ದಸರಾ ಗಜಪಡೆಗೆ ಜಂಬೂಸವಾರಿ ಪೂರ್ವ ತಾಲೀಮು
Team Udayavani, Oct 6, 2019, 3:00 AM IST
ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆ ಜಂಬೂಸವಾರಿ ಮೆರವಣಿಗೆಗೆ ಇನ್ನೆರಡೇ ದಿನ ಬಾಕಿ ಇರುವಂತೆ ಸಿದ್ಧತೆಗಳು ಭರದಿಂದ ಸಾಗಿದ್ದು, ಶನಿವಾರ ಅರಮನೆ ಆವರಣದಲ್ಲಿ ಜಂಬೂಸವಾರಿಯ ತಾಲೀಮು ನಡೆಯಿತು. 750 ಕೇಜಿ ತೂಕದ ಚಿನ್ನದ ಅಂಬಾರಿಯಲ್ಲಿ ಚಾಮುಂಡೇಶ್ವರಿ ದೇವಿಯ ಉತ್ಸವ ಮೂರ್ತಿಯನ್ನು ಹೊತ್ತು ಸಾಗುವ ದಸರಾ ಗಜಪಡೆ ಕ್ಯಾಪ್ಟನ್ ಅರ್ಜುನನಿಗೆ ಅರಮನೆ ಮುಂಭಾಗದ ವೇದಿಕೆಯಲ್ಲಿ ಪುಷ್ಪಾರ್ಚನೆಯ ಪೂರ್ವ ತಾಲೀಮು ನೀಡಲಾಯಿತು.
ಪಾಲಿಕೆ ಮೇಯರ್ ಪುಷ್ಪಲತಾ, ನಗರ ಕಾನೂನು-ಸುವ್ಯವಸ್ಥೆ ವಿಭಾಗದ ಡಿಸಿಪಿ ಮುತ್ತುರಾಜ್, ಸಿಎಆರ್ ಡಿಸಿಪಿ ಚನ್ನಕೇಶವ ಪೂರ್ವ ತಾಲೀಮಿನಲ್ಲಿ ಭಾಗವಹಿಸಿ, ಅರ್ಜುನನಿಗೆ ಪುಷ್ಪಾರ್ಚನೆ ಮಾಡಿ ಗೌರವ ವಂದನೆ ಸಲ್ಲಿಸಿದರು. ಅರ್ಜುನನ ಜತೆಗೆ ದಸರಾ ಗಜಪಡೆಯ ಇತರೆ ಹತ್ತು ಆನೆಗಳೂ ಪೂರ್ವ ತಾಲೀಮಿನಲ್ಲಿ ಭಾಗವಹಿಸಿದ್ದವು. ವಿಜಯ ಮತ್ತು ಕಾವೇರಿ ಆನೆಗಳು ಕುಮ್ಕಿ ಆನೆಗಳಾಗಿ ಭಾಗಿಯಾದವು.
ಈ ಬಾರಿಯೂ ಹಿರಿಯ ಅನುಭವಿ ಆನೆ ಬಲರಾಮ ಜಂಬೂಸವಾರಿ ಮೆರವಣಿಗೆಯನ್ನು ಮುನ್ನಡೆಸಲಿದ್ದು, ಮೆರವಣಿಗೆ ತಾಲೀಮಿನಲ್ಲಿ ನಿಶಾನೆ ಆನೆಯಾಗಿ ಬಲರಾಮ ಎಲ್ಲರಿಗಿಂತ ಮುಂಚೂಣಿಯಲ್ಲಿ ಸಾಗಿತು. ಬಲರಾಮನನ್ನು ಹಿಂಬಾಲಿಸುತ್ತ ಅಭಿಮನ್ಯು ನೌಪತ್ ಆನೆಯಾಗಿ ಸಾಗಿದರೆ, ಇತರೆ ಆನೆಗಳು ಸಾಲಾಗಿ ಸಾಗಿದವು.
ಈ ನಡುವೆ ವೇದಿಕೆ ಬಳಿ ಬರುತ್ತಿದ್ದಂತೆ ಕೊಂಚ ವಿಚಲಿತನಾದ ಈಶ್ವರ ಆನೆಯನ್ನು ಮಾವುತ ಮತ್ತು ಕಾವಾಡಿ ನಿಯಂತ್ರಿಸುವಲ್ಲಿ ಯಶಸ್ವಿಯಾದರು. ದಸರಾ ಗಜಪಡೆ ಕ್ಯಾಪ್ಟನ್ ಅರ್ಜುನ ಗಜ ಗಾಂಭೀರ್ಯದಿಂದ ಹೆಜ್ಜೆ ಹಾಕುತ್ತಾ ಸಾಗಿದರೆ, ಗಜಪಡೆಯ ಜೊತೆಗೆ ಶಿಸ್ತು ಬದ್ಧವಾಗಿ ಪೊಲೀಸ್ ತುಕಡಿಗಳು ಸಾಗಿದವು. ಅಶ್ವಾರೋಹಿ ದಳ, ನಗರ ಸಶಸ್ತ್ರ ಮೀಸಲು ಪಡೆ, ರಾಜ್ಯ ಮೀಸಲು ಪಡೆ ಸೇರಿದಂತೆ ಹತ್ತು ಪೊಲೀಸ್ ತುಕಡಿಗಳು ಜಂಬೂಸವಾರಿ ಮೆರವಣಿಗೆ ಪೂರ್ವತಾಲೀಮಿನಲ್ಲಿ ಭಾಗಿಯಾಗಿ ಪಥಸಂಚಲನ ನಡೆಸಿದರು.
ಅರ್ಜುನನಿಗೆ ಪುಷ್ಪಾರ್ಚನೆ ಮಾಡುವ ವೇಳೆ ರಾಷ್ಟ್ರಗೀತೆ ನುಡಿಸಲಾಯಿತು. ಅರಮನೆಯ ಹೊರ ಆವರಣದಲ್ಲಿರುವ ಕೋಟೆ ಮಾರಮ್ಮ ದೇಗುಲದ ಬಳಿ ನಗರ ಸಶಸ್ತ್ರ ಮೀಸಲು ಪಡೆ ಪೊಲೀಸರು 21 ಕುಶಾಲ ತೋಪು ಸಿಡಿಸಿ ಗೌರವ ವಂದನೆ ಸಲ್ಲಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
BBK11: ನಡುರಾತ್ರಿ ದೇವರ ಮುಂದೆ ಒಂಟಿಯಾಗಿ ಕೂತು ಪ್ರಾರ್ಥಿಸಿದ ಚೈತ್ರಾ.!
Ex-US President: ಅಮೆರಿಕದ ಮಾಜಿ ಅಧ್ಯಕ್ಷ ಬಿಲ್ ಕ್ಲಿಂಟನ್ ಆಸ್ಪತ್ರೆಗೆ ದಾಖಲು
Drone Prathap: ಕೃಷಿ ಹೊಂಡದಲ್ಲಿ ಸ್ಫೋಟ ಪ್ರಕರಣ; ಡ್ರೋನ್ ಪ್ರತಾಪ್ ಜಾಮೀನು ಮಂಜೂರು
Revival: ಭಾರತಕ್ಕೆ ಬಾಂಗ್ಲಾದೇಶ ಸೆಡ್ಡು: ಪಾಕಿಸ್ಥಾನ ಜತೆ ವಹಿವಾಟಿಗೆ ಸಜ್ಜು!
Derogatory Term: ಸಿ.ಟಿ.ರವಿ ಪ್ರಕರಣ ಮುಗಿದ ಅಧ್ಯಾಯ, ತನಿಖೆ ಬೇಕಿಲ್ಲ: ಸಭಾಪತಿ ಸ್ಪಷ್ಟನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.