ಮಳೆ ಸುರಿಯುತ್ತಿರುವ ವಿಚಾರದಲ್ಲೂ ರಾಜಕೀಯ ಮಾಡುತ್ತಿರುವುದು ಸರಿಯಲ್ಲ: ಸಿಎಂ ಬೊಮ್ಮಾಯಿ
Team Udayavani, Sep 6, 2022, 5:10 PM IST
ಮೈಸೂರು: ಮಳೆ ಸುರಿಯುತ್ತಿರುವ ವಿಚಾರದಲ್ಲೂ ರಾಜಕೀಯ ಮಾಡುತ್ತಿರುವುದು ದುರ್ದೈವದ ಸಂಗತಿ. ಈ ಬಾರಿ ದಾಖಲೆ ಪ್ರಮಾಣದಲ್ಲಿ ಮಳೆಯಾಗಿದೆ. 90 ವರ್ಷಗಳ ಬಳಿಕ ಈ ಬಾರಿ ಈ ಪ್ರಮಾಣದ ಮಳೆ ಸುರಿದಿದೆ. ಈ ರೀತಿಯಾದಾಗ ಸರ್ಕಾರದ ಜೊತೆ ಕೈ ಜೋಡಿಸಿ ಪರಿಹಾರ ಕಾರ್ಯಗಳಿಗೆ ಮುಂದಾಗಬೇಕಿತ್ತು. ಅದು ಬಿಟ್ಟು ಎಲ್ಲದಕ್ಕೂ ಸರ್ಕಾರ ಕಾರಣ ಎಂಬಂತೆ ಆರೋಪಿಸುತ್ತಿರುವುದು ಸರಿಯಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ಮೈಸೂರಿನ ಮಂಡಕಳ್ಳಿ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ನಡೆದಿರುವ ಒತ್ತುವರಿ, ರಾಜಕಾಲುವೆ, ಕೆರೆಗಳ ಒತ್ತುವರಿಗಳ ಪರಿಣಾಮ ಇಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಆದರೂ ನಮ್ಮ ಮೇಲೆ ಗೂಬೆ ಕೂರಿಸುವ ಕೆಲಸ ಮಾಡುತ್ತಿದ್ದಾರೆ ಎಂದರು.
ಬೆಂಗಳೂರಿನ 9 ವಲಯಗಳ ಪೈಕಿ 2 ವಲಯಗಳಲ್ಲಿ ಮಾತ್ರ ಮಳೆಯಿಂದ ಹೆಚ್ಚಿನ ತೊಂದರೆಯಾಗಿದೆ. ಆದರೆ ಇಡೀ ಬೆಂಗಳೂರಿಗೆ ತೊಂದರೆಯಾಗಿದೆ ಎಂದು ಬಿಂಬಿಸಲಾಗುತ್ತಿದೆ. ತೊಂದರೆಗೊಳಗಾಗಿರುವ ಎರಡು ವಲಯಗಳ ಪೈಕಿ ಒಂದು ವಲಯದಲ್ಲಿ ಪರಿಸ್ಥಿತಿ ನಿಯಂತ್ರಣದಲ್ಲಿದೆ. ಮತ್ತೊಂದು ವಲಯದಲ್ಲಿ 69 ಕೆರೆಗಳಿವೆ. ಎಲ್ಲ ಕೆರೆಗಳು ಕೋಡಿ ಬಿದ್ದಿರುವುದರಿಂದ ನಿರಂತರವಾಗಿ ನೀರು ಹರಿಯುತ್ತಿದೆ. ಅಲ್ಲದೇ ರಾಜಾಕಾಲುವೆ, ಕೆರೆಗಳ ಒತ್ತುವರಿ ಕಾರಣದಿಂದಲೂ ಆ ಭಾಗದಲ್ಲಿ ಪರಿಸ್ಥಿತಿ ಬಿಗಡಾಯಿಸಿದೆ. ಮುಂಬರುವ ದಿನಗಳಲ್ಲಿ ಒತ್ತುವರಿ ತೆರವುಗೊಳಿಸಲಾಗುವುದು ಎಂದು ಸಿಎಂ ಹೇಳಿದರು.
ಇದನ್ನೂ ಓದಿ:ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: 32 ಸ್ಥಳಕ್ಕೆ ಎನ್‌ಐಎ ದಾಳಿ : ಮಹತ್ವದ ದಾಖಲೆ ವಶ
ಮೈಸೂರು ಮೇಯರ್, ಉಪ ಮೇಯರ್ ಚುನಾವಣೆಯಲ್ಲಿ ಎರಡು ಸ್ಥಾನಗಳನ್ನು ಬಿಜೆಪಿ ಗಳಿಸಿರುವುದು ಅಭಿವೃದ್ಧಿಯ ದೃಷ್ಟಿಯಿಂದ ಒಳ್ಳೆಯದು. ಎರಡು ಸ್ಥಾನಗಳನ್ನು ಬಿಜೆಪಿ ಗೆದ್ದಿದ್ದರೂ, ಮುಂದಿನ ದಿನಗಳಲ್ಲಿ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಅಭಿವೃದ್ಧಿ ಕಾರ್ಯಗಳನ್ನು ಮಾಡಲಾಗುವುದು. ಕಾಂಗ್ರೆಸ್ ಅವಧಿಯಲ್ಲಿ ಆಗಿರುವ ಹಿನ್ನಡೆಯನ್ನು ಗಮನಿಸಿರುವ ನಗರಪಾಲಿಕೆ ಸದಸ್ಯರು ಬಿಜೆಪಿ ಬೆಂಬಲಿಸಿದ್ದಾರೆ. ಈ ಬಾರಿ ಬಿಜೆಪಿ ಸ್ವತಂತ್ರವಾಗಿ ಸ್ಪರ್ಧಿಸಲು ಮುಂದಾಯಿತು. ಸಂಖ್ಯಾ ಬಲದ ಆಧಾರದ ಮೇಲೆ ಸ್ಪರ್ಧೆಗೆ ಮುಂದಾದೆವು. ಉಪ ಮೇಯರ್ ಸ್ಥಾನಕ್ಕಾಗಿ ಜೆಡಿಎಸ್ ಕೂಡ ಯತ್ನಿಸಿತು. ಆದರೆ ತಾಂತ್ರಿಕವಾಗಿ ಜೆಡಿಎಸ್ ಗೆ ಸೋಲಾಯಿತು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ
Waqf: ರೈತರಿಗೆ ನೀಡಿರುವ ನೋಟಿಸ್ ತಕ್ಷಣ ವಾಪಸ್: ಅಧಿಕಾರಿಗಳಿಗೆ ಸಿಎಂ ಖಡಕ್ ಸೂಚನೆ
Waqf Issue: ನ.4ರಂದು ರಾಜ್ಯಾದ್ಯಂತ ಕಾಂಗ್ರೆಸ್ ಸರ್ಕಾರದ ವಿರುದ್ದ ಬಿಜೆಪಿ ಪ್ರತಿಭಟನೆ
High Court: ಕ್ರಿಮಿನಲ್ ಕೇಸ್ ಡೈರಿ ಪ್ರತೀ ಪುಟಕ್ಕೆ ಸಹಿ:ಅರ್ಜಿ ವಜಾಗೊಳಿಸಿದ ಹೈಕೋರ್ಟ್
Bengaluru: ಸುವರ್ಣ ಸಂಭ್ರಮದಲ್ಲಿ ರಾಜ್ಯೋತ್ಸವ ವೈಭವ
MUST WATCH
ಹೊಸ ಸೇರ್ಪಡೆ
Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ
Subrahmanya; ಅನ್ಯಕೋಮಿನ ವಿದ್ಯಾರ್ಥಿನಿಗೆ ಮೆಸೇಜ್: ಗುಂಪಿನಿಂದ ಯುವಕನಿಗೆ ಥಳಿತ
Kundapura; ನಿಯಂತ್ರಣ ತಪ್ಪಿ ಗದ್ದೆಗೆ ಉರುಳಿದ ಬೈಕ್: ಸವಾರ ದುರ್ಮರ*ಣ
J&K:ಪಾಕ್ ಮೂಲದ ಎಲ್‌ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ
Pushpa2: ಅಲ್ಲು ಅರ್ಜುನ್ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.