ಜನಸ್ಪಂದನ ಕಾರ್ಯಕ್ರಮ ಇಂದು
Team Udayavani, Feb 16, 2017, 12:48 PM IST
ಮೈಸೂರು: ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರವಿ ಡಿ.ಚನ್ನಣ್ಣನವರ ಸಾರ್ವಜನಿಕರ ಸಮಸ್ಯೆ ಆಲಿಸಲು ಜನಸ್ಪಂದನ ಸಭೆ ನಡೆಸಲು ಮುಂದಾಗಿದ್ದಾರೆ. ಪ್ರತಿ ಗುರುವಾರ ಮಧ್ಯಾಹ್ನ ಮೈಸೂರಿನ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜನಸ್ಪಂದನ ಕಾರ್ಯಕ್ರಮ ನಡೆಯಲಿದ್ದು, ಫೆ.16ರಂದು ಮಧ್ಯಾಹ್ನ 3.30ಕ್ಕೆ ಮೊದಲ ಕಾರ್ಯಕ್ರಮ ನಡೆಯಲಿದೆ.
ಜಿಲ್ಲೆಯ ವಿವಿಧೆಡೆಗಳಿಂದ ಸಾರ್ವಜನಿಕರು ತಮ್ಮ ಸಮಸ್ಯೆ ಹಾಗೂ ಕಾನೂನು ಸುವ್ಯವಸ್ಥೆ ಬಗ್ಗೆ ಹೇಳಿಕೊಳ್ಳಲು ಎಸ್‌ಪಿ ಕಚೇರಿಗೆ ಬರುತ್ತಲಿದ್ದು, ಆದರೆ, ಎಸ್‌ಪಿ ಅವರು ಮೈಸೂರು ನಗರದಿಂದ ಹೊರಗಡೆ ಇದ್ದ ಸಂದರ್ಭದಲ್ಲಿ ಅವರ ಭೇàಟಿ ಸಾಧ್ಯವಾಗುತ್ತಿಲ್ಲ. ಹೀಗಾಗಿ ಸಾರ್ವಜನಿಕರ ಭೇಟಿಗಾಗಿ ನಿಗದಿತ ವಾರ ಮತ್ತು ಸಮಯ ನಿಗದಿಪಡಿಸಲಾಗಿದೆ.
ಜನಸ್ಪಂದನ ಕಾರ್ಯಕ್ರಮದಲ್ಲಿ ಎಸ್‌ಪಿ ರವಿ.ಡಿ.ಚನ್ನಣ್ಣನವರ ಅವರೊಂದಿಗೆ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ, ಮೈಸೂರು ಗ್ರಾಮಾಂತರ, ಹುಣಸೂರು ಹಾಗೂ ನಂಜನಗೂಡು ಉಪ ವಿಭಾಗದ ಡಿವೈಎಸ್‌ಪಿಗಳು ಹಾಗೂ ಸಹಾಯಕ ಪೊಲೀಸ್ ಅಧೀಕ್ಷಕರು ಉಪಸ್ಥಿತರಿರುತ್ತಾರೆ. ಸಾರ್ವಜನಿಕರು ತಮ್ಮ ಅಹವಾಲು, ಸಮಸ್ಯೆಗಳನ್ನು ಮೌಖೀಕ ಹಾಗೂ ಲಿಖೀತ ರೂಪದಲ್ಲಿ ನೀಡಿ ಬಗೆಹರಿಸಿ ಕೊಳ್ಳಬಹುದಾಗಿದೆ.
ಇದರ ಜತೆಗೆ ಜಿಲ್ಲೆಯಲ್ಲಿ ಅಕ್ರಮ ಮದ್ಯ ಮಾರಾಟ, ಜೂಜುಗಾರಿಕೆ, ಅಕ್ರಮ ಮರಳು ಗಣಿಗಾರಿಕೆ, ಬಡ್ಡಿದಂಧೆ, ಅನೈತಿಕ ಚಟವಟಿಕೆ ಇತ್ಯಾದಿ ಕೃತ್ಯಗಳಲ್ಲಿ ತೊಡಗಿ ಸಮಾಜದಲ್ಲಿ ಅಶಾಂತಿ ಉಂಟು ಮಾಡುವವರ ಮಾಹಿತಿ ಇದ್ದಲ್ಲಿ ತಿಳಿಸಬಹುದಾಗಿದೆ. ಮಾಹಿತಿ ನೀಡುವವರ ಹೆಸರನ್ನು ಗೌಪ್ಯತೆವಾಗಿ ಇಡಲಾಗುತ್ತದೆ ಎಂದು ಎಸ್‌ಪಿ ಅಭಯ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Puttur: ಮಾದಕ ಪದಾರ್ಥ ಸಹಿತ ಆರೋಪಿ ಸೆರೆ
Udupi; ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷರಾಗಿ ರಮೇಶ್ ಕಾಂಚನ್ ಆಯ್ಕೆ
Road Mishap: ಬೀದರ್ ನಲ್ಲಿ ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಮೃತ್ಯು, ಮಹಿಳೆ ಗಂಭೀರ
Belgavi;ಸುವರ್ಣ ವಿಧಾನ ಸೌಧದ ಸುತ್ತ ನಿಷೇಧಾಜ್ಞೆ
Maharashtra ಮತದಾನ ಮುಗಿದ ನಂತರ 7% ಹೆಚ್ಚಳ : ECI ಸ್ಪಷ್ಟಪಡಿಸಬೇಕು ಎಂದ ಕಾಂಗ್ರೆಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.