10ರಂದು ಜಯದೇವ ಹೃದ್ರೋಗ ಆಸ್ಪತ್ರೆ ಲೋಕಾರ್ಪಣೆ
Team Udayavani, Mar 5, 2018, 12:29 PM IST
ಮೈಸೂರು: ಹಳೇ ಮೈಸೂರು ಭಾಗದ ಹೃದ್ರೋಗಿಗಳಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಮೈಸೂರಿನ ಮೇಟಗಳ್ಳಿಯಲ್ಲಿ ನಿರ್ಮಿಸಿರುವ 350 ಹಾಸಿಗೆ ಸಾಮರ್ಥ್ಯದ ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯ ನೂತನ ಕಟ್ಟಡವನ್ನು ಮಂಗಳವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಲೋಕಾರ್ಪಣೆ ಮಾಡಲಿದ್ದಾರೆ ಎಂದು ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯ ನಿರ್ದೇಶಕ ಡಾ.ಸಿ.ಎನ್.ಮಂಜುನಾಥ್.
ಭಾನುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, 2010ರಲ್ಲಿ ಸರ್ಕಾರ ಮಂಜೂರು ಮಾಡಿದ 15 ಎಕರೆ ಜಾಗದಲ್ಲಿ ನಾಲ್ಕು ಅಂತಸ್ತಿನ ಸುಸಜ್ಜಿತ ಆಸ್ಪತ್ರೆ ಕಟ್ಟಡ ನಿರ್ಮಿಸಲಾಗಿದ್ದು, ಇನ್ನು 4 ರಿಂದ 6 ವಾರಗಳಲ್ಲಿ ಹೊಸ ಕಟ್ಟಡದಲ್ಲಿ ಪೂರ್ಣಪ್ರಮಾಣದಲ್ಲಿ ಆಸ್ಪತ್ರೆ ಕಾರ್ಯಾರಂಭ ಮಾಡಲಿದೆ. ಆಸ್ಪತ್ರೆಯ ಕಟ್ಟಡ ಕಾಮಗಾರಿಗೆ ಸರ್ಕಾರ 150 ಕೋಟಿ ರೂ. ಅನುದಾನ ನೀಡಿದ್ದು, ಆಸ್ಪತ್ರೆಯ ಉಪಕರಣಗಳು ಇನ್ನಿತರೆ ಆಂತರಿಕ ಸೌಲಭ್ಯಗಳಿಗೆ ಸಂಸ್ಥೆಯ ಆಂತರಿಕ ಸಂಪನ್ಮೂಲಗಳಿಂದ 60 ಕೋಟಿ ರೂ. ವೆಚ್ಚ ಮಾಡಲಾಗಿದೆ ಎಂದು ಹೇಳಿದರು.
3 ಐಸಿಯು ಘಟಕ: ನಾಲ್ಕು ಶಸ್ತ್ರಚಿಕಿತ್ಸಾ ಕೊಠಡಿಗಳು, ನಾಲ್ಕು ಕಾರ್ಡಿಯಾಕ್ ಕ್ಯಾತ್‌ಲ್ಯಾಬ್, 60 ಹಾಸಿಗೆಗಳ 3 ಐಸಿಯು ಘಟಕ, ಕಾರ್ಡಿಯಾಕ್ ಸಿ.ಟಿ. ಮತ್ತು ಎಂ.ಆರ್.ಐ ಸೌಲಭ್ಯ, ಹೊರರೋಗಿಗಳ ವಿಭಾಗ, ಒಳರೋಗಿಗಳ ವಿಭಾಗ, ಸಾಮಾನ್ಯ ವಾರ್ಡ್, ವಿಶೇಷ ವಾರ್ಡ್, ಡಿಲಕ್ಸ್ ವಾರ್ಡ್, ಎಕೋ ವಿಭಾಗ, ಟಿ.ಎಂ.ಟಿ. ವಿಭಾಗ ಇನ್ನಿತರೆ ಚಿಕಿತ್ಸಾ ಸೌಲಭ್ಯಗಳೂ ಇಲ್ಲೇ ದೊರೆಯುವ ಜತೆಗೆ 12 ಜನ ಹೃದ್ರೋಗ ತಜ್ಞರು, ಐವರು ಸರ್ಜನ್‌ಗಳು ಇಲ್ಲಿ ಕೆಲಸ ಮಾಡುವುದರಿಂದ ಇನ್ನು ಈ ಭಾಗದ ಹೃದ್ರೋಗಿಗಳು ಬೆಂಗಳೂರಿಗೆ ಬರಬೇಕಾದ ಅವಶ್ಯಕತೆ ಇಲ್ಲ.
ಜತೆಗೆ ಹೊಸ ಕಟ್ಟಡ ಪಂಚತಾರಾ ಸೌಲಭ್ಯ ಹೊಂದಿದ್ದರೂ ಚಿಕಿತ್ಸೆಯ ದರದಲ್ಲಿ ಹೆಚ್ಚಳ ಮಾಡುವುದಿಲ್ಲ ಎಂದು ಸ್ಪಷ್ಟಪಡಿಸಿದರು. 110 ಹಾಸಿಗೆ ಸಾಮರ್ಥ್ಯದ ಜಯದೇವ ಹೃದ್ರೋಗ ಆಸ್ಪತ್ರೆಯ ಮೈಸೂರು ಶಾಖೆಯು 2010ನೇ ಇಸವಿಯಿಂದ ಕೆ.ಆರ್. ಆಸ್ಪತ್ರೆಯ ಆವರಣದಲ್ಲಿ ಅತ್ಯುತ್ತಮವಾಗಿ ಕಾರ್ಯ ನಿರ್ವಹಿಸುತ್ತಿದ್ದು, ಕ
ಳೆದ ಏಳು ವರ್ಷಗಳಲ್ಲಿ 4.5 ಲಕ್ಷ ಹೊರ ರೋಗಿಗಳ ತಪಾಸಣೆ, 40 ಸಾವಿರ ಒಳ ರೋಗಿಗಳಿಗೆ ಚಿಕಿತ್ಸೆ, 16,500 ಆಂಜಿಯೋಗ್ರಾಮ್, 7,600 ಆಂಜಿಯೋಪ್ಲಾಸ್ಟಿ, 1.75 ಲಕ್ಷ ಎಕೋ ಕಾರ್ಡಿಯೋಗ್ರಾಮ್, 2.76 ಲಕ್ಷ ಇ.ಸಿ.ಜಿ., 350 ಬಲೂನ್ ವಾಲ್Ì ಲೋಪ್ಲಾಸ್ಟಿ, 450 ಫೇಸ್‌ಮೇಕರ್ ಇಂಪ್ಲಾಂಟೇಷನ್ ಚಿಕಿತ್ಸೆ ಮಾಡಿ ಸ್ಥಳೀಯವಾಗಿ ದಾಖಲೆ ಮಾಡಲಾಗಿದೆ ಎಂದರು.
ಸದ್ಯ ಮೈಸೂರು ಶಾಖೆಯಲ್ಲಿ ತಜ್ಞ ವೈದ್ಯರು, ಶುಶ್ರೂಷಕರುಗಳು, ತಂತ್ರಜ್ಞರು ಸೇರಿದಂತೆ ಒಟ್ಟು 180 ಸಿಬ್ಬಂದಿ ಕರ್ತವ್ಯ ನಿರ್ವಹಿಸುತ್ತಿದ್ದು, ಈ ಎಲ್ಲಾ ಸಿಬ್ಬಂದಿ ಹೊಸ ಕಟ್ಟಡಕ್ಕೆ ವರ್ಗಾವಣೆಯಾಗಲಿದ್ದಾರೆ ಎಂದು ತಿಳಿಸಿದರು.
ಟೆಲಿಮೆಡಿಸನ್: ಹೊಸ ಆಸ್ಪತ್ರೆ ಕಾರ್ಯಾರಂಭವಾದ ನಂತರ ಮೈಸೂರು ಸುತ್ತಮುತ್ತಲಿನ ಜಿಲ್ಲಾ ಮತ್ತು ತಾಲೂಕು ಆಸ್ಪತ್ರೆಗಳ ಜತೆಗೆ ಟೆಲಿಮೆಡಿಸನ್ ಆರಂಭಿಸಲಾಗುವುದು. ಸಾಮಾಜಿಕ ಜಾಲತಾಣಗಳನ್ನು ಬಳಸಿಕೊಂಡು ವೈದ್ಯಕೀಯ ವರದಿ ಆಧರಿಸಿ, ಸೂಕ್ತ ಚಿಕಿತ್ಸಾ ಸಲಹೆ ನೀಡಲಾಗುವುದು. ಜತೆಗೆ ಹೃದಯಾಘಾತಕ್ಕೆ ಒಳಗಾಗಿ ಬರುವವರಿಗಾಗಿಯೇ ಒಂದು ಕ್ಯಾತಲಾಬ್ ಮೀಸಲಿಡಲಾಗುವುದು.
ಇನ್ನು ಮುಂದೆ ತರೆದ ಹೃದಯ ಶಸ್ತ್ರಚಿಕಿತ್ಸೆಗೂ ಬೆಂಗಳೂರಿಗೆ ಬರಬೇಕಾದ ಅಗತ್ಯವಿಲ್ಲ ಎಂದು ತಿಳಿಸಿದರು. ಜಯದೇವ ಹೃದ್ರೋಗ ಸಂಸ್ಥೆಯ ಮೈಸೂರು ಶಾಖೆ ಮುಖ್ಯಸ್ಥ ಡಾ.ಸದಾನಂದ, ಬೆಂಗಳೂರಿನ ಡಾ.ರವೀಂದ್ರನಾಥ್, ಮೈಸೂರು ಶಾಖೆ ಮುಖ್ಯ ಆಡಳಿತಾಧಿಕಾರಿ ಚಿಕ್ಕತಿಮ್ಮಯ್ಯ, ಕಾಳಪ್ಪ ಇದ್ದರು.
ತುರ್ತು ಸಂದರ್ಭದಲ್ಲಾದರೂ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಮೊದಲು-ಪಾವತಿ ನಂತರ ಎನ್ನುವ ಭಾವನೆ ಬರಬೇಕು. ಜಯದೇವ ಹೃದ್ರೋಗ ಆಸ್ಪತ್ರೆಯಲ್ಲಿ ಮಾನವೀಯತೆಗೆ ಮೊದಲ ಆದ್ಯತೆ.
-ಡಾ.ಸಿ.ಎನ್.ಮಂಜುನಾಥ್, ನಿರ್ದೇಶಕರು, ಜಯದೇವ ಹೃದ್ರೋಗ ಸಂಸ್ಥೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mysuru: ರಸ್ತೆಗೆ ರಾಜಮನೆತನದ ಹೆಸರು ತೆಗೆದು ಸಿಎಂ ಹೆಸರಿಡುವುದಿಲ್ಲ: ಶಾಸಕ ಹರೀಶ್ ಗೌಡ
Hunasuru: ಬೊಲೆರೋ ವಾಹನಕ್ಕೆ ಡಿಕ್ಕಿ ಹೊಡೆದು ನದಿಗೆ ಬಿದ್ದ ಬೈಕ್ ಸವಾರ ಸ್ಥಳದಲ್ಲೇ ಮೃತ್ಯು
Gurantee Burden: ಗ್ಯಾರಂಟಿ ಕೊಟ್ಟು, ಇನ್ನೊಂದೆಡೆ ಬೆಲೆ ಹೆಚ್ಚಿಸಿ ಬರೆ: ಸಂಸದ ಕಾರಜೋಳ
ಬೈಲುಕುಪ್ಪೆಗೆ ಟಿಬೇಟಿಯನ್ನರ 14ನೇ ಧರ್ಮಗುರು ದಲೈಲಾಮಾ ಆಗಮನ
Hunsur: ಬ್ಯಾರಿಕೇಡ್ ಗೆ ಸಿಲುಕಿದ ಗಜರಾಜ
MUST WATCH
ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !
ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ
ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಹೊಸ ಸೇರ್ಪಡೆ
Mollywood: ನಟಿ ಹನಿ ರೋಸ್ ವಿರುದ್ಧ ಅಶ್ಲೀಲ ಪದ ಬಳಕೆ; ಖ್ಯಾತ ಉದ್ಯಮಿ ಪೊಲೀಸ್ ವಶಕ್ಕೆ
OnePlus 13 ಮತ್ತು 13R ಬಿಡುಗಡೆ: ಹೊಸ ವೈಶಿಷ್ಟ್ಯಗಳ ಪವರ್ ಹೌಸ್ ಫೋನ್
Fraud: ಸಿಬಿಐ ಹೆಸರಲ್ಲಿ ಕಾರ್ಕಳದ ಮಹಿಳೆಗೆ 24 ಲಕ್ಷ ರೂ. ವಂಚನೆ
Caught On Cam!;ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ: Video
2047 ರ ವೇಳೆಗೆ ದೇಶದ 50% ಜನ ನಗರ ಪ್ರದೇಶಗಳಲ್ಲಿ ವಾಸಿಸುತ್ತಾರೆ: ಸಚಿವ ಖಟ್ಟರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.