ಉಸಿರಾಡಲು ಗಾಳಿಯನ್ನೂ ಖರೀದಿಸುವ ಕಾಲ ಬಂದೀತು


Team Udayavani, Jun 6, 2017, 1:03 PM IST

mys3.jpg

ಮೈಸೂರು: ಪ್ರಸ್ತುತ ಸಂದರ್ಭದಲ್ಲಿ ಕುಡಿಯುವ ನೀರು ಮಾರಾಟದ ವಸ್ತುವಾಗಿದ್ದು, ಪರಿಸರ ಮಾಲಿನ್ಯ ಹೀಗೆ ಮುಂದುವರಿದರೆ ಮುಂದಿನ ದಿನಗಳಲ್ಲಿ ಉಸಿರಾಡಲು ಹಣ ನೀಡಿ ಗಾಳಿ ಖರೀದಿಸಬೇಕಾದ ಪರಿಸ್ಥಿತಿ ನಿರ್ಮಾಣವಾಗಲಿದೆ ಎಂದು ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶ ಪಿಜಿಎಂ ಪಾಟೀಲ್‌ ಆತಂಕ ವ್ಯಕ್ತಪಡಿಸಿದರು. ಜಿಲ್ಲಾಡಳಿತ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ, ಶಿಕ್ಷಣ ಇಲಾಖೆ, ಭಾರತೀಯ ಎಂಜಿನಿಯರ್‌ಗಳ ಸಂಸ್ಥೆ ಹಾಗೂ ಜನಜಾಗೃತಿ ಗ್ರಾಮೀಣ ಅಭಿವೃದ್ಧಿ ಸಂಸ್ಥೆಯಿಂದ ಎಂಜಿನಿಯರ್‌ಗಳ ಸಂಸ್ಥೆ ಸಭಾಂಗಣದಲ್ಲಿ ಆಯೋಜಿಸಿದ್ದ ವಿಶ್ವಪರಿಸರ ದಿನಾಚರಣೆ ಕಾರ್ಯಕ್ರಮವನ್ನು ಗಿಡ ನೆಡುವ ಮೂಲಕ ಉದ್ಘಾಟಿಸಿ ಮಾತನಾಡಿದರು.

ಪ್ರಕೃತಿ ನಾಶಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್‌ ಹಲವು ಮಹತ್ತರದ ತೀರ್ಪುಗಳನ್ನು ನೀಡುವ ಮೂಲಕ ಪರಿಸರ ಸಂರಕ್ಷಣೆಯಲ್ಲಿ ಕೈಜೋಡಿಸಿದೆ. ಆದರೆ ಜೂ.5ರಂದು ವಿಶ್ವಪರಿಸರ ದಿನವನ್ನು ಆಚರಿಸಿದರೆ ಸಾಕೆ? ಎಂಬುದನ್ನು ಗಮನಿಸಿದರೆ ನಾವು ಯಾವ ಸ್ಥಿತಿಗೆ ಬಂದು ನಿಂತಿದ್ದೇವೆ, ನಮ್ಮ ಪರಿಸರವನ್ನು ಹೇಗೆ ಇಟ್ಟುಕೊಂಡಿದ್ದೇವೆ ಎಂಬುದು ಗೊತ್ತಾಗಲಿದೆ. ಇದೇ ಪರಿಸ್ಥಿತಿ ಮುಂದುವರಿದರೆ ಮುಂದಿನ ತಲೆಮಾರಿನವರ ಜೀವನ ಹೇಗೆ ಎಂಬ ಆತಂಕ ಮೂಡಲಿದ್ದು, ಮನುಷ್ಯ ಪರಿಸರದ ಅವಿಭಾಜ್ಯ ಅಂಗವೆಂದು ಹೇಳುತ್ತಾರೆ. ಆದರೆ ಮನುಷ್ಯ ತಮ್ಮ ಸ್ವಾರ್ಥ ಹಾಗೂ ದುರುದ್ದೇಶಗಳಿಂದ ಪರಿಸರವನ್ನು ನಾಶಪಡಿಸುತ್ತಿರುವುದು ಎಷ್ಟರ ಮಟ್ಟಿಗೆ ಸರಿ ಎಂದು ಪ್ರಶ್ನಿಸಿದರು.

ಪರಿಸರ ನಾಶದಿಂದಾಗಿ ಹಲವು ರೀತಿಯ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ ಎಂಬ ದೃಷ್ಟಿಯಿಂದ ವಿಶ್ವಸಂಸ್ಥೆ 1972ರಲ್ಲಿ ವಿಶ್ವ ಪರಿಸರ ದಿನ ಆಚರಿಸಲು ನಿರ್ಧರಿಸಿತು. ಈ ಹಿಂದೆ ನಮ್ಮ ಹಿರಿಯರು ಕುಡಿಯುವ ನೀರನ್ನು ಎಂದು ಖರೀದಿಸಿದವರಲ್ಲ, ಆದರೆ ಇಂದು ಕುಡಿಯುವ ನೀರು ಮಾರಾಟದ ವಸ್ತುವಾಗಿದ್ದು, ಪರಿಸರದ ನಾಶ ಹೀಗೆ ಮುಂದುವರೆದಲ್ಲಿ ಮುಂದಿನ ಪೀಳಿಗೆ ಹಣ ನೀಡಿ ಉಸಿರಾಡಲು ಗಾಳಿ ಪಡೆದುಕೊಳ್ಳಬೇಕಾಗುತ್ತದೆ. ಪರಿಸರ ಸಮತೋಲನದಿಂದ ಕೂಡಿದ್ದರೆ ಸಕಲವೂ ಸುಸ್ಥಿರವಾಗಿ ಇರಲಿದೆ ಇಲ್ಲವಾದಲ್ಲಿ ಪ್ರತಿಯೊಂದಕ್ಕೂ ಹಾಹಾಕಾರ ಉಂಟಾಗಲಿದ್ದು, ಈ ಬಗ್ಗೆ ಎಚ್ಚೆತ್ತುಕೊಳ್ಳುವುದು ಉತ್ತಮ ಎಂದರು.

ಪರಿಸರ ದಿನಾಚರಣೆ ಅಂಗವಾಗಿ ಮಕ್ಕಳಿಗೆ ಆಯೋಜಿಸಿದ್ದ ಪ್ರಬಂಧ ಹಾಗೂ ಚಿತ್ರ ಬರೆಯುವ ಸ್ಪರ್ಧೆಗಳಲ್ಲಿ ವಿಜೇತರಾದ 18 ಮಕ್ಕಳಿಗೆ ಬಹುಮಾನ ಮತ್ತು ಪ್ರಶಸ್ತಿ ಪತ್ರ ವಿತರಿಸಲಾಯಿತು. ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ವಲಯ ಕಚೇರಿ ಹಿರಿಯ ಅಧಿಕಾರಿ ಎಂ.ಜಿ.ಯತೀಶ್‌, ಡಿಡಿಪಿಐ ಎಚ್‌.ಆರ್‌.ಬಸಪ್ಪ, ಪರಿಸರ ಅಧಿಕಾರಿ ಎಂ.ಜಿ.ರಘುರಾಮ್‌, ಎಂಜಿನಿಯರ್‌ ಸಂಸ್ಥೆ ಅಧ್ಯಕ್ಷ ಚಿನ್ನಸ್ವಾಮಿ, ಕಾರ್ಯದರ್ಶಿ ಬಿ.ವಿ.ರವೀಂದ್ರನಾಥ್‌ ಹಾಗೂ ಜನಜಾಗೃತಿ ಗ್ರಾಮೀಣಾಭಿವೃದ್ಧಿ ಸಂಸ್ಥೆ ಕಾರ್ಯನಿರ್ವಹಕ ನಿರ್ದೇಶಕ ವಿ.ಎನ್‌.ಮೂರ್ತಿ ಹಾಜರಿದ್ದರು.

ಟಾಪ್ ನ್ಯೂಸ್

ರಾಜ್ಯಕ್ಕೆ ನಡ್ಡಾ ಆಗಮನ: ರಾಜ್ಯ ನಾಯಕರ ಜತೆ ಚರ್ಚೆ

BJP: ರಾಜ್ಯಕ್ಕೆ ನಡ್ಡಾ ಆಗಮನ: ರಾಜ್ಯ ನಾಯಕರ ಜತೆ ಚರ್ಚೆ

ಮಾಸಿಕ ಗೌರವಧನದ ಆಧಾರದಲ್ಲಿ ತಜ್ಞ ವೈದ್ಯರ ನೇಮಕಕ್ಕೆ ತೀರ್ಮಾನ

Health Department: ಮಾಸಿಕ ಗೌರವಧನದ ಆಧಾರದಲ್ಲಿ ತಜ್ಞ ವೈದ್ಯರ ನೇಮಕಕ್ಕೆ ತೀರ್ಮಾನ

ಬಿಜೆಪಿಯಿಂದ ಸಚಿನ್‌ ಪಾಂಚಾಳ್‌ ಡೆತ್‌ನೋಟ್‌ ಪ್ರತಿ ಬಿಡುಗಡೆ

ಬಿಜೆಪಿಯಿಂದ ಸಚಿನ್‌ ಪಾಂಚಾಳ್‌ ಡೆತ್‌ನೋಟ್‌ ಪ್ರತಿ ಬಿಡುಗಡೆ

SSLC 2025ರ ಪರೀಕ್ಷೆಯ ಮಾದರಿ ಪ್ರಶ್ನೆ ಪತ್ರಿಕೆ ಪ್ರಕಟ

SSLC 2025ರ ಪರೀಕ್ಷೆಯ ಮಾದರಿ ಪ್ರಶ್ನೆ ಪತ್ರಿಕೆ ಪ್ರಕಟ

Karnataka ಕೆಐಎಡಿಬಿಗೆ ಬಂಪರ್‌: ಸಾಲ ಮಿತಿ 5000 ಕೋ.ರೂ.ಗೆ ಹೆಚ್ಚಳ

Karnataka ಕೆಐಎಡಿಬಿಗೆ ಬಂಪರ್‌: ಸಾಲ ಮಿತಿ 5000 ಕೋ.ರೂ.ಗೆ ಹೆಚ್ಚಳ

1-loka

Kalaburagi;ಅಂಗನವಾಡಿ ಸಹಾಯಕಿ ಹುದ್ದೆಗೂ ಲಂಚ: ಇಬ್ಬರು ಲೋಕಾ ಬಲೆಗೆ

Farmers Protest: ರೈತ ದಲ್ಲೇವಾಲ್‌ ಚಿಕಿತ್ಸೆ ವಿಚಾರದಲ್ಲಿ ಪಂಜಾಬ್‌ನ ನಡೆಗೆ ಸುಪ್ರೀಂ ಗರಂ

Farmers Protest: ರೈತ ದಲ್ಲೇವಾಲ್‌ ಚಿಕಿತ್ಸೆ ವಿಚಾರದಲ್ಲಿ ಪಂಜಾಬ್‌ನ ನಡೆಗೆ ಸುಪ್ರೀಂ ಗರಂ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

yoga-nara

Mysuru: ಯೋಗಾನರಸಿಂಹಸ್ವಾಮಿ ದೇಗುಲದಲ್ಲಿ ಭಕ್ತರಿಗೆ 2 ಲಕ್ಷ ಲಡ್ಡು ವಿತರಣೆ

Untitled-1

Mysuru: ಕೆಆರ್‌ಎಸ್‌ ರಸ್ತೆಗೆ “ಸಿದ್ದರಾಮಯ್ಯ ಆರೋಗ್ಯ ಮಾರ್ಗ’ ನಿಶ್ಚಿತ: ಲಕ್ಷ್ಮಣ್‌

Dali-dhanajaya

Sandalwood: ಪ್ರತಿಭೆ ಪ್ರದರ್ಶಿಸಲು ಕಲಾವಿದರಿಗೆ ಸೂಕ್ತ ವೇದಿಕೆ ಅಗತ್ಯ: ನಟ ಡಾಲಿ ಧನಂಜಯ

2-hunsur

Hunsur: ಹುತಾತ್ಮ ಧಿವಿನ್ ಅಂತಿಮ ದರ್ಶನ ಪಡೆದ ಗ್ರಾಮಸ್ಥರು

infosys

Mysuru: ಇನ್ಫೋಸಿಸ್‌ ಆವರಣದಲ್ಲಿ ಚಿರತೆ: ಸಿಬಂದಿಗೆ ವರ್ಕ್‌ ಫ್ರಂ ಹೋಂ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1aaaane

Sullia: ತೋಟದಲ್ಲಿ ಮೂರು ಕಾಡಾನೆ!

1-sss

Kodagu SP warning; ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನ: ಸುಮೋಟೋ ಕೇಸ್‌

ರಾಜ್ಯಕ್ಕೆ ನಡ್ಡಾ ಆಗಮನ: ರಾಜ್ಯ ನಾಯಕರ ಜತೆ ಚರ್ಚೆ

BJP: ರಾಜ್ಯಕ್ಕೆ ನಡ್ಡಾ ಆಗಮನ: ರಾಜ್ಯ ನಾಯಕರ ಜತೆ ಚರ್ಚೆ

1-magu

Manipal; ಝೀರೋ ಟ್ರಾಫಿಕ್‌ನಲ್ಲಿ ಮಗು ಬೆಂಗಳೂರಿಗೆ : ಈಶ್ವರ ಮಲ್ಪೆ ನೆರವು

ಮಾಸಿಕ ಗೌರವಧನದ ಆಧಾರದಲ್ಲಿ ತಜ್ಞ ವೈದ್ಯರ ನೇಮಕಕ್ಕೆ ತೀರ್ಮಾನ

Health Department: ಮಾಸಿಕ ಗೌರವಧನದ ಆಧಾರದಲ್ಲಿ ತಜ್ಞ ವೈದ್ಯರ ನೇಮಕಕ್ಕೆ ತೀರ್ಮಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.