ಶೀಘ್ರ ಮೈಸೂರಿನಲ್ಲಿ ಬಂಡವಾಳ ಹೂಡಿಕೆದಾರರ ಸಮಾವೇಶ


Team Udayavani, Feb 24, 2020, 3:00 AM IST

shigra-mys

ಮೈಸೂರು: ಇತ್ತೀಚೆಗೆ ಹುಬ್ಬಳ್ಳಿಯಲ್ಲಿ ನಡೆದ ಬಂಡವಾಳ ಹೂಡಿಕೆದಾರರ ಸಮಾವೇಶದಂತೆ ಮೈಸೂರಿನಲ್ಲಿ ಬಂಡವಾಳ ಹೂಡಿಕೆದಾರರ ಸಮಾವೇಶ ಆಯೋಜಿಸಲು ಉದ್ದೇಶಿಸಲಾಗಿದ್ದು, ಅದಕ್ಕಾಗಿ ಶೀಘ್ರದಲ್ಲೇ ಪೂರ್ವಭಾವಿ ಸಭೆ ಕರೆಯಲಾಗುವುದು ಎಂದು ಬೃಹತ್‌ ಮತ್ತು ಮಧ್ಯಮ ಕೈಗಾರಿಕೆ ಸಚಿವ ಜಗದೀಶ್‌ ಶೆಟ್ಟರ್‌ ತಿಳಿಸಿದರು.

ನಗರದ ಸರ್ಕಾರಿ ಅತಿಥಿ ಗೃಹದಲ್ಲಿ ಭಾನುವಾರ ಜನಪ್ರತಿನಿಧಿಗಳು, ಕೈಗಾರಿಕೋದ್ಯಮಿಗಳು ಹಾಗೂ ಅಧಿಕಾರಿಗಳ ಸಭೆ ನಡೆಸಿ ಮಾತನಾಡಿ, ಹುಬ್ಬಳ್ಳಿಯಲ್ಲಿ ನಡೆದ ವಿಭಾಗ ಮಟ್ಟದ ಬಂಡವಾಳ ಹೂಡಿಕೆದಾರರ ಸಮಾವೇಶದಲ್ಲಿ 72 ಸಾವಿರ ಕೋಟಿ ರೂ. ಬಂಡವಾಳ ಹರಿದುಬಂದಿದೆ ಎಂದು ಮಾಹಿತಿ ನೀಡಿದರು.

ಬಾಂಬೆ ಇನ್ವೆಸ್ಟರ್ಸ್‌ ಮೀಟ್‌ ಮಾದರಿಯಲ್ಲಿ ಕರ್ನಾಟಕದ 2 ಮತ್ತು 3ನೇ ಸ್ತರದ ನಗರಗಳಲ್ಲಿ ವಲಯ ಮಟ್ಟದಲ್ಲಿ ಹೂಡಿಕೆದಾರರ ಸಭೆ ನಡೆಸಲಾಗುವುದು. 2019-24ರ ಕೈಗಾರಿಕೆ ನೀತಿಯಲ್ಲಿ ತಿಳಿಸಿರುವಂತೆ 2 ಮತ್ತು 3ನೇ ನಗರಗಳಲ್ಲಿ ಕೈಗಾರಿಕೆಗಳಿಗೆ ಒತ್ತು ನೀಡಲಾಗುವುದು ಎಂದರು.

ಮೈಸೂರು ಕೈಗಾರಿಕೆಗಳ ಸಂಘದ ಅಧ್ಯಕ್ಷ ವಾಸು ಹಲವಾರು ಪ್ರಸ್ತಾವನೆಗಳನ್ನು ಸಚಿವರಿಗೆ ಸಲ್ಲಿಸಿದರು. ಕೂರ್ಗಳ್ಳಿ ಕೈಗಾರಿಕೆ ಪ್ರದೇಶದಲ್ಲಿ ಜಿಲ್ಲಾ ಮಟ್ಟದ ಏಕಗವಾಕ್ಷಿ ಸಮಿತಿಯಿಂದ ಹಂಚಿಕೆಯಾಗಿರುವ ಉದ್ದಿಮೆದಾರರಿಗೆ ಹಂಚಿಕೆ ಪತ್ರ ನೀಡಬೇಕು. ತಾಂಡ್ಯ-ಹಿಮ್ಮಾವು ಕೈಗಾರಿಕಾ ಪ್ರದೇಶದಲ್ಲಿ 100 ಎಕರೆ ಪ್ರದೇಶವನ್ನು ಆಹಾರ ಮತ್ತು ಫಾರ್ಮ ಪಾರ್ಕ್‌ ಸ್ಥಾಪಿಸಲು ಮೀಸಲಿರಿಸಬೇಕು ಎಂದು ಮನವಿ ಮಾಡಿದರು.

ತಾಂಡ್ಯ ಕೈಗಾರಿಕಾ ಪ್ರದೇಶದಲ್ಲಿ ಅಭಿವೃದ್ಧಿಪಡಿಸಿರುವ 2 ಮಹಿಳಾ ಪಾರ್ಕ್‌ ಉದ್ದಿಮೆಗಳಿಗೆ ರಿಯಾಯಿತಿ ದರದಲ್ಲಿ ನಿವೇಶನ ಹಂಚಿಕೆಗೆ ಪರಿಗಣಿಸಬೇಕು. ಕೈಗಾರಿಕಾ ಪ್ರದೇಶದಲ್ಲಿ ಸರ್ಕಾರಿ ಹಾಗೂ ನಾಲಾ ಭೂಮಿಯನ್ನು ಕೆಐಎಡಿಬಿಗೆ ಹಸ್ತಾಂತರಿಸಬೇಕು ಎಂದು ಕೇಳಿದರು.

ಟ್ರಕ್‌ ಟರ್ಮಿನಲ್‌ ಸ್ಥಾಪನೆಗೆ 10 ಎಕರೆ ನಿವೇಶನ ಮೀಸರಿಸಬೇಕು. ಕೈಗಾರಿಕಾ ಪ್ರದೇಶ ತಾಜ್ಯ ಶೇಖರಣೆ, ಸಂಸ್ಕರಣೆ ಹಾಗೂ ವಿಲೇವಾರಿ ಘಟಕ ಸ್ಥಾಪಿಸಬೇಕು. ಕೈಗಾರಿಕೆ ಪ್ರದೇಶಗಳಿಗೆ ಹೊಂದಿಕೊಂಡಂತೆ ಇರುವ ಭೂಮಿಯನ್ನು ವಸತಿ ಬಡಾವಣೆ ಹಾಗೂ ವಸತಿ ಸಮುತ್ಛಯಗಳ ನಿರ್ಮಾಣಗಳಿಗೆ ಅನುಮೋದನೆ ನೀಡುವ ಸಂದರ್ಭಗಳಲ್ಲಿ ಕಡ್ಡಾಯವಾಗಿ ಬಫ‌ರ್‌ ಝೋನ್‌ ಅಂತರ ಕಾಯ್ದುಕೊಳ್ಳಲು ನಗರಾಭಿವೃದ್ಧಿ ಕಾಯಿದೆ ತಿದ್ದುಪಡಿ ತರುವಂತೆ ಕೋರಿದರು.

ಸಭೆಯಲ್ಲಿ ಶಾಸಕ ಜಿ.ಟಿ.ದೇವೇಗೌಡ, ಎಲ್‌. ನಾಗೇಂದ್ರ, ಕೆಐಎಡಿಬಿ ಸಿಇಒ ಬಸವರಾಜೇಂದ್ರ, ಮಾಜಿ ಶಾಸಕ ಕೋಟೆ ಶಿವಣ್ಣ, ಮೈಸೂರು ಕೈಗಾರಿಕೆಗಳ ಸಂಘದ ಕಾರ್ಯದರ್ಶಿ ಸುರೇಶ್‌ ಕುಮಾರ್‌ ಜೈನ್‌, ಕಡಕೊಳ ಕೈಗಾರಿಕಾ ಸಂಘದ ಅಧ್ಯಕ್ಷ ರಾಮಕೃಷ್ಣೇಗೌಡ, ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕ ಲಿಂಗರಾಜಪ್ಪ, ಎಫ್ಕೆಸಿಸಿಐ ಅಧ್ಯಕ್ಷ ಸುಧಾಕರ್‌ ಶೆಟ್ಟಿ ಇದ್ದರು.

ಟಾಪ್ ನ್ಯೂಸ್

BBK11: ಅನುಷಾಗೆ ಎಲ್ ಕೆಜಿ ಮಗು ಎಂದ ಚೈತ್ರಾ…

BBK11: ಅನುಷಾಗೆ ಎಲ್ ಕೆಜಿ ಮಗು ಎಂದ ಚೈತ್ರಾ…

1-qwewqeqw

Pro Kabaddi;ಬೆಂಗಳೂರು ಬುಲ್ಸ್‌  ಜಯಭೇರಿ: ತಮಿಳ್‌ ತಲೈವಾಸ್‌ಗೆ 32-36 ಅಂಕಗಳ ಸೋಲು

1-ewewqe

Udupi;ಅಪಾರ್ಟ್ ಮೆಂಟ್ ನಲ್ಲಿ ಪಾರ್ಟಿ ವೇಳೆ ಸಿಲಿಂಡ‌ರ್ ಸ್ಫೋ*ಟ: ಅಪಾರ ಹಾನಿ

Bommai

By Poll: ಕ್ಷೇತ್ರದಲ್ಲಿ 5ಲಕ್ಷಕ್ಕೂ ಹೆಚ್ಚು ಮನೆಗಳ ಕಟ್ಟಿಸಿರುವೆ, ದಾಖಲೆ ನೋಡಲಿ: ಬೊಮ್ಮಾಯಿ

CM-Shiggavi

By Election: ಬೊಮ್ಮಾಯಿ 4 ಬಾರಿ ಗೆದ್ರೂ ಕ್ಷೇತ್ರದ ಬಡವರಿಗೆ ಒಂದೂ ಮನೆ ಕಟ್ಟಿಸಿಲ್ಲ: ಸಿಎಂ

Hasanmbe

Hassan: ಹಾಸನಾಂಬೆ ದೇವಿಗೆ ಈ ಬಾರಿ ದಾಖಲೆ ಪ್ರಮಾಣದಲ್ಲಿ ಹರಿದು ಬಂದ ಆದಾಯ!

1-gopal

Maharashtra polls: ಗೋಪಾಲ್ ಶೆಟ್ಟಿ ನಾಮಪತ್ರ ಹಿಂಪಡೆಯುವಲ್ಲಿ ಯಶಸ್ವಿಯಾದ ಬಿಜೆಪಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Waqf

Waqf Issue: ಶ್ರೀರಂಗಪಟ್ಟಣದ ಸರಕಾರಿ ಶಾಲೆ ಮೇಲೂ ವಕ್ಫ್ ವಕ್ರದೃಷ್ಟಿ!

4

Hunsur: ಆಟೋ-ಬೈಕ್ ಡಿಕ್ಕಿ; ಸವಾರ ಸಾವು

ED-Raid

MUDA Case: ಜಾರಿ ನಿರ್ದೇಶನಾಲಯದಿಂದ ನೂರಾರು ಪುಟಗಳ ದಾಖಲೆ ವಶ

JDS

By Election: ಜೆಡಿಎಸ್‌ ಸ್ಟಾರ್‌ ಪ್ರಚಾರಕರ ಪಟ್ಟಿ: ಜಿಟಿಡಿ ಹೆಸರು ಔಟ್‌, ಪುತ್ರ ಎಂಟ್ರಿ 

Hunasuru-Women

Hunasur: ವರದಕ್ಷಿಣೆ ಕಿರುಕುಳಕ್ಕೆ ಬಲಿಯಾದ ತಿಪಟೂರಿನ ಮಹಿಳೆ!

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

crime

Trasi: ಕಾರು ಢಿಕ್ಕಿಯಾಗಿ ಗಾಯ; ಪ್ರಕರಣ ದಾಖಲು

BBK11: ಅನುಷಾಗೆ ಎಲ್ ಕೆಜಿ ಮಗು ಎಂದ ಚೈತ್ರಾ…

BBK11: ಅನುಷಾಗೆ ಎಲ್ ಕೆಜಿ ಮಗು ಎಂದ ಚೈತ್ರಾ…

1-qwewqeqw

Pro Kabaddi;ಬೆಂಗಳೂರು ಬುಲ್ಸ್‌  ಜಯಭೇರಿ: ತಮಿಳ್‌ ತಲೈವಾಸ್‌ಗೆ 32-36 ಅಂಕಗಳ ಸೋಲು

1-ewewqe

Udupi;ಅಪಾರ್ಟ್ ಮೆಂಟ್ ನಲ್ಲಿ ಪಾರ್ಟಿ ವೇಳೆ ಸಿಲಿಂಡ‌ರ್ ಸ್ಫೋ*ಟ: ಅಪಾರ ಹಾನಿ

9

Kasaragod: ಪಟಾಕಿ ದುರಂತ ಪ್ರಕರಣ; ಸಾವಿನ ಸಂಖ್ಯೆ 4ಕ್ಕೆ ಏರಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.