ಜಲಜೀವನ್ ಮಿಷನ್ ಯೋಜನೆ ಸದ್ಬಳಕೆಯಾಗಲಿ: ಗ್ರಾಪಂ.ಅಧ್ಯಕ್ಷ ಹೆಚ್.ಸಿ.ದೇವೇಂದ್ರ
Team Udayavani, Nov 24, 2021, 7:22 PM IST
ಪಿರಿಯಾಪಟ್ಟಣ: ಪ್ರತಿ ಮನೆಗೂ ಕೊಳಾಯಿ ಮೂಲಕ ಶುದ್ಧ ಕುಡಿಯುವ ನೀರು ಸರಬರಾಜು ಮಾಡುವ ಮಹತ್ವಾಕಾಂಕ್ಷೆಯೊಂದಿಗೆ ಜಾರಿಗೆ ಬಂದಿರುವ ಜಲಜೀವನ್ ಮಿಷನ್ ಯೋಜನೆಯನ್ನು ಗ್ರಾಮದ ಜನರು ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಗ್ರಾಪಂ ಅಧ್ಯಕ್ಷ ಹೆಚ್.ಸಿ.ದೇವೇಂದ್ರ ತಿಳಿಸಿದರು.
ತಾಲ್ಲೂಕಿನ ಮಾಲಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಜಲಜೀವನ್ ಮಿಷನ್ ಯೋಜನೆ ಅನುಷ್ಠಾನಗೊಂಡಿರುವ ಕೊಳಾಯಿಗಳನ್ನು ಪಂಚಾಯಿತಿ ಸದಸ್ಯರು ಹಾಗೂ ಗ್ರಾಮಸ್ಥರೊಂದಿಗೆ ಪರಿಶೀಲನೆ ನಡೆಸಿ ಮಾತನಾಡಿದರು.
ಸರ್ಕಾರವು 2024 ವೇಳೆಗೆ ದೇಶದ 15.74 ಕೋಟಿ ಗ್ರಾಮೀಣ ಭಾಗದ ಮನೆಗಳಿಗೆ ಶುದ್ಧ ಕುಡಿಯುವ ನೀರು ಸರಬರಾಜು ಮಾಡಬೇಕು ಎನ್ನುವ ಕನಸನ್ನು ಹೊಂದಿರುವ ಹಿನ್ನೆಲೆಯಲ್ಲಿ ಸರ್ಕಾರದ ಆಶಯವನ್ನು ನನಸು ಮಾಡುವ ನಿಟ್ಟಿನಲ್ಲಿ ಕಾಮಗಾರಿಯನ್ನು ಪರಿಶೀಲಿಸಲಾಗುತ್ತಿದೆ ಎಂದರು. ಜಲ ಜೀವನ್ ಮಿಷನ್ ಯೋಜನೆಯಡಿಯಲ್ಲಿ ಶಾಲೆಗಳು, ಅಂಗನವಾಡಿ ಕೇಂದ್ರಗಳು ಮತ್ತು ಆಶ್ರಮಶಾಲೆಗಳಲ್ಲಿ ಕೊಳಾಯಿ ನೀರಿನ ಸಂಪರ್ಕವನ್ನು ಒದಗಿಸುವ ವಿಶೇಷ ಅಭಿಯಾನಕ್ಕೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಅನುವು ಮಾಡಿಕೊಟ್ಟಿದ್ದು, ಎಲ್ಲಾ ಶಾಲೆಗಳು ಮತ್ತು ಅಂಗನವಾಡಿ ಕೇಂದ್ರಗಳಲ್ಲಿ ಶೇ.100 ರಷ್ಟು ಗುರಿ ಸಾಧನೆ ಮಾಡಲು ಉದ್ದೇಶಿಸಲಾಗಿದೆ, ಅಂಗನವಾಡಿ ಕೇಂದ್ರಗಳಲ್ಲಿ ಕುಡಿಯಲು, ಮಧ್ಯಾಹ್ನದ ಊಟದ ತಯಾರಿಗೆ, ಕೈ ತೊಳೆಯಲು ಮತ್ತು ಶೌಚಾಲಯಗಳಲ್ಲಿ ಬಳಸಲು ಕೊಳಾಯಿ ಮೂಲಕ ನೀರು ಒದಗಿಸಲಾಗುತ್ತಿದೆ ಅಲ್ಲದೆ ಗ್ರಾಮಗಳಲ್ಲಿ ಮಳೆನೀರು ಕೊಯ್ಲು ಮತ್ತು ತ್ಯಾಜ್ಯ ನೀರಿನ ಮರುಬಳಕೆಯನ್ನು ದೊಡ್ಡ ಮಟ್ಟದಲ್ಲಿ ಉತ್ತೇಜಿಸಲಾಗುತ್ತಿದೆ. ಇದರಿಂದ ನೀರಿನ ಭದ್ರತೆ ಹಾಗೂ ಗ್ರಾಮಗಳಲ್ಲಿ ಸುಧಾರಿತ ನೈರ್ಮಲ್ಯಕ್ಕಾಗಿ ನಮ್ಮ ಭವಿಷ್ಯದ ಪೀಳಿಗೆಗೆ ಸಮಗ್ರ ನೀರಿನ ನಿರ್ವಹಣೆಯ ಬಗ್ಗೆ ಜಾಗೃತಿ ಮೂಡಿಸಲಾಗುತ್ತಿದೆ ಎಂದರು.
ಈ ಸಂದರ್ಭದಲ್ಲಿ ಗ್ರಾಪಂ ಸದಸ್ಯರಾದ ಎಂ.ಎಸ್.ಹರೀಶ್, ಅಪ್ಜಲ್, ರವಿ, ಪುಟ್ಟರಾಜು, ಮಾದಯ್ಯ, ಮುಖಂಡರಾದ ಶೋಯಬ್ ತಿಮ್ಮಯ್ಯ, ಮುದ್ದೀರಯ್ಯ, ಜಮೃದ್ದ್ ಪಾಷ, ನಾಗರಾಜು, ಯದು, ಕೃಷ್ಣೇಗೌಡ, ಸ್ವಾಮಿ ಸೇರಿದಂತೆ ಮತ್ತಿತರರು ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Black Days: ಜಮೀರ್+ ನಾಲ್ವರು ಕೊಚ್ಚೆ, ದೂರ ಇಟ್ಟಿದ್ದೇನೆ: ಎಚ್.ಡಿ.ಕುಮಾರಸ್ವಾಮಿ
Hunsur: ಅಪ್ರಾಪ್ತ ಬಾಲಕಿ ಗರ್ಭಿಣಿ ಪ್ರಕರಣ; ಯುವಕನ ಬಂಧನ
MUDA: ಇ.ಡಿ.ಯಿಂದ ಮಾಜಿ ಅಧ್ಯಕ್ಷ ಮರಿಗೌಡ ಸುದೀರ್ಘ 9 ಗಂಟೆ ವಿಚಾರಣೆ
ನನ್ನ ಮುಟ್ಟಿದರೆ ಜನ ಸುಮ್ಮನಿರಲಾರರು: ವಿಪಕ್ಷಕ್ಕೆ ಸಿಎಂ ಸಿದ್ದರಾಮಯ್ಯ ಎಚ್ಚರಿಕೆ
MUDA CASE: ಸುಳ್ಳು ಆರೋಪಗಳ ಮೇಲೆ ಇ.ಡಿ. ತನಿಖೆ: ಸಿಎಂ ಬೇಸರ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.