwar

Result: ಮಹಾರಾಷ್ಟ್ರ ಚುನಾವಣೆ ಗೆಲ್ಲಲು ಇವಿಎಂ ಹ್ಯಾಕ್‌ ಕಾರಣ: ಗೃಹ ಸಚಿವ ಡಾ.ಪರಮೇಶ್ವರ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

GTD

JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ

GTD

Mysuru: ಜೆಡಿಎಸ್‌ ವರಿಷ್ಠರಿಗೆ ನಾನು ಬೇಡ, ನನ್ನ ಮಗ ಬೇಕಾಗಿದ್ದಾನೆ: ಜಿ.ಟಿ.ದೇವೇಗೌಡ

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌

H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!

H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!

6-hunsur

Hunsur: ರಾಜ್ಯದ ವಿವಿಧೆಡೆ ಕಳ್ಳತನ ಮಾಡಿದ್ದ ಆರೋಪಿ ಬಂಧನ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Bengaluru: ಮನೆಯ ಮುಂದೆ ಕುಳಿತು ಮೊಬೈಲ್‌ ನೋಡುತ್ತಿದ್ದ ವ್ಯಕ್ತಿಗೆ ಕಾರು ಡಿಕ್ಕಿ!

Bengaluru: ಮನೆಯ ಮುಂದೆ ಕುಳಿತು ಮೊಬೈಲ್‌ ನೋಡುತ್ತಿದ್ದ ವ್ಯಕ್ತಿಗೆ ಕಾರು ಡಿಕ್ಕಿ!

Bengaluru: ಪಾರ್ಕ್‌ನಲ್ಲಿ ಮಲಗಿದ್ದಾಗ ಮರ ಬಿದ್ದು ಬಿಬಿಎಂಪಿ ಕಸದ ಲಾರಿ ಚಾಲಕ ಸಾವು

Bengaluru: ಪಾರ್ಕ್‌ನಲ್ಲಿ ಮಲಗಿದ್ದಾಗ ಮರ ಬಿದ್ದು ಬಿಬಿಎಂಪಿ ಕಸದ ಲಾರಿ ಚಾಲಕ ಸಾವು

Fraud: ಸೈಟ್‌ ಮಾರುವುದಾಗಿ ನಂಬಿಸಿ 56 ಲಕ್ಷ ರೂ. ವಂಚನೆ

Fraud: ಸೈಟ್‌ ಮಾರುವುದಾಗಿ ನಂಬಿಸಿ 56 ಲಕ್ಷ ರೂ. ವಂಚನೆ

4

Bengaluru: ಹೋಟೆಲ್‌ನ ಬಾತ್‌ರೂಮ್‌ನಲ್ಲಿ ಕಾರ್ಪೆಂಟರ್ ನೇಣಿಗೆ ಶರಣು

3

Arrested: ಉಸಿರುಗಟ್ಟಿಸಿ ಪತ್ನಿಯ ಕೊಂದು ಮಗುವಿನ ಜೊತೆಗೆ ಪತಿ ಪರಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.