ಸಂಕಷ್ಟದಲ್ಲಿ ನೆರವಾದ ಕಾರ್ಯಕರ್ತರಿಗೆ ಸ್ಥಾನಮಾನ ಕಲ್ಪಿಸುವುದು ನನ್ನ ಕರ್ತವ್ಯ:ಕೆ.ಮಹದೇವ್
Team Udayavani, Jul 14, 2022, 7:46 PM IST
ಪಿರಿಯಾಪಟ್ಟಣ: ರಾಜಕಾರಣದ ಸಂಕಷ್ಟದ ಸಮಯದಲ್ಲಿ ಸಹಕಾರ ನೀಡಿದ ಪ್ರತಿಯೊಬ್ಬ ಕಾರ್ಯಕರ್ತರಿಗೂ ಸ್ಥಾನಮಾನ ಕಲ್ಪಿಸುವುದು ನನ್ನ ಕರ್ತವ್ಯ ಎಂದು ಶಾಸಕ ಕೆ.ಮಹದೇವ್ ತಿಳಿಸಿದರು.
ಪಟ್ಟಣದ ಪುರಸಭಾ ಆವರಣದಲ್ಲಿ ಗುರುವಾರ 2021-22ನೇ ಸಾಲಿನಲ್ಲಿ ವಾಜಪೇಯಿ ನಗರ ವಸತಿ ಯೋಜನೆ ಹಾಗೂ ಅಂಬೇಡ್ಕರ್ ವಸತಿ ಯೋಜನೆಯಡಿ ಆಯ್ಕೆಯಾದ 75 ಫಲಾನುಭವಿಗಳಿಗೆ ಮನೆ ಮಂಜೂರಾತಿ ಕಾರ್ಯಾದೇಶ ಪತ್ರ ವಿತರಿಸಿ ಮಾತನಾಡಿದರು.
ಪ್ರತಿಯೊಬ್ಬ ನಾಗರಿಕರಿಗೂ ಸೂರು ಕಲ್ಪಿಸುವ ನಿಟ್ಟಿನಲ್ಲಿ ಸರ್ಕಾರಗಳು ವಸತಿ ಯೋಜನೆಯಡಿ ಮನೆ ನಿರ್ಮಿಸಿಕೊಳ್ಳಲು ಅನುದಾನ ನೀಡುತ್ತಿವೆ. ಇದರ ಸದುಪಯೋಗ ಪಡಿಸಿಕೊಳ್ಳಬೇಕು, ಕರೋನಾ ಎಂಬ ಮಹಾಮಾರಿ ಆವರಿಸಿದ ಕಾರಣ ಜನತೆಗೆ ಅಗತ್ಯವಾದ ಯಾವುದೇ ಕೆಲಸ ಮಾಡದಿದ್ದರೂ ಸರಿ ಅವರ ಆರೋಗ್ಯದ ರಕ್ಷಣೆಗೆ ಅಗತ್ಯ ಕ್ರಮ ವಹಿಸಬೇಕು ಎಂದು ವಿಧಾನಸೌಧದಲ್ಲಿ 244 ಶಾಸಕರು ಒಮ್ಮತದಿಂದ ಜನತೆಯ ಆರೋಗ್ಯ ಕಾಪಾಡುವ ನಿಟ್ಟಿನಲ್ಲಿ ಯಾವುದೇ ತೊಂದರೆ ಉಂಟಾಗದ ರೀತಿಯಲ್ಲಿ ಕೆಲಸ ಮಾಡುವ ನಿರ್ಣಯವನ್ನು ಕೈಗೊಳ್ಳಲಾಯಿತು. ಹಾಗಾಗಿ 3 ವರ್ಷಗಳಿಂದ ಪಟ್ಟಣದ ನಿವಾಸಿಗಳಿಗೆ ಚುನಾವಣಾ ಸಂದರ್ಭದಲ್ಲಿ ಮಾತು ಕೊಟ್ಟಂತೆ ವಸತಿ ಯೋಜನೆಯಡಿ ನಿವೇಶನ ಹಾಗೂ ಅನುದಾನ ಕಲ್ಪಿಸಲು ಸಾಧ್ಯವಾಗಲಿಲ್ಲ, ಈಗ ಪರಿಶಿಷ್ಟ ಜಾತಿಯ 13 ಫಲಾನುಭವಿಗಳಿಗೆ, ಪರಿಶಿಷ್ಟ ಪಂಗಡದ 05 ಫಲಾನುಭವಿಗಳಿಗೆ ರೂ.2 ಲಕ್ಷ, ಹಿಂದುಳಿದ ವರ್ಗದ 49 ಫಲಾನುಭವಿಗಳಿಗೆ, ಹಾಗೂ ಅಲ್ಪಸಂಖ್ಯಾತ ವರ್ಗದ 08 ಫಲಾನುಭವಿಗಳಿಗೆ ರೂ. 1.20 ಲಕ್ಷ ಅನುದಾನ ನೀಡಲಾಗಿದ್ದು ಇದರ ಜೊತೆಗೆ ವೈಯಕ್ತಿಕವಾಗಿ ಸ್ವಲ್ಪ ಹಣ ಸೇರಿಸಿ ಉತ್ತಮ ಮನೆ ನಿರ್ಮಿಸಿಕೊಳ್ಳಬೇಕು.
ನಾನು ರಾಜಕಾರಣ ಮಾಡುತ್ತಿದ್ದೇನೆ ಎಂದು ಎಲ್ಲರಿಗೂ ಎಲ್ಲಾ ರೀತಿಯ ಸಹಕಾರ ನೀಡಲು ಸಾಧ್ಯವಿಲ್ಲ ಇದನ್ನು ಅರ್ಥ ಮಾಡಿಕೊಳ್ಳಬೇಕು. ಪಕ್ಷ ಅಧಿಕಾರದಲ್ಲಿಲ್ಲದಿದ್ದರೂ ಸೋಂಬೇರಿತನ ತೋರದೆ, ಕಾಲಿಗೆ ಚಕ್ರ ಕಟ್ಟಿಕೊಂಡು ಓಡಾಡಿ ಅನುದಾನ ತಂದು ತಾಲ್ಲೂಕಿನ ಅಭಿವೃದ್ದಿಗಾಗಿ ಶ್ರಮಿಸುತ್ತಿದ್ದೇನೆ ಇದನ್ನು ಅರ್ಥ ಮಾಡಿಕೊಳ್ಳಬೇಕು ಎಂದರು.
ಸಂದರ್ಭದಲ್ಲಿ ಪುರಸಭೆ ಮುಖ್ಯಾಧಿಕಾರಿ ಎ.ಟಿ.ಪ್ರಸನ್ನ, ಅಧ್ಯಕ್ಷ ಕೆ.ಮಹೇಶ್, ಸ್ಥಾಯಿ ಸಮಿತಿ ಅಧ್ಯಕ್ಷ ಕೃಷ್ಣ, ಸದಸ್ಯರಾದ ಮಂಜುನಾಥ್, ನಿರಂಜನ್, ರವಿ, ಪ್ರಕಾಶ್, ಪುಷ್ಪಲತಾ, ಮಂಜುಳ ಚನ್ನಬಸವರಾಜು, ಆಶಾ, ಶಿವರಾಮೇಗೌಡ, ಪ್ರಸಾದ್, ಭಾರತಿ, ಸೇರಿದಂತೆ ಪುರಸಭಾ ಸದಸ್ಯರು, ಸಿಬ್ಬಂದಿಗಳು ಹಾಗೂ ಸಾರ್ವಜನಿಕರು ಹಾಜರಿದ್ದರು.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.