ಇಂಧನ ಇಲಾಖೆ ಅಧಿಕಾರಿಗಳಿಗೆ ದಾಖಲೆ ತರುವಂತೆ ಹೆದರಿಸುತ್ತಿದ್ದಾರೆ: ಡಿಕೆಶಿ ಗಂಭೀರ ಆರೋಪ
Team Udayavani, Sep 15, 2022, 11:30 AM IST
ಮೈಸೂರು: ಇಂಧನ ಇಲಾಖೆ ಅಧಿಕಾರಿಗಳಿಗೆ ದಾಖಲೆ ತರುವಂತೆ ಹೆದರಿಸುತ್ತಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಗಂಭೀರ ಆರೋಪ ಮಾಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಬಗ್ಗೆ ಕೆಲ ಅಧಿಕಾರಿಗಳು ನನಗೆ ಕರೆ ಮಾಡಿದ್ದರು. ನನ್ನ ಅವಧಿಯ ದಾಖಲೆ ತರುವಂತೆ ಒತ್ತಡ ಹಾಕಲಾಗುತ್ತಿದೆ. ನಾನು ಎಲ್ಲಾ ದಾಖಲೆಗಳನ್ನು ಕೊಡಿ ಎಂದು ಹೇಳಿದ್ದೇನೆ. ತಪ್ಪು ಮಾಡಿದ್ದರೆ ನಾವೇ ಹಗ್ಗ ಸಹ ಕಳುಹಿಸಿ ಕೊಡುತ್ತೇವೆ. ಈ ಮೂಲಕ ಕಾಂಗ್ರೆಸ್ ಮತ್ತು ನನ್ನನ್ನು ಹೆದರಿಸಲು ಬಿಜೆಪಿ ಮುಂದಾಗಿದೆ. ನಾನು ಯಾವುದಕ್ಕೂ ಹೆದರುವವನಲ್ಲ. ಏನು ಬೇಕಾದರೂ ತನಿಖೆ ಮಾಡಿಕೊಳ್ಳಲಿ ಎಂದರು.
ಸಿಎಂ ಬಸವರಾಜ ಬೊಮ್ಮಾಯಿ ಸಮಗ್ರ ತನಿಖೆ ಹೇಳಿಕೆಗೆ ವ್ಯಂಗ್ಯವಾಡಿದ ಅವರು, ಚಡ್ಡಿ ಪ್ಯಾಂಟು ಹಾಸಿಗೆ ಮೊಟ್ಟೆ ಇತ್ಯಾದಿ ಎಲ್ಲಾ ತನಿಖೆ ಮಾಡಲಿ. ನಾನು ಎಲ್ಲದಕ್ಕೂ ಸಿದ್ದನಾಗಿದ್ದೇನೆ ತನಿಖೆ ಆರಂಭಿಸಲು . ಮೂರು ವರ್ಷ ಬೇಕಿತ್ತೇ ಎಂದು ಪ್ರಶ್ನಿಸಿದರು.
ದಾಖಲೆ ಮುಚ್ಚಿಟ್ಟಿದ್ದಾರೆ ಎಂಬ ಬಿಜೆಪಿ ಆರೋಪ ವಿಚಾರಕ್ಕೆ ತಿರುಗೇಟು ನೀಡಿದ ಅವರು, ಉತ್ತು ಹಾರೆ ತೆಗೆದುಕೊಂಡು ಬುಲ್ಡೋಜರ್ ನಲ್ಲಿ ಅಗೆಯಲಿ, ಬೋರ್ ತೆಗೆಸಲಿ, ನಮಗೇನು ಸಮಸ್ಯೆ ಇಲ್ಲ ಎಂದರು.
ಇದನ್ನೂ ಓದಿ:ಬೆಳ್ಳಂಬೆಳಗ್ಗೆ ಲಕ್ನೋ-ದೆಹಲಿ ಹೆದ್ದಾರಿಯಲ್ಲಿ ಭೀಕರ ಅಪಘಾತ: ನಾಲ್ವರು ಸಾವು, 30 ಮಂದಿಗೆ ಗಾಯ
ಪರಿಷತ್‌ನಲ್ಲಿ ಮತಾಂತರ ನಿಷೇಧ ಕಾಯ್ದೆ ಮಂಡನೆ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ರಾಜ್ಯದಲ್ಲಿ ಎಲ್ಲಿ ಮತಾಂತರ ನಡೆಯುತ್ತಿದೆ? ಪ್ರಚಾರಕ್ಕಾಗಿ ಬಿಜೆಪಿ ಮಂಡನೆ ಮಾಡುತ್ತಿದೆ. ಇದರಿಂದ ಯಾವುದೇ ಪ್ರಯೋಜನವಿಲ್ಲ. ಅಲ್ಪಸಂಖ್ಯಾತರಿಗೆ ಭಯ ಹುಟ್ಟಿಸಲು ಕಾಯ್ದೆ ಮಂಡಿಸಲಾಗುತ್ತಿದೆ. ಭಾವನಾತ್ಮಕ ವಿಚಾರವನ್ನು ಕೆರಳಿಸಲು ಮಂಡನೆ ಮಾಡಲಾಗುತ್ತಿದೆ. ಕಾಯ್ದೆ ಈ ಹಿಂದೆಯೇ ಇತ್ತು. ದೇಶ ರಾಜ್ಯ ವಿಭಜನೆ ಮಾಡಲು ಬಿಜೆಪಿ ಮುಂದಾಗಿದೆ. ಜಾತಿ ಧರ್ಮವನ್ನು ಒಡೆಯಲು ಹುನ್ನಾರ ಮಾಡಲಾಗುತ್ತಿದೆ, ಹಿಂದೂ ಧರ್ಮದ ಓಲೈಕೆ ಹಾಗೂ ಹೈ ಕಮಾಂಡ್ ಮೆಚ್ಚಿಸಲು ಮಂಡನೆ ಮಾಡುತ್ತಿದ್ದಾರೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli: ಮನೆ ದರೋಡೆಗೆ ಯತ್ನಿಸಿದ ದರೋಡಕೋರನ ಕಾಲಿಗೆ ಗುಂಡೇಟು
Davangere: ಉತ್ತಮ ಹಿಂಗಾರು: ಬಂಪರ್ ಇಳುವರಿ ನಿರೀಕ್ಷೆಯಲ್ಲಿ ಬೆಳೆಗಾರರು
Honey Trap; ಗುತ್ತಿಗೆದಾರನನ್ನು ಟೀಗೆ ಕರೆದು ಖೆಡ್ಡಾಕ್ಕೆ ಕೆಡವಿದಳು!
RTO; ಫಿಟ್‌ನೆಸ್ ಸರ್ಟಿಫಿಕೇಟ್‌ಗಿನ್ನು ಆರ್‌ಟಿಒ ಬೇಕಿಲ್ಲ!
High Court: ತೃತೀಯ ಲಿಂಗಿಗಳ ಜನನ, ಮರಣ ಪ್ರಮಾಣ ಪತ್ರದಲ್ಲಿ ಮಾರ್ಪಾಡು ಮಾಡಿ; ಹೈಕೋರ್ಟ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.