ಸಮಸ್ಯೆಗಳ ಪರಿಹಾರಕ್ಕೆ ಒತ್ತಾಯ


Team Udayavani, Jan 24, 2019, 7:22 AM IST

m3-samasye.jpg

ಹುಣಸೂರು: ಹಳ್ಳಿಗಳಲ್ಲಿ ಅಕ್ರಮ ಮದ್ಯ ಮಾರಾಟಕ್ಕೆ ಕಡಿವಾಣ ಹಾಕಿ, ಅಕ್ರಮ ಗಣಿಗಾರಿಕೆ ನಿಲ್ಲಿಸಿ, ಠಾಣೆಗಳಲ್ಲಿ ಮಧ್ಯವರ್ತಿಗಳ ಹಾವಳಿ ತಪ್ಪಿಸಿ, ಸ್ಮಶಾನ ಒತ್ತುವರಿ ತೆರವುಗೊಳಿಸಿ, ನೊಂದವರಿಗೆ ಪರಿಹಾರ ಕೊಡಿಸಿ. ಹೀಗೆ ಹಲವು ಸಮಸ್ಯೆಗಳು ಹುಣಸೂರು ಡಿವೈಎಸ್ಪಿ ಕಚೇರಿಯಲ್ಲಿ ಆಯೋಜಿಸಿದ್ದ ಉಪ ವಿಭಾಗ ಮಟ್ಟದ ಪರಿಶಿಷ್ಟಜಾತಿ, ಪಂಗಡದ ಸಭೆಯಲ್ಲಿ ದೂರುಗಳು ಕೇಳಿ ಬಂದವು.

ಬಲ್ಲೇನಹಳ್ಳಿ ಕೆಂಪರಾಜ್‌ ರತ್ನಪುರಿಯ ಬಸ್‌ನಿಲ್ದಾಣ, ದೇವಸ್ಥಾನವಿರುವ ಬ್ಯಾಡರಹಳ್ಳಿ ಕಾಲೋನಿ ವೃತ್ತದ ಬಾರ್‌ ಸ್ಥಳಾಂತರಿಸಬೇಕು ಹಾಗೂ ಹಳ್ಳಿಗಳಲ್ಲಿ ಅಕ್ರಮ ಮದ್ಯ ಮಾರಾಟ ಎಗ್ಗಿಲ್ಲದೆ ನಡೆಯುತ್ತಿದ್ದು ಇದಕ್ಕೆ ಅಬಕಾರಿ ಅಧಿಕಾರಿಗಳು ಕಾರಣವಾಗಿದ್ದು, ಅವರ ವಿರುದ್ಧ ಕ್ರಮ ವಹಿಸಬೇಕೆಂದು ಆಗ್ರಹಿಸಿದರು.
 
ಶವಪತ್ತೆ ಪ್ರಕರಣ: ಪಿರಿಯಾಪಟ್ಟಣ ತಾಲೂಕಿನ ಪುಡಾನಹಳ್ಳಿ ದಲಿತವ್ಯಕ್ತಿಯ ಶವ ಮೂರು ದಿನಗಳ ನಂತರ ಟಿಬೆಟ್‌ ಕ್ಯಾಂಪ್‌ ಬಳಿಯ ಜಮೀನಿನಲ್ಲಿ ಸಿಕ್ಕಿದ್ದು, ಈ ಜಮೀನು ಮಾಲಿಕರು ಬೇರೆ ಊರಿನಲ್ಲಿದ್ದಾರೆ. ಇದು ಹೇಗಾಯಿತು? ಅನಾರೋಗ್ಯ ಪೀಡಿತನಾಗಿರುವ ನನ್ನ ಸಹೋದರನ ಸಾವಿನ ಬಗ್ಗೆ ತನಿಖೆಯಾಗಬೇಕು ಎಂದು ಗ್ರಾಮದ ಜ್ಯೋತಿ ಮನವಿ ಮಾಡಿದರು.

ಐಲಾಪುರ ರಾಮು ದೊಡ್ಡ ಹರವೆ ಬಳಿಯ ಟಿಬೆಟ್‌ ನಿರಾಶ್ರತರ ಜಮೀನಿನಲ್ಲಿ ಸಿಕ್ಕ ದಲಿತನ ಶವದ ಬಗ್ಗೆ ಗ್ರಾಮದ ಕೆಲವರ ಮೇಲೆ ಅನುಮಾನವಿದೆ. ಹಳ್ಳಿಗಳ ದಲಿತ ಕೇರಿಗಳಲ್ಲಿ ಮದ್ಯ ಮಾರಾಟ ನಡೆಯುತ್ತಿದ್ದು, ಸಮಗ್ರ ತನಿಖೆಯಾಗಬೇಕು ಎಂದು ಒತ್ತಾಯಕ್ಕೆ ಸ್ಪಂದಿಸಿದ ಡಿವೈಎಸ್ಪಿ  ಭಾಸ್ಕರ ರೈ ಪಿರಿಯಾಪಟ್ಟಣದಲ್ಲಿ ಸಭೆ ಆಯೋಜಿಸಿ ಗ್ರಾಮಸ್ಥರ ಸಮ್ಮುಖದಲ್ಲೇ ವಿಚಾರಣೆ ಕೈಗೊಂಡು ಸತ್ಯಾಸತ್ಯತೆ ಪರಿಶೀಲಿಸಿ ಕ್ರಮವಹಿಸಲಾಗುವುದೆಂದು ಭರವಸೆ ನೀಡಿದರು.

ತಮ್ಮಡಹಳ್ಳಿ ಮಹದೇವಯ್ಯ ಹಳ್ಳಿಯಲ್ಲಿ ನಡೆದ ಜಗಳಕ್ಕೆ ಸಂಬಂಧಿಸಿದಂತೆ ಹುಣಸೂರು ಗ್ರಾಮಾಂತರ ಠಾಣೆಯಲ್ಲಿ ವಿರುದ್ಧ ಪ್ರಕರಣ ದಾಖಲಿಸಿದ್ದು, ತಾವು ಯಾವುದೇ ಕೆಲಸಕ್ಕೆ ಹೋಗದಂತಾಗಿದೆ. ಈ ಬಗ್ಗೆ ತನಿಖೆ ನಡೆಸಿ ನ್ಯಾಯ ಒದಗಿಸಬೇಕೆಂದು ಮನವಿ ಮಾಡಿದರು. 

ಶಾಶ್ವತ ಪರಿಹಾರ ಅಗತ್ಯ: ಕಟ್ಟೆಮಳಲವಾಡಿದೇವೇಂದ್ರ ಮಾತನಾಡಿ, ಬೈಕ್‌ಗಳಲ್ಲಿ ಮದ್ಯ ಸರಬರಾಜು ಮಾಡಲಾಗುತ್ತಿದೆ ಈ ಕುರಿತು ತನಿಖೆ ನಡೆಸಿ ಕ್ರಮಕೈಗೊಳ್ಳಬೇಕು. ನಮ್ಮೂರಿನ ಸ್ಮಶಾನದ ಪಕ್ಕದಲ್ಲಿ ಸೇತುವೆ ನಿರ್ಮಾಣ ಮಾಡಿದ್ದು, ಗುಂಡಿ ತೆಗೆದರೆ ನೀರು ಬರುತ್ತಿದ್ದು, ಶವ ಸಂಸ್ಕಾರ ನಡೆಸಲು ಆಗುತ್ತಿಲ್ಲ, ಬದಲಿ ವ್ಯವಸ್ಥೆ ಮಾಡಿಕೊಡಬೇಕು ಹಾಗೂ ಮುತ್ತುರಾಯನ ಹೊಸಹಳ್ಳಿಯಲ್ಲಿ ಸ್ಮಶಾನ ಭೂಮಿ ಒತ್ತುವರಿಯಾಗಿದೆ ಈ ಸಮಸ್ಯೆಗೆ ಶಾಶ್ವತ ಪರಿಹಾರ ನೀಡಬೇಕೆಂದು ಒತ್ತಾಯಿಸಿದರು.

ಶೆಟ್ಟಹಳ್ಳಿ ಲಕ್ಕಪಟ್ಟಣ ಗಿರಿಜನ ಪುನರ್ವಸತಿ ಕೇಂದ್ರದ ಅಧ್ಯಕ್ಷ ಜೆ.ಟಿ.ರಾಜಪ್ಪ ಈ ಸಭೆಗೆ ಗಿರಿಜನ ಕಲ್ಯಾಣಾ ಕಾರಿಗಳನ್ನು ಕರೆಸಬೇಕು, ಹಾಡಿಗಳ ಮಟ್ಟದಲ್ಲೇ ಪ್ರತ್ಯೇಕವಾಗಿ ಸಭೆ ನಡೆಸಿ ಆದಿವಾಸಿಗಳ ಸಮಸ್ಯೆಗೆ ಸ್ಪಂದಿಸಬೇಕೆಂದರು. ಹನಗೋಡಿನ ಉಪ ಠಾಣೆ ಇರುವ ಜಾಗದಲ್ಲಿ ಅಂಬೇಡ್ಕರ್‌ ಭವನ ನಿರ್ಮಿಸಿಕೊಡಬೇಕೆಂದು ಕೆ.ಸ್ವಾಮಿ ಮನವಿ ಮಾಡಿದರು. ರತ್ನಪುರಿ ಪುಟ್ಟಸ್ವಾಮಿ ದಲಿತರ ಭೂಮಿ ವಿವಾದದ ವೇಳೆ ಪೊಲೀಸ್‌ ಠಾಣೆಗಳಲ್ಲಿ ಉಳ್ಳವರ ಪರವಾಗಿ ಕೆಲಸ ಮಾಡುತ್ತಿದ್ದು, ಅಗತ್ಯ ಕ್ರಮ ಕೈಗೊಳ್ಳಬೇಕೆಂದರು. 

ಸಭೆಯಲ್ಲಿ ವೃತ್ತ ನಿರೀಕ್ಷಕರಾದ ಪೂವಯ್ಯ, ಹರೀಶ್‌ಕುಮಾರ್‌, ಪ್ರದೀಪ್‌, ಎಸ್‌.ಐ.ಗಳಾದ ಮಹೇಶ್‌, ಶಿವಪ್ರಕಾಶ್‌ ಡಿ.ಕುಮಾರ್‌, ಆನಗಟ್ಟಿದೇವರಾಜ್‌, ಪದ್ಮಣ್ಣೇಗೌಡ, ನಿಲುವಾಗಿಲಿನ ದಲಿತ ಮುಖಂಡರು ಮಾತನಾಡಿದರು. 

ಟಾಪ್ ನ್ಯೂಸ್

Bengal

Filmmaker Died: ಖ್ಯಾತ ಸಿನಿಮಾ ನಿರ್ದೇಶಕ ಶ್ಯಾಂ ಬೆನಗಲ್‌ ವಿಧಿವಶ

Mangaluru: ವಿಎ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ

Mangaluru: ವಿಎ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ

CTR-Wife-pallavi

ಸುಮ್ನೆ ಬ್ಯಾಂಡೇಜ್‌ ಹಾಕಿಕೊಳ್ಳಲು ಯಾರಿಗೂ ತಲೆ ಕೆಟ್ಟಿಲ್ಲ: ಸಿ.ಟಿ.ರವಿ ಪತ್ನಿ ಪಲ್ಲವಿ

CKM-CTR

ಬಿಜೆಪಿ, ಕಾಂಗ್ರೆಸ್‌ಗೆ ಪ್ರತ್ಯೇಕ ಕಾನೂನಿಲ್ಲ, ನನ್ನ ದೂರಿಗೆ ಕ್ರಮವಿಲ್ಲವೇಕೆ?: ಸಿ.ಟಿ.ರವಿ

Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ

Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ

Road Mishap: ಬೈಕ್‌- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು

Road Mishap: ಬೈಕ್‌- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು

Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು

Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಳೆಬಾಳುವ ಎತ್ತು ಬಲಿ

Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಲೆಬಾಳುವ ಎತ್ತು ಬಲಿ

‌Mysore: ಮೊಬೈಲ್‌ ಜೂಜಾಟ; ನಾಲ್ವರ ಬಂಧನ

‌Mysore: ಮೊಬೈಲ್‌ ಜೂಜಾಟ; ನಾಲ್ವರ ಬಂಧನ

22-hunsur

Hunsur: ಒಂದೆಡೆ ಚಿರತೆ ಸೆರೆ, ಮತ್ತೊಂದೆಡೆ ಅಪಘಾತ

5-hunsur

Hunsur: ಬಸ್ ಡಿಕ್ಕಿಯಾಗಿ ಪಾದಾಚಾರಿ ಸಾವು

MUDA Scam: ಕೇಸ್‌ ವಾಪಸ್‌ಗೆ ಹಣದ ಆಮಿಷ? ಸ್ನೇಹಮಯಿ ಕೃಷ್ಣ ಲೋಕಾಯುಕ್ತಕ್ಕೆ ದೂರು

MUDA Scam: ಕೇಸ್‌ ವಾಪಸ್‌ಗೆ ಹಣದ ಆಮಿಷ? ಸ್ನೇಹಮಯಿ ಕೃಷ್ಣ ಲೋಕಾಯುಕ್ತಕ್ಕೆ ದೂರು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

police crime

Gangolli, Ajekaru; ಮಹಿಳೆಯರಿಗೆ ಜೀವ ಬೆದರಿಕೆ

Bengal

Filmmaker Died: ಖ್ಯಾತ ಸಿನಿಮಾ ನಿರ್ದೇಶಕ ಶ್ಯಾಂ ಬೆನಗಲ್‌ ವಿಧಿವಶ

death

Belthangady : ಸೊಪ್ಪು ತರಲು ಹೋಗಿದ್ದ ವ್ಯಕ್ತಿ ಆಕಸ್ಮಿಕ ಸಾ*ವು

baby

Sullia: ಒಂಟಿಯಾಗಿ ಪತ್ತೆಯಾದ ಮಗು ಪೋಷಕರ ಮಡಿಲಿಗೆ

Mangaluru: ವಿಎ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ

Mangaluru: ವಿಎ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.