ಪಾರದರ್ಶಕ ವ್ಯವಹಾರಕ್ಕೆ ಜನ್‌ಧನ್‌ ಸಹಕಾರಿ


Team Udayavani, Nov 30, 2019, 3:00 AM IST

paradarshaka

ಮೈಸೂರು: ಅಸಂಘಟಿತ ವಲಯ ಬ್ಯಾಂಕಿಂಗ್‌ ಕ್ಷೇತ್ರದ ವ್ಯಾಪ್ತಿಗೆ ಒಳಪಡಲು ಪ್ರಧಾನ ಮಂತ್ರಿ ಜನ್‌ಧನ್‌ ಯೋಜನೆ ಪೂರಕವಾಗಿದೆ ಎಂದು ಮೈಸೂರು ವಿವಿ ಕುಲಸಚಿವ ಪ್ರೊ. ಆರ್‌. ಶಿವಪ್ಪ ಹೇಳಿದರು. ಮೈಸೂರು ವಿ.ವಿ.ಯ ಸ್ಟೇಟ್‌ ಬ್ಯಾಂಕ್‌ ಆಫ್ ಮೈಸೂರು ಪೀಠ, ಅರ್ಥಶಾಸ್ತ್ರ ಮತ್ತು ಸಹಕಾರ ವಿಭಾಗದ ಸಹಯೋಗದಲ್ಲಿ ಮಾನಸ ಗಂಗೋತ್ರಿಯ ವಿಜ್ಞಾನಭವನದಲ್ಲಿ ಶುಕ್ರವಾರ ಆಯೋಜಿಸಿದ್ದ ಆರ್ಥಿಕ ಒಳಗೊಳ್ಳುವಿಕೆ ಮತ್ತು ಪಿಎಂಜೆಡಿವೈ ಪಾಲ್ಗೊಳ್ಳುವಿಕೆ ಕುರಿತ ಉಪನ್ಯಾಸ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಭಾರತದ ಆರ್ಥಿಕ ಶಿಸ್ತು ಹಳಿ ತಪ್ಪಿದ್ದು, ಇದೇ ಪರಿಸ್ಥಿತಿಯನ್ನು ಜಗತ್ತಿನ ಹಲವು ದೇಶಗಳು ಅನುಭವಿಸುತ್ತಿವೆ. ಇಂತಹ ಸಂದರ್ಭದಲ್ಲಿ ಪ್ರಧಾನ್‌ ಮಂತ್ರಿ ಜನ್‌ಧನ್‌ ಯೋಜನೆ (ಪಿಎಂಜೆಡಿವೈ) ರೀತಿಯ ಕೆಲವು ಯೋಜನೆಗಳು ಆರ್ಥಿಕ ಪ್ರಗತಿಗೆ ಪೂರಕವಾಗಲಿವೆ. ಉದ್ಯೋಗ ಖಾತ್ರಿ ಯೋಜನೆಯ ಹಣ ನೇರವಾಗಿ ಕಾರ್ಮಿಕರ ಖಾತೆಗೆ ಜಮಾ ಆಗುತ್ತಿದೆ. ಇದರಿಂದ ಪಾರದರ್ಶಕತೆ ಸಾಧ್ಯವಾಗಿದೆ. ಈ ಬೆಳವಣಿಗೆಗೆ ಜನ್‌ಧನ್‌ ಯೋಜನೆ ಕಾರಣ. ಬ್ಯಾಂಕಿಂಗ್‌ ಕ್ಷೇತ್ರ ಹಲವು ಸಮಸ್ಯೆಗಳನ್ನು ಎದುರಿಸುತ್ತಿದೆ. ಇಂತಹ ಸಂದರ್ಭದಲ್ಲಿ ಜಾರಿಯಾದ ಜನ್‌ಧನ್‌ ಯೋಜನೆಯಿಂದ ಪ್ರತಿ ವಯಸ್ಕನೂ ಬ್ಯಾಂಕ್‌ ಖಾತೆಯನ್ನು ಹೊಂದುವಂತಾಯಿತು. ಗ್ರಾಮೀಣ, ಆದಿವಾಸಿ, ಅಸಂಘಟಿತ ವಲಯದ ಜನರೂ ಬ್ಯಾಂಕ್‌ಗಳಿಗೆ ಕಾಲಿಡುವಂತಾಯಿತು ಎಂದು ತಿಳಿಸಿದರು.

ನಮ್ಮಲ್ಲಿ ಇಂದಿಗೂ ಸಾಕಷ್ಟು ಅಸಂಘಟಿತ ವಲಯಗಳಿದ್ದು, ಅವು ಬ್ಯಾಂಕುಗಳಿಂದ ದೂರ ಉಳಿದಿವೆ. ಜೊತೆಗೆ ಆದಿವಾಸಿ ಸಮುದಾಯವು ಇದಕ್ಕೆ ಹೊರತಾಗಿಲ್ಲ. ಇದರಿಂದಾಗಿ ಗ್ರಾಮೀಣ ಪ್ರದೇಶದಲ್ಲಿ ಅಭಿವೃದ್ಧಿ ಮರೀಚಿಕೆಯಾಗಿದೆ. ಜೊತೆಗೆ ಉಳಿತಾಯ, ನರೇಗದಂತಹ ಯೋಜನೆಗಳು ವಿಫ‌ಲವಾಗುತ್ತಿವೆ. ಕೇಂದ್ರ ಸರ್ಕಾರ ಪ್ರಧಾನಿ ಮಂತ್ರಿ ಜನ್‌ಧನ್‌ ಯೋಜನೆ ಜಾರಿಯಾದ ಬಳಿಕ ದೇಶದೆಲ್ಲೆಡೆ ಇದ್ದ ಅಸಂಘಟಿತ ವಲಯ ಹಾಗೂ ಬುಡಕಟ್ಟು ಸಮುದಾಯ ಬ್ಯಾಂಕಿಂಗ್‌ ಕ್ಷೇತ್ರಕ್ಕೆ ಒಳಪಟ್ಟು, ಬ್ಯಾಂಕಿನ ಮೂಲಕವೆ ಹಣಕಾಸಿನ ವ್ಯವಹಾರ ಮಾಡುತ್ತಿವೆ. ಇದರಿಂದ ದೇಶದ ಪ್ರಗತಿಗೆ ಸಹಕಾರಿಯಾಗಲಿದ್ದು, ಉಳಿತಾಯ, ಸಾಲಸೌಲಭ್ಯ ಮೊದಲಾದ ಯೋಜನೆಗಳನ್ನು ರೂಪಿಸಲು ಸಹಕಾರಿಯಾಗಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಎಸ್‌ಬಿಎಂ ಪೀಠದ ಸಂದರ್ಶಕ ಪ್ರಾಧ್ಯಾಪಕ ಟಿ.ಆರ್‌.ಮಂಜುನಾಥ್‌ ಮಾತನಾಡಿ, ದೇಶದಲ್ಲಿ ಆರ್ಥಿಕ ಒಳಗೊಳ್ಳುವಿಕೆ ಯೋಜನೆಗಳು ಮೂರು ಹಂತದಲ್ಲಿ ಜಾರಿಯಾಗಿವೆ. ವಿವಿಧ ಸಮಿತಿಗಳನ್ನು ರಚಿಸುವ ಮೂಲಕ 2010-13ರ ಅವಧಿಯಲ್ಲಿ ಮೊದಲ ಹಂತದ ಯೋಜನೆಗಳು ಜಾರಿಯಾದವು. ಎರಡನೇ ಹಂತದಲ್ಲಿ ಆಗಸ್ಟ್‌ 24, 2014ರಂದು ಪಿಎಂಜೆಡಿವೈ ಜಾರಿಗೆ ತರಲಾಯಿತು. 2016-19ರ ಆರ್ಥಿಕ ಅವಧಿಯ ಯೋಜನೆಗಳು ಈಗ ಚಾಲ್ತಿಯಲ್ಲಿವೆ ಎಂದು ವಿವರಿಸಿದರು. ಕಾರ್ಯಕ್ರಮದಲ್ಲಿ ಅರ್ಥಶಾಸ್ತ್ರ ವಿಭಾಗದ ಮುಖ್ಯಸ್ಥ ಪ್ರೊ.ಎಸ್‌.ಮಹೇಂದ್ರಕುಮಾರ್‌, ಮೈಸೂರು ಎಸ್‌ಬಿಐ ಆಡಳಿತ ಕಚೇರಿ-4ರ ಉಪವ್ಯವಸ್ಥಾಪಕ ಎಂ.ಅರುಣಗಿರಿ ಇದ್ದರು.

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

Elephant

Belthangady: ಚಾರ್ಮಾಡಿ: ಪರ್ಲಾಣಿಯಲ್ಲಿ ಕಾಡಾನೆ

K-H-Muniyappa

BPL ಕಾರ್ಡು ರದ್ದಾಗಲ್ಲ: ಮುನಿಯಪ್ಪ

Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ

Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ

NCB ನಿರಂತರ ಕಾರ್ಯಾಚರಣೆ: ಡ್ರಗ್ಸ್‌ ಜಾಲ ಮುರಿಯಲು ಆಪರೇಷನ್‌ ಸಾಗರ ಮಂಥನ

NCB ನಿರಂತರ ಕಾರ್ಯಾಚರಣೆ: ಡ್ರಗ್ಸ್‌ ಜಾಲ ಮುರಿಯಲು ಆಪರೇಷನ್‌ ಸಾಗರ ಮಂಥನ

1-aaaaaaa

Karkala: ಕಾಂಗ್ರೆಸ್ ನಾಯಕ ಡಿ. ಅರ್.‌ರಾಜು ನಿಧನ

Israel; ಪ್ರಧಾನಿ ನಿವಾಸಕ್ಕೆ ಬಾಂಬ್‌ ದಾಳಿ: 3 ಮಂದಿ ಸೆರೆ

Israel; ಪ್ರಧಾನಿ ನಿವಾಸಕ್ಕೆ ಬಾಂಬ್‌ ದಾಳಿ: 3 ಮಂದಿ ಸೆರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

HD-Kumaraswmy

Black Days: ಜಮೀರ್‌+ ನಾಲ್ವರು ಕೊಚ್ಚೆ, ದೂರ ಇಟ್ಟಿದ್ದೇನೆ: ಎಚ್‌.ಡಿ.ಕುಮಾರಸ್ವಾಮಿ

2-hunsur

Hunsur: ಅಪ್ರಾಪ್ತ ಬಾಲಕಿ ಗರ್ಭಿಣಿ ಪ್ರಕರಣ; ಯುವಕನ ಬಂಧನ

1-amudaa

MUDA: ಇ.ಡಿ.ಯಿಂದ ಮಾಜಿ ಅಧ್ಯಕ್ಷ ಮರಿಗೌಡ ಸುದೀರ್ಘ‌ 9 ಗಂಟೆ ವಿಚಾರಣೆ

ನನ್ನ ಮುಟ್ಟಿದರೆ ಜನ ಸುಮ್ಮನಿರಲಾರರು: ವಿಪಕ್ಷ‌ಕ್ಕೆ ಸಿಎಂ ಸಿದ್ದರಾಮಯ್ಯ ಎಚ್ಚರಿಕೆ

ನನ್ನ ಮುಟ್ಟಿದರೆ ಜನ ಸುಮ್ಮನಿರಲಾರರು: ವಿಪಕ್ಷ‌ಕ್ಕೆ ಸಿಎಂ ಸಿದ್ದರಾಮಯ್ಯ ಎಚ್ಚರಿಕೆ

MUDA CASE: ಸುಳ್ಳು ಆರೋಪಗಳ ಮೇಲೆ ಇ.ಡಿ. ತನಿಖೆ: ಸಿಎಂ ಬೇಸರMUDA CASE: ಸುಳ್ಳು ಆರೋಪಗಳ ಮೇಲೆ ಇ.ಡಿ. ತನಿಖೆ: ಸಿಎಂ ಬೇಸರ

MUDA CASE: ಸುಳ್ಳು ಆರೋಪಗಳ ಮೇಲೆ ಇ.ಡಿ. ತನಿಖೆ: ಸಿಎಂ ಬೇಸರ

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

1-chuii

ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಚಿತ್ತೂರು ಪ್ರಭಾಕರ ಆಚಾರ್ಯರಿಗೆ ಗೌರವಾರ್ಪಣೆ

Elephant

Belthangady: ಚಾರ್ಮಾಡಿ: ಪರ್ಲಾಣಿಯಲ್ಲಿ ಕಾಡಾನೆ

K-H-Muniyappa

BPL ಕಾರ್ಡು ರದ್ದಾಗಲ್ಲ: ಮುನಿಯಪ್ಪ

Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ

Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.