JDS: 2028ಕ್ಕೆ ನಾನೇ ಮುಖ್ಯಮಂತ್ರಿ ಆಗುತ್ತೇನೆ ಎಂಬುದು ಭ್ರಮೆ: ಜಿ.ಟಿ.ದೇವೇಗೌಡ ಟಾಂಗ್
ಜೆಡಿಎಸ್ ರಾಜ್ಯಾಧ್ಯಕ್ಷರ ಆಯ್ಕೆಯ ಸಭೆಯಲ್ಲಿ ನಾನು ಭಾಗವಹಿಸುವುದಿಲ್ಲ: ಕೋರ್ ಕಮಿಟಿ ಅಧ್ಯಕ್ಷ
Team Udayavani, Jan 11, 2025, 10:56 PM IST
ಮೈಸೂರು: 2028ಕ್ಕೆ ಏನಾಗುತ್ತದೆ ಎಂದು ಹೇಳಲು ಈಗ ಸಾಧ್ಯವಿಲ್ಲ. ಮುಖ್ಯಮಂತ್ರಿ ಆಗಬೇಕಾದರೆ ಜನ ಮತ ಹಾಕಬೇಕು. ಶಾಸಕರು ಸಿಎಂ ಆಯ್ಕೆ ಮಾಡಬೇಕು. ಸುಮ್ಮನೆ ನಾನೇ ಸಿಎಂ ಆಗುತ್ತೇನೆ ಅನ್ನುವುದು ಭ್ರಮೆ ಎಂದು ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷ ಜಿ.ಟಿ. ದೇವೇಗೌಡ ಟಾಂಗ್ ನೀಡಿದ್ದಾರೆ.
2028ಕ್ಕೆ ಸಿಎಂ ಆಗುತ್ತೇನೆ ಎಂಬ ಸಚಿವ ಸತೀಶ್ ಜಾರಕಿಹೊಳಿ, ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಹೇಳಿಕೆಗೆ ಶನಿವಾರ ಪ್ರತಿಕ್ರಿಯಿಸಿದ ಅವರು, ಸುಮ್ಮನೆ ನಾನೇ ಸಿಎಂ ಎಂದರೆ ಆಗಲ್ಲ ಎಂದರು.
ಜೆಡಿಎಸ್ ಸಭೆಯಲ್ಲಿ ಪಾಲ್ಗೊಳ್ಳಲ್ಲ:
ಜೆಡಿಎಸ್ ರಾಜ್ಯಾಧ್ಯಕ್ಷರ ಆಯ್ಕೆಯ ಸಭೆಯು ಭಾನುವಾರ ನಡೆಯಲಿದೆ. ಆದರೆ, ಸಭೆಯಲ್ಲಿ ನಾನು ಭಾಗವಹಿಸುವುದಿಲ್ಲ ಎಂದು ಸ್ಪಷ್ಟಪಡಿಸಿದರು. ನಿಖಿಲ್ ಕುಮಾರಸ್ವಾಮಿಗೆ ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನ ನೀಡುವ ವಿಚಾರ ಕುರಿತು ಪ್ರತಿಕ್ರಿಯಿಸಿದ ಶಾಸಕ ಜಿಟಿಡಿ, ಪಕ್ಷದಲ್ಲಿ ದೇವೇಗೌಡರು ಹಿರಿಯರಿದ್ದಾರೆ. ಎಚ್‌ಡಿಕೆ 2 ಬಾರಿ ಸಿಎಂ ಆಗಿದ್ದವರು. ಎಲ್ಲರೂ ಸೇರಿ ಆಯ್ಕೆ ಮಾಡುತ್ತಾರೆ. ನನ್ನ ಮಗ ಜಿ.ಡಿ. ಹರೀಶ್‌ಗೌಡ ಹಾಗೂ ನಿಖಿಲ್ ಸ್ನೇಹಿತರು. ಹಾಗಾಗಿ ನಿಖಿಲ್ ರಾಜ್ಯಾಧ್ಯಕ್ಷರಾಗಲಿ ಎಂದಿದ್ದಾರೆ. ಇದರಲ್ಲಿ ತಪ್ಪೇನು? ಎಂದರು.
ನಗರದಲ್ಲಿ ಸುದ್ದಿಗಾರರ ಜತೆ ಮಾತನಾಡಿ, ನಾನು ಪ್ರತಿನಿಧಿಸುತ್ತಿರುವ ಕ್ಷೇತ್ರದ ಅಭಿವೃದ್ಧಿಗೆ ಓಡಾಟ ಮಾಡುತ್ತಿದ್ದೇನೆ. ಪಕ್ಷದ ಸಂಘಟನೆ ಹಾಗೂ ಸಭೆಗೆ ಹಾಜರಾಗಲು ಆಗುತ್ತಿಲ್ಲ. ದಿಶಾ ಸಭೆಗೆ ನಮ್ಮ ನಾಯಕರು ಬಂದ ವೇಳೆ ಹೋಗಬೇಕಿತ್ತು. ಆರೋಗ್ಯ ಸರಿ ಇಲ್ಲದ ಕಾರಣ ಹೋಗಲು ಸಾಧ್ಯವಾಗಲಿಲ್ಲ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ರಾಜ್ಯದಲ್ಲಿ ಹೊಂದಾಣಿಕೆ ರಾಜಕೀಯ ಮಾಡಿಕೊಳ್ಳದ 4-5 ಜನರೇ ಟಾರ್ಗೆಟ್: ಯತ್ನಾಳ್
ತುಮಕೂರು ಅಥವಾ ನೆಲಮಂಗಲ ಸಮೀಪವೇ ಮತ್ತೊಂದು ಏರ್‌ಪೋರ್ಟ್ ಆಗಲಿ: ವಿ.ಸೋಮಣ್ಣ
BJP: ಪ್ರಿಯಾಂಕ್ ಖರ್ಗೆ ಧಮ್ಕಿಯಿಂದ ಕಲಬುರಗಿಗೆ ಹೋಗದ ವಿಜಯೇಂದ್ರ: ಶಾಸಕ ಯತ್ನಾಳ್
Leopard: ಹಾಡಹಗಲೇ ಕುದುರೆಮುಖ ರಾಷ್ಟ್ರೀಯ ಹೆದ್ದಾರಿಯಲ್ಲಿ ಓಡಾಡಿದ ಚಿರತೆ…
Dandeli: ನಿಯಮ ಉಲ್ಲಂಘಿಸಿದ ದ್ವಿಚಕ್ರ ವಾಹನಗಳಿಗೆ ಬಿಸಿ ಮುಟ್ಟಿಸಿದ ಅಧಿಕಾರಿ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.