Eshwar Khandre ವನ್ಯಜೀವಿಗಳ ಹಾವಳಿ: ಕಾಡಂಚಿನಲ್ಲಿ ಕಂದಕ ನಿರ್ಮಾಣಕ್ಕೆ ಆದ್ಯತೆ
ವನ್ಯಪ್ರಾಣಿಗಳ ಹಾವಳಿ ತಪ್ಪಿಸಲು ಅರಣ್ಯದಂಚಿನ ಮುಖಂಡರ ಮನವಿ
Team Udayavani, May 13, 2024, 8:22 PM IST
ಹುಣಸೂರು: ನಾಗರಹೊಳೆ ಉದ್ಯಾನವನದಂಚಿನಲ್ಲಿ ವನ್ಯಜೀವಿಗಳ ಹಾವಳಿ ಬಗ್ಗೆ ತಮಗೆ ಮಾಹಿತಿ ಇದ್ದು, ಅಂಚಿನಲ್ಲಿ ಅಗತ್ಯ ತಡೆಗೋಡೆ ಹಾಗೂ ಕಂದಕಗಳನ್ನು ನಿರ್ಮಿಸಲು ಸೂಚಿಸುವುದಾಗಿ ಅರಣ್ಯ ಸಚಿವ ಈಶ್ವರ್ ಖಂಡ್ರೆ ಭರವಸೆ ನೀಡಿದರು.
ಉದ್ಯಾನದಂಚಿನ ವೀರನಹೊಸಹಳ್ಳಿ ಸಮೀಪದ ಖಾಸಗಿ ರೆಸಾರ್ಟ್ ನಲ್ಲಿ ಕುಟುಂಬ ಸಮೇತ ವಿಶ್ರಾಂತಿಗಾಗಿ ಆಗಮಿಸಿದ್ದ ವೇಳೆ ಸ್ಥಳೀಯ ಮುಖಂಡರಿಂದ ಮನವಿ ಸ್ವೀಕರಿಸಿ ಮಾತನಾಡಿದ ಅವರು, ಉದ್ಯಾನವನದಂಚಿನ ಮೈಸೂರು ಹಾಗೂ ಕೊಡಗು ಜಿಲ್ಲೆಯಲ್ಲಿ ವನ್ಯ ಜೀವಿಗಳ ಹಾವಳಿ ಹೆಚ್ಚಾಗಿದೆ. ಇದರಿಂದ ಬೆಳೆ ನಷ್ಟವಾಗುತ್ತಿದ್ದು, ಕೃಷಿಕರು, ಕಾಫಿ ಬೆಳೆಗಾರರಿಗೆ ಸಮಸ್ಯೆಯಾಗುತ್ತಿರುವುದು ನನ್ನ ಗಮನಕ್ಕೆ ಬಂದಿದೆ. ಇದನ್ನು ತಡೆಗಟ್ಟುನ ನಿಟ್ಟಿನಲ್ಲಿ ಕಾಡು ಪ್ರಾಣಿಗಳು ತೋಟಗಳಿಗೆ ನುಗ್ಗದಂತೆ, ರೈಲ್ವೆ ಹಳಿ ತಡೆಗೋಡೆ ಇಲ್ಲದ ಕಡೆಗಳಲ್ಲಿ ಹಾಗೂ ಹಳಿ ಇರುವ ಕಡೆಗಳಲ್ಲೂ ಕಂದಕ ನಿರ್ಮಿಸಿ, ವನ್ಯಪ್ರಾಣಿಗಳು ಹೊರದಾಟದಂತೆ ಕ್ರಮವಹಿಸಲಾಗುವುದೆಂದು ಅಭಯ ನೀಡಿದರು.
ರಸ್ತೆ ಬದಿಯಲ್ಲಿ ಕಸಸಂಗ್ರಹಣೆಗೆ ಆದ್ಯತೆ:
ನಾಗರಹೊಳೆ ಉದ್ಯಾನವನವು ಪ್ರವಾಸಿ ತಾಣವಾಗಿರುವುದರಿಂದ ಅಧಿಕ ಸಂಖ್ಯೆಯಲ್ಲಿ ಪ್ರವಾಸಿಗರು ಭೇಟಿ ನೀಡುತ್ತಿದ್ದಾರೆ. ಹೀಗಾಗಿ ಅರಣ್ಯ ಅಸುಪಾಸಿನಲ್ಲಿ ಸ್ವಚ್ಛತೆ ಕಾಪಾಡುವುದು ಮುಖ್ಯ. ಇಲ್ಲದಿದ್ದಲ್ಲಿ ಕಾಡು ಪ್ರಾಣಿಗಳು ತಿಂದು ಆರೋಗ್ಯದ ಮೇಲೆ ಗಂಭೀರ ಪರಿಣಾಮ ಬೀರಲಿದೆ. ಅರಣ್ಯ ಸಿಬ್ಬಂದಿಗಳು ಸಹ ಎಚ್ಚರವಹಿಸುವುದು ಅತ್ಯಗತ್ಯ. ಈ ಬಗ್ಗೆ ವಾಹನ ಸವಾರರಿಗೂ ಎಚ್ಚರಿಸಬೇಕಿದೆ ಹಾಗೂ ಭಾಗಗಳಲ್ಲಿ ಸಾರ್ವಜನಿಕ ಶೌಚಾಲಯಗಳನ್ನು ಸ್ವಚ್ಛವಾಗಿ ಇಡುವಂತೆ ಮತ್ತು ಕಸದ ತೊಟ್ಟಿಗಳನ್ನು ನಿರ್ಮಾಣ ಮಾಡಲು ಅಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳಬೇಕಿದೆ. ಅಭಿವೃದ್ಧಿ ಕಾರ್ಯಗಳು ಸುಸ್ಥಿರವಾಗಿರಬೇಕು. ಪ್ರವಾಸಿ ತಾಣಗಳಲ್ಲಿ ರಸ್ತೆಗಳ ಅಭಿವೃದ್ಧಿಯಾಗಬೇಕು. ಈ ಬಗ್ಗೆ ಅಧಿಕಾರಿಗಳಿಗೆ ಸೂಚಿಸುತ್ತೇನೆಂದರು.
ಈ ವೇಳೆ ಎಪಿಎಂಸಿ ಮಾಜಿ ಅಧ್ಯಕ್ಷ ಸುಭಾಷ್, ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ದಾ.ರಾ.ಮಹೇಶ್, ರೈತ ರವಿಚಂದ್ರನ್ ಮತ್ತಿತರರು ಮನವಿ ಮಾಡಿದರು.
ಡಿಸಿಎಫ್ ಡಾ.ಹರ್ಷಕುಮಾರ್‌ಚಿಕ್ಕನರಗುಂದ, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ವಿನಯ್, ವಲಯ ಅರಣ್ಯಧಿಕಾರಿ ಅಭಿಷೇಕ್ ಮತ್ತಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Kanguva: 10 ಸಾವಿರಕ್ಕೂ ಹೆಚ್ಚಿನ ಸ್ಕ್ರೀನ್‌ನಲ್ಲಿ ಅದ್ಧೂರಿಯಾಗಿ ರಿಲೀಸ್ ಆಗಲಿದೆ ʼಕಂಗುವʼ
Urwa: ಬಾಯ್ದೆರೆದ ಕಾಂಕ್ರೀಟ್ ಚೇಂಬರ್‌ಗಳಿಗೆ ಬಿತ್ತು ಮುಚ್ಚಳ
Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್: ಸಿದ್ದರಾಮಯ್ಯ
Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ
Karkala: ದುರ್ಗಾ ಗ್ರಾಮ ಪಂಚಾಯತ್; ರಸ್ತೆ ಸಂಪೂರ್ಣ ದುರವಸ್ಥೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.