ಮೈಸೂರಿನ ಎಸ್‌ಡಿಎಂ ಐಎಂಡಿಗೆ ಅಂತಾರಾಷ್ಟ್ರೀಯ ಮಾನ್ಯತೆ


Team Udayavani, Jun 18, 2017, 12:21 PM IST

mys4.jpg

ಬೆಳ್ತಂಗಡಿ: ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಎಜುಕೇಶನಲ್‌ ಟ್ರಸ್ಟ್‌ ಆಡಳಿತಕ್ಕೊಳಪಟ್ಟ ಮೈಸೂರಿನಲ್ಲಿರುವ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಇನ್‌ಸ್ಟಿಟ್ಯೂಟ್‌ ಫಾರ್‌ ಮ್ಯಾನೇಜ್‌ಮೆಂಟ್‌ ಡೆವಲಪ್‌ಮೆಂಟ್‌ (ಎಸ್‌ಡಿಎಂ ಐಎಂಡಿ) ನೀಡುತ್ತಿರುವ ಪೋಸ್ಟ್‌ ಗ್ರಾಜ್ಯುಯೇಟ್‌ ಡಿಪ್ಲೊಮಾ ಇನ್‌ ಮ್ಯಾನೇಜ್‌ಮೆಂಟ್‌ (ಪಿಜಿಡಿಎಂ) ಶಿಕ್ಷಣಕ್ಕೆ ಅಮೆರಿಕದ ಅಕ್ರೆಡಿಟೇಶನ್‌ ಕೌನ್ಸಿಲ್‌ ಫಾರ್‌ ಬಿಸಿನೆಸ್‌ ಸ್ಕೂಲ್ಸ್‌ ಆ್ಯಂಡ್‌ ಪ್ರೋಗ್ರಾಮ್ಸ್‌ (ಎ.ಸಿ.ಬಿ.ಎಸ್‌.ಪಿ.) ಅಂತಾರಾಷ್ಟ್ರೀಯ ಮಾನ್ಯತೆ ನೀಡಿದೆ.

ಮಾನ್ಯತೆಯ ಪ್ರದಾನ ಸಮಾರಂಭವು ಜೂ. 26ರಂದು ಅಮೆರಿಕದ ಲಾಸ್‌ ಏಂಜಲೀಸ್‌ ಬಳಿ ಇರುವ ಅನಹೆಮ್‌ನಲ್ಲಿ ನಡೆಯಲಿದ್ದು, ಸಂಸ್ಥೆಯ ಆಡಳಿತ ಮಂಡಳಿ ಅಧ್ಯಕ್ಷರಾದ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆ ಪ್ರಶಸ್ತಿ ಸ್ವೀಕರಿಸಲಿದ್ದಾರೆ. ಸಂಸ್ಥೆಯ ನಿರ್ದೇಶಕರಾದ ಡಾ| ಎನ್‌.ಆರ್‌. ಪರಶುರಾಮನ್‌ ಕೂಡ ಸಮಾರಂಭದಲ್ಲಿ ಭಾಗವಹಿಸುವರು.

ಈ ಸಂಸ್ಥೆಯು ಜಾಗತಿಕ ಮನ್ನಣೆಗೆ ಪಾತ್ರವಾದ ಬಿ. ಸ್ಕೂಲ್‌ ಆಗಿದ್ದು, ವಿಶ್ವದ ಬಿ. ಸ್ಕೂಲ್‌ಗ‌ಳು ಮತ್ತು ವಿಶ್ವವಿದ್ಯಾನಿಲಯಗಳೊಂದಿಗೆ ವಿನಿಮಯ ಕಾರ್ಯಕ್ರಮಗಳು, ಸಂಶೋಧನಾ ಕಾರ್ಯಗಳು ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳ ಸಹಭಾಗಿತ್ವಕ್ಕೆ ಸಂಸ್ಥೆಗೆ ಅವಕಾಶ ದೊರಕಲಿದೆ. ವಿದ್ಯಾರ್ಥಿಗಳು ಜಾಗತಿಕ ಮಟ್ಟದಲ್ಲಿ ಗುರುತಿಸಲ್ಪಡುತ್ತಾರೆ. ಸಂಸ್ಥೆಯ ಪ್ರಾಧ್ಯಾಪಕರು ಕೂಡ ಜಾಗತಿಕ ಮಟ್ಟದಲ್ಲಿ ಮಾನ್ಯತೆ ಹೊಂದಿದ ಇತರ ಸಂಸ್ಥೆಗಳ ಅಧ್ಯಾಪಕರೊಂದಿಗೆ ವಿಚಾರ ವಿನಿಮಯ ನಡೆಸಲು ಮುಕ್ತ ಅವಕಾಶವಿದೆ.

ಸಂಸ್ಥೆಯಲ್ಲಿ ನಾಯಕತ್ವ ಗುಣ, ಯೋಜನಾಬದ್ಧ ಬೋಧನಾ ವಿಧಾನ, ಪ್ರಾಧ್ಯಾಪಕರ ಶೈಕ್ಷಣಿಕ ಸಾಧನೆ, ವಿದ್ಯಾರ್ಥಿಗಳೊಂದಿಗೆ ಸೌಹಾರ್ದಯುತ ಸಂಬಂಧ, ಮಾನವೀಯ ಮೌಲ್ಯಗಳು – ಇತ್ಯಾದಿಗಳ ಪರಿಶೀಲನೆ ನಡೆಸಿ ಸಂಸ್ಥೆಯನ್ನು ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಎ.ಸಿ.ಬಿ.ಎಸ್‌.ಪಿ. ಯ ಪ್ರಧಾನ ಮೌಲ್ಯಮಾಪನಾಧಿಕಾರಿ ಡಾ| ಸ್ಟೆವೆ ಪಸ್ಕೆಲ್‌ ಹೇಳುವಂತೆ ಸಂಸ್ಥೆಯು ವಿದ್ಯಾರ್ಥಿಗಳಿಗೆ ನೀಡುತ್ತಿರುವ ಉತ್ಕೃಷ್ಟ ಗುಣಮಟ್ಟದ ಉದ್ಯಮಾಡಳಿತ ಶಿಕ್ಷಣದ ಗುಣಮಟ್ಟವನ್ನು ಪರಿಶೀಲಿಸಿ ಮಾನ್ಯತೆಯನ್ನು ನೀಡಲಾಗಿದೆ.

ಇ ಪಾಸ್‌ ಮಾನ್ಯತೆ: ಜರ್ಮನಿಯ ಬರ್ಲಿನ್‌ ನಗರದಲ್ಲಿ ನಡೆದ ಯುರೋಪಿಯನ್‌ ಫೌಂಡೇಶನ್‌ ಫಾರ್‌ ಮ್ಯಾನೇಜ್‌ಮೆಂಟ್‌ ಡೆವಲಪ್‌ಮೆಂಟ್‌ (ಇಎಫ್‌ಎಂಡಿ) ವಾರ್ಷಿಕ ಸಮ್ಮೇಳನದಲ್ಲಿ ವಿಶೇಷ ಸಮಾರಂಭದಲ್ಲಿ ಎಸ್‌.ಡಿ.ಎಂ.ಐ.ಎಂ.ಡಿ.ಯ ಪಿ.ಜಿ.ಡಿ.ಎಂ. ಶಿಕ್ಷಣಕ್ಕೆ ಇ-ಪಾಸ್‌ (ಎಜುಕೇಶನ್‌ ಪಾಲಿಸಿ ಆ್ಯಂಡ್‌ ಆಕ್ರೆಡಿಟೇಶನ್‌ ಸ್ಟಾಂಡರ್ಡ್‌) ಮಾನ್ಯತೆ ನೀಡಲಾಯಿತು.ಸಂಸ್ಥೆಯ ಆಡಳಿತ ಮಂಡಳಿಯ ಉಪಾಧ್ಯಕ್ಷ ಡಿ. ಸುರೇಂದ್ರ ಕುಮಾರ್‌ ಮತ್ತು ಸಂಸ್ಥೆಯ ನಿರ್ದೇಶಕರಾದ ಡಾ| ಎನ್‌. ಆರ್‌. ಪರಶುರಾಮನ್‌ ಬರ್ಲಿನ್‌ನಲ್ಲಿ ಮಾನ್ಯತಾ ಪತ್ರವನ್ನು ಸ್ವೀಕರಿಸಿದರು.

2016ರ ಜುಲೈಯಲ್ಲಿ ಸಂಸ್ಥೆಯ ವತಿಯಿಂದ ಸ್ವಯಂ ಅಧ್ಯಯನ ವರದಿ ಸಲ್ಲಿಸಿದ ಬಳಿಕ ಅಕ್ಟೋಬರ್‌ನಲ್ಲಿ ಯುರೋಪಿಯನ್‌ ಫೌಂಡೇಶನ್‌ ಫಾರ್‌ ಮ್ಯಾನೇಜ್‌ಮೆಂಟ್‌ ಡೆವಲಪ್‌ಮೆಂಟ್‌ನ (ಇಈಒಆ) ಶಿಕ್ಷಣ ತಜ್ಞರ ಸಮಿತಿಯು ಮೈಸೂರಿನಲ್ಲಿರುವ ಸಂಸ್ಥೆಗೆ ಭೇಟಿ ನೀಡಿತು. ಮಾನದಂಡಗಳಿಗೆ ಪೂರಕವಾದ ದಾಖಲೆಗಳು, ಸಂಸ್ಥೆಯ ಚಟುವಟಿಕೆಗಳ ವರದಿಗಳು ಮತ್ತು ಮೂಲಸೌಕರ್ಯಗಳನ್ನು ಸಮಿತಿಯವರು ಪರಿಶೀಲನೆ ನಡೆಸಿ ಅಂತಾರಾಷ್ಟ್ರೀಯ ಇ ಪಾಸ್‌ ಮಾನ್ಯತೆಗೆ ಅರ್ಹವೆಂದು ಅಂಗೀಕರಿಸಲಾಯಿತು.

ಟಾಪ್ ನ್ಯೂಸ್

Siddaramaiah

MUDA: 20 ವರ್ಷದಿಂದ ಶಾಸಕರಾಗಿ, ಮುಡಾ ಸದಸ್ಯರಾಗಿದ್ದೀರಿ, ಯಾಕೀ ಅವ್ಯವಸ್ಥೆ?: ಸಿಎಂ

Udupi: ಗೀತಾರ್ಥ ಚಿಂತನೆ 152: ತಣ್ತೀ ನಿಶ್ಚಯದಿಂದ ದೃಢತೆ

Udupi: ಗೀತಾರ್ಥ ಚಿಂತನೆ 152: ತಣ್ತೀ ನಿಶ್ಚಯದಿಂದ ದೃಢತೆ

Kundapura: ಅಡುಗೆ ಅನಿಲ ಜಾಗೃತಿ: ಮಹಿಳೆಯ ಸಂಶಯಾಸ್ಪದ ವರ್ತನೆ

Kundapura: ಅಡುಗೆ ಅನಿಲ ಜಾಗೃತಿ: ಮಹಿಳೆಯ ಸಂಶಯಾಸ್ಪದ ವರ್ತನೆ

Siddapura ಮಡಾಮಕ್ಕಿ: ಬಾವಿಗೆ ಬಿದ್ದು ವ್ಯಕ್ತಿ ಸಾವುSiddapura ಮಡಾಮಕ್ಕಿ: ಬಾವಿಗೆ ಬಿದ್ದು ವ್ಯಕ್ತಿ ಸಾವು

Siddapura ಮಡಾಮಕ್ಕಿ: ಬಾವಿಗೆ ಬಿದ್ದು ವ್ಯಕ್ತಿ ಸಾವು

Mangaluru ಮಾದಕವಸ್ತು ಸೇವನೆ; ಇಬ್ಬರು ವಶಕ್ಕೆ

Mangaluru ಮಾದಕವಸ್ತು ಸೇವನೆ; ಇಬ್ಬರು ವಶಕ್ಕೆ

Malpe: ಕಣ್ಮರೆಯಾಗಿದ್ದ ಮೀನುಗಾರನ ಮೃತದೇಹ ಪತ್ತೆMalpe: ಕಣ್ಮರೆಯಾಗಿದ್ದ ಮೀನುಗಾರನ ಮೃತದೇಹ ಪತ್ತೆ

Malpe: ಕಣ್ಮರೆಯಾಗಿದ್ದ ಮೀನುಗಾರನ ಮೃತದೇಹ ಪತ್ತೆ

ಮೂರು ದಿನವಾದರೂ ದಾಖಲಾಗದ ಎಫ್‌ಐಆರ್‌ ಮುಡಾ ದೂರಿನಲ್ಲಿ “ಕಡತ ತಿದ್ದುಪಡಿ’ ಅಂಶವೇ ಇಲ್ಲ!

ಮೂರು ದಿನವಾದರೂ ದಾಖಲಾಗದ ಎಫ್‌ಐಆರ್‌ ಮುಡಾ ದೂರಿನಲ್ಲಿ “ಕಡತ ತಿದ್ದುಪಡಿ’ ಅಂಶವೇ ಇಲ್ಲ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Siddaramaiah

MUDA: 20 ವರ್ಷದಿಂದ ಶಾಸಕರಾಗಿ, ಮುಡಾ ಸದಸ್ಯರಾಗಿದ್ದೀರಿ, ಯಾಕೀ ಅವ್ಯವಸ್ಥೆ?: ಸಿಎಂ

BGV-CM

Name Road Row: ಮೈಸೂರಿನ ರಸ್ತೆಗೆ ನಾಮಕರಣ ವಿಚಾರ; ಗೊಂದಲಗಳಿಗೆ ತೆರೆ ಎಳೆದ ಸಿಎಂ

Hunsur: ಕಬಿನಿ ಹಿನ್ನೀರಿನಲ್ಲಿ ನೀರು ನಾಯಿಗಳ ಚೆಲ್ಲಾಟ… ಸಫಾರಿಗರು ಖುಷ್

Hunsur: ಕಬಿನಿ ಹಿನ್ನೀರಿನಲ್ಲಿ ನೀರು ನಾಯಿಗಳ ಚೆಲ್ಲಾಟ… ಸಫಾರಿಗರು ಖುಷ್

5-hunsur

Hunsur: ಹುಲಿ ದಾಳಿಯಿಂದ ಹಸುವಿಗೆ ಗಾಯ

MLA–Harish-gowda

Mysuru: ರಸ್ತೆಗೆ ರಾಜಮನೆತನದ ಹೆಸರು ತೆಗೆದು ಸಿಎಂ ಹೆಸರಿಡುವುದಿಲ್ಲ: ಶಾಸಕ ಹರೀಶ್‌ ಗೌಡ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

Siddaramaiah

MUDA: 20 ವರ್ಷದಿಂದ ಶಾಸಕರಾಗಿ, ಮುಡಾ ಸದಸ್ಯರಾಗಿದ್ದೀರಿ, ಯಾಕೀ ಅವ್ಯವಸ್ಥೆ?: ಸಿಎಂ

Udupi: ಗೀತಾರ್ಥ ಚಿಂತನೆ 152: ತಣ್ತೀ ನಿಶ್ಚಯದಿಂದ ದೃಢತೆ

Udupi: ಗೀತಾರ್ಥ ಚಿಂತನೆ 152: ತಣ್ತೀ ನಿಶ್ಚಯದಿಂದ ದೃಢತೆ

BCCI

Vijay Hazare Trophy ಕ್ವಾರ್ಟರ್‌ ಫೈನಲ್‌ : ಕರ್ನಾಟಕಕ್ಕೆ ಬರೋಡ ಸವಾಲು

Kundapura: ಅಡುಗೆ ಅನಿಲ ಜಾಗೃತಿ: ಮಹಿಳೆಯ ಸಂಶಯಾಸ್ಪದ ವರ್ತನೆ

Kundapura: ಅಡುಗೆ ಅನಿಲ ಜಾಗೃತಿ: ಮಹಿಳೆಯ ಸಂಶಯಾಸ್ಪದ ವರ್ತನೆ

1-saaai

Malaysia Open Badminton: ಸಾತ್ವಿಕ್‌-ಚಿರಾಗ್‌ ಜೋಡಿ ಸೆಮಿಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.