ಪಿರಿಯಾಪಟ್ಟಣ ಆಸ್ಪತ್ರೆ 7 ಸಿಬ್ಬಂದಿಗೆ ಸೋಂಕು
Team Udayavani, Sep 16, 2020, 4:15 PM IST
ಪಿರಿಯಾಪಟ್ಟಣ: ಪಟ್ಟಣ ತಾಲೂಕು ಸಾರ್ವಜನಿಕ ಆಸ್ಪತ್ರೆಯ7 ಸಿಬ್ಬಂದಿಗೆ ಕೋವಿಡ್ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಆಸ್ಪತ್ರೆಯನ್ನು ಮೂರು ದಿನಗಳ ಕಾಲ ಸೀಲ್ ಮಾಡಲಾಗಿದೆ.
ತಾಲೂಕಿನಾದ್ಯಂತ ವ್ಯಾಪಕವಾಗಿ ಹರಡುತ್ತಿರುವ ಕೋವಿಡ್ ವೈರಸ್ ಇದೀಗ ತಾಲೂಕು ಆಸ್ಪತ್ರೆಯ ಸಿಬ್ಬಂದಿಗೂ ತಗುಲಿದೆ. ಈ ಹಿನ್ನೆಲೆಯಲ್ಲಿ ಮೂರು ದಿನಗಳ ತುರ್ತು ಫೀವರ್ ಕ್ಲಿನಿಕ್ ಹೊರತುಪಡಿಸಿ ಉಳಿದ ಎಲ್ಲಾ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ.
ಸೋಮವಾರ ಸಂಜೆ4ಗಂಟೆಯ ಸಮಯದಲ್ಲಿ 66 ವರ್ಷದ ವೃದ್ಧೆಯೊಬ್ಬರು ಜ್ವರ, ನೆಗಡಿ ಶೀತ ಸಮಸ್ಯೆಯಿಂದ ಸಾರ್ವಜನಿಕ ಆಸ್ಪತ್ರೆಗೆ ಚಿಕಿತ್ಸೆಗಾಗಿ ಬಂದಿದ್ದರು. ವೈದ್ಯರು ಈಕೆಯನ್ನು ಪರೀಕ್ಷಿಸಿದಾಗ ಕೋವಿಡ್ ಸೋಂಕು ಇರುವುದು ದೃಢಪಟ್ಟಿತ್ತು. ಪರೀಕ್ಷೆ ನಡೆಸಿದ ಕೆಲವೇ ಕ್ಷಣದಲ್ಲಿ ಈಕೆ ಸಾವನ್ನಪ್ಪಿದ್ದರು. ಇದೇ ವೇಳೆ ಆಸ್ಪತ್ರೆಯ ಮೂವರು ಸಿಬ್ಬಂದಿಗೆ ಕೋವಿಡ್ ಸೋಂಕು ದೃಢಪಟ್ಟಿತ್ತು. ಮಂಗಳವಾರ ಸಂಜೆಯೂ ನಾಲ್ವರು ಸಿಬ್ಬಂದಿಗೆ ಸೋಂಕು ತಗುಲಿರುವುದು ಖಚಿತವಾಗಿದೆ. ಸೋಂಕು ಹರಡುವುದನ್ನು ನಿಯಂತ್ರಿಸುವ ಸಲುವಾಗಿ ಆಸ್ಪತ್ರೆಯನ್ನು ಸಂಪೂರ್ಣ ಸ್ಯಾನಿಟೈಸ್ ಮಾಡಲಾಗುವುದು. ಜೊತೆಗೆ ಆಸ್ಪತ್ರೆಯಲ್ಲಿ ಹೊರರೋಗಿಗಳ ವಿಭಾಗವನ್ನು ಮೂರು ದಿನಗಳ ಕಾಲ ಬಂದ್ ಮಾಡಲಾಗಿದೆ. ಕೇವಲ ತುರ್ತು ಚಿಕಿತ್ಸೆ ಐಸೊಲೇಷನ್ ವಿಭಾಗ ಹಾಗೂ ಫೀವರ್ ಕ್ಲಿನಿಕ್‌ಗಳು ಮಾತ್ರ ಕಾರ್ಯ ನಿರ್ವಹಿಸಲಿವೆ ಎಂದು ಸಾರ್ವಜನಿಕ ಆಸ್ಪತ್ರೆ ಆಡಳಿತಾಧಿಕಾರಿ ತಿಳಿಸಿದ್ದಾರೆ.
……………………………………………………………………………………………………………………………………………………
ಕೋವಿಡ್: ಆದೇಶ ಉಲ್ಲಂಘಿಸಿದರೆ ಕ್ರಮ : ಮೈಸೂರು: ಕೋವಿಡ್-19 ವಿಚಾರದಲ್ಲಿ ಸರ್ಕಾರದ ಆದೇಶಗಳನ್ನು ಉಲ್ಲಂಘಿಸುವ ಖಾಸಗಿ ಆಸ್ಪತ್ರೆಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಜಿಲ್ಲಾಧಿಕಾರಿ ಬಿ. ಶರತ್ ಎಚ್ಚರಿಕೆ ನೀಡಿದರು.
ಸುದ್ದಿಗಾರರೊಂದಿಗೆಮಾತನಾಡಿದ ಅವರು, ಕೋವಿಡ್ ಸೋಂಕಿತರಿಗೆ ಚಿಕಿತ್ಸೆ ನೀಡುವ ಸಂಬಂಧ ಖಾಸಗಿ ಆಸ್ಪತ್ರೆಗಳಿಗೆ ಸರ್ಕಾರದ ಆದೇಶ ಇದೆ. ಸೋಂಕಿತರನ್ನು ಆಸ್ಪತ್ರೆಗೆ ಸೇರಿಸುವುದರಿಂದಬಿಡುಗಡೆಯಾಗುವವರೆಗೂಒಂದಷ್ಟು ನಿಯಮ ಗಳನ್ನು ಪಾಲಿಸಬೇಕು. ಆ ನಿಯಮ ಗಳನ್ನು ಆಸ್ಪತ್ರೆಗಳು ಕಟ್ಟುನಿಟ್ಟಾಗಿ ಪಾಲಿಸ ದಿದ್ದರೆಅವರ ವಿರುದ್ಧ ಕ್ರಮ ಜರುಗಿಸ ಬೇಕಾಗುತ್ತದೆ ಎಂದು ಹೇಳಿದರು.
ಸಾಮಾನ್ಯವಾಗಿ ಎಲ್ಲಾ ಸೋಂಕಿತ ರಿಗೂ ವೆಂಟಿಲೇಟರ್ ಬಳಸುವುದಿಲ್ಲ.ಅತ್ಯಂತ ಅವಶ್ಯಕತೆ ಇರುವವರಿಗೆ ಮಾತ್ರ ಬಳಸಲಾಗುತ್ತದೆ. ಯಾರಿಗೆ ಶ್ವಾಸಕೋಶಬಲಹೀನವಾಗಿರುತ್ತದೋಅಂತಹವರಿಗೆ ಮಾತ್ರ ಆಮ್ಲಜನಕ ಪೂರೈಕೆ ಮಾಡ ಬೇಕು. ಆಗ ಮಾತ್ರ ವೆಂಟಿಲೇಟರ್‌ಬಳಕೆಗೆ ಬರುತ್ತದೆ ಎಂದರು.ಸೋಂಕಿತರ ಸಂಖ್ಯೆ ಹೆಚ್ಚು ಮಾಡುತ್ತೇವೋ, ಕಡಿಮೆ ಮಾಡುತ್ತೇವೋ ಎಂಬುದು ನಮ್ಮಕೈಲಿದೆ. ನಾನು ನೋಡಿದ ಹಾಗೆ ಮಾರುಕಟ್ಟೆ ಮತ್ತಿತರ ಕಡೆ ಓಡಾಡುವವರು ಮಾಸ್ಕ್ ಧರಿಸುವುದೇ ಇಲ್ಲ. ಎಲ್ಲರೂ ಕಡ್ಡಾಯವಾಗಿಮಾಸ್ಕ್ ಧರಿಸಬೇಕು, ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು. ಇಲ್ಲವಾದರೆ ಸೋಂಕಿತರಸಂಖ್ಯೆನಿರಂತರವಾಗಿಹೆಚ್ಚಾಗುತ್ತಿರುತ್ತದೆ.ಯಾರೂ ಮುನ್ನೆಚ್ಚರಿಕೆ ಕ್ರಮ ತೆಗೆದು ಕೊಳ್ಳದೆ ಉದಾಸೀನದಿಂದ ಇರಬೇಡಿ ಎಂದು ಮನವಿ ಮಾಡಿದರು.
ಈ ವರ್ಷ ಚಾಮುಂಡಿ ಬೆಟ್ಟ, ಅರಮನೆ ಆವರಣದಲ್ಲಿ ಮಾತ್ರ ದಸರಾ ನಡೆಯತ್ತದೆ.ಆದಷ್ಟೂಕಡಿಮೆಜನರನ್ನುಸೇರಿಸಿಕೊಂಡು ಕಾರ್ಯಕ್ರಮನಡೆಸುತ್ತೇವೆ. ಎಲ್ಲರಿಗೂ ತಪಾಸಣೆ ಮಾಡಿ ನಂತರ ಒಳಗೆ ಬಿಡಲಾಗುವುದು ಎಂದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.