ಕೊಡಗಿನಲ್ಲಿ ಸೋಂಕು: ಹುಣಸೂರಿನಲ್ಲಿ ಕಟ್ಟೆಚ್ಚರ


Team Udayavani, Mar 21, 2020, 3:00 AM IST

kodaginalli

ಹುಣಸೂರು: ಕೊಡಗು ಜಿಲ್ಲೆಯಲ್ಲಿ ಕೊರೊನಾ ಸೋಂಕು ತಗುಲಿರುವ ವ್ಯಕ್ತಿ ಪತ್ತೆಯಾಗುತ್ತಿದ್ದಂತೆ ಜಿಲ್ಲಾಡಳಿತದ ನಿರ್ದೇಶನದಂತೆ ಹುಣಸೂರಿನ ಸರಕಾರಿ ಕಚೇರಿಗಳಲ್ಲಿ ಸಾರ್ವಜನಿಕರ ಪ್ರವೇಶ ನಿಷೇಧಿಸಲಾಗಿತ್ತು.

ಹುಣಸೂರು ಮಿನಿ ವಿಧಾನಸೌಧ, ತಾಲೂಕು ಪಂಚಾಯ್ತಿ, ನ್ಯಾಯಾಲಯ, ನಗರಸಭೆ, ಸಾರಿಗೆ ಪ್ರಾದೇಶಿಕ ಕಚೇರಿ ಸೇರಿದಂತೆ ಎಲ್ಲಡೆ ಪ್ರವೇಶ ನಿರ್ಬಂಧಿಸಲಾಗಿತ್ತು. ಯಾವಾಗಲೂ ಜನರಿಂದ ಗಿಜಿಗುಡುತ್ತಿದ್ದ ತಾಲೂಕು ಕಚೇರಿಯ ಮುಖ್ಯದ್ವಾರವನ್ನು ಮುಚ್ಚಲಾಗಿತ್ತು.

ಅತಿ ತುರ್ತು ಕೆಲಸಗಳಿಗೆ ಮಾತ್ರ ಸಾರ್ವಜನಿಕರಿಗೆ ಪ್ರವೇಶ ನೀಡಲಾಗಿತ್ತು. ಉಪ ವಿಭಾಗಾಧಿಕಾರಿ ಬಿ.ಎನ್‌.ವೀಣಾ, ತಹಶೀಲ್ದಾರ್‌ ಬಸವರಾಜ್‌ ಹಾಗೂ ಸಿಬ್ಬಂದಿ ಕಚೇರಿಯಲ್ಲೇ ಕುಳಿತು ಕೆಲಸ ನಿರ್ವಹಿಸಿದರು. ಕೆಲ ಸಾರ್ವಜನಿಕರು, ರೈತರು ಪ್ರವೇಶ ನಿರ್ಬಂಧದ ಮಾಹಿತಿ ಇಲ್ಲದ ಕಾರಣ ಬಂದು ವಾಪಸ್‌ ತೆರಳಿದರು. ಇನ್ನು ಉಪ ನೋಂದಣಾಧಿಕಾರಿಗಳ ಕಚೇರಿಯಲ್ಲಿ ಯಾವುದೇ ನೋಂದಣಿ ಪ್ರಕ್ರಿಯೆ ನಡೆಯಲಿಲ್ಲ.

ನ್ಯಾಯಾಲಯ ಕಲಾಪವಿಲ್ಲ: ಹುಣಸೂರಿನ ಐದು ನ್ಯಾಯಾಲಯಗಳಲ್ಲೂ ಯಾವುದೇ ಕಲಾಪ ನಡೆಯಲಿಲ್ಲ. ಕೆಲ ಕಕ್ಷಿದಾರರು ಹಾಗೂ ವಕೀಲರು ಸಹ ವಾಪಸ್‌ ತೆರಳಿದರು. ಆದರೆ, ನ್ಯಾಯಾಲಯದೊಳಗೆ ನ್ಯಾಯಾಧೀಶರು ಮತ್ತು ಸಿಬ್ಬಂದಿ ಕಾರ್ಯ ನಿರ್ವಹಿಸಿದರು.

ಎಂದಿನಂತೆ ಕೆಲಸ: ನಗರಸಭೆಯಲ್ಲಿ ಮಾತ್ರ ಹೊರಭಾಗದಲ್ಲಿ ಪ್ರವೇಶ ನಿರ್ಬಂಧ ಬೋರ್ಡ್‌ ಹಾಕಿದ್ದರೂ ತಮ್ಮ ಕೆಲಸಗಳಿಗಾಗಿ ಸಾರ್ವಜನಿಕರು ಕಚೇರಿ ಒಳಗೆ ಸೇರಿಕೊಂಡು ತಮ್ಮ ಕೆಲಸ ಕಾರ್ಯ ಮಾಡಿಸಿಕೊಂಡು ನಿಟ್ಟುಸಿರು ಬಿಟ್ಟರು. ಉಳಿದಂತೆ ಸಾರಿಗೆ ಇಲಾಖೆ, ತಾಲೂಕು ಪಂಚಾಯ್ತಿ ಸೇರಿದಂತೆ ಎಲ್ಲ ಕಚೇರಿಗಳಲ್ಲೂ ಸಿಬ್ಬಂದಿ ಮಾತ್ರ ಕಾರ್ಯ ನಿರ್ವಹಿಸಿದರು. ಬೆರಳೆಣಿಕೆಯಷ್ಟು ಮಂದಿ ಸಾರ್ವಜನಿಕರು ಕಾಣಿಸಿಕೊಂಡರು.

ಬಿಕೋ ಎಂದ ಬಸ್‌ ನಿಲ್ದಾಣ: ಪ್ರತಿದಿನ 800ಕ್ಕೂ ಹೆಚ್ಚು ಬಸ್‌ಗಳು ಬಂದು ಹೋಗುವ ಹುಣಸೂರು ಬಸ್‌ ನಿಲ್ದಾಣದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪ್ರಯಾಣಿಕರಿಲ್ಲದೆ ಬಣಗುಡುತ್ತಿತ್ತು. ಪಿಯುಸಿ ಪರೀಕ್ಷೆ ಇದ್ದುದ್ದರಿಂದ ವಿದ್ಯಾರ್ಥಿಗಳೇ ಹೆಚ್ಚಿನ ಸಂಖ್ಯೆಯಲ್ಲಿ ಕಾಣಿಸಿಕೊಂಡರು. ಯಾವಾಗಲೂ ಮೈಸೂರಿಗೆ ತೆರಳುವ ಬಸ್‌ಗಳು ಪ್ರಯಾಣಿಕರಿಂದ ತುಂಬಿ ತುಳುಕುತ್ತಿತ್ತು. ಶುಕ್ರವಾರ ಪ್ರಯಾಣಿಕರಿಲ್ಲದೆ ಖಾಲಿ ಬಸ್‌ ಸಂಚರಿಸಿದವು.

ನಗರ ಪೊಲೀಸ್‌ ಠಾಣೆಗೆ ಭೇಟಿ ನೀಡುತ್ತಿದ್ದ ಸಾರ್ವಜನಿಕರಿಗೆ ಇಲಾಖೆ ವತಿಯಿಂದ ಸ್ಯಾನಿಟೈಸರ್‌ ವ್ಯವಸ್ಥೆ ಕಲ್ಪಿಸಲಾಗಿತ್ತು. ಕೈ ಶುಚಿಗೊಳಿಸಿಕೊಂಡ ನಂತರವಷ್ಟೇ ಪ್ರವೇಶ ನೀಡಲಾಯಿತು. ಎಸ್‌ಐ ಮಹೇಶ್‌ ಸೇರಿದಂತೆ ಕೆಲ ಸಿಬ್ಬಂದಿ ಮಾಸ್ಕ್ ಧರಿಸಿ ಕೆಲಸ ನಿರ್ವಹಿಸಿದರು.

ಟಾಪ್ ನ್ಯೂಸ್

Afghanistan: ತಾಲಿಬಾನ್‌ ನೆಲೆಗಳ ಮೇಲೆ ಪಾಕಿಸ್ತಾನ ವೈಮಾನಿಕ ದಾಳಿ; 25ಕ್ಕೂ ಅಧಿಕ ಸಾ*ವು

Afghanistan: ತಾಲಿಬಾನ್‌ ನೆಲೆಗಳ ಮೇಲೆ ಪಾಕಿಸ್ತಾನ ವೈಮಾನಿಕ ದಾಳಿ? 25ಕ್ಕೂ ಅಧಿಕ ಸಾ*ವು

4-max

Max: ಇಂದು ಸುದೀಪ್‌ ಮ್ಯಾಕ್ಸ್‌ ತೆರೆಗೆ; ಆ್ಯಕ್ಷನ್‌ ಅಡ್ಡದಲ್ಲಿ ಕಿಚ್ಚ ಮಿಂಚು

3-

Gundlupete: ಬೋನಿಗೆ ಬಿದ್ದ ಗಂಡು ಚಿರತೆ

2-

Ayodhya ರಾಮನ ದರ್ಶನ ಪಡೆದಿದ್ದ “ಬಸಪ್ಪ” ಈಗ ಶಬರಿಮಲೆಗೆ ಪ್ರಯಾಣ!

ICC U19 ವನಿತಾ ಟಿ20 ವಿಶ್ವಕಪ್‌: ಭಾರತಕ್ಕೆ ನಿಕಿ ಪ್ರಸಾದ್‌ ನಾಯಕಿ

ICC U19 ವನಿತಾ ಟಿ20 ವಿಶ್ವಕಪ್‌: ಭಾರತಕ್ಕೆ ನಿಕಿ ಪ್ರಸಾದ್‌ ನಾಯಕಿ

Maharashtra: ಬಾಸ್‌ ಜತೆ ಸೆ*ಕ್ಸ್‌ಗೆ ಒಪ್ಪದ ಪತ್ನಿಗೆ ಐಟಿ ಉದ್ಯೋಗಿ ತಲಾಖ್‌

Maharashtra: ಬಾಸ್‌ ಜತೆ ಸೆ*ಕ್ಸ್‌ಗೆ ಒಪ್ಪದ ಪತ್ನಿಗೆ ಐಟಿ ಉದ್ಯೋಗಿ ತಲಾಖ್‌

PM Modi: ಇಂದು ಕೆನ್‌-ಬೆತ್ವಾ ನದಿ ಜೋಡಣೆಗೆ ಮೋದಿ ಶಂಕುಸ್ಥಾಪನೆ

PM Modi: ಇಂದು ಕೆನ್‌-ಬೆತ್ವಾ ನದಿ ಜೋಡಣೆಗೆ ಮೋದಿ ಶಂಕುಸ್ಥಾಪನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-hunsur

Hunsur: ಕೆಲ ಗ್ರಾಮಗಳಲ್ಲಿ ಒಂಟಿ ಸಲಗದ ಉಪಟಳ; ಬೆಳೆ ನಾಶ, ರೈತರು ಕಂಗಾಲು

V.Somanna

Congress Government: ಸಿದ್ದರಾಮಯ್ಯ ಅವಧಿಯಲ್ಲೇ ದ್ವೇಷದ ರಾಜಕಾರಣ ಬೇಸರ ತಂದಿದೆ: ಸೋಮಣ್ಣ

Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಳೆಬಾಳುವ ಎತ್ತು ಬಲಿ

Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಲೆಬಾಳುವ ಎತ್ತು ಬಲಿ

‌Mysore: ಮೊಬೈಲ್‌ ಜೂಜಾಟ; ನಾಲ್ವರ ಬಂಧನ

‌Mysore: ಮೊಬೈಲ್‌ ಜೂಜಾಟ; ನಾಲ್ವರ ಬಂಧನ

22-hunsur

Hunsur: ಒಂದೆಡೆ ಚಿರತೆ ಸೆರೆ, ಮತ್ತೊಂದೆಡೆ ಅಪಘಾತ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Afghanistan: ತಾಲಿಬಾನ್‌ ನೆಲೆಗಳ ಮೇಲೆ ಪಾಕಿಸ್ತಾನ ವೈಮಾನಿಕ ದಾಳಿ; 25ಕ್ಕೂ ಅಧಿಕ ಸಾ*ವು

Afghanistan: ತಾಲಿಬಾನ್‌ ನೆಲೆಗಳ ಮೇಲೆ ಪಾಕಿಸ್ತಾನ ವೈಮಾನಿಕ ದಾಳಿ? 25ಕ್ಕೂ ಅಧಿಕ ಸಾ*ವು

4-max

Max: ಇಂದು ಸುದೀಪ್‌ ಮ್ಯಾಕ್ಸ್‌ ತೆರೆಗೆ; ಆ್ಯಕ್ಷನ್‌ ಅಡ್ಡದಲ್ಲಿ ಕಿಚ್ಚ ಮಿಂಚು

3-

Gundlupete: ಬೋನಿಗೆ ಬಿದ್ದ ಗಂಡು ಚಿರತೆ

2-

Ayodhya ರಾಮನ ದರ್ಶನ ಪಡೆದಿದ್ದ “ಬಸಪ್ಪ” ಈಗ ಶಬರಿಮಲೆಗೆ ಪ್ರಯಾಣ!

ICC U19 ವನಿತಾ ಟಿ20 ವಿಶ್ವಕಪ್‌: ಭಾರತಕ್ಕೆ ನಿಕಿ ಪ್ರಸಾದ್‌ ನಾಯಕಿ

ICC U19 ವನಿತಾ ಟಿ20 ವಿಶ್ವಕಪ್‌: ಭಾರತಕ್ಕೆ ನಿಕಿ ಪ್ರಸಾದ್‌ ನಾಯಕಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.