ಇರ್ವಿನ್‌ ರಸ್ತೆ ಅಗಲೀಕರಣಕ್ಕೆ ಬಹುತೇಕ ವರ್ತಕರ ಒಪ್ಪಿಗೆ


Team Udayavani, Jan 14, 2017, 12:09 PM IST

mys1.jpg

ಮೈಸೂರು: ಹೆಚ್ಚುತ್ತಿರುವ ವಾಹನ ದಟ್ಟಣೆಯಿಂದಾಗಿ ನಗರದ ಇರ್ವಿನ್‌ ರಸ್ತೆ ಅಗಲೀಕರಣ ಮಾಡಲು ಉದ್ದೇಶಿಸಿರುವ ಹಿನ್ನೆಲೆಯಲ್ಲಿ ಮೇಯರ್‌ ಹಾಗೂ ಪಾಲಿಕೆ ಅಧಿಕಾರಿಗಳು ಶುಕ್ರವಾರ ಸ್ಥಳ ಪರಿಶೀಲನೆ ನಡೆಸಿದರು. ನಗರದ ಲಷ್ಕರ್‌ ಪೊಲೀಸ್‌ ಠಾಣೆ ಬಳಿಯಿಂದ ಆಯುರ್ವೇದ ವೃತ್ತದವರೆಗೆ ಕಾಲ್ನಡಿಗೆ ಮೂಲಕ ತೆರಳಿದ ಮೇಯರ್‌ ಎಂ.ಜೆ.ರವಿಕುಮಾರ್‌ ಹಾಗೂ ಪಾಲಿಕೆ ಆಯುಕ್ತ ಜಗದೀಶ್‌, ಇರ್ವಿನ್‌ ರಸ್ತೆ ಅಗಲೀಕರಣಕ್ಕೆ ಅವಕಾಶ ಕಲ್ಪಿಸುವಂತೆ ಸ್ಥಳೀಯ ವ್ಯಾಪಾರಿಗಳು, ಅಂಗಡಿ ಮಾಲೀಕರನ್ನು ಮನವಿ ಮಾಡಿದರು.

ಈ ಸಂದರ್ಭದಲ್ಲಿ ಮೇಯರ್‌ ಹಾಗೂ ಪಾಲಿಕೆ ಆಯುಕ್ತರ ಮನವಿಗೆ ಸ್ಪಂದಿಸಿದ ಕೆಲವರು, ಇರ್ವಿನ್‌ ರಸ್ತೆ ಅಗಲೀಕರಣಕ್ಕೆ ಅವಕಾಶ ಕಲ್ಪಿಸುವುದಾಗಿ ಹೇಳಿದರೆ, ಕೆಲವು ನಿವಾಸಿಗಳು ಮಾತ್ರ ರಸ್ತೆ ಅಗಲೀಕರಣ ಮಾಡುವ ನಿರ್ಧಾರಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದರು. ರಸ್ತೆ ಅಗಲೀಕರಣ ಮಾಡುವುದರಿಂದ ತಾವು ಮನೆಗಳನ್ನು ಕಳೆದುಕೊಳ್ಳಲಿದ್ದು, ಹೀಗಾಗಿ ಯಾವುದೇ ಕಾರಣಕ್ಕೂ ರಸ್ತೆ ವಿಸ್ತರಣೆಗೆ ಅವಕಾಶ ನೀಡುವುದಿಲ್ಲ ಎಂದು ಕೆಲವರು ರಸ್ತೆ ಅಗಲೀಕರಣವನ್ನು ವಿರೋಧಿಸಿದರು.

ಈ ಸಂದರ್ಭದಲ್ಲಿ ಪಾಲಿಕೆ ಆಯುಕ್ತ ಜಗದೀಶ್‌ ಮಾತನಾಡಿ, ಇರ್ವಿನ್‌ ರಸ್ತೆ ಅಗಲೀಕರಣಕ್ಕೆ ಭೂ ಸ್ವಾಧೀನ ಪ್ರಕ್ರಿಯೆ ಕೈಗೊಳ್ಳುವುದರಿಂದ ಸಾಕಷ್ಟು ವಿಳಂಬವಾಗಲಿದೆ. ಹೀಗಾಗಿ ಸ್ಥಳೀಯ ಕಟ್ಟಡ ಮಾಲೀಕರ ಒಪ್ಪಿಗೆ ಪಡೆದು ರಸ್ತೆ ಅಗಲೀಕರಣ ಮಾಡಲು ತೀರ್ಮಾನಿಸಲಾಗಿದೆ. ಅದರಂತೆ ಈ ರಸ್ತೆಯಲ್ಲಿರುವ 89 ಕಟ್ಟಡ ಮಾಲೀಕರ ಪೈಕಿ 53 ಕಟ್ಟಡಗಳ ಮಾಲೀಕರು ಇದಕ್ಕೆ ಒಪ್ಪಿಗೆ ನೀಡಿದ್ದು, ಶೇಕಡ 75 ಕಟ್ಟಡಗಳ ಮಾಲೀಕರು ಒಪ್ಪಿಗೆ ನೀಡಿದ ಕೂಡಲೇ ಜಿಲ್ಲಾಧಿಕಾರಿ ಅಧ್ಯಕ್ಷತೆಯಲ್ಲಿ ಸಬೆ ನಡೆಸಿ ಪರಿಹಾರ ನಿಗದಿಪಡಿಸಿ, ರಾಜ್ಯ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿ, ಸರ್ಕಾರ ಒಪ್ಪಿಗೆ ನೀಡುತ್ತಿದ್ದಂತೆ ರಸ್ತೆ ಅಗಲೀಕರಣ ಕಾಮಗಾರಿ ಆರಂಭಿಸಲಾಗುವುದು ಎಂದರು.

ರಸ್ತೆ ಅಗಲೀಕರಣ ಹಿನ್ನೆಲೆಯಲ್ಲಿ ಇರ್ವಿನ್‌ ರಸ್ತೆಯ ಕಟ್ಟಡಗಳ ಪ್ರತಿ ಚದರ ಅಡಿಗೆ 13,177 ರೂ. ನೀಡಲು ಡೀಸಿ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಅಲ್ಲದೆ ರಸ್ತೆ ವಿಸ್ತರಣೆ ವೇಳೆ ಕಟ್ಟಡಗಳಿಗೆ ಆಗುವ ಹಾನಿಗೆ ಪ್ರತ್ಯೇಕ ಪರಿಹಾರ ನೀಡಲಾಗುತ್ತದೆ. ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ಕಟ್ಟಡದ ಮೌಲ್ಯ ಅಂದಾಜು ಮಾಡಿ ವರದಿ ನೀಡಿದ ನಂತರ ಪರಿಹಾರ ನೀಡಲಾಗುವುದು. ಅಲ್ಲದೆ ರಸ್ತೆ ವಿಸ್ತರಣೆಗೆ 45 ಕೋಟಿ ರೂ.ಗಳ ಅಗತ್ಯವಿದೆ. ಸದ್ಯ ಪಾಲಿಕೆಯಲ್ಲಿ ಭೂ ಸ್ವಾಧೀನ ಪ್ರಕ್ರಿಯೆಗೆ ಕಾಯ್ದಿರಿಸಿದ 14 ಕೋಟಿ ರೂ. ಹಣವಿದ್ದು, ಬಾಕಿ ಹಣವನ್ನು ಬಿಡುಗಡೆ ಮಾಡುವಂತೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದು ಹೇಳಿದರು.

ಅತ್ಯಂತ ಕಿರಿದಾದ ಇರ್ವಿನ್‌ ರಸ್ತೆಯಲ್ಲಿ ವಾಹನ ಸಂಚಾರ ಮಾಡುವುದು ಕಷ್ಟಕರವಾಗಿದೆ. ಹೀಗಾಗಿ ಈ ರಸ್ತೆಯನ್ನು ದ್ವಿಪಥ ರಸ್ತೆಯಾಗಿ ಅಭಿವೃದ್ಧಿ ಪಡಿಸಲು ನಿರ್ಧರಿಸಲಾಗಿದೆ. ಪಾಲಿಕೆಯ ಈ ನಿರ್ಧಾರಕ್ಕೆ ಅನೇಕ ವರ್ತಕರು ಒಪ್ಪಿಗೆ ಸೂಚಿಸಿದ್ದಾರೆ.
-ಎಂ.ಜೆ.ರವಿಕುಮಾರ್‌, ಮೇಯರ್‌.

ಟಾಪ್ ನ್ಯೂಸ್

indian-flag

Republic Day: ವಿವಿಧ ಕ್ಷೇತ್ರದ 10,000 ಸಾಧಕರಿಗೆ ಆಹ್ವಾನ

ISRO 2

ಉಪಗ್ರಹ ಜೋಡಣೆ: ತಾಂತ್ರಿಕ ಸಮಸ್ಯೆ ನಿವಾರಿಸಿದ ಇಸ್ರೋ

PM Mod

ಜ. 13ಕ್ಕೆ ಪ್ರಧಾನಿಯಿಂದ ಕಾಶ್ಮೀರದ ಜೆಡ್‌ ಮೋರ್‌ ಸುರಂಗ ಉದ್ಘಾಟನೆ?

Udupi: ಗೀತಾರ್ಥ ಚಿಂತನೆ-151: ದೇಶ, ಕಾಲವೂ ಅನಾದಿ, ಅನಂತ

Udupi: ಗೀತಾರ್ಥ ಚಿಂತನೆ-151: ದೇಶ, ಕಾಲವೂ ಅನಾದಿ, ಅನಂತ

ಜ.14: ಶಬರಿಮಲೆಯಲ್ಲಿ ಮಕರ ಸಂಕ್ರಮಣ ಪೂಜೆ

ಜ.14: ಶಬರಿಮಲೆಯಲ್ಲಿ ಮಕರ ಸಂಕ್ರಮಣ ಪೂಜೆ

kejriwal-2

Distribution of money ಆರೋಪ: ಬಿಜೆಪಿ ಅಭ್ಯರ್ಥಿ ಸ್ಪರ್ಧೆ ನಿರ್ಬಂಧಕ್ಕೆ ಕೇಜ್ರಿ ಮನವಿ

Vitla ಬೋಳಂತೂರು ಮನೆ ದರೋಡೆ ಪ್ರಕರಣ: ತನಿಖೆ ಚುರುಕು

Vitla ಬೋಳಂತೂರು ಮನೆ ದರೋಡೆ ಪ್ರಕರಣ: ತನಿಖೆ ಚುರುಕು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-hunsur

Hunsur: ಹುಲಿ ದಾಳಿಯಿಂದ ಹಸುವಿಗೆ ಗಾಯ

MLA–Harish-gowda

Mysuru: ರಸ್ತೆಗೆ ರಾಜಮನೆತನದ ಹೆಸರು ತೆಗೆದು ಸಿಎಂ ಹೆಸರಿಡುವುದಿಲ್ಲ: ಶಾಸಕ ಹರೀಶ್‌ ಗೌಡ

Hunasuru: ಬೊಲೆರೋ ವಾಹನಕ್ಕೆ ಡಿಕ್ಕಿ ಹೊಡೆದು ನದಿಗೆ ಬಿದ್ದ ಬೈಕ್ ಸವಾರ ಮೃತ್ಯು

Hunasuru: ಬೊಲೆರೋ ವಾಹನಕ್ಕೆ ಡಿಕ್ಕಿ ಹೊಡೆದು ನದಿಗೆ ಬಿದ್ದ ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

Kharajola

Gurantee Burden: ಗ್ಯಾರಂಟಿ ಕೊಟ್ಟು, ಇನ್ನೊಂದೆಡೆ ಬೆಲೆ ಹೆಚ್ಚಿಸಿ ಬರೆ: ಸಂಸದ ಕಾರಜೋಳ

DALAI-LAMA

ಬೈಲುಕುಪ್ಪೆಗೆ ಟಿಬೇಟಿಯನ್ನರ 14ನೇ ಧರ್ಮಗುರು ದಲೈಲಾಮಾ ಆಗಮನ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

robbers

Pakistan; ಡಕಾಯಿತರಿಂದ 3 ಹಿಂದೂ ಯುವಕರ ಅಪಹರಣ

indian-flag

Republic Day: ವಿವಿಧ ಕ್ಷೇತ್ರದ 10,000 ಸಾಧಕರಿಗೆ ಆಹ್ವಾನ

naksal (2)

ಸುಕ್ಮಾ ಎನ್‌ಕೌಂಟರ್‌: ಮೂವರು ನಕ್ಸಲರ ಹ*ತ್ಯೆ

ISRO 2

ಉಪಗ್ರಹ ಜೋಡಣೆ: ತಾಂತ್ರಿಕ ಸಮಸ್ಯೆ ನಿವಾರಿಸಿದ ಇಸ್ರೋ

PM Mod

ಜ. 13ಕ್ಕೆ ಪ್ರಧಾನಿಯಿಂದ ಕಾಶ್ಮೀರದ ಜೆಡ್‌ ಮೋರ್‌ ಸುರಂಗ ಉದ್ಘಾಟನೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.