ಸಿದ್ದು ಬಜೆಟ್‌ ಕಾರ್ಯಕ್ರಮ ಘೋಷಣೆಗೆ ಸೀಮಿತವೇ?


Team Udayavani, Jul 6, 2018, 11:56 AM IST

m5-siddu.jpg

ಮೈಸೂರು: 2018ರ ಫೆಬ್ರವರಿ 16ರಂದು ತಮ್ಮ ಸರ್ಕಾರದ ಕಡೆಯ ಆಯವ್ಯಯ ಮಂಡಿಸಿದ್ದ ಹಿಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, 2018-19ನೇ ಸಾಲಿನ ಆಯವ್ಯಯದಲ್ಲಿ ಅರಮನೆಗಳ ನಗರಿ ಮೈಸೂರಿನ ಪ್ರವಾಸೋದ್ಯಮ ಅಭಿವೃದ್ಧಿಗೆ ಒತ್ತು ನೀಡುವ ಯೋಜನೆಗಳನ್ನು ಘೋಷಿಸಿದ್ದರು.

ಮೈಸೂರು ದಸರಾ ಸಂದರ್ಭದಲ್ಲಿ ಕೇವಲ ಮೂರು ತಿಂಗಳ ಕಾಲ ಸ್ಥಳೀಯರು ಮತ್ತು ಪ್ರವಾಸಿಗರನ್ನು ಆಕರ್ಷಿಸುವ ದಸರಾ ವಸ್ತುಪ್ರದರ್ಶನವನ್ನು ನವದೆಹಲಿಯ ದೆಹಲಿ ಹಾಥ್‌ ಮಾದರಿಯಲ್ಲಿ ವರ್ಷಪೂರ್ತಿ ನಡೆಯುವಂತೆ ಮೈಸೂರು ಹಾಥ್‌ ನಿರ್ಮಾಣ.

ದಸರಾ-ಸಿಎಂ ಕಪ್‌: ನಾಡಹಬ್ಬ ದಸರಾ ಅಂಗವಾಗಿ ಮೈಸೂರಿನಲ್ಲಿ ಪ್ರತಿವರ್ಷ ಆಯೋಜಿಸುವ ರಾಜ್ಯ ದಸರಾ ಕ್ರೀಡಾಕೂಟವನ್ನು ರಾಷ್ಟ್ರೀಯ ಕ್ರೀಡಾಕೂಟದಂತೆ ವಿವಿಧ ಹಂತಗಳಲ್ಲಿ ಆಯೋಜಿಸಲು ಮತ್ತು ರಾಜ್ಯಮಟ್ಟದ ಕ್ರೀಡಾಕೂಟವನ್ನು “ದಸರಾ-ಸಿಎಂ ಕಪ್‌’ ಹೆಸರಿನಲ್ಲಿ ನಾಡಹಬ್ಬ ದಸರಾ ಸಂದರ್ಭದಲ್ಲಿ ಮೈಸೂರಿನಲ್ಲಿ ಆಯೋಜಿಸಲು 7 ಕೋಟಿ ರೂ. ಅನುದಾನ ಒದಗಿಸಲಾಗುವುದು.

39 ಕೆರೆಗಳಿಗೆ ನೀರು: ಕೇಂದ್ರ ರೇಷ್ಮೆ ಮಂಡಳಿ ಸಹಯೋಗದೊಂದಿಗೆ ಬೆಂಗಳೂರು-ಮೈಸೂರು ಕಾರಿಡಾರ್‌ನಲ್ಲಿ ರೇಷ್ಮೆ ಟೂರಿಸಂ ಅಭಿವೃದ್ಧಿಪಡಿಸುವುದಾಗಿ ಹೇಳಲಾಗಿತ್ತು. ಕಬಿನಿ ನದಿಯಿಂದ ನಂಜನಗೂಡು ತಾಲೂಕು ಇಬ್ಬಜಾಲ ಗ್ರಾಮದ ಬಳಿ ನೀರನ್ನು ಎತ್ತಿ, ಕುಡಿಯುವ ನೀರು ಒದಗಿಸುವ ಸಲುವಾಗಿ 39 ಕೆರೆಗಳಿಗೆ ನೀರು ತುಂಬಿಸುವ ಯೋಜನೆಗೆ 68 ಕೋಟಿ ರೂ. ಒದಗಿಸಲಾಗುವುದು.

ಟ್ರಕ್‌ ಟರ್ಮಿನಲ್‌ ನಿರ್ಮಾಣ: ಮೈಸೂರು ವೈದ್ಯಕೀಯ ಕಾಲೇಜಿನಲ್ಲಿ ಕ್ಯಾನ್ಸರ್‌ ಚಿಕಿತ್ಸಾ ಘಟಕ ಆರಂಭಿಸಲು 15 ಕೋಟಿ ರೂ., ಮೈಸೂರಿನ ಶುಶ್ರೂಷಾ ಕಾಲೇಜಿಗೆ ಹೊಸ ಕಟ್ಟಡ ನಿರ್ಮಿಸಲು 30 ಕೋಟಿ ರೂ. ಒದಗಿಸುವುದಾಗಿ ಹೇಳಲಾಗಿತ್ತು. ಡಿ.ದೇವರಾಜ ಅರಸು ಟ್ರಕ್‌ ಟರ್ಮಿನಲ್‌ ಮುಖಾಂತರ ಸಾರ್ವಜನಿಕ/ಖಾಸಗಿ ಸಹಭಾಗಿತ್ವದಲ್ಲಿ ಮೈಸೂರಿನ ನಂಜನಗೂಡು ವರ್ತುಲ ರಸ್ತೆ ಬಳಿ 6.5 ಎಕರೆ ಪ್ರದೇಶದಲ್ಲಿ 2ನೇ ಹಂತದ ಟ್ರಕ್‌ ಟರ್ಮಿನಲ್‌ ನಿರ್ಮಾಣ ಮಾಡಲಾಗುವುದು.

ಕೈಗಾರಿಕಾ ವಸಾಹತು: 2 ಮತ್ತು 3ನೇ ಸ್ತರದ ನಗರಗಳಲ್ಲಿ ಸೂಕ್ಷ್ಮ/ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳ ಅಭಿವೃದ್ಧಿಗಾಗಿ ಬಂಡವಾಳ ಹೂಡಿಕೆಯನ್ನು ಉತ್ತೇಜಿಸಲು ಮೈಸೂರಿನಲ್ಲಿ ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕಾ ಅಭಿವೃದ್ಧಿ ನಿಗಮದ ಮೂಲಕ ಹೊಸ ಕೈಗಾರಿಕಾ ವಸಾಹತು ಅಭಿವೃದ್ಧಿಪಡಿಸಲಾಗುವುದು.

ವಿದ್ಯುತ್‌ ಉಪ ಕೇಂದ್ರ: ವಿದ್ಯುತ್‌ ಪ್ರಸರಣಾ ಜಾಲವನ್ನು ಬಲವರ್ಧನೆಗೊಳಿಸಲು ಜಿಲ್ಲೆಯ ಪಿರಿಯಾಪಟ್ಟಣ ತಾಲೂಕಿನ ಕಣಗಾಲು ಮತ್ತು ಕಿತ್ತೂರು, ತಿ.ನರಸೀಪುರ ತಾಲೂಕಿನ ಮಡವಾಡಿ (ಪರಿನಾಮಿಪುರ) ಹಾಗೂ ಮೆಲೆಯೂರು, ನಂಜನಗೂಡು ತಾಲೂಕಿನ ಹೆಮ್ಮರಗಾಲ ಹಾಗೂ ಚಂದ್ರನಾಡಿ (ನಲ್ಲಿನಾಥಪುರ)ಗಳಲ್ಲಿ ವಿದ್ಯುತ್‌ ಉಪ ಕೇಂದ್ರಗಳನ್ನು ಕರ್ನಾಟಕ ವಿದ್ಯುತ್‌ ಪ್ರಸರಣ ನಿಗಮದ ಮೂಲಕ ಸ್ಥಾಪಿಸಲಾಗುವುದು.

ಉದಯ ರವಿ ಸ್ಮಾರಕ: ಮೈಸೂರು ವಿಶ್ವ ವಿದ್ಯಾನಿಲಯದಲ್ಲಿ ಬಸವ ಅಧ್ಯಯನ ಕೇಂದ್ರ ಸ್ಥಾಪಿಸಲು 2ಕೋಟಿ ರೂ.ಅನುದಾನ ಒದಗಿಸಲಾಗುವುದು. ಮಹಾಕವಿ ಕುವೆಂಪು ದರ್ಶನವನ್ನು ಮುಂದಿನ ಪೀಳಿಗೆಗೆ ಪರಿಚಯಿಸುವ ಉದ್ದೇಶದಿಂದ ಕುವೆಂಪು ಮೈಸೂರಿನ ನಿವಾಸ “ಉದಯ ರವಿ’ಯನ್ನು ರಾಷ್ಟ್ರಕವಿ ಸ್ಮಾರಕವಾಗಿ ಸಂರಕ್ಷಿಸಿ ಅಭಿವೃದ್ಧಿಪಡಿಸಲಾಗುವುದು.

ಜಿಲ್ಲೆಯ ಹುಣಸೂರು ಮತ್ತು ಎಚ್‌.ಡಿ.ಕೋಟೆ ತಾಲೂಕಿನಲ್ಲಿ ತಲಾ 1 ಕೋಟಿ ರೂ. ವೆಚ್ಚದಲ್ಲಿ ಆದಿವಾಸಿ ಸಮುದಾಯ ಭವನ ನಿರ್ಮಾಣ. ಮೈಸೂರಿನಲ್ಲಿ ಮಾಜಿ ಸಚಿವ ದಿ.ಅಜೀಜ್‌ ಸ್ಮಾರಕ ಸಮುದಾಯ ಭವನ ನಿರ್ಮಿಸಲು 3 ಕೋಟಿ ರೂ. ಅನುದಾನ ಒದಗಿಸಲಾಗುವುದು ಎಂದು ಆಯವ್ಯಯದಲ್ಲಿ ಹೇಳಲಾಗಿತ್ತು.

ಟಾಪ್ ನ್ಯೂಸ್

1-raj

IPL 2025 ಮಾರ್ಚ್ 23 ರಿಂದ ಆರಂಭ: ಬಿಸಿಸಿಐ ಉಪಾಧ್ಯಕ್ಷ ರಾಜೀವ್ ಶುಕ್ಲಾ

19-uv-fusion

UV Fusion: ನಮ್ಮಲ್ಲಿಯೂ ಕೊರತೆಗಳಿವೆ

Jaishankar

Trump ಅಧಿಕಾರ ಸ್ವೀಕಾರ ಸಮಾರಂಭದಲ್ಲಿ ಭಾರತ ಪ್ರತಿನಿಧಿಸಲಿರುವ ಜೈಶಂಕರ್

Elephant: ಆಹಾರ ಅರಸುತ್ತಾ ಹೊರಟ ಹೆಣ್ಣಾನೆ 70 ಅಡಿ ಆಳದ ಕಮರಿಗೆ ಬಿದ್ದು ಸಾ*ವು

Elephant: ಆಹಾರ ಅರಸುತ್ತಾ ಹೊರಟ ಹೆಣ್ಣಾನೆ 70 ಅಡಿ ಆಳದ ಕಮರಿಗೆ ಬಿದ್ದು ಸಾ*ವು

18-uv-fusion

Learning: ಪ್ರಯತ್ನ ಮತ್ತು ಪ್ರಮಾದ ಕಲಿಕೆಯ ಮೊದಲ ಮೆಟ್ಟಿಲು

1-deee

BJP ಗೆದ್ದರೆ ದೆಹಲಿಯ ಕೊಳೆಗೇರಿಗಳು ನೆಲಸಮ: ಅಮಿತ್ ಶಾ ವಿರುದ್ಧ ಕೇಜ್ರಿವಾಲ್ ವಾಗ್ದಾಳಿ

Jemimah’s maiden century: India women score record runs

INDWvsIREW: ಜೆಮಿಮಾ ಚೊಚ್ಚಲ ಶತಕ: ದಾಖಲೆಯ ರನ್‌ ಪೇರಿಸಿದ ಭಾರತ ವನಿತೆಯರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Snaehamayi-krishna-GTD

MUDA: ಮಗಳ-ಅಳಿಯಗೆ ಮುಡಾ ಸೈಟ್‌: ಜಿ.ಟಿ.ದೇವೇಗೌಡ ವಿರುದ್ದ ಲೋಕಾಯುಕ್ತಗೆ ದೂರು

Actor Darshan: ನಟ ದರ್ಶನ್‌ ಮೈಸೂರಿಗೆ ಇಂದು ಆಗಮನ

Actor Darshan: ಇಂದು ನಟ ದರ್ಶನ್‌ ಮೈಸೂರಿಗೆ ಆಗಮನ

GTD

JDS: 2028ಕ್ಕೆ ನಾನೇ ಮುಖ್ಯಮಂತ್ರಿ ಆಗುತ್ತೇನೆ ಎಂಬುದು ಭ್ರಮೆ: ಜಿ.ಟಿ.ದೇವೇಗೌಡ ಟಾಂಗ್‌

Siddaramaiah

MUDA: 20 ವರ್ಷದಿಂದ ಶಾಸಕರಾಗಿ, ಮುಡಾ ಸದಸ್ಯರಾಗಿದ್ದೀರಿ, ಯಾಕೀ ಅವ್ಯವಸ್ಥೆ?: ಸಿಎಂ

BGV-CM

Name Road Row: ಮೈಸೂರಿನ ರಸ್ತೆಗೆ ನಾಮಕರಣ ವಿಚಾರ; ಗೊಂದಲಗಳಿಗೆ ತೆರೆ ಎಳೆದ ಸಿಎಂ

MUST WATCH

udayavani youtube

ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ

udayavani youtube

ಅಮೇರಿಕಾದಲ್ಲಿ ವೈಕುಂಠ ಏಕಾದಶಿ ಸಂಭ್ರಮ

udayavani youtube

ನಕ್ಸಲರ ಶರಣಾಗತಿಯಲ್ಲಿ ಸರಕಾರದ ನಡೆ ಸಂಶಯ ಮೂಡಿಸುವಂತಿದೆ: ಅಣ್ಣಾಮಲೈ |

udayavani youtube

ಹೇಗಿತ್ತು ಎಂ.ಜಿ.ಎಂ ಅಮೃತ ಮಹೋತ್ಸವ ಸಂಭ್ರಮ

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

ಹೊಸ ಸೇರ್ಪಡೆ

14

UV Fusion: ಗೆದ್ದ ಗೆಲುವನ್ನು ಗಟ್ಟಿತನದಲ್ಲಿ ನಿಭಾಯಿಸುವುದು ಒಂದು ಕಲೆ!

13

UV Fusion: ಬದಲಾವಣೆ ಜಗದ ನಿಯಮ

1-raj

IPL 2025 ಮಾರ್ಚ್ 23 ರಿಂದ ಆರಂಭ: ಬಿಸಿಸಿಐ ಉಪಾಧ್ಯಕ್ಷ ರಾಜೀವ್ ಶುಕ್ಲಾ

12(1

UV Fusion: ನವ ವರುಷ ನವೋಲ್ಲಾಸ; ನಿರ್ಧಾರಗಳಿಗೆ ಬದ್ಧರಾಗಿರಿ

19-uv-fusion

UV Fusion: ನಮ್ಮಲ್ಲಿಯೂ ಕೊರತೆಗಳಿವೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.