ಬಿಜೆಪಿಯ ಕೆಲ ದೊಡ್ಡ ನಾಯಕರು ಮತ್ತು ಸಿದ್ದರಾಮಯ್ಯ ನಡುವೆ ಒಳ ಒಪ್ಪಂದ: ಪ್ರತಾಪ್ ಸಿಂಹ ಬಾಂಬ್
Team Udayavani, Jun 13, 2023, 11:40 AM IST
ಮೈಸೂರು: ಬಿಜೆಪಿಯ ಕೆಲ ಅತಿರಥ- ಮಹಾರಥ ನಾಯಕರ ಜೊತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಒಳ ಒಪ್ಪಂದ ಮಾಡಿಕೊಂಡಿದ್ದಾರೆ ಎಂದು ಸಂಸದ ಪ್ರತಾಪ್ ಸಿಂಹ ಬಾಂಬ್ ಸಿಡಿಸಿದ್ದಾರೆ. ಅಲ್ಲದೆ ಕೆಲ ಮುಖಂಡರಿಂದ ಬಿಜೆಪಿ ಅವರು ಮಣ್ಣು ತಿಂದಿದೆ ಎಂದಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ನವರು ಬಿಜೆಪಿ ಸರಕಾರ ಮೇಲಿನ 40 ಪರ್ಸೆಂಟ್ ಆರೋಪದ ಬಗ್ಗೆ ಯಾಕೆ ದೂರು ಕೊಟ್ಟಿರಲಿಲ್ಲ. ಕೆಂಪಣ್ಣ ಅವರ ಬರೆದ ಪತ್ರ ಇಟ್ಟುಕೊಂಡು ಕಾಂಗ್ರೆಸ್ ನಾಯಕರು ಊರಿಗೆಲ್ಲ ತಮಟೆ ಹೊಡೆದರು. ಬಿಜೆಪಿ ಅಧಿಕಾರದಲ್ಲಿದ್ದಾಗ ಸಿದ್ದರಾಮಯ್ಯ ವಿರುದ್ದ ರೀ ಡೂ, ಅರ್ಕಾವತಿ ಡಿ ನೋಟಿಫೀಕೇಷ್, ಕೆಂಪಣ್ಣ ಆಯೋಗ ವರದಿ ಅಬ್ಬರಿಸುತ್ತಿದ್ದರು. ಆದರೆ, ನಮ್ಮವರು ಒಂದು ದಿನವೂ ಹಾವಿನ ಪೆಟ್ಟಿಗೆಯಿಂದ ಹಾವು ಹೊರಗೆ ಬಿಡಲೇ ಇಲ್ಲ. ಸಿದ್ದರಾಮಯ್ಯ ಕೂಡ ಬಿಜೆಪಿ ಮೇಲೆ ಪಿಎಸ್ಐ ಹಗರಣ, ಬಿಟ್ ಕಾಯಿನ್ ಎಂದು ಅಬ್ಬರಿಸುತ್ತಿದ್ದರು. ಈಗ ಈ ಬಗ್ಗೆ ತುಟಿ ಬಿಚ್ಚುತ್ತಿಲ್ಲ. ಸಿದ್ದರಾಮಯ್ಯ ಅವರೆ ನಿಮ್ಮ ಮತ್ತು ಬಿಜೆಪಿಯ ಕೆಲ ನಾಯಕರ ಜೊತೆ ಹೊಂದಾಣಿಕೆ ಇಲ್ಲವೆಂದರೆ ನೀವು ಮಾಡುತ್ತಿದ್ದ ಆರೋಪಗಳ ಬಗ್ಗೆ ತನಿಖೆಗೆ ಆದೇಶ ಮಾಡಿ ಎಂದು ಸವಾಲೆಸೆದರು.
ನಿಮ್ಮ ವಿರುದ್ದ ಅವರು ಅವರ ವಿರುದ್ದ ನೀವು ಸಮಯ ಬಂದಾಗ ಮಾತ್ರ ಟೀಕೆ ಮಾಡಿಕೊಳ್ಳುತ್ತೀರಿ? ನನಗೆ ತುರಿಕೆಯಾದಾಗ ನೀನು ನನ್ನ ಬೆನ್ನು ಕೆರಿ, ನಿನಗೆ ತುರಿಕೆಯಾದಾಗ ನಾನು ಬೆನ್ನು ಕೆರೆಯುತ್ತೀನೆ ಎನ್ನುವ ರೀತಿ ನಿಮ್ಮ ಒಪ್ಪಂದವೇ ಎಂದು ಪ್ರಶ್ನಿಸಿದರು.
ಸಿದ್ದರಾಮಯ್ಯ ಅವರೇ ನಿಮ್ಮ ಬಗ್ಗೆ ಬಿಜೆಪಿಯ ಕೆಲವು ಅತಿರಥ ಮಹಾರಥರು ಮಾತಾಡದೆ ಇರಬಹದು. ಕೆಲವರು ಶಾಮೀಲು ಆಗಿರಬಹುದು ಬಿಜೆಪಿ ಕಾರ್ಯಕರ್ತ ಯಾವತ್ತೂ ನಿಮ್ಮ ಜೊತೆ ಶಾಮೀಲು ಆಗಿಲ್ಲ. ಆಗುವುದೂ ಇಲ್ಲ. ಚುನಾವಣೆಯಲ್ಲಿ ಬಿಜೆಪಿಯ ಕೆಲವು ಮುಖಂಡರು ಸೋತಿರಬಹುದು. ನಮ್ಮ ಕಾರ್ಯಕರ್ತರು ಸೋತಿಲ್ಲ ಎಂದು ಪ್ರತಾಪ್ ಸಿಂಹ ಹೇಳಿದರು.
ದುಡ್ಡು ಎಲ್ಲಿಂದ ತರುತ್ತೀರಿ?: ಎಷ್ಟೇ ಕಷ್ಟವಾದರೂ ಗ್ಯಾರಂಟಿ ಜಾರಿ ಮಾಡುತ್ತೇವೆ ಎಂದು ಸಿದ್ದರಾಮಯ್ಯ ಹೇಳುತ್ತಿದ್ದಾರೆ. ಆದರೆ ಅದಕ್ಕೆ ದುಡ್ಡು ಎಲ್ಲಿಂದ ತರುತ್ತೀರಿ ಎಂದು ಮೊದಲು ಹೇಳಿ? ಜನರ ಸುಲಿಗೆ ಮಾಡಿ ಉಚಿತ ಯೋಜನೆ ಜಾರಿ ಮಾಡುವುದು ಕಾಂಗ್ರೆಸ್ ಸಂಸ್ಕೃತಿಯಾ? ಸಿದ್ದರಾಮಯ್ಯ, ಡಿಕೆ ಶಿವಕುಮಾರ್, ಎಂ.ಬಿ. ಪಾಟೀಲ್ ತಮ್ಮ ಸ್ವಂತ ಆಸ್ತಿ ಮಾರಿ ಉಚಿತ ಗ್ಯಾರಂಟಿ ಮಾಡುತ್ತಾರಾ ಎಂದರು.
ಉಚಿತ ಗ್ಯಾರಂಟಿ ಯೋಜನೆಗೆ ಸಂಪನ್ಮೂಲ ಕ್ರೂಢೀಕರಣ ಹೇಗೆ ಅಂತಾ ಕೇಳಿದರೆ ಪ್ರಶ್ನೆ ಕೇಳಿದವರೆ ಮನುವಾದಿಗಳು ಅಂದರೆ ಏನರ್ಥ? ಐದು ವರ್ಷದ ನಂತರ ನಿಮಗೆ ರಾಜಕೀಯ ಭವಿಷ್ಯವಿಲ್ಲ. ಆದರೆ ಕರ್ನಾಟಕಕ್ಕೆ ಭವಿಷ್ಯ ಇರುತ್ತದೆ. ಅದಕ್ಕೆ ಕಲ್ಲು ಹಾಕಬೇಡಿ. ಬಿಜೆಪಿ ಬಗ್ಗೆ ಜನರಿಗೆ ಅಸಮಾಧಾನ ಇದ್ದ ಕಾರಣ ಜನ ಬಿಜೆಪಿ ತಿರಸ್ಕರಿಸಿದ್ದಾರೆ. ನಿಮ್ಮ ಗ್ಯಾರಂಟಿ ನೋಡಿ ಜನ ನಿಮಗೆ ಮತ ಹಾಕಿದ್ದಾರೆ. ಕೆಲ ಮುಖಂಡರಿಂದ ಬಿಜೆಪಿ ಅವರು ಮಣ್ಣು ತಿಂದಿದ್ದು ಆಗಿದೆ. ನೀವು ಈಗ ಮಣ್ಣು ತಿನ್ನುತ್ತಿರಾ? ಸುಮ್ಮನೆ ಬಿಜೆಪಿ, ಮನುವಾದ, ಆರ್ ಎಸ್ಎಸ್ ಎಂದು ವಿಷಯಾಂತರ ಮಾಡಬೇಡಿ. ರಾಜ್ಯದ ಹಣಕಾಸು ಸ್ಥಿತಿ ಹೇಗಿದೆ. ಇದಕ್ಕೆ ಶ್ವೇತಪತ್ರ ಹೊರಡಿಸಿ ಮರಾಜ್ಯದ ಯಾವ ಸಿಎಂ ಎಷ್ಟು ಸಾಲ ಮಾಡಿದ್ದಾರೆ ಎಂಬುದನ್ನು ಅಧಿಕೃತವಾಗಿ ಹೇಳಿ ಎಂದರು.
ವಿದ್ಯುತ್ ಬಿಲ್ ನ್ನು ಯದ್ವಾತದ್ವ ಏರಿಕೆ ಮಾಡಿ ಈ ಮೂಲಕ ಒಂದಷ್ಟು ಜನರ ದರೋಡೆ ಮಾಡಿ ಇನ್ನೊಬ್ಬರಿಗೆ ಕೊಡುವ ನಿಮ್ಮ ನಾಟಕದ ವಿರುದ್ದ ಜನಾಂದೋಲನ ಮಾಡುತ್ತೇವೆ ಎಂದರು.
ಇದನ್ನೂ ಓದಿ:Sandalwood: ಮಾರಿ..ಮಾರಿ..ಮಾರಿಗೆ ದಾರಿ.. ರಾಜ್ ಬಿ ಶೆಟ್ಟಿ “ಟೋಬಿ” ರಿಲೀಸ್ ಡೇಟ್ ಔಟ್
ವಿದ್ಯುತ್ ಬಿಲ್ ಏರಿಕೆ ಮಾಡಿದ್ದು ಬಿಜೆಪಿ ಸರಕಾರ ಎಂಬ ಕಾಂಗ್ರೆಸ್ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಪ್ರತಾಪ್ ಸಿಂಹ, ಬಿಜೆಪಿ ಗೋಹತ್ಯೆ ನಿಷೇಧ, ಮತಾಂತರ ನಿಷೇಧ ಕಾಯ್ದೆ ಜಾರಿ ಮಾಡಿತ್ತು ಇದನ್ನು ಮುಂದುವರಿಸುವ ಮಾತಾಡಿ. ರಾಜ್ಯದ ಜನರ ದಾರಿ ತಪ್ಪಿಸಬೇಡಿ. ಕೆಇಆರ್ ಸಿ ದರ ಏರಿಕೆಗೆ ಶಿಫಾರಸ್ಸು ಮಾಡಿದೆ. ಅದನ್ನು ತಡೆಯುವ ಅಥವಾ ತಿರಸ್ಕರಿಸುವ ಹಕ್ಕು ರಾಜ್ಯ ಸರಕಾರಕ್ಕೆ ಇದೆ. ಕಳೆದ ಸರಕಾರ ಮಾಡಿದ್ದ ಗುತ್ತಿಗೆದಾರ ಹಣ ಬಿಡುಗಡೆ ಆದೇಶಕ್ಕೆ ತಡೆ ಹಾಕುತ್ತೀರಿ ಆದರೆ ವಿದ್ಯುತ್ ಬಿಲ್ ಆದೇಶಕ್ಕೆ ಯಾಕೆ ತಡೆ ಹಾಕುವುದಿಲ್ಲ? ಎಲ್ಲಿಂದ ನಿಮಗೆ ಕಮಾಯಿ ಆಗುತ್ತೆ ಎಲ್ಲಿಂದ ನಿಮಗೆ ವ್ಯಾಪಾರ ಆಗುತ್ತೆ. ಆ ವಿಚಾರದ ಬಗ್ಗೆ ಮಾತ್ರ ನಿಮ್ಮ ಆಸಕ್ತಿಯೇ ಎಂದು ಪ್ರಶ್ನಿಸಿದರು.
ಫಾಸ್ಟ್ಯಾಗ್ ಸಮಸ್ಯೆ ಇಲ್ಲ: ಬೆಂಗಳೂರು – ಮೈಸೂರು ಹೈವೆ ರಸ್ತೆಯ ಟೋಲ್ ನಲ್ಲಿ ಫಾಸ್ಟ್ ಟ್ಯಾಗ್ ಸಮಸ್ಯೆ ವಿಚಾರಕ್ಕೆ ಸ್ಪಷ್ಟನೆ ನೀಡಿದ ಪ್ರತಾಪ್ ಸಿಂಹ, ಟೋಲ್ ಗಳಲ್ಲಿ ಫಾಸ್ಟ್ ಟ್ಯಾಗ್ ಕೆಲಸ ಮಾಡುತ್ತಿದೆ. ಯಾವ ಸಮಸ್ಯೆಯೂ ಇಲ್ಲ. ಟೋಲ್ ಸಂಗ್ರಹದ ಆರಂಭದಲ್ಲಿ ಇತ್ತು. ಈಗ ಈ ಸಮಸ್ಯೆ ಇಲ್ಲ ಎಂದರು.
ಫಾಸ್ಟ್ ಟ್ಯಾಗ್ ಇರದೆ ಇದ್ದರೆ ಡಬಲ್ ಚಾರ್ಜ್ ಕಟ್ಟುವುದು ಕಡ್ಡಾಯ. ಇಡೀ ದೇಶದಲ್ಲಿ ಆರ್ಥಿಕ ವರ್ಷ ಶುರುವಾದಾಗ ಟೋಲ್ ಹೆಚ್ಚಳ ಸಹಜ. ಈ ಹೈವೆಗೆ ಏಪ್ರಿಲ್ ನಲ್ಲಿ ಟೋಲ್ ಹೆಚ್ಚಳ ಆಗಬೇಕಿತ್ತು. ಆಗ ಆಗಿರಲಿಲ್ಲ ಈಗ 22% ಏರಿಕೆ ಆಗಿದೆ ಎಂದು ಪ್ರತಾಪ್ ಸಿಂಹ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf Bill: ಜೆಪಿಸಿ ಅಧ್ಯಕ್ಷರ ಭೇಟಿ ಚುನಾವಣ ನಿಯಮ ಉಲ್ಲಂಘನೆ: ಸಚಿವ ಪ್ರಿಯಾಂಕ್
MUDA: ಆರೋಪಿ ಸ್ಥಾನದಲ್ಲಿರುವ ಸಿಎಂ ತಮ್ಮ ಬೆನ್ನು ತಾವೇ ತಟ್ಟಿಕೊಳ್ಳುತ್ತಿದ್ದಾರೆ: ಬಿವೈವಿ
Congress: ಸಿದ್ದರಾಮಯ್ಯ ಮಾಸ್ ಲೀಡರ್, ಮುಗಿಸಲು ಬಿಜೆಪಿ ಯತ್ನ: ಡಿ.ಕೆ.ಶಿವಕುಮಾರ್
Waqf: ಪಾಕಿಸ್ತಾನದಲ್ಲಿ ವಕ್ಫ್ ಆಸ್ತಿ 8 ಲಕ್ಷ, ಭಾರತದಲ್ಲಿಯೇ 9.5 ಲಕ್ಷ ಎಕರೆ: ಯತ್ನಾಳ್
By Election: ಸಿದ್ದರಾಮಯ್ಯ ಜೈಲಿಗೆ ಹೋಗುವುದು ನಿಶ್ಚಿತ: ಬಿ.ಎಸ್.ಯಡಿಯೂರಪ್ಪ ಭವಿಷ್ಯ
MUST WATCH
ಹೊಸ ಸೇರ್ಪಡೆ
Waqf Bill: ಜೆಪಿಸಿ ಅಧ್ಯಕ್ಷರ ಭೇಟಿ ಚುನಾವಣ ನಿಯಮ ಉಲ್ಲಂಘನೆ: ಸಚಿವ ಪ್ರಿಯಾಂಕ್
MUDA: ಆರೋಪಿ ಸ್ಥಾನದಲ್ಲಿರುವ ಸಿಎಂ ತಮ್ಮ ಬೆನ್ನು ತಾವೇ ತಟ್ಟಿಕೊಳ್ಳುತ್ತಿದ್ದಾರೆ: ಬಿವೈವಿ
By Election: ಒಬ್ಬ ಯುವಕನ ಕಟ್ಟಿ ಹಾಕಲು ಬೀಡುಬಿಟ್ಟ ಕೈ ನಾಯಕರ ದಂಡು: ಎಚ್.ಡಿ.ಕುಮಾರಸ್ವಾಮಿ
Rahul Gandhi ಗುರಿ ತಪ್ಪಿದ ಕ್ಷಿಪಣಿ, ಸೋನಿಯಾರಿಂದ ತರಬೇತಿ ಅಗತ್ಯ: ಹಿಮಾಂತ
Delhi; ಕಾನೂನು ಅಧಿಕಾರಿ ನಿವಾಸದಲ್ಲಿ 3.79 ಕೋಟಿ ನಗದು ಸಿಬಿಐನಿಂದ ವಶಕ್ಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.