ಸ್ವಾರ್ಥಕ್ಕಾಗಿ ದಲಿತ ಯುವಕರ ದುರ್ಬಳಕೆ ಸಲ್ಲ


Team Udayavani, Jan 30, 2018, 12:44 PM IST

m2-swartha.jpg

ಹುಣಸೂರು: ದಲಿತ ಸಮುದಾಯದವರು ಕೇವಲ ಸರ್ಕಾರಿ ಉದ್ಯೋಗಕ್ಕೆ ಕಾಯದೇ ಸ್ವಯಂ ಉದ್ಯೋಗದಲ್ಲಿ ತೊಡಗಿಸಿಕೊಂಡು ಆರ್ಥಿಕವಾಗಿ ಸದೃಢರಾಗಬೇಕು, ದಲಿತ ಯುವಕರನ್ನು ಸ್ವಾರ್ಥಕ್ಕಾಗಿ ಬಳಕೆ ಮಾಡಿಕೊಳ್ಳುವವರ ಬಗ್ಗೆ ಎಚ್ಚರದಿಂದರಬೇಕೆಂದು ಉಪ ವಿಭಾಗಾಧಿಕಾರಿ ಕೆ.ನಿತೀಶ್‌ ಸೂಚಿಸಿದರು.

ನಗರದ ಆಂಬೇಡ್ಕರ್‌ ಸಮುದಾಯ ಭವನದಲ್ಲಿ ತಾಲೂಕು ದಸಂಸ ವತಿಯಿಂದ ಸಂವಿಧಾನ ದಿನಾಚರಣೆ ಅಂಗವಾಗಿ ಆಯೋಜಿಸಿದ್ದ ದಲಿತರ ಜಾಗೃತಿ ಸಮಾವೇಶ ಉದ್ಘಾಟಿಸಿ ಮಾತನಾಡಿದ ಅವರು, ಅಂಬೇಡ್ಕರ್‌ ಅವರು ರಚಿಸಿರುವ ಸಂವಿಧಾನ ಪ್ರಪಂಚದಲ್ಲೇ ಅತ್ಯಂತ ಶ್ರೇಷ್ಟ ಸಂವಿಧಾನ.  ನಮ್ಮ ಸಂವಿಧಾನದಲ್ಲಿ ಎಲ್ಲಾ ಜಾತಿ, ಧರ್ಮ, ಭಾಷೆ ವಿವಿಧ ಸಂಸ್ಕೃತಿ ಜನರಿಗೂ ಸಮಾನ ಆವಕಾಶ ಕಲ್ಪಿಸಿದೆ,

ಇಲ್ಲಿ ಪ್ರತಿಯೊಬ್ಬರೂ ಸಮಾನರು ಶೋಷಣೆಗೆ ಒಳಗಾದ ದಲಿತರಿಗೆ ಪ್ರತ್ಯೇಕವಾಗಿ ಮೀಸಲಾತಿಯನ್ನು ಸಂವಿಧಾನದಲ್ಲಿ ಕಲ್ಪಿಸಲಾಗಿದ್ದು, ಅದರಂತೆ ಸೌಲಭ್ಯ ವಂಚಿತ ಸಮುದಾಯಗಳು ಮೀಸಲಾತಿಯಿಂದ ಶಿಕ್ಷಣ, ಆರ್ಥಿಕ, ರಾಜಕೀಯ, ಸಮಾಜಿಕ ಕ್ಷೇತ್ರಗಳಲ್ಲಿ ಪ್ರಗತಿ ಹೊಂದಲು ಸಾಧ್ಯ, ದಲಿತರು ಶಿಕ್ಷಣ ಪಡೆದು ವಿದ್ಯಾವಂತರಾಗಿ ಸಮಾಜದಲ್ಲಿ ಸಮಾಜಿಕ ನ್ಯಾಯ ಪಡೆಯುವ ಅಗತ್ಯವಿದೆ ಎಂದರು.

ದಲಿತರಲ್ಲೇ ತಾರತಮ್ಯ ನೀತಿ: ಅಧ್ಯಕ್ಷತೆ ವಹಿಸಿದ್ದ ದಸಂಸದ ಜಿಲ್ಲಾ ಪ್ರಧಾನ ಸಂಚಾಲಕ ನಿಂಗರಾಜ್‌ ಮಲ್ಲಾಡಿ ಮಾತನಾಡಿ, ಮೀಸಲಾತಿಯು ಸೌಲಭ್ಯವನ್ನು ಪಡೆದವರೆ ಪಡೆಯುತ್ತಿದ್ದು, ವಂಚಿತ ದಲಿತರು ಇಂದಿಗೂ ಮೀಸಲಾತಿ ಸೌಲಭ್ಯದಿಂದ ವಂಚಿತರಾಗುತ್ತಿದ್ದಾರೆ. ಇದರಿಂದ ದಲಿತರಲ್ಲೆ ಉಳ್ಳವರು ಮತ್ತು ದುರ್ಬಲರೆಂಬ ತಾರತಮ್ಯ ಹೆಚ್ಚಿದೆ. ಕನಿಷ್ಟ ಸೂರಿಲ್ಲದೆ ಬೀದಿಯಲ್ಲಿ ಬದುಕುವ ದಲಿತ ಸಮಾಜ ಇಂದಿಗೂ ನಮ್ಮ ಕಣ್ಮುಂದೆ ಇದೆ.

ಆದರೆ, ಮೀಸಲಾತಿಯ ಫ‌ಲದಿಂದ ರಾಜಕಾರಣಿಯ ಮಗ ರಾಜಕಾರಣಿಯಾಗಿ ಎಂಜಿನಿಯರ್‌, ಡಾಕ್ಟರ್‌ ಮಕ್ಕಳು  ಉನ್ನತ ಕೆಲಸ ಪಡೆಯುತ್ತಿದ್ದಾರೆ. ಕೂಲಿ ಮಾಡುವ ದಲಿತರ ಮಕ್ಕಳು ಮೀಸಲಾತಿಯ ಸೌಲಭ್ಯದಿಂದ ವಂಚಿತರಾಗಿ ತಮ್ಮ ಬದುಕಿಗಾಗಿ ಹಪಹಪಿಸುತ್ತಿದ್ದಾರೆ. ಇಂತಹ ಅನ್ಯಾಯ ವಿರುದ್ಧ ಎಲ್ಲಾ ಮೀಸಲಾತಿ ವಂಚಿತ ದಲಿತರು ಹೋರಾಟ ಮಾಡುವ ಅಗತ್ಯವಿದೆ ಎಂದರು.

ಕಾನೂನು ನೆರವು ಪಡೆತಯಿರಿ: ಕಾರ್ಯಕ್ರಮದಲ್ಲಿ ತಹಶೀಲ್ದಾರ್‌ ಮೋಹನ್‌, ಸಮಾಜ ಕಲ್ಯಾಣಧಿಕಾರಿ ಹೊನ್ನೇಗೌಡ ಮಾತನಾಡಿ, ಸರ್ಕಾರದಿಂದ ಸಿಗುವ ಸೌಲಭ್ಯಗಳು ಹಾಗೂ ಸೌಲಭ್ಯದಿಂದ ವಂಚಿತರಾದವರು ಇಲಾಖೆ ಅಥವಾ ಸ್ಥಳೀಯ ನ್ಯಾಯಾಲಯದಲ್ಲಿ ತೆರೆದಿರುವ ತಾಲೂಕು ಕಾನೂನು ಸೇವೆಗಳ ಪ್ರಾಧಿಕಾರದ ನೆರವು ಪಡೆದುಕೊಳ್ಳಬಹುದೆಂದರು.

ದಲಿತ ಮುಖಂಡರಾದ ಡಿ.ಕುಮಾರ್‌ ಮಾತನಾಡಿದರು. ಬನ್ನಿಕುಪ್ಪೆ ಚಿಕ್ಕಸ್ವಾಮಿ, ಧರ್ಮಪುರ ಕಾಳ್ಯಯ್ಯ, ಪೌರಕಾರ್ಮಿಕರ ಸಂಘದ ಅಧ್ಯಕ್ಷ ಮುರುಗೇಶ, ಬೇಳೂ¤ರ್‌ ಮಹದೇವ, ಬಲ್ಲೇನಹಳ್ಳಿ ಕೆಂಪರಾಜ್‌, ನಾಯಕ ಸಮಾಜದ ಮಹದೇವನಾಯಕ, ಆಲೆಮಾರಿ ಸಮಾಜದ ಎಲ್ಲಪ್ಪ, ಹರೀಶ, ಪಿ.ಪುಟ್ಟರಾಜು, ಶಿವು, ಆಂಜನೇಯ, ಸಂತೋಷ, ಕೆ.ಆರ್‌. ನಸ್ರುಲ್ಲಾಖಾನ್‌,

ದಸಂಸದ ಸಾಕಯ್ಯ, ಬೈರಯ್ಯ, ಸಣ್ಣಯ್ಯ, ನರಸಿಂಹಸ್ವಾಮಿ ತಿಟ್ಟಿನ  ಲಕ್ಷೀ, ಕುಮಾರಿ, ಸಾಕಮ್ಮ, ಮುತಾಂದ ನೂರಾರು ಜನರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ತಾಲೂಕು ಸಂಚಾಲಕ ದೇವೇಂದ್ರ ಕಿರಿಜಾಜಿ ಗಜೇಂದ್ರ  ಹೊನ್ನೇನಹಳ್ಳಿ ವಸಂತಾ ಮತ್ತು ಕಲಾ ತಂಡದವರು  ಹೋರಾಟದ ಗೀತೆಗಳನ್ನು ಹಾಡಿದರು.

ಟಾಪ್ ನ್ಯೂಸ್

Sri Lanka Election Result:ಸಂಸತ್‌ ಚುನಾವಣೆ-ಅಧ್ಯಕ್ಷ ಅನುರಾ ದಿಸ್ಸಾನಾಯಕೆ ಪಕ್ಷ ಜಯಭೇರಿ

Sri Lanka Election Result:ಸಂಸತ್‌ ಚುನಾವಣೆ-ಅಧ್ಯಕ್ಷ ಅನುರಾ ದಿಸ್ಸಾನಾಯಕೆ ಪಕ್ಷ ಜಯಭೇರಿ

India Vs India A ಅಭ್ಯಾಸ ಪಂದ್ಯ: ಅಗ್ಗಕ್ಕೆ ಔಟಾದ ಕೊಹ್ಲಿ, ಪಂತ್;‌ ಗಾಯಗೊಂಡ ರಾಹುಲ್

India Vs India A ಅಭ್ಯಾಸ ಪಂದ್ಯ: ಅಗ್ಗಕ್ಕೆ ಔಟಾದ ಕೊಹ್ಲಿ, ಪಂತ್;‌ ಗಾಯಗೊಂಡ ರಾಹುಲ್

Shimoga; Deport Zameer Ahmed: ​​MLA Channabasappa

Shimoga; ಜಮೀರ್‌ ಅವರನ್ನು ಗಡಿಪಾರು ಮಾಡಿ: ಶಾಸಕ ಚನ್ನಬಸಪ್ಪ

Video: ಕಾರಿನ ಟಯರ್ ಒಳಗಿತ್ತು ಒಂದಲ್ಲ, ಎರಡಲ್ಲ ಬರೋಬ್ಬರಿ 50 ಲಕ್ಷ… ದಂಗಾದ ಅಧಿಕಾರಿಗಳು

Video: ಕಾರಿನ ಟಯರ್ ಒಳಗಿತ್ತು ಒಂದಲ್ಲ, ಎರಡಲ್ಲ ಬರೋಬ್ಬರಿ 50 ಲಕ್ಷ… ದಂಗಾದ ಅಧಿಕಾರಿಗಳು

Bhairathi Ranagal: ಭೈರತಿ ಪಾತ್ರಕ್ಕೊಂದು ಸದುದ್ದೇಶವಿದೆ..: ಶಿವರಾಜ್‌ ಕುಮಾರ್‌

Bhairathi Ranagal: ಭೈರತಿ ಪಾತ್ರಕ್ಕೊಂದು ಸದುದ್ದೇಶವಿದೆ..: ಶಿವರಾಜ್‌ ಕುಮಾರ್‌

Notice: ಸಂಗೀತ ಕಾರ್ಯಕ್ರಮಕ್ಕೂ ಮೊದಲು ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್

Notice: ಸಂಗೀತ ಕಾರ್ಯಕ್ರಮಕ್ಕೂ ಮುನ್ನ ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್

Leopard: ಮನೆಯ ತಾರಸಿ ಮೇಲೆ ಚಿರತೆ ಓಡಾಟ… ಆತಂಕದಲ್ಲಿ ಗ್ರಾಮಸ್ಥರು

Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-hunsur

Hunsur: ಅಪ್ರಾಪ್ತ ಬಾಲಕಿ ಗರ್ಭಿಣಿ ಪ್ರಕರಣ; ಯುವಕನ ಬಂಧನ

1-amudaa

MUDA: ಇ.ಡಿ.ಯಿಂದ ಮಾಜಿ ಅಧ್ಯಕ್ಷ ಮರಿಗೌಡ ಸುದೀರ್ಘ‌ 9 ಗಂಟೆ ವಿಚಾರಣೆ

ನನ್ನ ಮುಟ್ಟಿದರೆ ಜನ ಸುಮ್ಮನಿರಲಾರರು: ವಿಪಕ್ಷ‌ಕ್ಕೆ ಸಿಎಂ ಸಿದ್ದರಾಮಯ್ಯ ಎಚ್ಚರಿಕೆ

ನನ್ನ ಮುಟ್ಟಿದರೆ ಜನ ಸುಮ್ಮನಿರಲಾರರು: ವಿಪಕ್ಷ‌ಕ್ಕೆ ಸಿಎಂ ಸಿದ್ದರಾಮಯ್ಯ ಎಚ್ಚರಿಕೆ

MUDA CASE: ಸುಳ್ಳು ಆರೋಪಗಳ ಮೇಲೆ ಇ.ಡಿ. ತನಿಖೆ: ಸಿಎಂ ಬೇಸರMUDA CASE: ಸುಳ್ಳು ಆರೋಪಗಳ ಮೇಲೆ ಇ.ಡಿ. ತನಿಖೆ: ಸಿಎಂ ಬೇಸರ

MUDA CASE: ಸುಳ್ಳು ಆರೋಪಗಳ ಮೇಲೆ ಇ.ಡಿ. ತನಿಖೆ: ಸಿಎಂ ಬೇಸರ

FIR: ಸ್ನೇಹಮಯಿ ಕೃಷ್ಣ ವಿರುದ್ಧ ಮೈಸೂರಿನಲ್ಲಿ ಎಫ್ಐಆರ್‌

FIR: ಸ್ನೇಹಮಯಿ ಕೃಷ್ಣ ವಿರುದ್ಧ ಮೈಸೂರಿನಲ್ಲಿ ಎಫ್ಐಆರ್‌

MUST WATCH

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

ಹೊಸ ಸೇರ್ಪಡೆ

5-subrahmanya

Subramanya: ಕಸ್ತೂರಿ ರಂಗನ್ ವರದಿ ವಿರುದ್ಧ ಗುಂಡ್ಯದಲ್ಲಿ ಬೃಹತ್ ಪ್ರಭಟನಾ ಸಭೆ ಆರಂಭ

Sri Lanka Election Result:ಸಂಸತ್‌ ಚುನಾವಣೆ-ಅಧ್ಯಕ್ಷ ಅನುರಾ ದಿಸ್ಸಾನಾಯಕೆ ಪಕ್ಷ ಜಯಭೇರಿ

Sri Lanka Election Result:ಸಂಸತ್‌ ಚುನಾವಣೆ-ಅಧ್ಯಕ್ಷ ಅನುರಾ ದಿಸ್ಸಾನಾಯಕೆ ಪಕ್ಷ ಜಯಭೇರಿ

India Vs India A ಅಭ್ಯಾಸ ಪಂದ್ಯ: ಅಗ್ಗಕ್ಕೆ ಔಟಾದ ಕೊಹ್ಲಿ, ಪಂತ್;‌ ಗಾಯಗೊಂಡ ರಾಹುಲ್

India Vs India A ಅಭ್ಯಾಸ ಪಂದ್ಯ: ಅಗ್ಗಕ್ಕೆ ಔಟಾದ ಕೊಹ್ಲಿ, ಪಂತ್;‌ ಗಾಯಗೊಂಡ ರಾಹುಲ್

4-editorial

Editorial: ಪಾಕ್‌ ಪ್ರೇರಿತ ಉಗ್ರರ ತಂತ್ರಕ್ಕೆ ಸೂಕ್ತ ಪ್ರತಿತಂತ್ರ ಈಗಿನ ತುರ್ತು

3-kananda-1

Kannada: ಕನ್ನಡನಾಡಲ್ಲಿ ಕನ್ನಡ ಕಲಿಕೆಯ ಹಾಡು-ಪಾಡು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.