![DKSHi-4](https://www.udayavani.com/wp-content/uploads/2025/02/DKSHi-4-415x234.jpg)
![DKSHi-4](https://www.udayavani.com/wp-content/uploads/2025/02/DKSHi-4-415x234.jpg)
Team Udayavani, Jan 22, 2021, 6:11 PM IST
ಮೈಸೂರು: ಖಾತೆ ಅದಲು-ಬದಲು ಹಿನ್ನೆಲೆ ಸುತ್ತೂರು ಮಠಕ್ಕೆ ದೌಡಾಯಿಸಿದ ಸಚಿವ ಜೆ.ಸಿ. ಮಾಧುಸ್ವಾಮಿ ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಜತೆ ಸುದೀರ್ಘ ಚರ್ಚೆ ನಡೆಸಿದ್ದಾರೆ.
ಮೈಸೂರಿನ ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿರುವ ಸುತ್ತೂರು ಶಾಖಾ ಮಠಕ್ಕೆ ಆಗಮಿಸಿದ ಮಾಧುಸ್ವಾಮಿ, ಒಂದು ಗಂಟೆಗೂ ಹೆಚ್ಚು ಕಾಲ ಸ್ವಾಮೀಜಿ ಜತೆ ಮಾತುಕತೆ ನಡೆಸಿದರು. ಇದೇ ವೇಳೆ ಶಾಸಕ ಮುನಿರತ್ನ ಕೂಡ ಆಗಮಿಸಿ. ಪ್ರತ್ಯೇಕವಾಗಿ ಸ್ವಾಮೀಜಿ ಜತೆ ಮಾತನಾಡಿದರು.
ನಂತರ ಮಾಧ್ಯಮದೊಂದಿಗೆ ಮಾತನಾಡಲು ಮುಂದಾದ ಮಾಧುಸ್ವಾಮಿ, ‘ನನಗೆ ಮತ್ತೆ ಖಾತೆ ಬದಲಾಯ್ತಾ? ಯಾವುದು ತೆಗೆದು, ಯಾವುದು ಕೊಟ್ರು? ನನಗೆ ಏನೂ ಗೊತ್ತಿಲ್ಲಪ್ಪ…. ಈಗ ನೀವು ಹೇಳಿದ ಮೇಲೆಯೇ ಖಾತೆ ಬದಲಾಗಿದ್ದು ಗೊತ್ತಾಗಿದ್ದು ಎಂದು ಅಚ್ಚರಿ ವ್ಯಕ್ತಪಡಿಸಿದರು.
ಇದನ್ನೂ ಓದಿ: ಹುಣಸೋಡು ದುರ್ಘಟನೆ ತನಿಖೆಗೆ ಉನ್ನತ ಮಟ್ಟದ ಸಮಿತಿ ರಚನೆ: ಸಚಿವ ಮುರುಗೇಶ್ ನಿರಾಣಿ
ಇಂದು (ಜ.22) ಬೆಳಗ್ಗೆಯಿಂದ ಪ್ರವಾಸದಲ್ಲಿದ್ದೇನೆ. ನನಗೆ ಮತ್ತೆ ಖಾತೆ ಬದಲಾದ ಬಗ್ಗೆ ಮಾಹಿತಿ ಇಲ್ಲ. ಖಾತೆ ಬದಲಾಗಿದ್ದು ನನ್ನ ಗಮನಕ್ಕೂ ಬಂದಿಲ್ಲ. ಸಣ್ಣ ನೀರಾವರಿ ಖಾತೆ ಬದಲಾಯಿಸಿದ್ದಕ್ಕೆ ನನಗೆ ಸ್ವಲ್ಪ ಬೇಸರವಾಗಿದ್ದು ನಿಜ. ಹಾಗೆಂದು ಯಾರು ಯಾವ ಖಾತೆಯನ್ನು ಸುದೀರ್ಘವಾಗಿ ನಿಭಾಯಿಸಲು ಸಾಧ್ಯವಿಲ್ಲ. ಇದೇನೂ ನನಗೆ ಡಿಮೋಷನ್ ಅಲ್ಲ. ವೈದ್ಯಕೀಯ ಖಾತೆಯೂ ಪ್ರಭಾವಿ ಖಾತೆ. ಇದನ್ನು ನಿಭಾಯಿಸಲು ಕೂಡ ನಾನು ಶಕ್ತ.
ನನ್ನ ಕೈಯಲ್ಲಿ ನಿಭಾಯಿಸಲು ಸಾಧ್ಯವಿಲ್ಲ ಎಂದು ಯಾರು ಅಂದುಕೊಳ್ಳಬೇಡಿ. ಕೆಲ ಪ್ರಭಾವಿ ಖಾತೆಗಳು ಸಿಎಂ ಬಳಿಯೇ ಇದ್ದರೆ ಅವರಿಗೆ ಕಾರ್ಯದ ಒತ್ತಡ ಹೆಚ್ಚಾಗುತ್ತೆ. ಆದರೆ, ಸಿಎಂ ತಾವು ನಿಭಾಯಿಸುತ್ತೇನೆ ಎಂದು ಕೆಲವನ್ನು ಇಟ್ಟುಕೊಂಡಿದ್ದಾರೆ. ಇದು ಅವರ ಪರಮಾಧಿಕಾರ. ಹಿಂದೆಯೂ ಸಿಎಂಗಳು ಪ್ರಭಾವಿ ಖಾತೆಗಳ ತಮ್ಮ ಬಳಿ ಇಟ್ಟು ಕೊಂಡಿದ್ದರು.
ನಾನು ಗ್ರಾಮೀಣ ಪ್ರದೇಶದ ಹಿನ್ನೆಲೆ ಉಳ್ಳವನು. ಆದ್ದರಿಂದ ರೈತರಿಗೆ ಅನುಕೂಲ ಮಾಡಿಕೊಡುವ ಖಾತೆ ಬೇಕು ಅಂತ ಕೇಳಿದ್ದೆ. ಒಂದು ಖಾತೆಯಲ್ಲಿ ಇರುತ್ತೇವೆ. ಏಕಾಏಕಿ ಖಾತೆ ಬದಲಾದಾಗ ಬೇಸರ ಆಗುವುದು ಸಹಜ. ಕಾನೂನು ಖಾತೆಗೆ ಹೋಲಿಸಿದರೆ ವೈದ್ಯಕೀಯ ಶಿಕ್ಷಣ ನಾಲ್ಕುಪಟ್ಟು ದೊಡ್ಡ ಖಾತೆ. ಅದರ ಬಗ್ಗೆ ನನಗೆ ಯಾವುದೇ ಬೇಸರ ಇಲ್ಲ ಎಂದು ಮೈಸೂರಿನಲ್ಲಿ ಸಚಿವ ಮಾಧುಸ್ವಾಮಿ ಹೇಳಿಕೆ ನೀಡಿದರು.
ಇದನ್ನೂ ಓದಿ: ರಾಜ್ಯದಲ್ಲಿ ಈವರೆಗೆ 1.38 ಲಕ್ಷ ಮಂದಿಗೆ ಕೋವಿಡ್ ಲಸಿಕೆ ನೀಡಲಾಗಿದೆ: ಡಾ.ಕೆ.ಸುಧಾಕರ್
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್
Water Resource: ನನ್ನ ಜೀವಿತಾವಧಿಯಲ್ಲೇ ನೀರಿನ ಸಮಸ್ಯೆ ಬಗೆಹರಿಯಬೇಕು: ಎಚ್.ಡಿ.ದೇವೇಗೌಡ
Congress Siddu Team: ಸಿದ್ದರಾಮಯ್ಯ ಆಪ್ತರಿಂದ ಈಗ ʼಮಾಸ್ ಲೀಡರ್ʼ ಅಸ್ತ್ರ
You seem to have an Ad Blocker on.
To continue reading, please turn it off or whitelist Udayavani.